ಹೋಶೇ 13 : 1 (ERVKN)
ಇಸ್ರೇಲ್ ತನ್ನನ್ನು ತಾನೇ ನಾಶಮಾಡಿಕೊಂಡಿತು “ಎಫ್ರಾಯೀಮ್ ಇಸ್ರೇಲರೊಳಗೆ ತನ್ನನ್ನು ತಾನೇ ಮುಖ್ಯಸ್ಥನನ್ನಾಗಿ ಮಾಡಿಕೊಂಡನು. ಎಫ್ರಾಯೀಮನು ಮಾತನಾಡಿದಾಗ ಜನರು ಹೆದರಿ ನಡುಗಿದರು. ಆದರೆ ಅವನು ಪಾಪದಲ್ಲಿ ಬಿದ್ದನು. ಬಾಳನನ್ನು ಪೂಜಿಸಲು ಪ್ರಾರಂಭಿಸಿದನು.
ಹೋಶೇ 13 : 2 (ERVKN)
ಈಗ ಇಸ್ರೇಲರು ಹೆಚ್ಚೆಚ್ಚಾಗಿ ಪಾಪ ಮಾಡುತ್ತಿರುತ್ತಾರೆ. ತಮಗಾಗಿ ವಿಗ್ರಹಗಳನ್ನು ಮಾಡಿಕೊಳ್ಳುತ್ತಾರೆ. ಅಕ್ಕಸಾಲಿಗರು ಬೆಳ್ಳಿಯಿಂದ ವಿಗ್ರಹಗಳನ್ನು ಮಾಡುವರು. ತಾವು ಮಾಡಿದ ಮೂರ್ತಿಗಳೊಂದಿಗೆ ಮಾತನಾಡುವರು. ಆ ವಿಗ್ರಹಗಳಿಗೆ ಯಜ್ಞವನ್ನರ್ಪಿಸುವರು. ಬಂಗಾರದ ಬಸವನ ವಿಗ್ರಹಕ್ಕೆ ಮುದ್ದು ಕೊಡುವರು.
ಹೋಶೇ 13 : 3 (ERVKN)
ಆದ್ದರಿಂದ ಆ ಜನರು ಬೇಗನೇ ಕಣ್ಮರೆಯಾಗುವರು. ಅವರು ಬೆಳಗಿನ ಜಾವದ ಇಬ್ಬನಿಯಂತೆ ಬೇಗನೇ ಮಾಯವಾಗುವರು. ಇಸ್ರೇಲರು ಕಣದಲ್ಲಿರುವ ಹೊಟ್ಟಿನಂತೆ ಗಾಳಿಯಲ್ಲಿ ಹೊಡೆದುಕೊಂಡು ಹೋಗುವರು. ಇಸ್ರೇಲರು ಮನೆಯೊಳಗಿಂದ ಮೇಲಕ್ಕೆ ಹೊರಟು ಆಮೇಲೆ ಕಾಣದೆಹೋಗುವ ಹೊಗೆಯಂತಿದ್ದಾರೆ.
ಹೋಶೇ 13 : 4 (ERVKN)
“ನೀವು ಈಜಿಪ್ಟಿನಲ್ಲಿದ್ದ ದಿವಸಗಳಿಂದ ನಾನೇ ನಿಮ್ಮ ಯೆಹೋವನಾಗಿದ್ದೇನೆ. ನನ್ನ ಹೊರತು ಬೇರೆ ಯಾವ ದೇವರನ್ನೂ ನೀವು ತಿಳಿದಿರಲಿಲ್ಲ. ನನ್ನ ಹೊರತು ಬೇರೆ ಯಾವ ರಕ್ಷಕನೂ ಇಲ್ಲ.
ಹೋಶೇ 13 : 5 (ERVKN)
ಮರುಭೂಮಿಯಲ್ಲಿ ನಿಮ್ಮನ್ನು ತಿಳಿದುಕೊಂಡಿದ್ದೆನು. ಆ ಒಣಭೂಮಿಯಲ್ಲಿ ನಾನು ನಿಮ್ಮನ್ನು ಬಲ್ಲೆನು.
ಹೋಶೇ 13 : 6 (ERVKN)
ನಾನು ಇಸ್ರೇಲರಿಗೆ ಆಹಾರ ಒದಗಿಸಿದೆನು. ಅವರು ಆ ಆಹಾರವನ್ನು ಉಂಡು ತಿಂದು ತೃಪ್ತರಾಗಿ ಕೊಬ್ಬೇರಿದ್ದರಿಂದ ನನ್ನನ್ನು ಮರೆತರು.
ಹೋಶೇ 13 : 7 (ERVKN)
“ಆದ್ದರಿಂದಲೇ ನಾನು ಅವರಿಗೆ ಸಿಂಹದಂತಿರುವೆನು. ದಾರಿ ಬದಿಯಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.
ಹೋಶೇ 13 : 8 (ERVKN)
ತನ್ನ ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲರಗಿ ಅವರನ್ನು ಗಾಯಗೊಳಿಸಿ ಅವರ ಎದೆಯನ್ನು ಸೀಳಿ ಬಿಡುವೆನು. ನಾನು ಸಿಂಹದಂತೆಯೂ ಕ್ರೂರ ಮೃಗದಂತೆಯೂ ಅವರನ್ನು ಸೀಳಿ ತಿಂದುಬಿಡುವೆನು.”
ಹೋಶೇ 13 : 9 (ERVKN)
ದೈವಕೋಪದಿಂದ ಯಾರೂ ಇಸ್ರೇಲರನ್ನು ರಕ್ಷಿಸಲಾರರು “ಇಸ್ರೇಲೇ, ನಾನು ನಿನಗೆ ಸಹಾಯ ಮಾಡಿದರೂ ನೀನು ನನಗೆ ವಿರೋಧವಾಗಿ ಎದ್ದಿರುವೆ. ಆದ್ದರಿಂದ ನಾನು ನಿನ್ನನ್ನು ನಾಶಮಾಡುವೆನು.
ಹೋಶೇ 13 : 10 (ERVKN)
ನಿನ್ನ ಅರಸನೆಲ್ಲಿ? ನಿನ್ನ ಯಾವ ಪಟ್ಟಣದಲ್ಲಿಯಾಗಲಿ ಅವನು ನಿನ್ನನ್ನು ರಕ್ಷಿಸಲಾರ. ನಿನ್ನ ನ್ಯಾಯಾಧೀಶರುಗಳೆಲ್ಲಿ? ನೀನು, ‘ನಮಗೆ ರಾಜನನ್ನೂ ನಾಯಕರನ್ನೂ ಕೊಡು’ ಎಂದು ಕೇಳಿಕೊಂಡೆ.
ಹೋಶೇ 13 : 11 (ERVKN)
ನಾನು ಕೋಪಗೊಂಡೆನು ಮತ್ತು ಒಬ್ಬ ಅರಸನನ್ನು ಕೊಟ್ಟೆನು. ನಾನು ಹೆಚ್ಚಾಗಿ ಕೋಪಗೊಂಡಾಗ ಅವನನ್ನು ತೆಗೆದುಬಿಟ್ಟೆನು.
ಹೋಶೇ 13 : 12 (ERVKN)
“ಎಫ್ರಾಯೀಮ್ ತನ್ನ ಅಪರಾಧವನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸಿದನು. ತಾನು ಮಾಡಿದ ಪಾಪಗಳು ಯಾರಿಗೂ ತಿಳಿದಿಲ್ಲವೆಂದು ಅವನು ಭಾವಿಸಿದನು; ಆದರೆ ಅವನು ಶಿಕ್ಷಿಸಲ್ಪಡುವನು;
ಹೋಶೇ 13 : 13 (ERVKN)
ಅವನಿಗಾಗುವ ಶಿಕ್ಷೆಯು ಒಬ್ಬ ಸ್ತ್ರೀಯ ಪ್ರಸವವೇದನೆಯಂತಿರುವದು. ಅವನು ಜಾಣನಾದ ಮಗನಾಗಿರುವದಿಲ್ಲ;
ಹುಟ್ಟುವ ಸಮಯ ಬಂದರೂ ಅವನು ಜೀವಿಸುವದಿಲ್ಲ.
ಹೋಶೇ 13 : 14 (ERVKN)
“ಸಮಾಧಿಯಿಂದ ಅವರನ್ನು ರಕ್ಷಿಸುವೆನು; ಮರಣದಿಂದ ಅವರನ್ನು ಪಾರುಮಾಡುವೆನು.
ಮರಣವೇ, ನಿನ್ನ ವ್ಯಾಧಿಗಳೆಲ್ಲಿ? ಸಮಾಧಿಯೇ, ನಿನ್ನ ಶಕ್ತಿ ಎಲ್ಲಿ? ನಾನು ಪ್ರತಿಕಾರ ಸಲ್ಲಿಸುವದಿಲ್ಲ.
ಹೋಶೇ 13 : 15 (ERVKN)
ಇಸ್ರೇಲ್ ತನ್ನ ಸಹೋದರರ ಮಧ್ಯದಲ್ಲಿ ಬೆಳೆಯುವನು. ಒಂದು ಬಲವಾದ ಪೂರ್ವದಿಕ್ಕಿನ ಗಾಳಿಯು ಬರುವದು. ಯೆಹೋವನ ಗಾಳಿಯು ಮರುಭೂಮಿಯಿಂದ ಬೀಸುವದು.
ಅವನ ನೀರಿನ ಒರತೆಯು ಒಣಗಿಹೋಗುವದು, ಆ ಗಾಳಿಯು ಇಸ್ರೇಲರ ಐಶ್ವರ್ಯವನ್ನೆಲ್ಲಾ ಎತ್ತಿಕೊಂಡು ಹೋಗಿಬಿಡುವದು.
ಹೋಶೇ 13 : 16 (ERVKN)
ಸಮಾರ್ಯವು ಶಿಕ್ಷಿಸಲ್ಪಡಬೇಕು. ಯಾಕೆಂದರೆ ಆಕೆಯು ತನ್ನ ದೇವರಿಗೆ ವಿರುದ್ಧವಾಗಿ ನಡೆದಳು.
ಇಸ್ರೇಲರು ಖಡ್ಗದಿಂದ ಸಾಯುವರು. ಅವರ ಮಕ್ಕಳು ಹರಿಯಲ್ಪಟ್ಟು ಚೂರುಚೂರಾಗುವರು. ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವರು.”
❮
❯
1
2
3
4
5
6
7
8
9
10
11
12
13
14
15
16