ಹೋಶೇ 14 : 1 (ERVKN)
ಯೆಹೋವನ ಬಳಿಗೆ ಹಿಂದಿರುಗಿರಿ ಇಸ್ರೇಲೇ, ನೀನು ಜಾರಿಬಿದ್ದು ದೇವರಿಗೆ ವಿರುದ್ಧವಾಗಿ ಪಾಪಮಾಡಿದಿ. ನಿನ್ನ ದೇವರಾದ ಯೆಹೋವನ ಬಳಿಗೆ ಹಿಂದಿರುಗಿ ಬಾ.
ಹೋಶೇ 14 : 2 (ERVKN)
ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.
ಹೋಶೇ 14 : 3 (ERVKN)
ಅಶ್ಶೂರವು ನಮ್ಮನ್ನು ರಕ್ಷಿಸಲಾರದು. ನಾವು ಕುದುರೆ ಮೇಲೆ ಸವಾರಿ ಮಾಡುವದಿಲ್ಲ.
ನಮ್ಮ ಕೈಗಳು ತಯಾರಿಸಿದ ಬೊಂಬೆಗಳಿಗೆ ನಾವು ಇನ್ನು ‘ನಮ್ಮ ದೇವರು’ ಎಂದು ಹೇಳುವದಿಲ್ಲ.
ಯಾಕೆಂದರೆ ಅನಾಥರಿಗೆ ಕರುಣೆಯನ್ನು ತೋರಿಸುವವನು ನೀನೇ.”
ಹೋಶೇ 14 : 4 (ERVKN)
ಯೆಹೋವನು ಇಸ್ರೇಲನ್ನು ಕ್ಷಮಿಸುವನು ಯೆಹೋವನು ಹೇಳುವುದೇನೆಂದರೆ,
“ಅವರು ನನ್ನನ್ನು ತೊರೆದುಬಿಟ್ಟಿದ್ದನ್ನು ನಾನು ಕ್ಷಮಿಸುವೆನು. ಅವರನ್ನು ಅಧಿಕವಾಗಿಯೂ ಸ್ವಇಚ್ಛೆಯಿಂದಲೂ ಪ್ರೀತಿಸುವೆನು. ಈಗ ಅವರ ಮೇಲೆ ನಾನು ಕೋಪಿಸುವದಿಲ್ಲ.
ಹೋಶೇ 14 : 5 (ERVKN)
ಇಸ್ರೇಲಿಗೆ ನಾನು ಇಬ್ಬನಿಯಂತಿರುವೆನು. ನೆಲದಾವರೆಯಂತೆ ಇಸ್ರೇಲ್ ಅರಳುವನು. ಲೆಬನೋನಿನ ದೇವದಾರು ವೃಕ್ಷಗಳಂತೆ ಸೊಂಪಾಗಿ ಬೆಳೆಯುವನು.
ಹೋಶೇ 14 : 6 (ERVKN)
ಅವನ ಕೊಂಬೆಗಳು ಬೆಳೆದು ಹರಡಿಕೊಳ್ಳುತ್ತವೆ; ಅವನು ಅಂದವಾದ ಆಲೀವ್ ಮರದಂತಿರುವನು.
ಲೆಬನೋನಿನ ದೇವದಾರು ಮರಗಳ ಸುವಾಸನೆಯಂತೆ ಅವನು ಗಮಗಮಿಸುವನು.
ಹೋಶೇ 14 : 7 (ERVKN)
ಇಸ್ರೇಲಿನ ಜನರು ಮತ್ತೆ ನನ್ನ ಆಶ್ರಯದಲ್ಲಿ ವಾಸಿಸುವರು. ಧಾನ್ಯದ ಸಸಿಗಳಂತೆ ಬೆಳೆಯುವರು,
ದ್ರಾಕ್ಷಾಲತೆಯಿಂದ ಚಿಗುರುವರು. ಲೆಬನೋನಿನ ದ್ರಾಕ್ಷಿಬಳ್ಳಿಯಂತೆ ಅವರು ಇರುವರು.”
ಹೋಶೇ 14 : 8 (ERVKN)
ವಿಗ್ರಹಗಳ ಬಗ್ಗೆ ಯೆಹೋವನ ಎಚ್ಚರಿಕೆ “ಎಫ್ರಾಯೀಮೇ, ಇನ್ನುಮುಂದೆ ವಿಗ್ರಹವು ನಿನ್ನಲ್ಲಿರಬಾರದು. ನಿನ್ನ ಪ್ರಾರ್ಥನೆಗೆ ಉತ್ತರಿಸುವವನು ನಾನೇ. ನಿನ್ನನ್ನು ಕಾಯುವವನು ನಾನೇ.
ನಾನು ತುರಾಯಿ ಮರದಂತೆ ಸದಾ ಹಸಿರಾಗಿರುವೆನು. ನಿನ್ನ ಫಲಗಳು ನನ್ನಿಂದ ಬರುವದು.”
ಹೋಶೇ 14 : 9 (ERVKN)
ಅಂತಿಮ ಸಲಹೆ ಬುದ್ಧಿವಂತ ಮನುಷ್ಯನು ಇವುಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಜಾಣನು ಇದನ್ನು ಕಲಿತುಕೊಳ್ಳುತ್ತಾನೆ.
ಯೆಹೋವನ ಮಾರ್ಗವು ಸರಿಯಾದದ್ದು. ಒಳ್ಳೆಯ ಜನರು ಅವರೊಂದಿಗೆ ಜೀವಿಸುವರು. ಪಾಪಿಗಳು ಅವುಗಳಿಂದ ಸಾಯುವರು.
❮
❯
1
2
3
4
5
6
7
8
9