ಇಬ್ರಿಯರಿಗೆ 6 : 1 (ERVKN)
ಆದುದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಟಕಾರ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.
ಇಬ್ರಿಯರಿಗೆ 6 : 2 (ERVKN)
ಆ ಸಮಯದಲ್ಲಿ ನಮಗೆ ದೀಕ್ಷಾಸ್ನಾನ, ಹಸ್ತಾರ್ಪಣ, ಸತ್ತವರ ಪುನರುತ್ಥಾನ ಮತ್ತು ನಿತ್ಯವಾದ ನ್ಯಾಯತೀರ್ಪು ಇವುಗಳನ್ನು ಕುರಿತು ಬೋಧಿಸಲಾಯಿತು. ಆದರೆ ಈಗ ನಾವು ಪೂರ್ಣ ತಿಳುವಳಿಕೆಗೆ ಹೋಗುವುದು ಅಗತ್ಯವಾಗಿದೆ.
ಇಬ್ರಿಯರಿಗೆ 6 : 3 (ERVKN)
ದೇವರ ಚಿತ್ತವಾದರೆ ಹೀಗೆ ಮುಂದಕ್ಕೆ ಸಾಗುತ್ತಾ ಹೋಗುವೆವು.
ಇಬ್ರಿಯರಿಗೆ 6 : 4 (ERVKN)
[This verse may not be a part of this translation]
ಇಬ್ರಿಯರಿಗೆ 6 : 5 (ERVKN)
[This verse may not be a part of this translation]
ಇಬ್ರಿಯರಿಗೆ 6 : 6 (ERVKN)
[This verse may not be a part of this translation]
ಇಬ್ರಿಯರಿಗೆ 6 : 7 (ERVKN)
ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.
ಇಬ್ರಿಯರಿಗೆ 6 : 8 (ERVKN)
ಆದರೆ ಅದು ಮುಳ್ಳುಗಿಡಗಳನ್ನೂ ಕಳೆಯನ್ನೂ ಬೆಳೆಸಿದರೆ ನಿಷ್ಪ್ರಯೋಜಕವಾಗಿ ದೇವರ ಶಾಪಕ್ಕೆ ಗುರಿಯಾಗುತ್ತದೆ. ಆ ಭೂಮಿಯನ್ನು ಬೆಂಕಿಯಿಂದ ಸುಟ್ಟು ನಾಶಮಾಡಲಾಗುವುದು.
ಇಬ್ರಿಯರಿಗೆ 6 : 9 (ERVKN)
ಪ್ರಿಯ ಸ್ನೇಹಿತರೇ, ನಾವು ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದರೂ ನಿಮ್ಮಿಂದ ಇದಕ್ಕಿಂತಲೂ ಉತ್ತಮವಾದ ಕಾರ್ಯಗಳನ್ನು ಅಪೇಕ್ಷಿಸುತ್ತೇವೆ. ರಕ್ಷಣೆಗೆ ಸಂಬಂಧಿಸಿದ ಕಾರ್ಯಗಳನ್ನು ನೀವು ಮಾಡುತ್ತೀರೆಂದು ನಾವು ದೃಢವಾಗಿ ನಂಬಿದ್ದೇವೆ.
ಇಬ್ರಿಯರಿಗೆ 6 : 10 (ERVKN)
ದೇವರು ನ್ಯಾಯವಂತನಾಗಿದ್ದಾನೆ. ನೀವು ಮಾಡಿದ ಉಪಕಾರವನ್ನು ಮತ್ತು ದೇವಜನರಿಗೆ ಸಹಾಯ ಮಾಡಿದ್ದರ ಮೂಲಕ ಮತ್ತು ಸಹಾಯ ಮಾಡುತ್ತಲೇ ಇರುವುದರ ಮೂಲಕ ನೀವು ಆತನಿಗೆ ತೋರಿದ ಪ್ರೀತಿಯನ್ನು ಆತನು ಮರೆತುಬಿಡುವುದಿಲ್ಲ.
ಇಬ್ರಿಯರಿಗೆ 6 : 11 (ERVKN)
ನಿಮ್ಮಲ್ಲಿ ಪ್ರತಿಯೊಬ್ಬರು ತಮ್ಮ ಇಡೀ ಜೀವನದಲ್ಲಿ ಇದೇ ಆಸಕ್ತಿಯುಳ್ಳವರಾಗಿ ನಿಮ್ಮ ನಿರೀಕ್ಷೆಯನ್ನು ದೃಢಪಡಿಸಿಕೊಳ್ಳಬೇಕೆಂದು ನಾವು ಅಪೇಕ್ಷಿಸುತ್ತೇವೆ.
ಇಬ್ರಿಯರಿಗೆ 6 : 12 (ERVKN)
ನೀವು ಸೋಮಾರಿಗಳಾಗಿರಬೇಕೆಂಬುದು ನಮ್ಮ ಅಪೇಕ್ಷೆಯಲ್ಲ. ದೇವರ ವಾಗ್ದಾನದ ಫಲಗಳನ್ನು ಪಡೆಯುವ ಜನರಂತೆ ನೀವಿರಬೇಕೆಂಬುದು ನಮ್ಮ ಅಪೇಕ್ಷೆ. ಆ ಜನರಿಗೆ ನಂಬಿಕೆ ಮತ್ತು ತಾಳ್ಮೆಯಿದ್ದುದರಿಂದ ಅವರು ದೇವರ ವಾಗ್ದಾನದಂತೆ ಫಲವನ್ನು ಪಡೆದರು.
ಇಬ್ರಿಯರಿಗೆ 6 : 13 (ERVKN)
ದೇವರು ಅಬ್ರಹಾಮನಿಗೆ ಒಂದು ವಾಗ್ದಾನ ಮಾಡಿದನು. ದೇವರಿಗಿಂತ ದೊಡ್ಡವನಿಲ್ಲ. ಆದ್ದರಿಂದ, ದೇವರು ತನ್ನ ಮೇಲೆಯೇ ಆಣೆಯಿಟ್ಟು ತನ್ನ ಮಾತಿನಂತೆಯೇ ಮಾಡಿದನು.
ಇಬ್ರಿಯರಿಗೆ 6 : 14 (ERVKN)
ಆತನು ಅವನಿಗೆ, “ನಾನು ನಿಜವಾಗಿಯೂ ನಿನ್ನನ್ನು ಆಶೀರ್ವದಿಸುತ್ತೇನೆ. ಅನೇಕಾನೇಕ ಸಂತತಿಗಳನ್ನು ನಿನಗೆ ದಯಪಾಲಿಸುವೆನು” ಎಂದು ಹೇಳಿದನು.
ಇಬ್ರಿಯರಿಗೆ 6 : 15 (ERVKN)
ಅಬ್ರಹಾಮನು ಇದರ ನೆರವೇರುವಿಕೆಗಾಗಿ ತಾಳ್ಮೆಯಿಂದ ಕಾದಿದ್ದನು. ತರುವಾಯ ಅವನಿಗೆ ದೇವರ ವಾಗ್ದಾನದ ಫಲ ದೊರೆಯಿತು.
ಇಬ್ರಿಯರಿಗೆ 6 : 16 (ERVKN)
ಜನರು ವಾಗ್ದಾನ ಮಾಡುವಾಗ ಯಾವಾಗಲೂ ತಮಗಿಂತ ದೊಡ್ಡವರಾದ ಯಾರಾದರೊಬ್ಬರನ್ನು ಬಳಸಿಕೊಳ್ಳುತ್ತಾರೆ. ಅವರು ಹೇಳಿದ್ದು ನಿಜವೆಂಬುದನ್ನು ಆ ವಾಗ್ದಾನವು ಶ್ರುತಪಡಿಸುತ್ತದೆ. ಇದರಿಂದಾಗಿ ಅವರ ಎಲ್ಲಾ ವಾಗ್ವಾದಗಳಿಗೆ ಕೊನೆಯಾಗುತ್ತದೆ.
ಇಬ್ರಿಯರಿಗೆ 6 : 17 (ERVKN)
ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
ಇಬ್ರಿಯರಿಗೆ 6 : 18 (ERVKN)
ದೇವರ ವಾಗ್ದಾನ ಮತ್ತು ಆಣೆ ಅಚಲವಾದ ಎರಡು ಆಧಾರಗಳಾಗಿವೆ. ಇವುಗಳ ವಿಷಯದಲ್ಲಿ ನಮಗೆಂದಿಗೂ ಮೋಸವಾಗುವುದಿಲ್ಲ. ಇದರಿಂದಾಗಿ, ದೇವರ ರಕ್ಷಣೆಗಾಗಿ ಓಡಿ ಬಂದಿರುವ ನಾವು ನಮ್ಮ ನಿರೀಕ್ಷೆಯಲ್ಲಿ ಸ್ಥಿರವಾಗಿರಲು ಬಲವಾದ ಪ್ರೋತ್ಸಾಹ ಉಂಟಾಯಿತು.
ಇಬ್ರಿಯರಿಗೆ 6 : 19 (ERVKN)
ಈ ನಿರೀಕ್ಷೆಯು ನಮ್ಮ ಆತ್ಮಗಳನ್ನು ಅಪಾಯದಲ್ಲಿ ಕೊಚ್ಚಿಕೊಂಡು ಹೋಗದಂತೆ ಕಾಪಾಡುವ ಬಲವಾದ ಸ್ಥಿರವಾದ ಲಂಗರಿನಂತಿದೆ. ಅದು ಸ್ವರ್ಗದಾಲಯದ ತೆರೆಯ ಮರೆಯಲ್ಲಿರುವ ಮಹಾ ಪವಿತ್ರಸ್ಥಳದ ಒಳಕ್ಕೆ ಪ್ರವೇಶಿಸುತ್ತದೆ.
ಇಬ್ರಿಯರಿಗೆ 6 : 20 (ERVKN)
ಯೇಸು ಈಗಾಗಲೇ ಅಲ್ಲಿಗೆ ಪ್ರವೇಶಿಸಿ, ಅನುಸರಿಸುವುದಕ್ಕಾಗಿ ಮಾರ್ಗವನ್ನು ತೋರಿದನು. ಯೇಸು ಮೆಲ್ಕಿಜೆದೇಕನಂತೆ ಸದಾಕಾಲಕ್ಕೂ ಇರುವ ಪ್ರಧಾನ ಯಾಜಕನಾಗಿದ್ದಾನೆ.

1 2 3 4 5 6 7 8 9 10 11 12 13 14 15 16 17 18 19 20

BG:

Opacity:

Color:


Size:


Font: