ಇಬ್ರಿಯರಿಗೆ 10 : 1 (ERVKN)
{ಕ್ರಿಸ್ತನ ಯಜ್ಞವು ನಮ್ಮನ್ನು ನಿಷ್ಕಳಂಕರನ್ನಾಗಿ ಮಾಡುವುದು} [PS] ಧರ್ಮಶಾಸ್ತ್ರವು ಮುಂದೆ ಬರುವ ಉತ್ತಮ ಸಂಗತಿಗಳ ಅಸ್ಪಷ್ಟ ಚಿತ್ರಣವಾಗಿದೆ. ಅದು ನಿಜವಾದ ಸಂಗತಿಗಳ ಸ್ಪಷ್ಟ ಚಿತ್ರಣವಲ್ಲ. ಪ್ರತಿ ವರ್ಷವೂ ಒಂದೇ ರೀತಿಯ ಯಜ್ಞಗಳನ್ನು ಅರ್ಪಿಸಬೇಕೆಂದು ಅದು ಜನರಿಗೆ ತಿಳಿಸಿತು. ದೇವರನ್ನು ಆರಾಧಿಸಲು ಬರುವ ಜನರು ಅದೇ ರೀತಿಯ ಯಜ್ಞಗಳನ್ನು ಅರ್ಪಿಸುತ್ತಿದ್ದರು. ಆದರೆ ಆ ಜನರನ್ನು ಧರ್ಮಶಾಸ್ತ್ರವು ಎಂದಿಗೂ ನಿಷ್ಕಳಂಕರನ್ನಾಗಿ ಮಾಡಲಿಲ್ಲ.
ಇಬ್ರಿಯರಿಗೆ 10 : 2 (ERVKN)
ಅದು ಜನರನ್ನು ನಿಷ್ಕಳಂಕರನ್ನಾಗಿ ಮಾಡಿದ್ದರೆ, ಆ ಯಜ್ಞಗಳು ಈಗಾಗಲೇ ನಿಂತುಹೋಗುತ್ತಿದ್ದವು. ಆ ಜನರು ಆಗಲೇ ತಮ್ಮ ಪಾಪಗಳಿಂದ ಬಿಡುಗಡೆ ಹೊಂದಿ ಪರಿಶುದ್ಧರಾಗುತ್ತಿದ್ದರು. ತಾವು ಪಾಪಿಗಳೆಂಬ ಅರಿವು ಅವರಿಗಿರುತ್ತಿರಲಿಲ್ಲ.
ಇಬ್ರಿಯರಿಗೆ 10 : 3 (ERVKN)
ಆ ಜನರು ಪ್ರತಿವರ್ಷ ಅರ್ಪಿಸುತ್ತಿದ್ದ ಯಜ್ಞಗಳು ಅವರ ಪಾಪಗಳನ್ನು ನೆನಪಿಗೆ ತರುತ್ತಿದ್ದವು.
ಇಬ್ರಿಯರಿಗೆ 10 : 4 (ERVKN)
ಏಕೆಂದರೆ ಅವರ ಪಾಪಗಳನ್ನು ತೆಗೆದುಹಾಕಲು ಹೋರಿಗಳ ಮತ್ತು ಹೋತಗಳ ರಕ್ತಕ್ಕೆ ಸಾಧ್ಯವಿರಲಿಲ್ಲ. [PE][PS]
ಇಬ್ರಿಯರಿಗೆ 10 : 5 (ERVKN)
ಕ್ರಿಸ್ತನು ಈ ಲೋಕದಲ್ಲಿ ಪ್ರತ್ಯಕ್ಷನಾದಾಗ ಹೇಳಿದ್ದೇನೆಂದರೆ: “ದೇವರೇ, ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. [QBR2] ಆದರೆ ನೀನು ನನಗಾಗಿ ಒಂದು ದೇಹವನ್ನು ಸಿದ್ಧಮಾಡಿಕೊಟ್ಟಿರುವೆ. [QBR]
ಇಬ್ರಿಯರಿಗೆ 10 : 6 (ERVKN)
ನೀನು ಸರ್ವಾಂಗಹೋಮಗಳಲ್ಲಿಯೂ [QBR2] ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ. [QBR]
ಇಬ್ರಿಯರಿಗೆ 10 : 7 (ERVKN)
ಆಗ ನಾನು, ‘ದೇವರೇ, ನಾನು ಇಲ್ಲಿದ್ದೇನೆ. [QBR2] ಧರ್ಮಶಾಸ್ತ್ರದಲ್ಲಿ ನನ್ನ ಬಗ್ಗೆ ಬರೆದಿರುವಂತೆಯೇ [QBR2] ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ’ ಎಂದು ಹೇಳಿದೆ.” ಕೀರ್ತನೆ. 40:6-8]
ಇಬ್ರಿಯರಿಗೆ 10 : 8 (ERVKN)
ಈ ಪವಿತ್ರ ಗ್ರಂಥದಲ್ಲಿ ಕ್ರಿಸ್ತನು ಮೊದಲನೆಯದಾಗಿ ಹೇಳಿದ್ದೇನೆಂದರೆ: “ನಿನಗೆ ಯಜ್ಞನೈವೇದ್ಯಗಳು ಬೇಕಾಗಿಲ್ಲ. ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.” (ಇವುಗಳೆಲ್ಲ ಧರ್ಮಶಾಸ್ತ್ರವು ಆಜ್ಞಾಪಿಸುವ ಯಜ್ಞಗಳು.)
ಇಬ್ರಿಯರಿಗೆ 10 : 9 (ERVKN)
ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” [✡ಉಲ್ಲೇಖನ: ಕೀರ್ತನೆ. 40:6-7.] ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.
ಇಬ್ರಿಯರಿಗೆ 10 : 10 (ERVKN)
ದೇವರ ಇಷ್ಟಕ್ಕನುಸಾರವಾದ ಕಾರ್ಯಗಳನ್ನು ಯೇಸು ಕ್ರಿಸ್ತನು ಮಾಡಿದನು. ಆ ಕಾರಣದಿಂದಲೇ, ಯಜ್ಞವಾಗಿ ಅರ್ಪಿತವಾದ ಆತನ ದೇಹದ ಮೂಲಕ ನಾವು ಪರಿಶುದ್ಧರಾದೆವು. ಆತನು ಶಾಶ್ವತವಾದ ಯಜ್ಞವನ್ನು ಒಂದೇ ಸಲ ಅರ್ಪಿಸಿದನು. [PE][PS]
ಇಬ್ರಿಯರಿಗೆ 10 : 11 (ERVKN)
ಪ್ರತಿದಿನವೂ ಯಾಜಕರು ನಿಂತುಕೊಂಡು ತಮ್ಮ ಧಾರ್ಮಿಕ ಸೇವೆಯನ್ನು ಮಾಡುತ್ತಾರೆ. ಅವರು ಮತ್ತೆಮತ್ತೆ ಅದೇ ಯಜ್ಞಗಳನ್ನು ಅರ್ಪಿಸುತ್ತಾರೆ. ಆದರೆ ಅವರ ಪಾಪಗಳನ್ನು ತೆಗೆದುಹಾಕಲು ಯಜ್ಞಗಳಿಗೆ ಎಂದಿಗೂ ಸಾಧ್ಯವಿಲ್ಲ.
ಇಬ್ರಿಯರಿಗೆ 10 : 12 (ERVKN)
ಆದರೆ ಕ್ರಿಸ್ತನು ಪಾಪಗಳಿಗಾಗಿ ಶಾಶ್ವತವಾದ ಒಂದೇ ಯಜ್ಞವನ್ನು ಅರ್ಪಿಸಿದನು. ನಂತರ ಆತನು ದೇವರ ಬಲಗಡೆಯಲ್ಲಿ ಕುಳಿತುಕೊಂಡನು.
ಇಬ್ರಿಯರಿಗೆ 10 : 13 (ERVKN)
ಶತ್ರುಗಳನ್ನು ತನ್ನ ಪಾದಪೀಠವನ್ನಾಗಿ ಮಾಡುವ ತನಕ ಕ್ರಿಸ್ತನು ಕಾಯುತ್ತಿದ್ದಾನೆ.
ಇಬ್ರಿಯರಿಗೆ 10 : 14 (ERVKN)
ಒಂದೇ ಯಜ್ಞದ ಮೂಲಕ ಆತನು ತನ್ನ ಜನರನ್ನು ಎಂದೆಂದಿಗೂ ನಿಷ್ಕಳಂಕರನ್ನಾಗಿ ಮಾಡಿದನು. ಪರಿಶುದ್ಧರಾಗಿ ಮಾಡಲ್ಪಡುತ್ತಿರುವ ಜನರೇ ಇವರು. [PE][PS]
ಇಬ್ರಿಯರಿಗೆ 10 : 15 (ERVKN)
ಪವಿತ್ರಾತ್ಮನು ನಮಗೆ ಇದರ ಬಗ್ಗೆ ತಿಳಿಸಿದ್ದಾನೆ. ಮೊದಲನೆಯದಾಗಿ ಆತನು ಹೇಳುವುದೇನೆಂದರೆ:
ಇಬ್ರಿಯರಿಗೆ 10 : 16 (ERVKN)
“ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: [QBR] ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; [QBR2] ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33
ಇಬ್ರಿಯರಿಗೆ 10 : 17 (ERVKN)
ನಂತರ ಆತನು ಹೇಳುವುದೇನೆಂದರೆ: “ನಾನು ಅವರ ಪಾಪಗಳನ್ನು ಮತ್ತು ಅವರ ಕೆಟ್ಟಕಾರ್ಯಗಳನ್ನು ಕ್ಷಮಿಸುತ್ತೇನೆ. [QBR2] ಅವುಗಳನ್ನು ಮತ್ತೆಂದಿಗೂ ನೆನಪು ಮಾಡಿಕೊಳ್ಳುವುದಿಲ್ಲ.” ಯೆರೆಮೀಯ 31:34
ಇಬ್ರಿಯರಿಗೆ 10 : 18 (ERVKN)
ಈ ಪಾಪಗಳೆಲ್ಲಾ ಕ್ಷಮಿಸಲ್ಪಟ್ಟ ಮೇಲೆ, ಅವುಗಳಿಗಾಗಿ ಮತ್ತೆ ಯಜ್ಞಗಳನ್ನು ಅರ್ಪಿಸುವುದು ಅಗತ್ಯವಿಲ್ಲ. [PS]
ಇಬ್ರಿಯರಿಗೆ 10 : 19 (ERVKN)
{ಸಮೀಪಕ್ಕೆ ಬನ್ನಿರಿ} [PS] (19-20) ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.
ಇಬ್ರಿಯರಿಗೆ 10 : 20 (ERVKN)
ಇಬ್ರಿಯರಿಗೆ 10 : 21 (ERVKN)
ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು.
ಇಬ್ರಿಯರಿಗೆ 10 : 22 (ERVKN)
ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.
ಇಬ್ರಿಯರಿಗೆ 10 : 23 (ERVKN)
ನಮ್ಮಲ್ಲಿರುವ ನಿರೀಕ್ಷೆಯನ್ನು ದೃಢವಾಗಿ ಕಾಯ್ದುಕೊಂಡು ಅದರ ಬಗ್ಗೆ ಜನರಿಗೆ ತಿಳಿಸುವುದರಲ್ಲಿ ದೃಢವಾಗಿರೋಣ. ದೇವರು ತನ್ನ ವಾಗ್ದಾನವನ್ನು ಈಡೇರಿಸುತ್ತಾನೆ ಎಂಬ ಭರವಸೆ ನಮ್ಮಲ್ಲಿರಬೇಕು. [PS]
ಇಬ್ರಿಯರಿಗೆ 10 : 24 (ERVKN)
{ಒಬ್ಬರಿಗೊಬ್ಬರು ಸಹಾಯಮಾಡಿ ಶಕ್ತಿಯುಳ್ಳವರಾಗಿರಿ} [PS] ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.
ಇಬ್ರಿಯರಿಗೆ 10 : 25 (ERVKN)
ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ [*ಯೇಸುವು … ದಿನ ಇದು ಕ್ರಿಸ್ತನ ಎರಡನೇ ಬರೋಣದ ಸೂಚನೆಯಾಗಿದೆ.] ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು. [PS]
ಇಬ್ರಿಯರಿಗೆ 10 : 26 (ERVKN)
{ಕ್ರಿಸ್ತನಿಂದ ದೂರ ಸರಿಯದಿರಿ} [PS] ನಾವು ಸತ್ಯವನ್ನು ತಿಳಿದುಕೊಂಡ ಮೇಲೆಯೂ ಪಾಪಗಳನ್ನು ಮಾಡುತ್ತಲೇ ಇದ್ದರೆ, ನಮ್ಮ ಪಾಪಗಳನ್ನು ಯಾವ ಯಜ್ಞವೂ ಪರಿಹರಿಸುವುದಿಲ್ಲ.
ಇಬ್ರಿಯರಿಗೆ 10 : 27 (ERVKN)
ನಾವು ಪಾಪಗಳಲ್ಲಿಯೇ ಮುಂದುವರಿದರೆ, ನ್ಯಾಯತೀರ್ಪಿನ ಭಯದಲ್ಲಿ ಮತ್ತು ದೇವರ ವಿರುದ್ಧವಾಗಿ ಜೀವಿಸುವವರನ್ನು ದಹಿಸುವ ಭಯಂಕರ ಬೆಂಕಿಯ ಭಯದಲ್ಲಿ ಜೀವಿಸಬೇಕಾಗುತ್ತದೆ.
ಇಬ್ರಿಯರಿಗೆ 10 : 28 (ERVKN)
ಮೋಶೆಯ ನಿಯಮಗಳಿಗೆ ಅವಿಧೇಯನಾದ ವ್ಯಕ್ತಿಯು ಇಬ್ಬರು ಅಥವಾ ಮೂವರು ಸಾಕ್ಷಿಗಳಿಂದ ತಪ್ಪಿತಸ್ಥನೆಂದು ನಿರ್ಧರಿಸಲ್ಪಟ್ಟರೆ, ಅವನಿಗೆ ಕ್ಷಮೆ ದೊರೆಯುತ್ತಿರಲಿಲ್ಲ. ಅವನನ್ನು ಕೊಂದುಹಾಕುತ್ತಿದ್ದರು.
ಇಬ್ರಿಯರಿಗೆ 10 : 29 (ERVKN)
ಹೀಗಿರಲು ದೇವರ ಮಗನನ್ನು ದ್ವೇಷಿಸುವ ಒಬ್ಬ ವ್ಯಕ್ತಿಯನ್ನು ಏನು ಮಾಡಬೇಕೆಂದು ನೀವು ಆಲೋಚಿಸುವಿರಿ? ನಿಜವಾಗಿಯೂ ಆ ವ್ಯಕ್ತಿಗೆ ಇದಕ್ಕಿಂತಲೂ ತೀವ್ರವಾದ ದಂಡನೆಯನ್ನು ವಿಧಿಸಬೇಕಲ್ಲವೇ? ಹೌದು, ಹೊಸ ಒಡಂಬಡಿಕೆಯ ರಕ್ತಕ್ಕೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ಕ್ರೂರವಾದ ದಂಡನೆಯಾಗಬೇಕು. ಆ ರಕ್ತವು ಅವನನ್ನು ಪವಿತ್ರನನ್ನಾಗಿಸಿತು. ದೇವರಾತ್ಮನ ಕೃಪೆಗೆ ಗೌರವವನ್ನು ತೋರದಿದ್ದ ಆ ವ್ಯಕ್ತಿಗೆ ತೀವ್ರವಾದ ದಂಡನೆಯಾಗಬೇಕು.
ಇಬ್ರಿಯರಿಗೆ 10 : 30 (ERVKN)
“ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” [✡ಉಲ್ಲೇಖನ: ಕೀರ್ತನೆ. 135:14.] ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.
ಇಬ್ರಿಯರಿಗೆ 10 : 31 (ERVKN)
“ಪ್ರಭುವು ತನ್ನ ಜನರಿಗೆ ನ್ಯಾಯತೀರ್ಪು ನೀಡುತ್ತಾನೆ” ಎಂದು ಸಹ ದೇವರು ಹೇಳಿದ್ದಾನೆ. ಜೀವಸ್ವರೂಪನಾದ ದೇವರ ಹಿಡಿತಕ್ಕೆ ಸಿಕ್ಕಿ ಬೀಳುವುದು ಪಾಪಿಗೆ ಭಯಂಕರವಾಗಿದೆ. [PS]
ಇಬ್ರಿಯರಿಗೆ 10 : 32 (ERVKN)
{ನಿಮ್ಮಲ್ಲಿರುವ ಸಂತೋಷ ಮತ್ತು ಧೈರ್ಯಗಳನ್ನು ಬಿಡಬೇಡಿ} [PS] ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.
ಇಬ್ರಿಯರಿಗೆ 10 : 33 (ERVKN)
ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.
ಇಬ್ರಿಯರಿಗೆ 10 : 34 (ERVKN)
ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ. [PE][PS]
ಇಬ್ರಿಯರಿಗೆ 10 : 35 (ERVKN)
ಹಿಂದೆ ಹೊಂದಿದ್ದ ಧೈರ್ಯವನ್ನು ಬಿಟ್ಟುಬಿಡಬೇಡಿ. ನಿಮ್ಮ ಧೈರ್ಯಕ್ಕೆ ತಕ್ಕ ಪ್ರತಿಫಲವು ಸಿಗುತ್ತದೆ.
ಇಬ್ರಿಯರಿಗೆ 10 : 36 (ERVKN)
ನೀವು ತಾಳ್ಮೆಯಿಂದಿರಬೇಕು, ನೀವು ದೇವರ ಚಿತ್ತಾನುಸಾರವಾಗಿ ಮಾಡಿದ ನಂತರ ಆತನ ವಾಗ್ದಾನದಂತೆ ನಿಮಗೆ ಪ್ರತಿಫಲವು ಸಿಕ್ಕೇ ಸಿಗುತ್ತದೆ.
ಇಬ್ರಿಯರಿಗೆ 10 : 37 (ERVKN)
ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. [QBR2] ಆತನು ತಡಮಾಡುವುದಿಲ್ಲ. [QBR]
ಇಬ್ರಿಯರಿಗೆ 10 : 38 (ERVKN)
ನೀತಿವಂತನು ನಂಬಿಕೆಯಿಂದಲೇ [QBR2] ಜೀವವನ್ನು ಹೊಂದಿಕೊಳ್ಳುವನು. [QBR] ಆದರೆ ಅವನು ಭಯದಿಂದ ಹಿಂಜರಿದರೆ [QBR2] ನಾನು ಅವನಲ್ಲಿ ಸಂತೋಷಪಡುವುದಿಲ್ಲ.”ಹಬಕ್ಕೂಕ 2:3-4]
ಇಬ್ರಿಯರಿಗೆ 10 : 39 (ERVKN)
ಆದರೆ ನಾವು ಹಿಂಜರಿಯುವ ಜನರಲ್ಲ, ನಾಶವಾಗುವ ಜನರೂ ಅಲ್ಲ. ನಾವು ನಂಬಿಕೆಯುಳ್ಳವರಾಗಿದ್ದೇವೆ ಮತ್ತು ರಕ್ಷಣೆ ಹೊಂದಿದವರಾಗಿದ್ದೇವೆ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39

BG:

Opacity:

Color:


Size:


Font: