ಆದಿಕಾಂಡ 8 : 1 (ERVKN)
ಜಲಪ್ರಳಯದ ಮುಕ್ತಾಯ ಆದರೆ ದೇವರು ನೋಹನನ್ನು ಮರೆಯಲಿಲ್ಲ. ದೇವರು ನೋಹನನ್ನು ಮತ್ತು ನಾವೆಯಲ್ಲಿದ್ದ ಎಲ್ಲಾ ಪ್ರಾಣಿಗಳನ್ನು ನೆನಪುಮಾಡಿಕೊಂಡನು. ದೇವರು ಭೂಮಿಯ ಮೇಲೆ ಗಾಳಿಯನ್ನು ಬರಮಾಡಿದನು. ನೀರು ಕಡಿಮೆಯಾಗಲು ಪ್ರಾರಂಭಿಸಿತು.
ಆದಿಕಾಂಡ 8 : 2 (ERVKN)
ಆಕಾಶದಿಂದ ಸುರಿಯುತ್ತಿದ್ದ ಮಳೆ ನಿಂತುಹೋಯಿತು. ಆಕಾಶದ ತೂಬುಗಳು ಮುಚ್ಚಿಹೋದವು. ಭೂಸೆಲೆಗಳಿಂದ ಉಕ್ಕುತ್ತಿದ್ದ ನೀರು ಸಹ ನಿಂತುಹೋಯಿತು.
ಆದಿಕಾಂಡ 8 : 3 (ERVKN)
(3-4)ಭೂಮಿಯನ್ನು ಆವರಿಸಿಕೊಂಡಿದ್ದ ನೀರು ನೂರೈವತ್ತು ದಿನಗಳಾದ ಮೇಲೆ ಕ್ರಮೇಣವಾಗಿ ಕಡಿಮೆಯಾಗುತ್ತಾ ಬಂತು. ಏಳನೆಯ ತಿಂಗಳ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ನಾಡಿನಲ್ಲಿದ್ದ ಒಂದು ಬೆಟ್ಟದ ಮೇಲೆ ನಿಂತುಕೊಂಡಿತು.
ಆದಿಕಾಂಡ 8 : 5 (ERVKN)
ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.
ಆದಿಕಾಂಡ 8 : 6 (ERVKN)
ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು.
ಆದಿಕಾಂಡ 8 : 7 (ERVKN)
ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು.
ಆದಿಕಾಂಡ 8 : 8 (ERVKN)
ನೆಲ ಒಣಗಿದೆಯೇ, ತೇವವಾಗಿದೆಯೇ ಎಂದು ತಿಳಿದುಕೊಳ್ಳುವುದಕ್ಕಾಗಿ ನೋಹನು ಒಂದು ಪಾರಿವಾಳವನ್ನು ಸಹ ಹೊರಕ್ಕೆ ಬಿಟ್ಟನು.
ಆದಿಕಾಂಡ 8 : 9 (ERVKN)
ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.
ಆದಿಕಾಂಡ 8 : 10 (ERVKN)
ಏಳು ದಿನಗಳವರೆಗೆ ನೋಹನು ಕಾದುಕೊಂಡಿದ್ದು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು.
ಆದಿಕಾಂಡ 8 : 11 (ERVKN)
ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು.
ಆದಿಕಾಂಡ 8 : 12 (ERVKN)
ಏಳು ದಿನಗಳ ನಂತರ ನೋಹನು ಮತ್ತೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಆದರೆ ಅದು ಈ ಸಲ ಹಿಂತಿರುಗಿ ಬರಲಿಲ್ಲ.
ಆದಿಕಾಂಡ 8 : 13 (ERVKN)
ಆದ್ದರಿಂದ ನೋಹನು ನಾವೆಯ ಬಾಗಿಲನ್ನು ತೆರೆದು ಸುತ್ತಲೂ ನೋಡಿದನು. ನೆಲವೆಲ್ಲಾ ಒಣಗಿತ್ತು. ಅಂದು ಮೊದಲನೆಯ ವರ್ಷದ ಮೊದಲನೆಯ ತಿಂಗಳ ಮೊದಲನೆಯ ದಿನವಾಗಿತ್ತು. ಆಗ ನೋಹನಿಗೆ ಆರುನೂರ ಒಂದು ವರ್ಷವಾಗಿತ್ತು.
ಆದಿಕಾಂಡ 8 : 14 (ERVKN)
ಎರಡನೆಯ ತಿಂಗಳ ಇಪ್ಪತ್ತೇಳನೆಯ ದಿನದೊಳಗೆ ನೆಲವೆಲ್ಲಾ ಸಂಪೂರ್ಣವಾಗಿ ಒಣಗಿಹೋಯಿತು.
ಆದಿಕಾಂಡ 8 : 15 (ERVKN)
(15-16)ಆಮೇಲೆ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ನಿನ್ನ ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬನ್ನಿ.
ಆದಿಕಾಂಡ 8 : 17 (ERVKN)
ನಿಮ್ಮೊಡನೆ ನಾವೆಯೊಳಗಿದ್ದ ಎಲ್ಲಾ ಜೀವಿಗಳು ಅಂದರೆ ಎಲ್ಲಾ ಪಕ್ಷಿಗಳು, ಪ್ರಾಣಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಹೊರಗೆ ಬರಲಿ. ಅವುಗಳ ಸಂತಾನವು ಹೆಚ್ಚೆಚ್ಚಾಗಲಿ; ಭೂಮಿಯ ಮೇಲೆಲ್ಲಾ ಅವು ತುಂಬಿಕೊಳ್ಳಲಿ” ಅಂದನು.
ಆದಿಕಾಂಡ 8 : 18 (ERVKN)
ಆದ್ದರಿಂದ ನೋಹನು ತನ್ನ ಹೆಂಡತಿ, ಗಂಡುಮಕ್ಕಳು ಮತ್ತು ಸೊಸೆಯರೊಂದಿಗೆ ನಾವೆಯಿಂದ ಹೊರಗೆ ಬಂದನು.
ಆದಿಕಾಂಡ 8 : 19 (ERVKN)
ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು.
ಆದಿಕಾಂಡ 8 : 20 (ERVKN)
ಆಮೇಲೆ ನೋಹನು ಯೆಹೋವನಿಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿ ಶುದ್ಧವಾದ ಕೆಲವು ಪಶುಪಕ್ಷಿಗಳನ್ನು ತೆಗೆದುಕೊಂಡು ಅವುಗಳನ್ನು ದೇವರಿಗೆ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮ ಮಾಡಿದನು.
ಆದಿಕಾಂಡ 8 : 21 (ERVKN)
ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.
ಆದಿಕಾಂಡ 8 : 22 (ERVKN)
ಭೂಮಿ ಇರುವವರೆಗೆ ಬಿತ್ತನೆಕಾಲ, ಸುಗ್ಗಿಕಾಲ ಯಾವಾಗಲೂ ಇರುತ್ತವೆ. ಹಿಮಕಾಲ, ಬೇಸಿಗೆಕಾಲ, ಚಳಿಗಾಲ, ಹಗಲು ಮತ್ತು ರಾತ್ರಿ ಯಾವಾಗಲೂ ಇದ್ದೇ ಇರುತ್ತವೆ” ಎಂದು ಅಂದುಕೊಂಡನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22