ಇಬ್ರಿಯರಿಗೆ 4 : 1 (ERVKN)
ದೇವರು ಆ ಜನರಿಗೆ ನೀಡಿದ ವಾಗ್ದಾನವು ನಮ್ಮಲ್ಲಿ ಇನ್ನೂ ಇದೆ. ನಾವು ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಬಹುದೆಂಬುದೇ ಆ ವಾಗ್ದಾನ. ಆದ್ದರಿಂದ ನಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯುವದರಲ್ಲಿ ವಿಫಲರಾಗದಂತೆ ಬಹು ಎಚ್ಚರಿಕೆಯಿಂದಿರೋಣ.
ಇಬ್ರಿಯರಿಗೆ 4 : 2 (ERVKN)
ರಕ್ಷಣಾಮಾರ್ಗದ ಕುರಿತು ಅವರಿಗೆ ತಿಳಿಸಲ್ಪಟ್ಟಂತೆಯೇ ನಮಗೂ ತಿಳಿಸಲಾಯಿತು. ಅವರು ಆ ಬೋಧನೆಯನ್ನು ಕೇಳಿದರೂ ಅವರಿಗೆ ಪ್ರಯೋಜನವಾಗಲಿಲ್ಲ. ಏಕೆಂದರೆ ಅವರು ಅದನ್ನು ನಂಬಿಕೆಯಿಂದ ಸ್ವೀಕರಿಸಿಕೊಳ್ಳಲಿಲ್ಲ.
ಇಬ್ರಿಯರಿಗೆ 4 : 3 (ERVKN)
ನಂಬುವವರಾದ ನಾವು ದೇವರ ವಿಶ್ರಾಂತಿಯಲ್ಲಿ ಸೇರಲು ಸಮರ್ಥರಾಗಿದ್ದೇವೆ. ದೇವರು ಹೇಳಿದಂತೆ: “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲವೆಂದು ನಾನು ಕೋಪಗೊಂಡು ಪ್ರಮಾಣ ಮಾಡಿದೆನು.” ಕೀರ್ತನೆ. 95:11] ಈ ಲೋಕವನ್ನು ಸೃಷ್ಟಿಸಿದ ನಂತರ ತನ್ನ ಕಾರ್ಯಗಳು ಮುಗಿದುಹೋಗಿದ್ದರೂ ದೇವರು ಹೀಗೆ ಹೇಳಿದನು.
ಇಬ್ರಿಯರಿಗೆ 4 : 4 (ERVKN)
ಪವಿತ್ರ ಗ್ರಂಥದ ಒಂದು ಭಾಗದಲ್ಲಿ ಆತನು ವಾರದ ಏಳನೆಯ ದಿನದ ಬಗ್ಗೆ ಹೀಗೆ ಮಾತಾಡಿದ್ದಾನೆ: “ಆದ್ದರಿಂದ ದೇವರು ತನ್ನ ಕಾರ್ಯಗಳನ್ನೆಲ್ಲ ಮುಗಿಸಿ ಏಳನೆಯ ದಿನ ವಿಶ್ರಾಂತಿ ಹೊಂದಿದನು.” ಉಲ್ಲೇಖನ: ಆದಿಕಾಂಡ 2:2.
ಇಬ್ರಿಯರಿಗೆ 4 : 5 (ERVKN)
ಪವಿತ್ರ ಗ್ರಂಥದ ಇನ್ನೊಂದು ಭಾಗದಲ್ಲಿ ಆತನು, “ಆ ಜನರು ನನ್ನ ವಿಶ್ರಾಂತಿಯಲ್ಲಿ ಎಂದಿಗೂ ಪ್ರವೇಶಿಸುವುದಿಲ್ಲ” ಉಲ್ಲೇಖನ: ಕೀರ್ತನೆ. 95:11. ವೆಂದೂ ಹೇಳಿದ್ದಾನೆ.
ಇಬ್ರಿಯರಿಗೆ 4 : 6 (ERVKN)
ಆದ್ದರಿಂದ ಕೆಲವರು ದೇವರ ವಿಶ್ರಾಂತಿಯಲ್ಲಿ ಸೇರುತ್ತಾರೆಂಬುದು ಇನ್ನೂ ಖಚಿತವಾಗಿದೆ. ಆದರೆ ರಕ್ಷಣಾಮಾರ್ಗವನ್ನು ಮೊದಲು ಕೇಳಿದ ಜನರು ಪ್ರವೇಶಿಸಲಿಲ್ಲ. ಅವರು ವಿಧೇಯರಾಗದೆ ಇದ್ದುದರಿಂದ ಅವರು ಸೇರಲಿಲ್ಲ.
ಇಬ್ರಿಯರಿಗೆ 4 : 7 (ERVKN)
ಆದ್ದರಿಂದ ಆತನು ಮತ್ತೊಂದು ವಿಶೇಷ ದಿನವನ್ನು ಯೋಜಿಸಿದನು. ಅದನ್ನು “ಈ ಹೊತ್ತು” ಎಂದು ಕರೆಯಲಾಗಿದೆ. ಆತನು ಆ ದಿನವನ್ನು ಕುರಿತು ಬಹುಕಾಲದ ನಂತರ ದಾವೀದನ ಮೂಲಕ ತಿಳಿಸಿದನು. ಪವಿತ್ರ ಗ್ರಂಥದ ಈ ಭಾಗವನ್ನು ನಾವು ಮೊದಲೊಮ್ಮೆ ನೋಡಿದೆವು: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.” ಕೀರ್ತನೆ. 95:7-8]
ಇಬ್ರಿಯರಿಗೆ 4 : 8 (ERVKN)
ದೇವರು ವಾಗ್ದಾನ ಮಾಡಿದ್ದ ವಿಶ್ರಾಂತಿಗೆ ಯೆಹೋಶುವನು ಜನರನ್ನು ಕರೆದೊಯ್ದಿದ್ದರೆ ವಿಶ್ರಾಂತಿಯ ಮತ್ತೊಂದು ದಿನದ ಕುರಿತು ಹೇಳುತ್ತಿರಲಿಲ್ಲ.
ಇಬ್ರಿಯರಿಗೆ 4 : 9 (ERVKN)
ದೇವಜನರಿಗೋಸ್ಕರವಿರುವ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಬರಲಿದೆ ಎಂಬುದನ್ನು ಇದು ತೋರ್ಪಡಿಸುತ್ತದೆ.
ಇಬ್ರಿಯರಿಗೆ 4 : 10 (ERVKN)
ಆತನು ತನ್ನ ಕಾರ್ಯವನ್ನು ಮುಗಿಸಿದ ನಂತರ ವಿಶ್ರಾಂತಿ ಹೊಂದಿದನು. ಆದ್ದರಿಂದ ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸುವವನು ಆತನು ಮಾಡಿದಂತೆ ತನ್ನ ಕಾರ್ಯವನ್ನು ಮುಗಿಸಿದವನಾಗಿರಬೇಕು.
ಇಬ್ರಿಯರಿಗೆ 4 : 11 (ERVKN)
ದೇವರ ವಿಶ್ರಾಂತಿಯಲ್ಲಿ ಪ್ರವೇಶಿಸಲು ನಮ್ಮಿಂದಾದಷ್ಟು ಪ್ರಯತ್ನಿಸೋಣ. ಆತನಿಗೆ ಅವಿಧೇಯರಾದ ಆ ಜನರನ್ನು ಅನುಸರಿಸಿ ನಮ್ಮಲ್ಲಿ ಯಾರೂ ವಿಫಲರಾಗದಂತೆ ನೋಡಿಕೊಳ್ಳೋಣ.
ಇಬ್ರಿಯರಿಗೆ 4 : 12 (ERVKN)
ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.
ಇಬ್ರಿಯರಿಗೆ 4 : 13 (ERVKN)
ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.
ಇಬ್ರಿಯರಿಗೆ 4 : 14 (ERVKN)
ದೇವರ ಸನ್ನಿಧಿಗೆ ಬರಲು ಯೇಸುವಿನ ಸಹಾಯ ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.
ಇಬ್ರಿಯರಿಗೆ 4 : 15 (ERVKN)
ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.
ಇಬ್ರಿಯರಿಗೆ 4 : 16 (ERVKN)
ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.

1 2 3 4 5 6 7 8 9 10 11 12 13 14 15 16