ಹೋಶೇ 12 : 1 (ERVKN)
ಯೆಹೋವನು ಇಸ್ರೇಲಿಗೆ ವಿರುದ್ಧವಾಗಿದ್ದಾನೆ ಎಫ್ರಾಯೀಮ್ ಸಮಯವನ್ನು ಹಾಳು ಮಾಡುತ್ತಿದ್ದಾನೆ. ಇಸ್ರೇಲು ದಿನವಿಡೀ ಗಾಳಿಯನ್ನು ಹಿಮ್ಮೆಟ್ಟುತ್ತಿದ್ದಾನೆ. ಜನರು ಹೆಚ್ಚೆಚ್ಚಾಗಿ ಸುಳ್ಳು ಹೇಳುತ್ತಿದ್ದಾರೆ; ಹೆಚ್ಚೆಚ್ಚಾಗಿ ಕದಿಯುತ್ತಾರೆ. ಅಶ್ಶೂರ್ಯದವರೊಂದಿಗೆ ಒಪ್ಪಂದ ಮಾಡಿರುತ್ತಾರೆ. ತಮ್ಮ ಆಲೀವ್ ಎಣ್ಣೆಯನ್ನು ಈಜಿಪ್ಟಿಗೆ ಕೊಂಡೊಯ್ಯುತ್ತಿದ್ದಾರೆ.
ಹೋಶೇ 12 : 2 (ERVKN)
ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿಗೆ ವಿರುದ್ಧವಾಗಿ ನಾನು ವಾದ ಮಾಡುತ್ತೇನೆ. ತಾನು ಮಾಡಿದ ಸಂಗತಿಗಳಿಗಾಗಿ ಯಾಕೋಬನು ಶಿಕ್ಷೆ ಅನುಭವಿಸಬೇಕು.
ಹೋಶೇ 12 : 3 (ERVKN)
ತನ್ನ ತಾಯಿಯ ಗರ್ಭದಲ್ಲಿರುವಾಗಲೇ ಯಾಕೋಬನು ತನ್ನ ಅಣ್ಣನಿಗೆ ಮೋಸ ಮಾಡಲು ಪ್ರಾರಂಭಮಾಡಿದ್ದನು. ಯಾಕೋಬನು ಬಲಶಾಲಿಯಾದ ಯೌವನಸ್ಥನು. ಆಗ ಅವನು ದೇವರೊಂದಿಗೆ ಹೋರಾಡಿದನು.
ಹೋಶೇ 12 : 4 (ERVKN)
ಯಾಕೋಬನು ದೇವದೂತನೊಡನೆ ಹೋರಾಡಿ ಗೆದ್ದನು. ಅವನು ಕನಿಕರಕ್ಕಾಗಿ ಮೊರೆಯಿಟ್ಟನು. ಇದು ಬೇತೇಲ್ ಎಂಬಲ್ಲಿ ನಡೆಯಿತು. ಆ ಸ್ಥಳದಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
ಹೋಶೇ 12 : 5 (ERVKN)
ಹೌದು ಯೆಹೋವನು ಸೈನ್ಯಗಳ ದೇವರಾಗಿದ್ದಾನೆ. ಆತನ ಹೆಸರು ಯೆಹೋವನು.
ಹೋಶೇ 12 : 6 (ERVKN)
ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.
ಹೋಶೇ 12 : 7 (ERVKN)
“ಯಾಕೋಬನು ಒಬ್ಬ ವ್ಯಾಪಾರಿ. *ವ್ಯಾಪಾರಿ ಇಸ್ರೇಲರು ಕಾನಾನಿನಲ್ಲಿ ವಾಸವಾಗಿರುವಾಗ ಅಲ್ಲಿಯ ನಿವಾಸಿಗಳ ದುಷ್ಟಮಾರ್ಗಗಳನ್ನು ಅನುಸರಿಸುವರು. ಉದಾ: ಮೋಸದ ತಕ್ಕಡಿ. ಅವನು ತನ್ನ ಸ್ನೇಹಿತನಿಗೇ ಮೋಸಮಾಡುತ್ತಾನೆ. ಅವನ ತ್ರಾಸು ಮೋಸದ್ದು,
ಹೋಶೇ 12 : 8 (ERVKN)
ಎಫ್ರಾಯೀಮು, ‘ನಾನು ಐಶ್ವರ್ಯವಂತನು. ನನ್ನಲ್ಲಿ ನಿಜವಾದ ಐಶ್ವರ್ಯವಿದೆ. ನನ್ನ ಅಪರಾಧಗಳನ್ನು ಯಾರೂ ಕಂಡುಹಿಡಿಯಲಾರರು. ನನ್ನ ದುಷ್ಟತ್ವದ ಬಗ್ಗೆ ಯಾರಿಗೂ ತಿಳಿಯದು’ ಎಂದು ಅನ್ನುತ್ತಾನೆ.
ಹೋಶೇ 12 : 9 (ERVKN)
“ಆದರೆ ನೀನು ಈಜಿಪ್ಟ್ ದೇಶದಲ್ಲಿರುವಾಗಲೇ ನಾನು ನಿನ್ನ ದೇವರಾಗಿದ್ದೇನೆ. ನೀನು ಗುಡಾರಗಳಲ್ಲಿ ವಾಸಿಸುವಂತೆ ಮಾಡುವೆನು.
ಹೋಶೇ 12 : 10 (ERVKN)
ನಾನು ಪ್ರವಾದಿಗಳೊಂದಿಗೆ ಮಾತನಾಡಿದೆನು. ಅವರಿಗೆ ಅನೇಕ ದರ್ಶನಗಳನ್ನು ಕೊಟ್ಟೆನು. ನನ್ನ ಪಾಠಗಳನ್ನು ನಿಮಗೆ ಕಲಿಸುವಂತೆ ಅನೇಕ ಮಾರ್ಗಗಳನ್ನು ಪ್ರವಾದಿಗಳಿಗೆ ತೋರಿಸಿಕೊಟ್ಟೆನು.
ಹೋಶೇ 12 : 11 (ERVKN)
ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.
ಹೋಶೇ 12 : 12 (ERVKN)
“ಯಾಕೋಬನು ಅರಾಮ್ ದೇಶಕ್ಕೆ ಓಡಿಹೋದನು. ಅಲ್ಲಿ ಇಸ್ರೇಲನು ಒಬ್ಬ ಹೆಂಡತಿಗಾಗಿ ಸೇವೆ ಮಾಡಿದನು. ಇನ್ನೊಂದು ಹೆಂಡತಿಯನ್ನು ಮಾಡಿಕೊಳ್ಳಲಿಕ್ಕೆ ಕುರಿಗಳನ್ನು ಕಾಯ್ದನು.
ಹೋಶೇ 12 : 13 (ERVKN)
ಆದರೆ ದೇವರು ಇಸ್ರೇಲರನ್ನು ಈಜಿಪ್ಟಿನಿಂದ ಹೊರತರುವದಕ್ಕಾಗಿ ಒಬ್ಬ ಪ್ರವಾದಿಯನ್ನು ಉಪಯೋಗಿಸಿದನು. ಇಸ್ರೇಲರನ್ನು ಪ್ರವಾದಿಯ ಮೂಲಕ ಬಿಡಿಸಿದನು.
ಹೋಶೇ 12 : 14 (ERVKN)
ಆದರೆ ಎಫ್ರಾಯೀಮನು ಯೆಹೋವನನ್ನು ಅತಿಯಾಗಿ ಕೋಪಿಸಿಕೊಳ್ಳುವಂತೆ ಮಾಡಿದನು. ಎಫ್ರಾಯೀಮನು ಅನೇಕ ಮಂದಿಯನ್ನು ಕೊಲೆ ಮಾಡಿದನು. ಅವನ ಅಪರಾಧಗಳಿಗಾಗಿ ಅವನು ಶಿಕ್ಷಿಸಲ್ಪಡುವನು. ಅವನ ದೇವರಾದ ಯೆಹೋವನು ಅವನು ಮಾಡಿದ ಅಪರಾಧಕ್ಕೆ ತಕ್ಕ ದಂಡನೆಯನ್ನು ವಿಧಿಸಿ ಅವಮಾನ ಹೊರುವಂತೆ ಮಾಡುವನು.”
❮
❯
1
2
3
4
5
6
7
8
9
10
11
12
13
14