ಆದಿಕಾಂಡ 4 : 1 (ERVKN)
ಆದಾಮ ಮತ್ತು ಹವ್ವಳು ಕೂಡಿದರು. ಆದ್ದರಿಂದ ಹವ್ವಳಿಗೆ ಒಂದು ಮಗು ಜನಿಸಿತು. ಹವ್ವಳು, “ಯೆಹೋವನ ಸಹಾಯದಿಂದ ಗಂಡುಮಗುವನ್ನು ಪಡೆದಿದ್ದೇನೆ” ಎಂದು ಹೇಳಿ ಆ ಮಗುವಿಗೆ ಕಾಯಿನ ಎಂದು ಹೆಸರಿಟ್ಟಳು.
ಆದಿಕಾಂಡ 4 : 2 (ERVKN)
ಆಮೇಲೆ, ಹವ್ವಳಿಗೆ ಮತ್ತೊಂದು ಮಗು ಜನಿಸಿತು. ಈ ಮಗುವೇ ಕಾಯಿನನ ತಮ್ಮನಾದ ಹೇಬೆಲ. ಹೇಬೆಲನು ಕುರುಬನಾದನು ಕಾಯಿನನು ರೈತನಾದನು.
ಆದಿಕಾಂಡ 4 : 3 (ERVKN)
ಸ್ವಲ್ಪ ಕಾಲದ ನಂತರ ಕಾಯಿನನು ದೇವರಿಗೆ ಕೃತಜ್ಞತಾ ಕಾಣಿಕೆಯನ್ನು ತಂದನು. ಕಾಯಿನನು ತಾನು ಹೊಲದಲ್ಲಿ ಬೆಳೆದ ಕೆಲವು ಆಹಾರಪದಾರ್ಥಗಳನ್ನು ತಂದನು.
ಆದಿಕಾಂಡ 4 : 4 (ERVKN)
ಹೇಬೆಲನು ತನ್ನ ಕುರಿಮಂದೆಯಿಂದ ಒಳ್ಳೆಯ ಚೊಚ್ಚಲ ಕುರಿಗಳನ್ನು ಮತ್ತು ಅವುಗಳ ಒಳ್ಳೆಯ ಕೊಬ್ಬಿದ ಭಾಗಗಳನ್ನು ತಂದನು. ಯೆಹೋವನು ಹೇಬೆಲನ ಕಾಣಿಕೆಯನ್ನು ಸ್ವೀಕರಿಸಿದನು;
ಆದಿಕಾಂಡ 4 : 5 (ERVKN)
ಆದರೆ ಕಾಯಿನನ ಕಾಣಿಕೆಯನ್ನು ಸ್ವೀಕರಿಸಲಿಲ್ಲ. ಇದರಿಂದ ಕಾಯಿನನು ದುಃಖಿತನಾದನು ಮತ್ತು ಬಹಳ ಕೋಪಗೊಂಡನು.
ಆದಿಕಾಂಡ 4 : 6 (ERVKN)
ಯೆಹೋವನು ಕಾಯಿನನಿಗೆ, “ಏಕೆ ಕೋಪಗೊಂಡಿರುವೆ? ನಿನ್ನ ಮುಖ ವ್ಯಸನದಿಂದಿರುವುದೇಕೆ?
ಆದಿಕಾಂಡ 4 : 7 (ERVKN)
ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
ಆದಿಕಾಂಡ 4 : 8 (ERVKN)
ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು.
ಆದಿಕಾಂಡ 4 : 9 (ERVKN)
ತರುವಾಯ ಯೆಹೋವನು ಕಾಯಿನನಿಗೆ, “ನಿನ್ನ ತಮ್ಮನಾದ ಹೇಬೆಲನೆಲ್ಲಿ?” ಎಂದು ಕೇಳಿದನು. ಅದಕ್ಕೆ ಕಾಯಿನನು, “ನನಗೆ ಗೊತ್ತಿಲ್ಲ. ನನ್ನ ತಮ್ಮನನ್ನು ಕಾಯುವುದಾಗಲಿ ನೋಡಿಕೊಳ್ಳುವುದಾಗಲಿ ನನ್ನ ಕೆಲಸವೇ?” ಎಂದು ಉತ್ತರಕೊಟ್ಟನು.
ಆದಿಕಾಂಡ 4 : 10 (ERVKN)
ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.
ಆದಿಕಾಂಡ 4 : 11 (ERVKN)
ನೀನು ನಿನ್ನ ತಮ್ಮನನ್ನು ಕೊಂದುಹಾಕಿದೆ. ನಿನ್ನ ಕೈಗಳಿಂದ ಸುರಿಸಿದ ಅವನ ರಕ್ತವನ್ನು ಕುಡಿಯಲು ಭೂಮಿಯು ಬಾಯಿ ತೆರೆಯಿತು. ಆದ್ದರಿಂದ ಈಗ ಅದು ಶಾಪಗ್ರಸ್ತವಾಗಿದೆ.
ಆದಿಕಾಂಡ 4 : 12 (ERVKN)
ಕಳೆದ ದಿನಗಳಲ್ಲಿ ನೀನು ಸಸಿಗಳನ್ನು ನೆಟ್ಟಾಗ ಸಸಿಗಳು ಚೆನ್ನಾಗಿ ಬೆಳೆದವು. ಆದರೆ ಈಗ ನೀನು ಸಸಿ ನೆಟ್ಟರೂ ಭೂಮಿ ಫಲಿಸುವುದಿಲ್ಲ. ನಿನಗೆ ಭೂಮಿಯ ಮೇಲೆ ಮನೆ ಇರುವುದಿಲ್ಲ. ನೀನು ಸ್ಥಳದಿಂದ ಸ್ಥಳಕ್ಕೆ ಅಲೆದಾಡುವೆ” ಎಂದು ಹೇಳಿದನು.
ಆದಿಕಾಂಡ 4 : 13 (ERVKN)
ಅದಕ್ಕೆ ಕಾಯಿನನು ಯೆಹೋವನಿಗೆ, “ಈ ಶಿಕ್ಷೆಯನ್ನು ನಾನು ಸಹಿಸಲಾರೆ!
ಆದಿಕಾಂಡ 4 : 14 (ERVKN)
ನೀನು ನನ್ನನ್ನು ನನ್ನ ದೇಶದಿಂದ ಬಲವಂತವಾಗಿ ಹೊರಡಿಸುತ್ತಿರುವೆ. ನಿನ್ನನ್ನು ನೋಡುವುದಕ್ಕಾಗಲಿ ನಿನ್ನ ಸಮೀಪದಲ್ಲಿ ಇರುವುದಕ್ಕಾಗಲಿ ನನಗೆ ಸಾಧ್ಯವಿರುವುದಿಲ್ಲ! ನನಗೆ ಮನೆಯೂ ಇಲ್ಲ! ನಾನು ಭೂಮಿಯ ಮೇಲೆ ಸ್ಥಳದಿಂದ ಸ್ಥಳಕ್ಕೆ ಬಲವಂತವಾಗಿ ಅಲೆದಾಡಬೇಕಾಗುವುದು. ನನ್ನನ್ನು ಕಂಡವರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.
ಆದಿಕಾಂಡ 4 : 15 (ERVKN)
ಅದಕ್ಕೆ ಯೆಹೋವನು ಕಾಯಿನನಿಗೆ, “ಆ ರೀತಿ ಆಗದಂತೆ ನಾನು ನೋಡಿಕೊಳ್ಳುವೆ! ಕಾಯಿನನೇ, ನಿನ್ನನ್ನು ಯಾವನಾದರೂ ಕೊಂದರೆ, ನಾನು ಅವನನ್ನು ಏಳರಷ್ಟು ಶಿಕ್ಷಿಸುವೆನು” ಎಂದು ಹೇಳಿದನು. ಆಮೇಲೆ ಯೆಹೋವನು ಕಾಯಿನನ ಮೇಲೆ ಒಂದು ಗುರುತಿಟ್ಟನು. ಅವನನ್ನು ಯಾರೂ ಕೊಲ್ಲಕೂಡದೆಂದು ಆ ಗುರುತು ಸೂಚಿಸುತ್ತಿತ್ತು.
ಆದಿಕಾಂಡ 4 : 16 (ERVKN)
ಕಾಯಿನನು ಯೆಹೋವನ ಪ್ರಸನ್ನತೆಯಿಂದ ದೂರ ಹೊರಟುಹೋದನು. ಕಾಯಿನನು ನೋದು ಎಂಬ ನಾಡಿನಲ್ಲಿ ವಾಸಿಸಿದನು. ಅದು ಏದೆನ್ ತೋಟಕ್ಕೆ ಪೂರ್ವದಲ್ಲಿರುವುದು.
ಆದಿಕಾಂಡ 4 : 17 (ERVKN)
ಕಾಯಿನ ಮತ್ತು ಅವನ ಹೆಂಡತಿಗೆ ಒಂದು ಗಂಡುಮಗು ಹುಟ್ಟಿತು. ಅವರು ಆ ಮಗುವಿಗೆ ಹನೋಕ ಎಂದು ಹೆಸರಿಟ್ಟರು. ಕಾಯಿನನು ಒಂದು ಊರನ್ನು ಕಟ್ಟಿದನು. ಆ ಊರಿಗೆ ಅವನು ತನ್ನ ಮಗನ ಹೆಸರನ್ನೇ ಇಟ್ಟನು.
ಆದಿಕಾಂಡ 4 : 18 (ERVKN)
ಹನೋಕನು ಈರಾದ್ ಎಂಬ ಮಗನನ್ನು ಪಡೆದನು. ಈರಾದನು ಮೆಹೂಯಾಯೇಲ ಎಂಬ ಮಗನನ್ನು ಪಡೆದನು. ಮೆಹೂಯಾಯೇಲನು ಮೆತೂಷಾಯೇಲ ಎಂಬ ಮಗನನ್ನು ಪಡೆದನು. ಮೆತೂಷಾಯೇಲನು ಲೆಮೆಕ ಎಂಬ ಮಗನನ್ನು ಪಡೆದನು.
ಆದಿಕಾಂಡ 4 : 19 (ERVKN)
ಲೆಮೆಕನು ಇಬ್ಬರು ಹೆಂಗಸರನ್ನು ಮದುವೆ ಮಾಡಿಕೊಂಡನು. ಮೊದಲನೆ ಹೆಂಡತಿಯ ಹೆಸರು ಆದಾ; ಎರಡನೆ ಹೆಂಡತಿಯ ಹೆಸರು ಚಿಲ್ಲಾ.
ಆದಿಕಾಂಡ 4 : 20 (ERVKN)
ಆದಳಿಗೆ ಯಾಬಾಲ ಎಂಬ ಮಗನು ಹುಟ್ಟಿದನು. ಗುಡಾರಗಳಲ್ಲಿದ್ದುಕೊಂಡು ಪಶುಗಳನ್ನು ಸಾಕಿಕೊಂಡು ಜೀವನ ಮಾಡುತ್ತಿದ್ದ ಜನರಿಗೆ ಯಾಬಾಲನೇ ಮೂಲಪಿತೃ.
ಆದಿಕಾಂಡ 4 : 21 (ERVKN)
ಆದಳಿಗೆ ಮತ್ತೊಬ್ಬ ಮಗ ಹುಟ್ಟಿದನು. ಅವನೇ ಯೂಬಾಲ. ಕಿನ್ನರಿಕೊಳಲುಗಳನ್ನು ನುಡಿಸುವ ಜನರಿಗೆ ಯೂಬಾಲನೇ ಮೂಲಪಿತೃ.
ಆದಿಕಾಂಡ 4 : 22 (ERVKN)
ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
ಆದಿಕಾಂಡ 4 : 23 (ERVKN)
ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿ! ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಕೇಳಿ. ಒಬ್ಬನು ನನಗೆ ಗಾಯ ಮಾಡಿದ, ಆದ್ದರಿಂದ ನಾನು ಅವನನ್ನು ಕೊಂದೆ, ಒಬ್ಬ ಯುವಕನು ನನ್ನನ್ನು ಹೊಡೆದ, ಆದ್ದರಿಂದ ನಾನು ಅವನನ್ನು ಕೊಂದೆ.
ಆದಿಕಾಂಡ 4 : 24 (ERVKN)
ಕಾಯಿನನನ್ನು ಕೊಂದವರಿಗೆ ಏಳರಷ್ಟು ಶಿಕ್ಷೆಯಾಗುವುದು! ಆದರೆ ನನ್ನನ್ನು ಕೊಂದವರಿಗೆ ಎಪ್ಪತ್ತೇಳರಷ್ಟು ಶಿಕ್ಷೆಯಾಗುವುದು!”
ಆದಿಕಾಂಡ 4 : 25 (ERVKN)
ಆದಾಮನು ತಿರಿಗಿ ತನ್ನ ಹೆಂಡತಿಯನ್ನು ಕೂಡಲು, ಆಕೆಗೆ ಮತ್ತೊಬ್ಬ ಮಗ ಹುಟ್ಟಿದನು. ಹವ್ವಳು, “ದೇವರು ನನಗೆ ಮತ್ತೊಬ್ಬ ಮಗನನ್ನು ಕೊಟ್ಟನು. ಕಾಯಿನನು ಕೊಂದ ಹೇಬೆಲನಿಗೆ ಬದಲಾಗಿ ದೇವರು ನನಗೆ ಗಂಡುಮಗುವನ್ನು ಕೊಟ್ಟನು” ಎಂದು ಹೇಳಿ ಆ ಮಗುವಿಗೆ ಸೇತ ಎಂದು ಹೆಸರಿಟ್ಟಳು.
ಆದಿಕಾಂಡ 4 : 26 (ERVKN)
ಸೇತನು ಒಬ್ಬ ಮಗನನ್ನು ಪಡೆದನು. ಆ ಮಗುವಿಗೆ ಅವನು ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು ಯೆಹೋವನ ಮೇಲೆ ಭರವಸೆ ಇಡಲಾರಂಭಿಸಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: