ಆದಿಕಾಂಡ 40 : 1 (ERVKN)
{ಯೋಸೇಫನು ಎರಡು ಕನಸುಗಳ ಅರ್ಥವನ್ನು ತಿಳಿಸಿದ್ದು} [PS] ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.
ಆದಿಕಾಂಡ 40 : 2 (ERVKN)
ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.
ಆದಿಕಾಂಡ 40 : 3 (ERVKN)
ಆದ್ದರಿಂದ ಅವರನ್ನು ಯೋಸೇಫನಿದ್ದ ಸೆರೆಮನೆಗೆ ಹಾಕಿಸಿದನು. ಪೋಟೀಫರನು ಫರೋಹನ ಕಾವಲುಗಾರ ಅಧಿಕಾರಿಯಾಗಿದ್ದು ಈ ಸೆರೆಮನೆಯ ಜವಾಬ್ದಾರಿಯನ್ನು ಹೊಂದಿದ್ದನು.
ಆದಿಕಾಂಡ 40 : 4 (ERVKN)
ಸೆರೆಮನೆಯ ಮುಖ್ಯಾಧಿಕಾರಿಯು ಈ ಇಬ್ಬರು ಕೈದಿಗಳನ್ನು ಯೋಸೇಫನ ವಶಕ್ಕೆ ಒಪ್ಪಿಸಿದನು. ಸ್ವಲ್ಪಕಾಲದವರೆಗೆ ಆ ಇಬ್ಬರು ಸೆರೆಮನೆಯೊಳಗೆ ಇದ್ದರು.
ಆದಿಕಾಂಡ 40 : 5 (ERVKN)
ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು.
ಆದಿಕಾಂಡ 40 : 6 (ERVKN)
ಮರುದಿನ ಮುಂಜಾನೆ ಯೋಸೇಫನು ಅವರ ಬಳಿಗೆ ಹೋದನು. ಅವರಿಬ್ಬರು ಚಿಂತೆಯಿಂದ ಇರುವುದನ್ನು ಯೋಸೇಫನು ಕಂಡು,
ಆದಿಕಾಂಡ 40 : 7 (ERVKN)
“ಈ ದಿನ ನೀವು ತುಂಬ ಚಿಂತೆಯಿಂದ ಇರುವಂತೆ ಕಾಣುತ್ತಿದೆ, ಕಾರಣವೇನು?” ಎಂದು ಕೇಳಿದನು. [PE][PS]
ಆದಿಕಾಂಡ 40 : 8 (ERVKN)
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. [PE][PS] ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು. [PS]
ಆದಿಕಾಂಡ 40 : 9 (ERVKN)
{ದ್ರಾಕ್ಷಾರಸ ಕೊಡುವವನ ಕನಸು} [PS] ಆಗ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು.
ಆದಿಕಾಂಡ 40 : 10 (ERVKN)
ಆ ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು.
ಆದಿಕಾಂಡ 40 : 11 (ERVKN)
ನಾನು ಫರೋಹನ ಲೋಟವನ್ನು ಹಿಡಿದುಕೊಂಡಿದ್ದರಿಂದ ದ್ರಾಕ್ಷಿಹಣ್ಣುಗಳನ್ನು ತೆಗೆದುಕೊಂಡು ಲೋಟದೊಳಗೆ ರಸಹಿಂಡಿ ಲೋಟವನ್ನು ಫರೋಹನಿಗೆ ಕೊಟ್ಟೆನು” ಎಂದು ಹೇಳಿದನು. [PE][PS]
ಆದಿಕಾಂಡ 40 : 12 (ERVKN)
ಅದಕ್ಕೆ ಯೋಸೇಫನು, “ನಾನು ಕನಸಿನ ಅರ್ಥವನ್ನು ನಿನಗೆ ತಿಳಿಸುವೆನು. ಆ ಮೂರು ಕವಲುಗಳು ಎಂದರೆ ಮೂರು ದಿನಗಳು.
ಆದಿಕಾಂಡ 40 : 13 (ERVKN)
ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.
ಆದಿಕಾಂಡ 40 : 14 (ERVKN)
ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಸಿಕೊಂಡು ನನ್ನ ವಿಷಯವಾಗಿ ಫರೋಹನಿಗೆ ತಿಳಿಸಿ ನನಗೆ ಸೆರೆಮನೆಯಿಂದ ಬಿಡುಗಡೆಯಾಗುವಂತೆ ಮಾಡು.
ಆದಿಕಾಂಡ 40 : 15 (ERVKN)
ಇಬ್ರಿಯರ ದೇಶದವನಾದ ನನ್ನನ್ನು ಕೆಲವರು ಅಪಹರಿಸಿಕೊಂಡು ಬಂದರು. ಆದರೆ ಇಲ್ಲಿಯೂ ನಾನು ಯಾವ ತಪ್ಪನ್ನೂ ಮಾಡಲಿಲ್ಲ. ಆದ್ದರಿಂದ ನಾನು ಸೆರೆಮನೆಯಲ್ಲಿರಬಾರದು” ಎಂದು ಹೇಳಿದನು. [PS]
ಆದಿಕಾಂಡ 40 : 16 (ERVKN)
{ಭಕ್ಷ್ಯಗಾರನ ಕನಸು} [PS] ಪಾನದಾಯಕನ ಕನಸಿನ ಅರ್ಥವು ಒಳ್ಳೆಯದಾಗಿರುವುದನ್ನು ಕಂಡ ಭಕ್ಷ್ಯಗಾರನು ಯೋಸೇಫನಿಗೆ, “ನನಗೂ ಒಂದು ಕನಸಾಯಿತು. ನನ್ನ ಕನಸಿನಲ್ಲಿ ನನ್ನ ತಲೆಯ ಮೇಲೆ ಮೂರು ಬುಟ್ಟಿಗಳಿದ್ದವು.
ಆದಿಕಾಂಡ 40 : 17 (ERVKN)
ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು. [PE][PS]
ಆದಿಕಾಂಡ 40 : 18 (ERVKN)
ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು.
ಆದಿಕಾಂಡ 40 : 19 (ERVKN)
ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು. [PS]
ಆದಿಕಾಂಡ 40 : 20 (ERVKN)
{ಯೋಸೇಫನನ್ನು ಮರೆತನು} [PS] ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.
ಆದಿಕಾಂಡ 40 : 21 (ERVKN)
ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು.
ಆದಿಕಾಂಡ 40 : 22 (ERVKN)
ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು.
ಆದಿಕಾಂಡ 40 : 23 (ERVKN)
ಆದರೆ ಪಾನದಾಯಕನು ಯೋಸೇಫನಿಗೆ ಸಹಾಯ ಮಾಡಬೇಕೆಂಬುದನ್ನು ಮರೆತುಬಿಟ್ಟು ಯೋಸೇಫನ ಬಗ್ಗೆ ಫರೋಹನಿಗೆ ಏನೂ ತಿಳಿಸಲಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: