ಆದಿಕಾಂಡ 7 : 1 (ERVKN)
{ಜಲಪ್ರಳಯದ ಪ್ರಾರಂಭ} [PS] ಆಮೇಲೆ ಯೆಹೋವನು ನೋಹನಿಗೆ, “ಈ ಕಾಲದವರಲ್ಲಿ ನೀನೊಬ್ಬನೇ ನೀತಿವಂತನಾಗಿರುವೆ. ಆದ್ದರಿಂದ ನಿನ್ನ ಕುಟುಂಬದವರೆಲ್ಲರನ್ನು ಕರೆದುಕೊಂಡು ನಾವೆಯೊಳಗೆ ಹೋಗು.
ಆದಿಕಾಂಡ 7 : 2 (ERVKN)
ಎಲ್ಲಾ ಬಗೆಯ ಶುದ್ಧಪ್ರಾಣಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಭೂಮಿಯ ಮೇಲಿನ ಇತರ ಪ್ರಾಣಿಗಳಲ್ಲಿ ಒಂದೊಂದು ಜೋಡಿಯನ್ನು (ಒಂದು ಗಂಡನ್ನು ಮತ್ತು ಒಂದು ಹೆಣ್ಣನ್ನು) ತೆಗೆದುಕೊ.
ಆದಿಕಾಂಡ 7 : 3 (ERVKN)
ಎಲ್ಲಾ ಬಗೆಯ ಪಕ್ಷಿಗಳಲ್ಲಿ ಏಳೇಳು ಜೋಡಿಗಳನ್ನು (ಏಳು ಗಂಡನ್ನು ಮತ್ತು ಏಳು ಹೆಣ್ಣನ್ನು) ತೆಗೆದುಕೊ. ಉಳಿದ ಜೀವಿಗಳೆಲ್ಲ ನಾಶವಾದಮೇಲೆ, ಇವು ತಮ್ಮ ಸಂತತಿಗಳನ್ನು ಮುಂದುವರಿಸಲಿ.
ಆದಿಕಾಂಡ 7 : 4 (ERVKN)
ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.
ಆದಿಕಾಂಡ 7 : 5 (ERVKN)
ಯೆಹೋವನು ಆಜ್ಞಾಪಿಸಿದ್ದನ್ನೆಲ್ಲ ನೋಹನು ಮಾಡಿದನು. [PE][PS]
ಆದಿಕಾಂಡ 7 : 6 (ERVKN)
ಮಳೆಯು ಆರಂಭವಾದಾಗ ನೋಹನ ವಯಸ್ಸು ಆರುನೂರು ವರ್ಷ.
ಆದಿಕಾಂಡ 7 : 7 (ERVKN)
ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಹೆಂಡತಿ, ತನ್ನ ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯೊಳಗೆ ಹೋದನು.
ಆದಿಕಾಂಡ 7 : 8 (ERVKN)
ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ
ಆದಿಕಾಂಡ 7 : 9 (ERVKN)
ನೋಹನೊಂದಿಗೆ ನಾವೆಯೊಳಗೆ ಹೋದವು. ದೇವರ ಆಜ್ಞೆಯಂತೆ ಈ ಪ್ರಾಣಿಗಳು ಜೋಡಿಜೋಡಿಯಾಗಿ ನಾವೆಯೊಳಗೆ ಹೋದವು.
ಆದಿಕಾಂಡ 7 : 10 (ERVKN)
ಏಳು ದಿನಗಳ ನಂತರ ಜಲಪ್ರಳಯ ಪ್ರಾರಂಭವಾಯಿತು. ಭೂಮಿಯ ಮೇಲೆ ಮಳೆ ಸುರಿಯತೊಡಗಿತು. [PE][PS]
ಆದಿಕಾಂಡ 7 : 11 (ERVKN)
(11-13) ಎರಡನೆ ತಿಂಗಳಿನ ಹದಿನೇಳನೆಯ ದಿನದಂದು ಭೂಮಿಯ ಕೆಳಗಿರುವ ಸಾಗರದ ಸೆಲೆಗಳು ಒಡೆದು ಭೂಮಿಯೊಳಗಿಂದ ನೀರು ಮೇಲೇರತೊಡಗಿತು; ಭೂಮಿಯ ಮೇಲೆ ಭಾರಿಮಳೆ ಸುರಿಯತೊಡಗಿತು. ಆಕಾಶದ ಕಿಟಕಿ ತೆರೆದಿದೆಯೋ ಎಂಬಂತೆ ನಲವತ್ತು ದಿವಸ ಹಗಲಿರುಳು ಮಳೆ ಸುರಿಯಿತು. ಆ ದಿನದಂದು ನೋಹ ಮತ್ತು ಅವನ ಹೆಂಡತಿ, ಅವನ ಗಂಡುಮಕ್ಕಳಾದ ಶೇಮ್, ಹಾಮ್, ಯೆಫೆತ್ ಮತ್ತು ಅವನ ಸೊಸೆಯಂದಿರು ನಾವೆಯೊಳಗೆ ಹೋದರು. ಆಗ ನೋಹನು ಆರುನೂರು ವರ್ಷದ ವೃದ್ಧನಾಗಿದ್ದನು.
ಆದಿಕಾಂಡ 7 : 14 (ERVKN)
ಅವರು ನಾವೆಯೊಳಗೆ ಇದ್ದರು. ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪ್ರಾಣಿಗಳು, ಪ್ರತಿಯೊಂದು ಬಗೆಯ ಪಶುಗಳು, ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಬಗೆಯ ಕ್ರಿಮಿಗಳು ಮತ್ತು ಪ್ರತಿಯೊಂದು ಬಗೆಯ ಪಕ್ಷಿಗಳು ನಾವೆಯೊಳಗೆ ಇದ್ದವು.
ಆದಿಕಾಂಡ 7 : 15 (ERVKN)
ಉಸಿರಾಡುವ ಪ್ರತಿಯೊಂದು ಬಗೆಯ ಪ್ರಾಣಿಗಳು ತಮ್ಮತಮ್ಮ ಜಾತಿಗನುಸಾರವಾಗಿ ಎರಡೆರಡಾಗಿ ಬಂದವು.
ಆದಿಕಾಂಡ 7 : 16 (ERVKN)
ದೇವರ ಆಜ್ಞೆಯಂತೆ ಈ ಪ್ರಾಣಿಗಳೆಲ್ಲಾ ನಾವೆಯೊಳಗೆ ಪ್ರವೇಶಿಸಿದವು. ಆಗ ಯೆಹೋವನು ನಾವೆಯ ಬಾಗಿಲನ್ನು ಮುಚ್ಚಿದನು. [PE][PS]
ಆದಿಕಾಂಡ 7 : 17 (ERVKN)
ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು.
ಆದಿಕಾಂಡ 7 : 18 (ERVKN)
ನೀರು ಇನ್ನೂ ಮೇಲೇರತೊಡಗಿದ್ದರಿಂದ ನಾವೆಯೂ ಭೂಮಿಯಿಂದ ಬಹು ಮೇಲೆ ಚಲಿಸತೊಡಗಿತು.
ಆದಿಕಾಂಡ 7 : 19 (ERVKN)
ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.
ಆದಿಕಾಂಡ 7 : 20 (ERVKN)
ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು. [PE][PS]
ಆದಿಕಾಂಡ 7 : 21 (ERVKN)
(21-22) ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು.
ಆದಿಕಾಂಡ 7 : 23 (ERVKN)
ಹೀಗೆ ದೇವರು ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯನ್ನು ನಾಶಗೊಳಿಸಿದನು. ಪ್ರತಿಯೊಬ್ಬ ಮನುಷ್ಯನು ನಾಶವಾದನು; ಪ್ರತಿಯೊಂದು ಪ್ರಾಣಿಯು, ಹರಿದಾಡುವ ಪ್ರತಿಯೊಂದು ಕ್ರಿಮಿಯು ಮತ್ತು ಪ್ರತಿಯೊಂದು ಪಕ್ಷಿಯು ನಾಶವಾದವು. ಉಳಿದುಕೊಂಡವರೆಂದರೆ, ನೋಹ ಮತ್ತು ಅವನ ಕುಟುಂಬದವರು ಹಾಗೂ ಅವನೊಡನೆ ನಾವೆಯೊಳಗಿದ್ದ ಜೀವಿಗಳು.
ಆದಿಕಾಂಡ 7 : 24 (ERVKN)
ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು. [PE]
❮
❯