ಆದಿಕಾಂಡ 41 : 1 (ERVKN)
ಫರೋಹನ ಕನಸುಗಳು ಎರಡು ವರ್ಷಗಳ ನಂತರ ಫರೋಹನಿಗೆ ಒಂದು ಕನಸಾಯಿತು. ಫರೋಹನು ಕನಸಿನಲ್ಲಿ ನೈಲ್ ನದಿಯ ತೀರದಲ್ಲಿ ನಿಂತಿದ್ದನು.
ಆದಿಕಾಂಡ 41 : 2 (ERVKN)
ಆಗ ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
ಆದಿಕಾಂಡ 41 : 3 (ERVKN)
ಬಳಿಕ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಲಕ್ಷಣವಾಗಿದ್ದ ಏಳು ಹಸುಗಳ ಪಕ್ಕದಲ್ಲಿ ನಿಂತುಕೊಂಡವು.
ಆದಿಕಾಂಡ 41 : 4 (ERVKN)
ಕುರೂಪವಾಗಿದ್ದ ಏಳು ಹಸುಗಳು ಲಕ್ಷಣವಾಗಿದ್ದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನಿಗೆ ಎಚ್ಚರವಾಯಿತು.
ಆದಿಕಾಂಡ 41 : 5 (ERVKN)
ಫರೋಹನು ಮತ್ತೆ ಮಲಗಿಕೊಂಡನು. ಅವನಿಗೆ ಎರಡನೆಯ ಕನಸಾಯಿತು. ಪುಷ್ಟಿಯುಳ್ಳ ಏಳು ತೆನೆಗಳು ಒಂದೇ ಗಿಡದಲ್ಲಿ ಹುಟ್ಟಿದವು.
ಆದಿಕಾಂಡ 41 : 6 (ERVKN)
ಆಮೇಲೆ ಅದೇ ಸಸಿಯ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.
ಆದಿಕಾಂಡ 41 : 7 (ERVKN)
ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು.
ಆದಿಕಾಂಡ 41 : 8 (ERVKN)
ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
ಆದಿಕಾಂಡ 41 : 9 (ERVKN)
ಪಾನದಾಯಕನು ಫರೋಹನಿಗೆ ಯೋಸೇಫನ ಬಗ್ಗೆ ತಿಳಿಸಿದ್ದು ಆಗ ಪಾನದಾಯಕನು ಯೋಸೇಫನನ್ನು ಜ್ಞಾಪಿಸಿಕೊಂಡು ಫರೋಹನಿಗೆ, “ನನಗೆ ಸಂಭವಿಸಿದ್ದು ನನ್ನ ನೆನಪಿಗೆ ಬರುತ್ತಿದೆ.
ಆದಿಕಾಂಡ 41 : 10 (ERVKN)
ನೀವು ನನ್ನ ಮೇಲೆ ಮತ್ತು ಭಕ್ಷ್ಯಗಾರನ ಮೇಲೆ ಕೋಪಗೊಂಡು ನಮ್ಮನ್ನು ಸೆರೆಮನೆಗೆ ಹಾಕಿಸಿದಿರಿ.
ಆದಿಕಾಂಡ 41 : 11 (ERVKN)
ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು.
ಆದಿಕಾಂಡ 41 : 12 (ERVKN)
ನಮ್ಮ ಜೊತೆಯಲ್ಲಿ ಒಬ್ಬ ಇಬ್ರಿಯ ಯುವಕನಿದ್ದನು. ಅವನು ಕಾವಲುಗಾರರ ಅಧಿಕಾರಿಯ ಸೇವಕನಾಗಿದ್ದನು. ನಾವು ಅವನಿಗೆ ನಮ್ಮ ಕನಸುಗಳನ್ನು ತಿಳಿಸಿದೆವು. ಅವನು ನಮಗೆ ಅವುಗಳನ್ನು ವಿವರಿಸಿ ನಮ್ಮ ಕನಸಿನ ಅರ್ಥವನ್ನು ತಿಳಿಸಿದನು.
ಆದಿಕಾಂಡ 41 : 13 (ERVKN)
ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.
ಆದಿಕಾಂಡ 41 : 14 (ERVKN)
ಕನಸುಗಳ ಅರ್ಥವನ್ನು ತಿಳಿಸಲು ಯೋಸೇಫನನ್ನು ಕರೆಸಿದ್ದು ಆಗ ಫರೋಹನು ಯೋಸೇಫನನ್ನು ಸೆರೆಮನೆಯಿಂದ ಕರೆಸಿದನು. ಯೋಸೇಫನು ಕ್ಷೌರಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಹಾಕಿಕೊಂಡು ಹೋಗಿ ಫರೋಹನ ಮುಂದೆ ನಿಂತುಕೊಂಡನು.
ಆದಿಕಾಂಡ 41 : 15 (ERVKN)
ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
ಆದಿಕಾಂಡ 41 : 16 (ERVKN)
ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
ಆದಿಕಾಂಡ 41 : 17 (ERVKN)
ಆಗ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.
ಆದಿಕಾಂಡ 41 : 18 (ERVKN)
ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
ಆದಿಕಾಂಡ 41 : 19 (ERVKN)
ಆಗ ಬಡಕಲಾಗಿದ್ದ ಮತ್ತು ಕುರೂಪವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ನಿಂತುಕೊಂಡವು. ಅಂಥಾ ಬಡಕಲು ಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಂದೂ ನೋಡಿಲ್ಲ.
ಆದಿಕಾಂಡ 41 : 20 (ERVKN)
ಬಡಕಲಾಗಿದ್ದ ಆ ಹಸುಗಳು ಮೊದಲು ಬಂದ ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು.
ಆದಿಕಾಂಡ 41 : 21 (ERVKN)
ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.
ಆದಿಕಾಂಡ 41 : 22 (ERVKN)
“ನನಗಾದ ಎರಡನೆಯ ಕನಸು ಇಂತಿದೆ: ಒಂದೇ ಗಿಡದಲ್ಲಿ ಪುಷ್ಟಿಯಾದ ಏಳು ತೆನೆಗಳು ಹುಟ್ಟಿದವು.
ಆದಿಕಾಂಡ 41 : 23 (ERVKN)
ಬಳಿಕ ಅದೇ ಗಿಡದಲ್ಲಿ ಮೇಲೆ ಬಿಸಿಗಾಳಿಯಿಂದ ಬತ್ತಿಹೋಗಿದ್ದ ಏಳು ತೆನೆಗಳು ಹುಟ್ಟಿದವು.
ಆದಿಕಾಂಡ 41 : 24 (ERVKN)
ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.
ಆದಿಕಾಂಡ 41 : 25 (ERVKN)
ಯೋಸೇಫನಿಂದ ಕನಸುಗಳ ಅರ್ಥವಿವರಣೆ ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.
ಆದಿಕಾಂಡ 41 : 26 (ERVKN)
ಒಳ್ಳೆಯ ಏಳು ಹಸುಗಳೇ ಏಳು ವರ್ಷಗಳು. ಒಳ್ಳೆಯ ಏಳು ತೆನೆಗಳೇ ಏಳು ವರ್ಷಗಳು. ಎರಡು ಕನಸುಗಳೂ ಒಂದೇ ಅರ್ಥವನ್ನು ಹೊಂದಿವೆ.
ಆದಿಕಾಂಡ 41 : 27 (ERVKN)
ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
ಆದಿಕಾಂಡ 41 : 28 (ERVKN)
ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.
ಆದಿಕಾಂಡ 41 : 29 (ERVKN)
ನಿಮಗೆ ಏಳು ವರ್ಷಗಳ ಕಾಲ ಒಳ್ಳೆಯ ಬೆಳೆಯಾಗುವುದು; ಈಜಿಪ್ಟ್ ದೇಶದಲ್ಲೆಲ್ಲಾ ಊಟಕ್ಕೆ ಬೇಕಾದಷ್ಟು ಆಹಾರವಿರುವುದು.
ಆದಿಕಾಂಡ 41 : 30 (ERVKN)
ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.
ಆದಿಕಾಂಡ 41 : 31 (ERVKN)
ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.
ಆದಿಕಾಂಡ 41 : 32 (ERVKN)
“ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.
ಆದಿಕಾಂಡ 41 : 33 (ERVKN)
ಆದ್ದರಿಂದ ತಾವು ತುಂಬ ಬುದ್ಧಿವಂತನೂ ವಿವೇಕಿಯೂ ಆಗಿರುವ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಡಳಿತಾಧಿಕಾರಿಯನ್ನಾಗಿ ನೇಮಿಸಬೇಕು.
ಆದಿಕಾಂಡ 41 : 34 (ERVKN)
ಅಲ್ಲದೆ ಜನರಿಂದ ಆಹಾರವನ್ನು ಶೇಖರಿಸುವುದಕ್ಕಾಗಿ ತಾವು ಸಂಗ್ರಹಕರನ್ನು ನೇಮಿಸಿ ಒಳ್ಳೆಯ ಏಳು ವರ್ಷಗಳಲ್ಲಿ ಪ್ರತಿಯೊಬ್ಬ ಬೆಳೆಗಾರನಿಂದಲೂ ಬೆಳೆಯ ಐದನೆ ಒಂದು ಭಾಗವನ್ನು ಕಂದಾಯ ರೂಪದಲ್ಲಿ ವಸೂಲಿ ಮಾಡಬೇಕು.
ಆದಿಕಾಂಡ 41 : 35 (ERVKN)
ಸಂಗ್ರಹಕಾರರ ಮೂಲಕ ಆಹಾರಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ನಿಮ್ಮ ಉಗ್ರಾಣಗಳಲ್ಲಿಟ್ಟು ನೋಡಿಕೊಳ್ಳಬೇಕು.
ಆದಿಕಾಂಡ 41 : 36 (ERVKN)
ಉಗ್ರಾಣಗಳಲ್ಲಿ ಸಾಕಷ್ಟು ಆಹಾರವಿರುವುದರಿಂದ ಈಜಿಪ್ಟಿನವರು ಬರಗಾಲದ ಏಳು ವರ್ಷಗಳಲ್ಲಿ ಆಹಾರವಿಲ್ಲದೆ ಸಾಯುವುದಿಲ್ಲ” ಎಂದು ಹೇಳಿದನು.
ಆದಿಕಾಂಡ 41 : 37 (ERVKN)
ಇದು ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಒಳ್ಳೆಯದಾಗಿ ಕಂಡುಬಂತು.
ಆದಿಕಾಂಡ 41 : 38 (ERVKN)
ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು.
ಆದಿಕಾಂಡ 41 : 39 (ERVKN)
ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ.
ಆದಿಕಾಂಡ 41 : 40 (ERVKN)
ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.
ಆದಿಕಾಂಡ 41 : 41 (ERVKN)
ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ
ಆದಿಕಾಂಡ 41 : 42 (ERVKN)
ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು.
ಆದಿಕಾಂಡ 41 : 43 (ERVKN)
ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.
ಆದಿಕಾಂಡ 41 : 44 (ERVKN)
ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು.
ಆದಿಕಾಂಡ 41 : 45 (ERVKN)
ಫರೋಹನು ಯೋಸೇಫನಿಗೆ, ಸಾಫ್ನತ್ಪನ್ನೇಹ ಎಂಬ ಹೆಸರನ್ನು ಕೊಟ್ಟನು. ಇದಲ್ಲದೆ ಫರೋಹನು ಯೋಸೇಫನಿಗೆ ಆಸನತ್ ಎಂಬಾಕೆಯನ್ನು ಮದುವೆ ಮಾಡಿಸಿದನು. ಆಕೆ ಓನ್ ನಗರದ ಆಚಾರ್ಯನಾಗಿದ್ದ ಫೋಟೀಫರನ ಮಗಳು. ಹೀಗೆ ಯೋಸೇಫನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾದನು.
ಆದಿಕಾಂಡ 41 : 46 (ERVKN)
ಯೋಸೇಫನು ಈಜಿಪ್ಟ್ ರಾಜನ ಸೇವೆಯನ್ನು ಪ್ರಾರಂಭಿಸಿದಾಗ ಮೂವತ್ತು ವರ್ಷದವನಾಗಿದ್ದನು. ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.
ಆದಿಕಾಂಡ 41 : 47 (ERVKN)
ಏಳು ಒಳ್ಳೆಯ ವರ್ಷಗಳಲ್ಲಿ ದೇಶದಲ್ಲಿ ಬೆಳೆಯು ಚೆನ್ನಾಗಿ ಬೆಳೆಯಿತು.
ಆದಿಕಾಂಡ 41 : 48 (ERVKN)
ಈಜಿಪ್ಟಿನಲ್ಲಿ ಯೋಸೇಫನು ಆ ಏಳು ವರ್ಷಗಳ ಕಾಲದಲ್ಲಿ ಆಹಾರವನ್ನು ಸಂಗ್ರಹಿಸಿ ನಗರಗಳ ಉಗ್ರಾಣಗಳಲ್ಲಿಟ್ಟನು. ಪ್ರತಿಯೊಂದು ನಗರದ ಸುತ್ತುಮುತ್ತಲಿನ ಹೊಲಗಳಲ್ಲಿ ಬೆಳೆದ ದವಸಧಾನ್ಯವನ್ನು ಆಯಾ ನಗರಗಳಲ್ಲಿ ಕೂಡಿಸಿಟ್ಟನು.
ಆದಿಕಾಂಡ 41 : 49 (ERVKN)
ಯೋಸೇಫನು ಬಹಳ ದವಸಧಾನ್ಯಗಳನ್ನು ಸಂಗ್ರಹಿಸಿದ್ದರಿಂದ ಸಮುದ್ರದ ಮರಳಿನ ರಾಶಿಯೆಂಬಂತೆ ತೋರಿತು; ಲೆಕ್ಕಿಸುವುದಕ್ಕೂ ಅಸಾಧ್ಯವಾಯಿತು.
ಆದಿಕಾಂಡ 41 : 50 (ERVKN)
ಯೋಸೇಫನ ಹೆಂಡತಿ ಆಸನತ್ ಓನ್ ನಗರದಲ್ಲಿ ಆಚಾರ್ಯನಾಗಿದ್ದ ಪೋಟೀಫೆರನ ಮಗಳು. ಬರಗಾಲದ ಮೊದಲನೆಯ ವರ್ಷ ಬರುವುದಕ್ಕಿಂತ ಮೊದಲೇ ಯೋಸೇಫನಿಗೆ ಆಸನತಳಲ್ಲಿ ಇಬ್ಬರು ಗಂಡುಮಕ್ಕಳು ಹುಟ್ಟಿದರು.
ಆದಿಕಾಂಡ 41 : 51 (ERVKN)
ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.
ಆದಿಕಾಂಡ 41 : 52 (ERVKN)
ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.
ಆದಿಕಾಂಡ 41 : 53 (ERVKN)
ಬರಗಾಲದ ಪ್ರಾರಂಭ ಈಜಿಪ್ಟಿನಲ್ಲಿ ಸಮೃದ್ಧಿಕರವಾದ ಏಳು ವರ್ಷಗಳು ಮುಗಿದ ಮೇಲೆ
ಆದಿಕಾಂಡ 41 : 54 (ERVKN)
ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.
ಆದಿಕಾಂಡ 41 : 55 (ERVKN)
ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
ಆದಿಕಾಂಡ 41 : 56 (ERVKN)
ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.
ಆದಿಕಾಂಡ 41 : 57 (ERVKN)
ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50
51
52
53
54
55
56
57