ಆದಿಕಾಂಡ 44 : 1 (ERVKN)
ಯೋಸೇಫನ ಸಂಚು ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.
ಆದಿಕಾಂಡ 44 : 2 (ERVKN)
ಕಿರಿಯ ಸಹೋದರನ ಚೀಲದಲ್ಲಿಯೂ ಹಣವನ್ನು ಇಡು. ಅಲ್ಲದೆ ನನ್ನ ವಿಶೇಷವಾದ ಬೆಳ್ಳಿ ಬಟ್ಟಲನ್ನು ಸಹ ಅವನ ಚೀಲದಲ್ಲಿಡು” ಎಂದು ಆಜ್ಞಾಪಿಸಿದನು. ಅಂತೆಯೇ ಸೇವಕನು ಮಾಡಿದನು.
ಆದಿಕಾಂಡ 44 : 3 (ERVKN)
ಮರುದಿನ ಮುಂಜಾನೆ ಸಹೋದರರನ್ನು ಮತ್ತು ಅವರ ಕತ್ತೆಗಳನ್ನು ಅವರ ದೇಶಕ್ಕೆ ಮರಳಿ ಕಳುಹಿಸಲಾಯಿತು.
ಆದಿಕಾಂಡ 44 : 4 (ERVKN)
ಅವರು ನಗರವನ್ನು ಬಿಟ್ಟುಹೋದ ಮೇಲೆ, ಯೋಸೇಫನು ತನ್ನ ಸೇವಕನಿಗೆ, “ಹೋಗು, ಆ ಜನರನ್ನು ಹಿಂಬಾಲಿಸು. ಅವರನ್ನು ತಡೆದು ಅವರಿಗೆ, ‘ನಾವು ನಿಮಗೆ ಒಳ್ಳೆಯವರಾಗಿದ್ದೆವು; ಆದರೆ ನೀವು ನಮಗೇಕೆ ಕೆಟ್ಟದ್ದನ್ನು ಮಾಡಿದಿರಿ? ನನ್ನ ಒಡೆಯನ ಬೆಳ್ಳಿ ಬಟ್ಟಲನ್ನು ನೀವೇಕೆ ಕದ್ದುಕೊಂಡು ಬಂದಿರಿ?
ಆದಿಕಾಂಡ 44 : 5 (ERVKN)
ಈ ಬಟ್ಟಲಿನಲ್ಲಿ ನನ್ನ ಒಡೆಯನು ಕುಡಿಯುತ್ತಾನೆ. ದೇವರಿಗೆ ಪ್ರಶ್ನೆಗಳನ್ನು ಕೇಳಲು ಅವನು ಈ ಬಟ್ಟಲನ್ನೇ ಉಪಯೋಗಿಸುವನು. ನೀವು ಅವನ ಬಟ್ಟಲನ್ನು ಕದ್ದುಕೊಂಡು ತಪ್ಪುಮಾಡಿದಿರಿ’ ಎಂದು ಹೇಳು” ಎಂಬುದಾಗಿ ತಿಳಿಸಿದನು.
ಆದಿಕಾಂಡ 44 : 6 (ERVKN)
ಅಂತೆಯೇ ಸೇವಕನು ಸಹೋದರರನ್ನು ಹಿಂಬಾಲಿಸಿ ಅವರನ್ನು ತಡೆದು ನಿಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಅವನು ಅವರಿಗೆ ಹೇಳಿದನು.
ಆದಿಕಾಂಡ 44 : 7 (ERVKN)
ಆದರೆ ಸಹೋದರರು ಸೇವಕನಿಗೆ, “ರಾಜ್ಯಪಾಲನು ಈ ರೀತಿ ಹೇಳುವುದೇಕೆ? ನಾವು ಇಂಥಾ ಕೃತ್ಯವನ್ನು ಮಾಡಿಲ್ಲ.
ಆದಿಕಾಂಡ 44 : 8 (ERVKN)
ಮೊದಲು ನಮ್ಮ ಚೀಲಗಳಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ದೇಶದಿಂದ ಮತ್ತೆ ತಂದುಕೊಟ್ಟೆವು. ಆದ್ದರಿಂದ ಖಂಡಿತವಾಗಿ ನಾವು ನಿನ್ನ ಒಡೆಯನ ಮನೆಯಿಂದ ಬೆಳ್ಳಿಯನ್ನಾಗಲಿ ಬಂಗಾರವನ್ನಾಗಲಿ ಕದ್ದುಕೊಂಡಿಲ್ಲ.
ಆದಿಕಾಂಡ 44 : 9 (ERVKN)
ನೀನು ಬೆಳ್ಳಿಯ ಬಟ್ಟಲನ್ನು ನಮ್ಮ ಯಾರ ಚೀಲಗಳಲ್ಲಿ ಕಂಡರೂ, ಆ ವ್ಯಕ್ತಿಯು ಸಾಯಲಿ, ನೀನು ಅವನನ್ನು ಕೊಲ್ಲಬಹುದು; ನಾವು ನಿನ್ನ ಗುಲಾಮರಾಗಿರುವೆವು” ಎಂದು ಹೇಳಿದರು.
ಆದಿಕಾಂಡ 44 : 10 (ERVKN)
ಕನು, “ನೀವು ಹೇಳಿದಂತೆಯೇ ಆಗಲಿ. ಆದರೆ ನಾನು ಅವನನ್ನು ಕೊಲ್ಲುವುದಿಲ್ಲ. ಯಾರಲ್ಲಿ ಬೆಳ್ಳಿಯ ಬಟ್ಟಲು ಸಿಕ್ಕುತ್ತದೊ ಅವನು ನನ್ನ ಗುಲಾಮನಾಗಿರಬೇಕು; ಉಳಿದವರು ಹೋಗಬಹುದು” ಎಂದು ಹೇಳಿದನು.
ಆದಿಕಾಂಡ 44 : 11 (ERVKN)
ಸಂಚಿನಲ್ಲಿ ಬೆನ್ಯಾಮೀನನು ಸಿಕ್ಕಿಕೊಂಡದ್ದು ಬಳಿಕ ಅವರು ಅವಸರದಿಂದ ತಮ್ಮ ಚೀಲಗಳನ್ನು ನೆಲದ ಮೇಲಿಟ್ಟು ಬಿಚ್ಚಿದರು.
ಆದಿಕಾಂಡ 44 : 12 (ERVKN)
ಸೇವಕನು ಚೀಲಗಳನ್ನು ಪರೀಕ್ಷಿಸಲು ಹಿರಿಯ ಸಹೋದರನಿಂದ ಆರಂಭಿಸಿ, ಕಿರಿಯವನಾದ ಬೆನ್ಯಾಮೀನನ ಚೀಲದಲ್ಲಿ ಆ ಬೆಳ್ಳಿಯ ಬಟ್ಟಲನ್ನು ಕಂಡುಕೊಂಡನು.
ಆದಿಕಾಂಡ 44 : 13 (ERVKN)
ಸಹೋದರರು ತುಂಬ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ಚೀಲಗಳನ್ನು ಮತ್ತೆ ಕತ್ತೆಗಳ ಮೇಲೇರಿಸಿಕೊಂಡು ನಗರಕ್ಕೆ ಹಿಂತಿರುಗಿದರು.
ಆದಿಕಾಂಡ 44 : 14 (ERVKN)
ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.
ಆದಿಕಾಂಡ 44 : 15 (ERVKN)
ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.
ಆದಿಕಾಂಡ 44 : 16 (ERVKN)
ಯೆಹೂದನು, “ಸ್ವಾಮಿ, ನಾವು ಹೇಳುವಂಥದ್ದು ಏನೂ ಇಲ್ಲ; ವಿವರಿಸಲು ಯಾವ ದಾರಿಯೂ ಇಲ್ಲ; ನಾವು ತಪ್ಪಿತಸ್ಥರಲ್ಲವೆಂದು ತೋರಿಸಲು ಯಾವ ಮಾರ್ಗವೂ ಇಲ್ಲ. ನಾವು ಮಾಡಿದ ಬೇರೊಂದು ಕಾರ್ಯದ ನಿಮಿತ್ತ ದೇವರು ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿದ್ದಾನೆ. ಆದ್ದರಿಂದ ನಾವೆಲ್ಲರೂ ಬೆನ್ಯಾಮೀನನೂ ನಿನಗೆ ಗುಲಾಮರಾಗಿರುವೆವು” ಎಂದು ಹೇಳಿದನು.
ಆದಿಕಾಂಡ 44 : 17 (ERVKN)
ಆದರೆ ಯೋಸೇಫನು, “ನಾನು ನಿಮ್ಮೆಲ್ಲರನ್ನು ಗುಲಾಮರನ್ನಾಗಿ ಮಾಡುವುದಿಲ್ಲ; ಬಟ್ಟಲನ್ನು ಕದ್ದುಕೊಂಡವನು ಮಾತ್ರ ನನ್ನ ಗುಲಾಮನಾಗಿರಬೇಕು; ಉಳಿದ ನೀವೆಲ್ಲರೂ ನಿಮ್ಮ ತಂದೆಯ ಬಳಿಗೆ ಸಮಾಧಾನದಿಂದ ಹೋಗಬಹುದು” ಎಂದು ಹೇಳಿದನು.
ಆದಿಕಾಂಡ 44 : 18 (ERVKN)
ಬೆನ್ಯಾಮೀನನಿಗಾಗಿ ಯೆಹೂದನು ಬೇಡಿಕೊಂಡಿದ್ದು ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.
ಆದಿಕಾಂಡ 44 : 19 (ERVKN)
ನಾವು ಮೊದಲನೆಯ ಸಲ ಬಂದಿದ್ದಾಗ, ನೀವು ನಮಗೆ, ‘ನಿಮಗೆ ತಂದೆಯಾಗಲಿ ತಮ್ಮನಾಗಲಿ ಇರುವನೇ?’ ಎಂದು ಕೇಳಿದಿರಿ.
ಆದಿಕಾಂಡ 44 : 20 (ERVKN)
ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.
ಆದಿಕಾಂಡ 44 : 21 (ERVKN)
ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.
ಆದಿಕಾಂಡ 44 : 22 (ERVKN)
ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.
ಆದಿಕಾಂಡ 44 : 23 (ERVKN)
ಆದರೆ ನೀವು ನಮಗೆ, ‘ನೀವು ಆ ಕಿರಿಯ ಸಹೋದರನನ್ನು ಕರೆದುಕೊಂಡು ಬರಲೇಬೇಕು; ಇಲ್ಲವಾದರೆ, ನಾನು ನಿಮಗೆ ದವಸಧಾನ್ಯಗಳನ್ನು ಮತ್ತೆ ಮಾರುವುದಿಲ್ಲ’ ಎಂದು ಹೇಳಿದಿರಿ.
ಆದಿಕಾಂಡ 44 : 24 (ERVKN)
ಆದ್ದರಿಂದ ನಾವು ನಮ್ಮ ತಂದೆಯ ಬಳಿಗೆ ಹಿಂತಿರುಗಿ ಹೋಗಿ ನೀವು ಹೇಳಿದ್ದನ್ನು ಅವನಿಗೆ ತಿಳಿಸಿದೆವು.
ಆದಿಕಾಂಡ 44 : 25 (ERVKN)
“ಸ್ವಲ ಸಮಯದ ನಂತರ ನಮ್ಮ ತಂದೆಯು, ‘ಮತ್ತೆ ಹೋಗಿ ಇನ್ನು ಸ್ವಲ್ಪ ಆಹಾರವನ್ನು ನಮಗಾಗಿ ಕೊಂಡುಕೊಂಡು ಬನ್ನಿ’ ಎಂದು ಹೇಳಿದನು.
ಆದಿಕಾಂಡ 44 : 26 (ERVKN)
ಆದರೆ ನಾವು ನಮ್ಮ ತಂದೆಗೆ, ‘ನಮ್ಮ ಕಿರಿಯ ತಮ್ಮನಿಲ್ಲದೆ ನಾವು ಹೋಗಲು ಸಾಧ್ಯವಿಲ್ಲ. ನಮ್ಮ ಕಿರಿಯ ತಮ್ಮನನ್ನು ನೋಡುವ ತನಕ, ನಮಗೆ ದವಸಧಾನ್ಯಗಳನ್ನು ಮಾರುವುದಿಲ್ಲ ಎಂದು ರಾಜ್ಯಪಾಲರು ಹೇಳಿದ್ದಾರೆ’ ಎಂದು ಹೇಳಿದೆವು.
ಆದಿಕಾಂಡ 44 : 27 (ERVKN)
ಆಗ ನಮ್ಮ ತಂದೆಯು ನಮಗೆ, ‘ನನ್ನ ಹೆಂಡತಿಯಾದ ರಾಹೇಲಳು ನನಗೆ ಇಬ್ಬರು ಗಂಡುಮಕ್ಕಳನ್ನು ಕೊಟ್ಟಳು.
ಆದಿಕಾಂಡ 44 : 28 (ERVKN)
ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.
ಆದಿಕಾಂಡ 44 : 29 (ERVKN)
ನೀವು ನನ್ನ ಮತ್ತೊಬ್ಬ ಮಗನನ್ನು ನನ್ನ ಬಳಿಯಿಂದ ಕರೆದುಕೊಂಡು ಹೋಗುವಾಗ ಅವನಿಗೆ ಏನಾದರೂ ಸಂಭವಿಸಿದರೆ, ನಾನು ದುಃಖ ತಾಳಲಾರದೆ ಸತ್ತುಹೋಗುವೆನು’ ಎಂದು ಹೇಳಿದನು.
ಆದಿಕಾಂಡ 44 : 30 (ERVKN)
ನಮ್ಮ ತಂದೆಗಂತೂ ಇವನನ್ನು ಕಂಡರೆ ಪ್ರಾಣಪ್ರೀತಿ. ಆದ್ದರಿಂದ ನಮ್ಮ ಈ ಕಿರಿಯ ತಮ್ಮನಿಲ್ಲದೆ ಹೋದರೆ,
ಆದಿಕಾಂಡ 44 : 31 (ERVKN)
ನಮ್ಮ ತಂದೆಯೂ ಆ ಕೂಡಲೇ ಸತ್ತುಹೋಗುವನು; ನಮ್ಮ ತಂದೆ ದುಃಖದಿಂದ ಸಾಯಲು ನಾವೇ ಕಾರಣರಾಗುವೆವು.
ಆದಿಕಾಂಡ 44 : 32 (ERVKN)
“ನಾನು ಈ ಯುವಕನ ಜವಾಬ್ದಾರಿಯನ್ನು ವಹಿಸಿಕೊಂಡೆನು. ನಾನು ನನ್ನ ತಂದೆಗೆ, ‘ನಾನು ಇವನನ್ನು ಹಿಂದಕ್ಕೆ ಕರೆದುಕೊಂಡು ಬರದಿದ್ದರೆ ನನ್ನ ಜೀವಮಾನವೆಲ್ಲಾ ನೀನು ನನ್ನನ್ನು ದೂಷಿಸಬಹುದು’ ಎಂದು ಹೇಳಿದೆನು.
ಆದಿಕಾಂಡ 44 : 33 (ERVKN)
ಆದ್ದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ಈ ಯುವಕನು ತನ್ನ ಸಹೋದರರೊಂದಿಗೆ ಹಿಂತಿರುಗಿ ಹೋಗಲಿ; ನಾನು ಇಲ್ಲಿ ನಿಮಗೆ ಗುಲಾಮನಾಗಿರುವೆನು.
ಆದಿಕಾಂಡ 44 : 34 (ERVKN)
ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34