ಇಬ್ರಿಯರಿಗೆ 8 : 1 (ERVKN)
{ಯೇಸುವೇ ನಮ್ಮ ಪ್ರಧಾನಯಾಜಕನು} [PS] ನಾವು ಹೇಳುವ ಸಂಗತಿಗಳಲ್ಲಿ ಮುಖ್ಯವಾದದ್ದೇನೆಂದರೆ, ನಿಮಗೆ ಹೇಳಿದಂತೆಯೇ ನಮಗೊಬ್ಬ ಪ್ರಧಾನ ಯಾಜಕನಿದ್ದಾನೆ. ಆತನು ಪರಲೋಕದಲ್ಲಿ ದೇವರ ಸಿಂಹಾಸನದ ಬಲಭಾಗದಲ್ಲಿ ಈಗ ಕುಳಿತುಕೊಂಡಿದ್ದಾನೆ.
ಇಬ್ರಿಯರಿಗೆ 8 : 2 (ERVKN)
ಆತನು ಮಹಾ ಪವಿತ್ರಸ್ಥಳದಲ್ಲಿ ಅಂದರೆ ಜನರಿಂದ ನಿರ್ಮಿತವಾಗದೆ, ದೇವರಿಂದಲೇ ನಿರ್ಮಿಸಲ್ಪಟ್ಟಿರುವ ನಿಜವಾದ ದೇವದರ್ಶನ ಗುಡಾರದಲ್ಲಿ ಸೇವೆಮಾಡುತ್ತಿದ್ದಾನೆ. [PE][PS]
ಇಬ್ರಿಯರಿಗೆ 8 : 3 (ERVKN)
ಪ್ರತಿಯೊಬ್ಬ ಪ್ರಧಾನಯಾಜಕನೂ ದೇವರಿಗೆ ಯಜ್ಞಗಳನ್ನೂ ಕಾಣಿಕೆಗಳನ್ನೂ ಅರ್ಪಿಸಬೇಕು. ಆದ್ದರಿಂದ ನಮ್ಮ ಪ್ರಧಾನ ಯಾಜಕನೂ ದೇವರಿಗೆ ಏನನ್ನಾದರೂ ಅರ್ಪಿಸಲೇಬೇಕು.
ಇಬ್ರಿಯರಿಗೆ 8 : 4 (ERVKN)
ಆತನು ಇನ್ನೂ ಭೂಮಿಯ ಮೇಲೆ ವಾಸಮಾಡುತ್ತಿದ್ದರೆ ಯಾಜಕನಾಗಿರುತ್ತಿರಲಿಲ್ಲ. ಕಾರಣವೇನೆಂದರೆ, ಧರ್ಮಶಾಸ್ತ್ರದ ಪ್ರಕಾರ ದೇವರಿಗೆ ಕಾಣಿಕೆಗಳನ್ನು ಅರ್ಪಿಸುವ ಯಾಜಕರು ಈಗಾಗಲೇ ಇಲ್ಲಿದ್ದಾರೆ.
ಇಬ್ರಿಯರಿಗೆ 8 : 5 (ERVKN)
ಈ ಯಾಜಕರು ಮಾಡುವ ಕಾರ್ಯಗಳು ಪರಲೋಕದಲ್ಲಿನ ಕಾರ್ಯಗಳ ನಿಜವಾದ ಪ್ರತಿರೂಪಗಳೂ ಛಾಯೆಗಳೂ ಆಗಿವೆ. ಮೋಶೆಯು ದೇವದರ್ಶನ ಗುಡಾರವನ್ನು ನಿರ್ಮಿಸಲು ಸಿದ್ಧನಾದಾಗ ದೇವರು ಅವನಿಗೆ, “ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಎಚ್ಚರಿಕೆಯಿಂದ ನಿರ್ಮಿಸಬೇಕು” [✡ಉಲ್ಲೇಖನ: ವಿಮೋಚನ. 25:40.] ಎಂದು ಹೇಳಿದ್ದು ಈ ಕಾರಣದಿಂದಲೇ.
ಇಬ್ರಿಯರಿಗೆ 8 : 6 (ERVKN)
ಆದರೆ ಯೇಸುವಿಗೆ ಕೊಡಲ್ಪಟ್ಟ ಕಾರ್ಯವು ಆ ಯಾಜಕರಿಗೆ ಕೊಡಲ್ಪಟ್ಟ ಕಾರ್ಯಕ್ಕಿಂತ ಅತ್ಯಂತ ಮಹತ್ವದ್ದಾಗಿದೆ. ಇದೇ ರೀತಿಯಲ್ಲಿ ಯೇಸು ತನ್ನ ಜನರಿಗಾಗಿ ದೇವರಿಂದ ತಂದ ಹೊಸ ಒಡಂಬಡಿಕೆಯು ಹಳೆಯದಕ್ಕಿಂತ ಶ್ರೇಷ್ಠವಾಗಿದೆ. ಉತ್ತಮ ಸಂಗತಿಗಳ ವಾಗ್ದಾನದ ಆಧಾರದ ಮೇಲೆ ಹೊಸ ಒಡಂಬಡಿಕೆಯು ಸ್ಥಾಪಿತವಾಗಿದೆ. [PE][PS]
ಇಬ್ರಿಯರಿಗೆ 8 : 7 (ERVKN)
ಮೊದಲನೆ ಒಡಂಬಡಿಕೆ ಏನೂ ದೋಷವಿಲ್ಲದ್ದಾಗಿದ್ದರೆ, ಎರಡನೆ ಒಡಂಬಡಿಕೆಯ ಅಗತ್ಯವೇ ಇರಲಿಲ್ಲ.
ಇಬ್ರಿಯರಿಗೆ 8 : 8 (ERVKN)
ಆದರೆ ದೇವರು ಜನರಲ್ಲಿ ಯಾವುದೋ ದೋಷವನ್ನು ಕಂಡು ಹೇಳಿದ್ದೇನೆಂದರೆ: “ಇಸ್ರೇಲರೊಡನೆಯೂ ಯೆಹೂದ್ಯರೊಡನೆಯೂ [QBR2] ನಾನು ಹೊಸ ಒಡಂಬಡಿಕೆ ಮಾಡಿಕೊಳ್ಳುವ ಕಾಲ ಬರುತ್ತಿದೆ ಎಂದು ಪ್ರಭು ಹೇಳುತ್ತಾನೆ. [QBR]
ಇಬ್ರಿಯರಿಗೆ 8 : 9 (ERVKN)
ಅದು, ಅವರ ಪಿತೃಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಯಂತಿರುವುದಿಲ್ಲ. [QBR2] ಅವರನ್ನು ಈಜಿಪ್ಟಿನಿಂದ ಕೈಹಿಡಿದು ಹೊರಗೆ ಕರೆದುಕೊಂಡು ಬಂದ ಕಾಲದಲ್ಲಿ ಅವರೊಡನೆ ಆ ಒಡಂಬಡಿಕೆಯನ್ನೂ ಮಾಡಿಕೊಂಡೆನು. [QBR] ಆದರೆ ಅವರು ಅದನ್ನು ಅನುಸರಿಸಲಿಲ್ಲವಾದ್ದರಿಂದ [QBR2] ಅವರಿಗೆ ವಿಮುಖನಾದೆನು ಎಂದು ಪ್ರಭು ಹೇಳುತ್ತಾನೆ. [QBR]
ಇಬ್ರಿಯರಿಗೆ 8 : 10 (ERVKN)
ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ [QBR2] ಹೊಸ ಒಡಂಬಡಿಕೆಯು ಇಂತಿದೆ: [QBR] ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; [QBR2] ಅವರ ಹೃದಯದ ಮೇಲೆ ಬರೆಯುವೆನು; [QBR] ನಾನು ಅವರ ದೇವರಾಗಿರುವೆನು; [QBR2] ಅವರು ನನ್ನ ಜನರಾಗಿರುವರು. [QBR]
ಇಬ್ರಿಯರಿಗೆ 8 : 11 (ERVKN)
ಒಬ್ಬನು ಸಹೋದರನಿಗಾಗಲಿ, ಬೇರೆಯವರಿಗಾಗಲಿ ಬೋಧಿಸಬೇಕಾಗಿರುವುದಿಲ್ಲ; [QBR] ದೇವರನ್ನು ತಿಳಿದುಕೊಳ್ಳಿ ಎಂದು ಹೇಳಬೇಕಾಗಿರುವುದಿಲ್ಲ. ಏಕೆಂದರೆ ಅತ್ಯಂತ ಪ್ರಮುಖರನ್ನು ಮೊದಲುಗೊಂಡು ಅತ್ಯಂತ ಅಲ್ಪರಾದವರೆಲ್ಲರೂ ನನ್ನನ್ನು ತಿಳಿದುಕೊಂಡಿರುವರು. [QBR]
ಇಬ್ರಿಯರಿಗೆ 8 : 12 (ERVKN)
ಅವರು ನನ್ನ ವಿರುದ್ಧವಾಗಿ ಮಾಡುವ ಎಲ್ಲಾ ಕೆಟ್ಟಕಾರ್ಯಗಳನ್ನು ಕ್ಷಮಿಸುವೆನು; [QBR2] ಅವರ ಪಾಪಗಳನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.” ಯೆರೆಮೀಯ 31:31-34 [PS]
ಇಬ್ರಿಯರಿಗೆ 8 : 13 (ERVKN)
ದೇವರು ಇದನ್ನು ಹೊಸ ಒಡಂಬಡಿಕೆ ಎಂದು ಕರೆದನು. ಆದ್ದರಿಂದ ಮೊದಲನೆ ಒಡಂಬಡಿಕೆಯನ್ನು ದೇವರು ಹಳೆಯದಾಗಿ ಮಾಡಿದನು. ಯಾವುದು ಹಳೆಯದಾಗಿ ಉಪಯೋಗಕ್ಕೆ ಬಾರದಾಗುತ್ತದೋ ಅದು ಅದೃಶ್ಯವಾಗುವುದು. [PE]

1 2 3 4 5 6 7 8 9 10 11 12 13

BG:

Opacity:

Color:


Size:


Font: