ಆದಿಕಾಂಡ 49 : 1 (ERVKN)
{ಯಾಕೋಬನು ತನ್ನ ಗಂಡುಮಕ್ಕಳನ್ನು ಆಶೀರ್ವದಿಸಿದ್ದು} [PS] ಬಳಿಕ ಯಾಕೋಬನು ತನ್ನ ಗಂಡುಮಕ್ಕಳನ್ನು ತನ್ನ ಬಳಿಗೆ ಕರೆಯಿಸಿ, “ನನ್ನ ಎಲ್ಲಾ ಗಂಡುಮಕ್ಕಳೇ, ನನ್ನ ಬಳಿಗೆ ಬನ್ನಿರಿ. ನಿಮಗೆ ಮುಂದೆ ಏನು ಸಂಭವಿಸುವುದೆಂದು ತಿಳಿಸುತ್ತೇನೆ.
ಆದಿಕಾಂಡ 49 : 2 (ERVKN)
“ಯಾಕೋಬನ ಗಂಡುಮಕ್ಕಳೇ, ಒಟ್ಟಾಗಿ ಬಂದು ಕೇಳಿರಿ. [QBR2] ನಿಮ್ಮ ತಂದೆಯಾದ ಇಸ್ರೇಲನು ಹೇಳುವುದನ್ನು ಕೇಳಿರಿ” ಎಂದು ಹೇಳಿದನು.
ಆದಿಕಾಂಡ 49 : 3 (ERVKN)
{ರೂಬೇನ} [PS] “ರೂಬೇನನೇ, ನೀನು ನನ್ನ ಚೊಚ್ಚಲು ಮಗ. [QBR2] ನೀನೇ ನನ್ನ ಮೊದಲನೆಯ ಮಗ. [QBR] ನೀನು ನನ್ನ ಇತರ ಎಲ್ಲಾ ಗಂಡುಮಕ್ಕಳಿಗಿಂತ [QBR2] ಶಕ್ತಿಶಾಲಿಯೂ ಗೌರವಯುತನೂ ಆಗಿರುವೆ. [QBR]
ಆದಿಕಾಂಡ 49 : 4 (ERVKN)
ಆದರೆ ನೀನು ಪ್ರಳಯದ ಭಯಂಕರವಾದ ಅಲೆಗಳಂತಿರುವೆ. [QBR2] ನೀನು ನನ್ನ ಮಕ್ಕಳಿಗಿಂತ ಅತ್ಯಂತ ಪ್ರಮುಖನಾಗಿರುವುದಿಲ್ಲ. [QBR] ನಿನ್ನ ತಂದೆಗೆ ಸೇರಿದ ಸ್ತ್ರೀಯೊಂದಿಗೆ ನೀನು ಮಲಗಿಕೊಂಡೆ. [QBR2] ನೀನು ನಿನ್ನ ತಂದೆಯ ಹಾಸಿಗೆಗೆ ಗೌರವವನ್ನು ತೋರಿಸಲಿಲ್ಲ.”
ಆದಿಕಾಂಡ 49 : 5 (ERVKN)
{ಸಿಮೆಯೋನ ಮತ್ತು ಲೇವಿ} [PS] “ಸಿಮೆಯೋನನೂ ಲೇವಿಯೂ ಸಹೋದರರಾಗಿದ್ದಾರೆ. [QBR2] ಅವರು ತಮ್ಮ ಖಡ್ಗಗಳಿಂದ ಹೋರಾಡಲು ಇಷ್ಟಪಡುವರು. [QBR]
ಆದಿಕಾಂಡ 49 : 6 (ERVKN)
ಅವರು ಗುಟ್ಟಾಗಿ ಕೆಟ್ಟಕಾರ್ಯಗಳನ್ನು ಯೋಚಿಸಿದರು. [QBR2] ಅವರ ರಹಸ್ಯಕೂಟಗಳನ್ನು ನನ್ನ ಆತ್ಮವು ಸ್ವೀಕರಿಸುವುದಿಲ್ಲ. [QBR] ಅವರು ಕೋಪಗೊಂಡಾಗ ಗಂಡಸರನ್ನು ಕೊಂದುಹಾಕಿದರು. [QBR2] ಅವರು ಮೋಜಿಗೆಂದೇ ಪ್ರಾಣಿಗಳನ್ನು ಹಿಂಸಿಸಿದರು. [QBR]
ಆದಿಕಾಂಡ 49 : 7 (ERVKN)
ಅವರ ಕೋಪವೇ ಅವರಿಗೆ ಶಾಪ. ಅದು ತುಂಬಾ ಶಕ್ತಿಶಾಲಿಯಾದದ್ದು. [QBR2] ಅವರು ಹುಚ್ಚರಾದಾಗ ತುಂಬಾ ಕ್ರೂರಿಗಳು. [QBR] ಅವರು ಯಾಕೋಬನ ನಾಡಿನಲ್ಲಿ ತಮ್ಮದೇ ಆದ ನಾಡನ್ನು ಹೊಂದಿಕೊಳ್ಳುವುದಿಲ್ಲ. [QBR2] ಅವರು ಇಸ್ರೇಲಿನಲ್ಲೆಲ್ಲಾ ಹರಡಿಕೊಳ್ಳುವರು.”
ಆದಿಕಾಂಡ 49 : 8 (ERVKN)
{ಯೆಹೂದ} [PS] “ಯೆಹೂದನೇ, ನಿನ್ನ ಸಹೋದರರು ನಿನ್ನನ್ನೇ ಹೊಗಳುವರು. [QBR2] ನೀನು ನಿನ್ನ ವೈರಿಗಳನ್ನು ಸೋಲಿಸುವೆ. [QBR2] ನಿನ್ನ ಸಹೋದರರು ನಿನಗೇ ಅಡ್ಡಬೀಳುವರು. [QBR]
ಆದಿಕಾಂಡ 49 : 9 (ERVKN)
ಯೆಹೂದನು ಪ್ರಾಣಿಯನ್ನು ಕೊಂದ ಪ್ರಾಯದ ಸಿಂಹದಂತಿದ್ದಾನೆ. [QBR2] ಮಗನೇ, ನೀನು ಸಿಂಹದಂತೆ ಬೇಟೆಗಾಗಿ ಹೊಂಚುಹಾಕಿ ನಿಂತಿರುವೆ. [QBR] ಯೆಹೂದನು ಸಿಂಹದಂತಿರುವನು. ಅವನು ಮಲಗಿ ವಿಶ್ರಮಿಸಿಕೊಳ್ಳುವನು; [QBR2] ಅವನನ್ನು ಕೆಣಕಲು ಯಾರಿಗೂ ಧೈರ್ಯವಿಲ್ಲ. [QBR]
ಆದಿಕಾಂಡ 49 : 10 (ERVKN)
ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ [QBR2] ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. [QBR] ಅವನ ಸಂತತಿಯವರು ಶಾಶ್ವತವಾಗಿ ಆಳುವರು; [QBR2] ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು. [QBR]
ಆದಿಕಾಂಡ 49 : 11 (ERVKN)
ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. [QBR2] ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು. [QBR]
ಆದಿಕಾಂಡ 49 : 12 (ERVKN)
ಅವನು ದ್ರಾಕ್ಷಾರಸವನ್ನು ಕುಡಿಯುವುದರಿಂದ ಅವನ ಕಣ್ಣುಗಳು ಕೆಂಪಾಗಿರುತ್ತವೆ. [QBR2] ಅವನು ಹಾಲು ಕುಡಿಯುವುದರಿಂದ ಅವನ ಹಲ್ಲುಗಳು ಬಿಳುಪಾಗಿರುತ್ತವೆ.”
ಆದಿಕಾಂಡ 49 : 13 (ERVKN)
{ಜೆಬುಲೂನ} [PS] “ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು; [QBR2] ಸಮುದ್ರ ತೀರವು ಅವನ ಹಡಗುಗಳಿಗೆ ಸುರಕ್ಷಿತವಾದ ಸ್ಥಳವಾಗಿದೆ. [QBR2] ಅವನ ನಾಡು ಚೀದೋನ್ ಪಟ್ಟಣದವರೆಗೂ ವಿಸ್ತರಿಸುವುದು.”
ಆದಿಕಾಂಡ 49 : 14 (ERVKN)
{ಇಸ್ಸಾಕಾರ} [PS] “ಇಸ್ಸಾಕಾರನು ಬಹಳ ಕಷ್ಟಪಟ್ಟು ದುಡಿಯುವ ಕತ್ತೆಯಂತಿದ್ದಾನೆ. [QBR2] ಅವನು ಭಾರವಾದ ಹೊರೆಯನ್ನು ಹೊರುವುದರಿಂದ ಮಲಗಿ ವಿಶ್ರಮಿಸಿಕೊಳ್ಳುವನು. [QBR]
ಆದಿಕಾಂಡ 49 : 15 (ERVKN)
ಅವನು ತನ್ನ ವಿಶ್ರಾಂತಿಗೆ ಅನುಕೂಲವಾಗಿರುವ [QBR2] ಮತ್ತು ಪ್ರಶಾಂತವಾಗಿರುವ ನಾಡನ್ನು ನೋಡುವನು. [QBR] ಅವನು ಭಾರವಾದ ಹೊರೆಗಳನ್ನು ಹೊರುವುದಕ್ಕೂ [QBR2] ಗುಲಾಮನಂತೆ ದುಡಿಯುವುದಕ್ಕೂ ಒಪ್ಪಿಕೊಳ್ಳುವನು.”
ಆದಿಕಾಂಡ 49 : 16 (ERVKN)
{ದಾನ} [PS] “ಇತರ ಇಸ್ರೇಲರ ಕುಟುಂಬಗಳಿಗೆ ತೀರ್ಪುಮಾಡುವಂತೆ, [QBR2] ದಾನನು ತನ್ನ ಸ್ವಂತ ಜನರಿಗೆ ತೀರ್ಪು ಮಾಡುತ್ತಾನೆ. [QBR]
ಆದಿಕಾಂಡ 49 : 17 (ERVKN)
ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” [QBR2] ದಾರಿಯ ಸಮೀಪದಲ್ಲಿ ಮಲಗಿದ್ದು [QBR] ಕುದುರೆಯ ಹಿಮ್ಮಡಿಯನ್ನು ಕಚ್ಚಿ [QBR2] ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.
ಆದಿಕಾಂಡ 49 : 18 (ERVKN)
“ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಗಾಗಿ ನಾನು ಕಾಯುತ್ತಿದ್ದೇನೆ.”
ಆದಿಕಾಂಡ 49 : 19 (ERVKN)
{ಗಾದ} [PS] “ಒಂದು ಕಳ್ಳರ ಗುಂಪು ಗಾದನ ಮೇಲೆ ಆಕ್ರಮಣ ಮಾಡುವುದು. [QBR2] ಆದರೆ ಗಾದನು ಅವರನ್ನು ಓಡಿಸಿ ಬಿಡುವನು.”
ಆದಿಕಾಂಡ 49 : 20 (ERVKN)
{ಆಶೇರ} [PS] “ಆಶೇರನ ನಾಡು ಒಳ್ಳೆಯ ಆಹಾರವನ್ನು ಯಥೇಚ್ಛವಾಗಿ ಫಲಿಸುತ್ತದೆ; [QBR2] ರಾಜನಿಗೆ ಸಾಕಾಗುವಷ್ಟು ಒಳ್ಳೆಯ ಆಹಾರವು ಅವನಲ್ಲಿರುವುದು.”
ಆದಿಕಾಂಡ 49 : 21 (ERVKN)
{ನಫ್ತಾಲಿ} [PS] “ನಫ್ತಾಲಿಯು ಸ್ವತಂತ್ರವಾಗಿ ಓಡುವ ಜಿಂಕೆಯಂತಿದ್ದಾನೆ. [QBR2] ಅವನ ಮಾತುಗಳು ಅದರ ಸುಂದರವಾದ ಮರಿಗಳಂತಿವೆ.”
ಆದಿಕಾಂಡ 49 : 22 (ERVKN)
{ಯೋಸೇಫ} [PS] “ಯೋಸೇಫನು ಬಹು ಯಶಸ್ವಿಯಾಗಿದ್ದಾನೆ. [QBR2] ಯೋಸೇಫನು ಹಣ್ಣನ್ನು ಅಧಿಕವಾಗಿ ಫಲಿಸುವ ದ್ರಾಕ್ಷೆ ಬಳ್ಳಿಯಂತಿರುವನು. [QBR] ಅವನು ವಸಂತಕಾಲದಲ್ಲಿ ಬೆಳೆಯುವ ದ್ರಾಕ್ಷೆಬಳ್ಳಿಯಂತಿರುವನು. [QBR2] ಅವನು ಗೋಡೆಯ ಆಚೆಗೆ ಚಾಚಿಕೊಂಡಿರುವ ದ್ರಾಕ್ಷೆಬಳ್ಳಿಯಂತಿರುವನು. [QBR]
ಆದಿಕಾಂಡ 49 : 23 (ERVKN)
ಅನೇಕ ಜನರು ಅವನ ವಿರುದ್ಧವಾಗಿ ಹೋರಾಡಿದರು. [QBR2] ಬಿಲ್ಲುಗಳನ್ನು ಹೊಂದಿದ್ದ ಜನರು ಅವನನ್ನು ಇಷ್ಟಪಡಲಿಲ್ಲ. [QBR]
ಆದಿಕಾಂಡ 49 : 24 (ERVKN)
ಆದರೆ ಅವನು ತನ್ನ ಹೋರಾಟದಲ್ಲಿ ಬಲಿಷ್ಠವಾದ ಬಿಲ್ಲಿನಿಂದಲೂ [QBR2] ತನ್ನ ನಿಪುಣವಾದ ತೋಳುಗಳಿಂದಲೂ ಗೆದ್ದನು. [QBR] ಅವನು ಶಕ್ತಿಯನ್ನು ಯಾಕೋಬನ ಪರಾಕ್ರಮಿಯಿಂದಲೂ [QBR2] ಇಸ್ರೇಲನ ಬಂಡೆಯಾದಾತನಿಂದಲೂ ಕುರುಬನಿಂದಲೂ [QBR]
ಆದಿಕಾಂಡ 49 : 25 (ERVKN)
ನಿಮ್ಮ ತಂದೆಯ ದೇವರಿಂದಲೂ ಪಡೆದುಕೊಳ್ಳುವನು. [QBR2] ದೇವರು ನಿನ್ನನ್ನು ಆಶೀರ್ವದಿಸುವನು. [QBR] ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಲಿ. [QBR2] ಆತನು ಮೇಲಿರುವ ಆಕಾಶದಿಂದ ನಿನಗೆ ಆಶೀರ್ವಾದಗಳನ್ನು ಕೊಡಲಿ. [QBR] ಆತನು ಕೆಳಗಿನ ಆಳವಾದ ಸಾಗರದ ಸೆಲೆಗಳಿಂದಲೂ ನಿನಗೆ ಆಶೀರ್ವಾದಗಳನ್ನು ಕೊಡಲಿ. [QBR2] ಆತನು ನಿನಗೆ ಸ್ತನ್ಯಗಳಿಂದಲೂ ಗರ್ಭದಿಂದಲೂ ಆಶೀರ್ವಾದಗಳನ್ನು ಕೊಡಲಿ. [QBR]
ಆದಿಕಾಂಡ 49 : 26 (ERVKN)
ನನ್ನ ತಂದೆತಾಯಿಗಳಿಗೆ ಅನೇಕಾನೇಕ ಒಳ್ಳೆಯ ಸಂಗತಿಗಳು ಸಂಭವಿಸಿದವು. [QBR2] ನಿನ್ನ ತಂದೆಯಾದ ನಾನು ಅದಕ್ಕಿಂತಲೂ ಹೆಚ್ಚು ಆಶೀರ್ವಾದ ಹೊಂದಿಕೊಂಡೆನು. [QBR] ನಿನ್ನ ಸಹೋದರರು ನಿನ್ನನ್ನು ದೂರಮಾಡಲು ಪ್ರಯತ್ನಿಸಿದರು. [QBR2] ಆದರೆ ಈಗ ನನ್ನ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ [QBR2] ಎತ್ತರವಾದ ಬೆಟ್ಟದೋಪಾದಿಯಲ್ಲಿ ರಾಶಿಯಂತಿವೆ.”
ಆದಿಕಾಂಡ 49 : 27 (ERVKN)
{ಬೆನ್ಯಾಮೀನ} [PS] “ಬೆನ್ಯಾಮೀನನು ಹಸಿದಿರುವ ತೋಳದಂತಿದ್ದಾನೆ. [QBR2] ಅವನು ಮುಂಜಾನೆಯಲ್ಲಿ ಕೊಂದು ತಿನ್ನುವನು. [QBR2] ಅವನು ಸಾಯಂಕಾಲ ಮಿಕ್ಕುಳಿದುದ್ದನ್ನು ಹಂಚಿಕೊಳ್ಳುವನು.” [PS]
ಆದಿಕಾಂಡ 49 : 28 (ERVKN)
ಇವು ಇಸ್ರೇಲನ ಹನ್ನೆರಡು ಕುಲಗಳು. ಈ ವಿಷಯಗಳನ್ನೆಲ್ಲ ಅವರ ತಂದೆಯಾದ ಇಸ್ರೇಲನು ಅವರಿಗೆ ಹೇಳಿದನು. ಅವನು ತನ್ನ ಪ್ರತಿಯೊಬ್ಬ ಗಂಡುಮಗನಿಗೆ ಅವನಿಗೆ ತಕ್ಕ ಆಶೀರ್ವಾದವನ್ನು ಕೊಟ್ಟನು.
ಆದಿಕಾಂಡ 49 : 29 (ERVKN)
ಬಳಿಕ ಇಸ್ರೇಲನು ಅವರಿಗೆ ಈ ಆಜ್ಞೆಯನ್ನು ಕೊಟ್ಟನು: “ನಾನು ಸತ್ತಾಗ, ನನ್ನ ಪೂರ್ವಿಕರ ಸಂಗಡವಿರಲು ಇಷ್ಟಪಡುತ್ತೇನೆ. ನನ್ನ ಪೂರ್ವಿಕರಿಗೆ ಸಮಾಧಿ ಮಾಡಿರುವ ಹಿತ್ತಿಯನಾದ ಎಫ್ರೋನನ ಗವಿಯಲ್ಲಿ ನನಗೆ ಸಮಾಧಿಮಾಡಬೇಕು.
ಆದಿಕಾಂಡ 49 : 30 (ERVKN)
ಆ ಗವಿಯು ಕಾನಾನ್ ದೇಶದ ಮಮ್ರೆಗೆ ಎದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅಬ್ರಹಾಮನು ತನ್ನ ಸಮಾಧಿಗಾಗಿ ಈ ಸ್ಥಳವನ್ನು ಎಫ್ರೋನನಿಂದ ಕೊಂಡುಕೊಂಡನು.
ಆದಿಕಾಂಡ 49 : 31 (ERVKN)
ಅಬ್ರಹಾಮನನ್ನು ಮತ್ತು ಅವನ ಹೆಂಡತಿಯಾದ ಸಾರಳನ್ನು ಆ ಗವಿಯಲ್ಲಿ ಸಮಾಧಿ ಮಾಡಲಾಗಿದೆ. ಇಸಾಕನನ್ನು ಮತ್ತು ರೆಬೆಕ್ಕಳನ್ನು ಅಲ್ಲಿ ಸಮಾಧಿ ಮಾಡಲಾಗಿದೆ. ನನ್ನ ಹೆಂಡತಿಯಾದ ಲೇಯಳನ್ನು ನಾನು ಅಲ್ಲಿ ಸಮಾಧಿ ಮಾಡಿದ್ದೇನೆ. ಬೆನ್ಯಾಮೀನ
ಆದಿಕಾಂಡ 49 : 32 (ERVKN)
ಆ ಗುಹೆಯನ್ನು ಮತ್ತು ಆ ಗುಹೆಯಿರುವ ಹೊಲವನ್ನು ಹಿತ್ತಿಯರಿಂದ ಕೊಂಡುಕೊಳ್ಳಲಾಗಿದೆ” ಎಂದು ಹೇಳಿದನು.
ಆದಿಕಾಂಡ 49 : 33 (ERVKN)
ಯಾಕೋಬನು ತನ್ನ ಗಂಡುಮಕ್ಕಳೊಂದಿಗೆ ಮಾತನಾಡಿದ ಮೇಲೆ ತನ್ನ ಹಾಸಿಗೆಯ ಮೇಲೆ ಕಾಲುಗಳನ್ನು ಮುದುರಿಕೊಂಡು ಪ್ರಾಣಬಿಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: