ಹೋಶೇ 1 : 1 (ERVKN)
ಹೋಶೇಯನ ಮುಖಾಂತರ ದೇವರಾದ ಯೆಹೋವನ ಸಂದೇಶ ಬೆಯೇರಿಯ ಮಗನಾದ ಹೋಶೇಯನಿಗೆ ಯೋಹೋವನಿಂದ ಬಂದ ಸಂದೇಶ: ಈ ಸಂದೇಶವು ಯೆಹೂದ ಪ್ರಾಂತ್ಯದ ಅರಸರಾದ ಉಜ್ಜೀಯ, ಯೋಥಾವು, ಅಹಾಜ ಮತ್ತು ಹಿಜ್ಕೀಯ ಇವರ ಆಳ್ವಿಕೆಯ ಸಮಯದಲ್ಲಿ ಬಂದಿತು. ಇದು ಇಸ್ರೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಕಾಲ.
ಹೋಶೇ 1 : 2 (ERVKN)
ಹೋಶೇಯನಿಗೆ ಯೆಹೋವನಿಂದ ಬಂದ ಸಂದೇಶದಲ್ಲಿ ಇದು ಮೊದಲನೆಯದು. ಯೆಹೋವನು ಹೇಳಿದ್ದೇನೆಂದರೆ, “ನೀನು ಹೋಗಿ ಒಬ್ಬ ವೇಶ್ಯೆಯನ್ನು ಮದುವೆಯಾಗು. ಆ ವೇಶ್ಯೆಯಿಂದ *ವೇಶ್ಯೆಯಿಂದ ಅಂದರೆ ಆಕೆಯಲ್ಲಿ ಹುಟ್ಟುವ ಮಕ್ಕಳು ಆಕೆಯ ಸೂಳೆತನದ ಫಲವಾಗಿವೆ. ಮಕ್ಕಳನ್ನು ಪಡೆದುಕೊ. ಯಾಕೆಂದರೆ ಈ ದೇಶದ ಜನರು ಸೂಳೆಯಂತೆ ವರ್ತಿಸಿರುತ್ತಾರೆ. ಅವರು ಯೆಹೋವನಿಗೆ ಅಪನಂಬಿಗಸ್ತಿಕೆಯುಳ್ಳವರಾಗಿರುತ್ತಾರೆ.”
ಹೋಶೇ 1 : 3 (ERVKN)
ಇಜ್ರೇಲನ ಜನನ ಹಾಗೆ ಹೋಶೇಯನು ದಿಬ್ಲಯೀಮನ ಮಗಳಾದ ಗೋಮೆರ್ ಎಂಬಾಕೆಯನ್ನು ಮದುವೆಯಾದನು. ಗೋಮೆರಳು ಗರ್ಭಿಣಿಯಾಗಿ ಹೋಶೇಯನಿಗೆ ಗಂಡುಮಗುವನ್ನು ಹೆತ್ತಳು.
ಹೋಶೇ 1 : 4 (ERVKN)
ಹೋಶೇಯನಿಗೆ ಯೆಹೋವನು ಹೇಳಿದ್ದೇನೆಂದರೆ, “ಅವನಿಗೆ ಇಜ್ರೇಲ್ ಎಂದು ಹೆಸರನ್ನಿಡು. ಯಾಕೆಂದರೆ, ಇನ್ನು ಸ್ವಲ್ಪ ಸಮಯದಲ್ಲಿ ನಾನು ಯೇಹುವಿನ ಸಂತತಿಯವರನ್ನು ಶಿಕ್ಷಿಸುವೆನು. ಅವನು ಇಜ್ರೇಲ್ ತಗ್ಗಿನಲ್ಲಿ ರಕ್ತವನ್ನು ಸುರಿಸಿರುತ್ತಾನಲ್ಲಾ? ಆ ಮೇಲೆ ನಾನು ಇಸ್ರೇಲ್ ರಾಜ್ಯಕ್ಕೆ ಅಂತ್ಯವನ್ನು ತರುವೆನು.
ಹೋಶೇ 1 : 5 (ERVKN)
ಆಗ ಇಜ್ರೇಲ್ ತಗ್ಗಿನಲ್ಲಿ ಇಸ್ರೇಲಿನ ಬಿಲ್ಲನ್ನು ತುಂಡು ಮಾಡುವೆನು.”
ಹೋಶೇ 1 : 6 (ERVKN)
ಲೋರುಹಾಮಳ ಜನನ ಗೋಮೆರಳು ತಿರುಗಿ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಳು. ಯೆಹೋವನು ಹೋಶೇಯನಿಗೆ, ಆಕೆಗೆ, “ಲೋರುಹಾಮ” ಎಂಬ ಹೆಸರನ್ನಿಡಲು ಹೇಳಿದನು. “ಯಾಕೆಂದರೆ, ನಾನು ಇನ್ನು ಮುಂದೆ ಇಸ್ರೇಲ್ ಜನಾಂಗವನ್ನು ಕ್ಷಮಿಸುವುದಿಲ್ಲ.
ಹೋಶೇ 1 : 7 (ERVKN)
ಆದರೆ ನಾನು ಯೆಹೂದ ದೇಶಕ್ಕೆ ಕರುಣೆಯನ್ನು ತೋರಿಸುವೆನು. ನಾನು ಅವರನ್ನು ರಕ್ಷಿಸುವೆನು. ಅವರನ್ನು ರಕ್ಷಿಸಲು ನಾನು ಬಿಲ್ಲುಬಾಣಗಳನ್ನು ಉಪಯೋಗಿಸುವದಿಲ್ಲ. ಅಥವಾ ಯುದ್ಧಾಶ್ವಗಳನ್ನಾಗಲಿ ಸೈನ್ಯವನ್ನಾಗಲಿ ಉಪಯೋಗಿಸುವದಿಲ್ಲ. ನನ್ನ ಸ್ವಂತ ಸಾಮರ್ಥ್ಯದಿಂದಲೇ ನಾನು ಅವರನ್ನು ರಕ್ಷಿಸುವೆನು.”
ಹೋಶೇ 1 : 8 (ERVKN)
ಲೋಅಮ್ಮಿಯ ಜನನ ಗೋಮೆರಳು ಲೋರುಹಾಮಳಿಗೆ ಮೊಲೆಯುಣಿಸುವದನ್ನು ನಿಲ್ಲಿಸಿದ ಬಳಿಕ ಆಕೆಯು ತಿರುಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.
ಹೋಶೇ 1 : 9 (ERVKN)
ಆಗ ಯೆಹೋವನು, “ಅವನಿಗೆ ಲೋಅಮ್ಮಿ ಎಂದು ಹೆಸರಿಡು. ಯಾಕೆಂದರೆ ನೀವು ನನ್ನ ಜನರಲ್ಲ; ನಾನು ನಿಮ್ಮ ದೇವರಲ್ಲ” ಎಂದು ಹೇಳಿದನು.
ಹೋಶೇ 1 : 10 (ERVKN)
ಇಸ್ರೇಲ್ ಜನಾಂಗದವರೊಂದಿಗೆ ಯೆಹೋವನು ಮಾತಾಡುತ್ತಾನೆ “ಇನ್ನು ಮುಂದೆ ಇಸ್ರೇಲರ ಜನಸಂಖ್ಯೆಯು ಸಮುದ್ರದ ಮರಳಿನಂತಿರುವದು. ನೀವು ಮರಳನ್ನು ಅಳತೆಮಾಡಲೂ ಅದನ್ನು ಲೆಕ್ಕಿಸಲೂ ಸಾಧ್ಯವಿಲ್ಲ. ಆಗ, ‘ನೀವು ನನ್ನ ಜನರಲ್ಲ’ ಎಂಬ ಹೇಳಿಕೆಯ ಬದಲಾಗಿ, ‘ನೀವು ಜೀವಸ್ವರೂಪನಾದ ದೇವರ ಮಕ್ಕಳು’ ಎಂಬುದಾಗಿ ಕರೆಯಲ್ಪಡುವಿರಿ.
ಹೋಶೇ 1 : 11 (ERVKN)
“ಆಗ ಇಸ್ರೇಲಿನ ಪ್ರಜೆಗಳು ಮತ್ತು ಯೆಹೂದ ಪ್ರಾಂತ್ಯದ ಪ್ರಜೆಗಳು ಒಂದಾಗಿ ಸೇರಲ್ಪಡುವರು. ತಮಗೆ ಒಬ್ಬ ಅರಸನನ್ನು ಅವರು ಆರಿಸಿಕೊಳ್ಳುವರು. ಅವರ ಜನಾಂಗಕ್ಕೆ ಆ ದೇಶವು ಸಾಲದೆ ಹೋಗುವದು. ಇಜ್ರೇಲನ ದಿನವು ನಿಜವಾಗಿಯೂ ಮಹತ್ವವುಳ್ಳದ್ದಾಗಿರುವದು.”
❮
❯
1
2
3
4
5
6
7
8
9
10
11