ಆದಿಕಾಂಡ 5 : 1 (ERVKN)
ಆದಾಮನ ಕುಟುಂಬ ಚರಿತ್ರೆ ಇದು ಆದಾಮನ ಕುಟುಂಬ ಚರಿತ್ರೆ. ದೇವರು ಮನುಷ್ಯನನ್ನು ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿ ಮಾಡಿದನು.
ಆದಿಕಾಂಡ 5 : 2 (ERVKN)
ದೇವರು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ಉಂಟುಮಾಡಿದನು. ಆತನು ಅವರನ್ನು ನಿರ್ಮಿಸಿದ ದಿನದಲ್ಲೇ ಅವರನ್ನು ಆಶೀರ್ವದಿಸಿ ಅವರಿಗೆ, “ಮನುಷ್ಯ” ಎಂದು ಹೆಸರಿಟ್ಟನು.
ಆದಿಕಾಂಡ 5 : 3 (ERVKN)
ಆದಾಮನು 130 ವರ್ಷದವನಾದಾಗ ಮತ್ತೊಬ್ಬ ಮಗನನ್ನು ಪಡೆದನು. ಆ ಮಗನು ರೂಪದಲ್ಲಿ ಆದಾಮನಂತಿದ್ದನು. ಆದಾಮನು ಅವನಿಗೆ ಸೇತ ಎಂದು ಹೆಸರಿಟ್ಟನು.
ಆದಿಕಾಂಡ 5 : 4 (ERVKN)
ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 5 (ERVKN)
ಹೀಗೆ ಆದಾಮನು ಒಟ್ಟು 930 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 6 (ERVKN)
ಸೇತನು 105 ವರ್ಷದವನಾದಾಗ ಎನೋಷ್ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 7 (ERVKN)
ಎನೋಷನು ಹುಟ್ಟಿದ ಮೇಲೆ ಸೇತನು 807 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಸೇತನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 8 (ERVKN)
ಹೀಗೆ ಸೇತನು ಒಟ್ಟು 912 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 9 (ERVKN)
ಎನೋಷನು 90 ವರ್ಷದವನಾದಾಗ ಕೇನಾನ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 10 (ERVKN)
ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಬೇರೆ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 11 (ERVKN)
ಹೀಗೆ ಎನೋಷನು ಒಟ್ಟು 905 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 12 (ERVKN)
ಕೇನಾನನು 70 ವರ್ಷದವನಾದಾಗ ಅವನು ಮಹಲಲೇಲ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 13 (ERVKN)
ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಕೇನಾನನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 14 (ERVKN)
ಹೀಗೆ ಕೇನಾನನು ಒಟ್ಟು 910 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 15 (ERVKN)
ಮಹಲಲೇಲನು 65 ವರ್ಷದವನಾದಾಗ ಯೆರೆದ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 16 (ERVKN)
ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 17 (ERVKN)
ಹೀಗೆ ಮಹಲಲೇಲನು ಒಟ್ಟು 895 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 18 (ERVKN)
ಯೆರೆದನು 162 ವರ್ಷದವನಾದಾಗ ಹನೋಕ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 19 (ERVKN)
ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 20 (ERVKN)
ಹೀಗೆ ಯೆರೆದನು ಒಟ್ಟು 962 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 21 (ERVKN)
ಹನೋಕನು 65 ವರ್ಷದವನಾದಾಗ ಮೆತೂಷೆಲಹ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 22 (ERVKN)
ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರ ಅನ್ಯೋನ್ಯತೆಯಲ್ಲಿ 300 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 23 (ERVKN)
ಹೀಗೆ ಹನೋಕನು ಒಟ್ಟು 365 ವರ್ಷ ಜೀವಿಸಿದನು.
ಆದಿಕಾಂಡ 5 : 24 (ERVKN)
ಹನೋಕನು ದೇವರ ಅನ್ಯೋನ್ಯತೆಯಲ್ಲಿ ಜೀವಿಸುತ್ತಿದ್ದಾಗ, ದೇವರು ಅವನನ್ನು ತನ್ನ ಬಳಿಗೆ ಕರೆದುಕೊಂಡನು. ಅಂದಿನಿಂದ ಅವನು ಕಣ್ಮರೆಯಾದನು.
ಆದಿಕಾಂಡ 5 : 25 (ERVKN)
ಮೆತೂಷೆಲಹನು 187 ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು.
ಆದಿಕಾಂಡ 5 : 26 (ERVKN)
ಲೆಮೆಕನು ಹುಟ್ಟಿದ ಮೇಲೆ ಮೆತೂಷೆಲಹನು 782 ವರ್ಷ ಜೀವಿಸಿದನು. ಆ ಕಾಲಾವಧಿಯಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 27 (ERVKN)
ಹೀಗೆ ಮೆತೂಷೆಲಹನು ಒಟ್ಟು 969 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 28 (ERVKN)
ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.
ಆದಿಕಾಂಡ 5 : 29 (ERVKN)
ಲೆಮೆಕನು, “ನಾವು ರೈತರಾಗಿ ಕಷ್ಟಪಟ್ಟು ಕೆಲಸ ಮಾಡುತ್ತೇವೆ, ಯಾಕೆಂದರೆ ದೇವರು ಭೂಮಿಯನ್ನು ಶಪಿಸಿದನು. ಆದರೆ ಈ ಮಗನು ನಮಗೆ ವಿಶ್ರಾಂತಿ ಕೊಡುವನು” ಎಂದು ಹೇಳಿ ಆ ಮಗುವಿಗೆ ನೋಹ ಎಂದು ಹೆಸರಿಟ್ಟನು.
ಆದಿಕಾಂಡ 5 : 30 (ERVKN)
ನೋಹನು ಹುಟ್ಟಿದ ಮೇಲೆ, ಲೆಮೆಕನು 595 ವರ್ಷ ಜೀವಿಸಿದನು. ಆ ಕಾಲದಲ್ಲಿ ಅವನು ಇತರ ಗಂಡುಮತ್ತು ಹೆಣ್ಣುಮಕ್ಕಳನ್ನು ಪಡೆದನು.
ಆದಿಕಾಂಡ 5 : 31 (ERVKN)
ಹೀಗೆ ಲೆಮೆಕನು ಒಟ್ಟು 777 ವರ್ಷ ಜೀವಿಸಿ ಮರಣಹೊಂದಿದನು.
ಆದಿಕಾಂಡ 5 : 32 (ERVKN)
ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32