ಆದಿಕಾಂಡ 6 : 1 (ERVKN)
ಜನರ ದುಷ್ಟತನ ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು.
ಆದಿಕಾಂಡ 6 : 2 (ERVKN)
(2-4)ಜನರ ದುಷ್ಟತನ ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು.* ಈ ಸ್ತ್ರೀಯರು … ಪರಾಕ್ರಮಶಾಲಿಗಳಾಗಿದ್ದರು ಅಥವಾ “ದೇವಪುತ್ರರು ಮಾನವರ ಪುತ್ರಿಯರನ್ನು ಮದುವೆಮಾಡಿಕೊಂಡ ಆ ದಿನಗಳಲ್ಲಿಯೂ ಅನಂತರವೂ ನೆಫೇಲಿಯರು ನಾಡಿನಲ್ಲಿ ವಾಸವಾಗಿದ್ದರು. ಈ ಸ್ತ್ರೀಯರೇ ಪುರಾತನ ಕಾಲದಿಂದಲೂ ಪ್ರಖ್ಯಾತರಾದ ವೀರರಿಗೆ ಜನ್ಮಕೊಟ್ಟವರು.” ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.
ಆದಿಕಾಂಡ 6 : 5 (ERVKN)
ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.
ಆದಿಕಾಂಡ 6 : 6 (ERVKN)
ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
ಆದಿಕಾಂಡ 6 : 7 (ERVKN)
ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.
ಆದಿಕಾಂಡ 6 : 8 (ERVKN)
ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.
ಆದಿಕಾಂಡ 6 : 9 (ERVKN)
ನೋಹ ಮತ್ತು ಮಹಾ ಜಲಪ್ರಳಯ ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.
ಆದಿಕಾಂಡ 6 : 10 (ERVKN)
ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.
ಆದಿಕಾಂಡ 6 : 11 (ERVKN)
(11-12)ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು.
ಆದಿಕಾಂಡ 6 : 13 (ERVKN)
ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.
ಆದಿಕಾಂಡ 6 : 14 (ERVKN)
ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.
ಆದಿಕಾಂಡ 6 : 15 (ERVKN)
“ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.
ಆದಿಕಾಂಡ 6 : 16 (ERVKN)
ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.
ಆದಿಕಾಂಡ 6 : 17 (ERVKN)
“ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.
ಆದಿಕಾಂಡ 6 : 18 (ERVKN)
ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.
ಆದಿಕಾಂಡ 6 : 19 (ERVKN)
ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.
ಆದಿಕಾಂಡ 6 : 20 (ERVKN)
ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.
ಆದಿಕಾಂಡ 6 : 21 (ERVKN)
ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.
ಆದಿಕಾಂಡ 6 : 22 (ERVKN)
ದೇವರು ಆಜ್ಞಾಪಿಸಿದಂತೆಯೇ ನೋಹನು ಮಾಡಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22