ಹೋಶೇ 8 : 1 (ERVKN)
ವಿಗ್ರಹಾರಾಧನೆಯು ಇಸ್ರೇಲರ ನಾಶನಕ್ಕೆ ಕಾರಣ “ಯೆಹೋವನಾಲಯದ ಕಾವಲುಗಾರನಂತೆ ತುತ್ತೂರಿಯನ್ನು ನಿನ್ನ ತುಟಿಗಳಲ್ಲಿಟ್ಟು ಊದು. ಇಸ್ರೇಲರು ನನ್ನ ಕಟ್ಟಳೆಗಳಿಗೆ ಅವಿಧೇಯರಾಗಿ ನನ್ನ ಒಡಂಬಡಿಕೆಯನ್ನು ಮುರಿದಿದ್ದಾರೆ.
ಹೋಶೇ 8 : 2 (ERVKN)
‘ನಮ್ಮ ದೇವರೇ, ಇಸ್ರೇಲಿನಲ್ಲಿರುವ ನಾವು ನಿನ್ನನ್ನು ಅರಿತಿದ್ದೇವೆ’ ಎಂದು ಅವರು ಕಿರುಚುವರು.
ಹೋಶೇ 8 : 3 (ERVKN)
ಆದರೆ ಇಸ್ರೇಲ್ ಒಳ್ಳೇದನ್ನು ನಿರಾಕರಿಸಿತು. ಆದ್ದರಿಂದ ಶತ್ರುಗಳು ಅವರನ್ನು ಓಡಿಸಿದರು.
ಹೋಶೇ 8 : 4 (ERVKN)
ಇಸ್ರೇಲರು ತಮಗಾಗಿ ಅರಸನನ್ನು ಆರಿಸಿಕೊಂಡರು. ಆದರೆ ಸಲಹೆಗಳಿಗಾಗಿ ನನ್ನ ಬಳಿಗೆ ಬರಲಿಲ್ಲ. ಇಸ್ರೇಲರು ತಮ್ಮ ನಾಯಕರನ್ನು ಆರಿಸಿಕೊಂಡರು. ಆದರೆ ನಾನು ತಿಳಿದಿರುವ ನಾಯಕರನ್ನು ಆರಿಸಿಕೊಳ್ಳಲಿಲ್ಲ. ಇಸ್ರೇಲರು ತಮಗೆ ವಿಗ್ರಹಗಳನ್ನು ತಯಾರಿಸಲು ತಮ್ಮ ಬೆಳ್ಳಿಬಂಗಾರವನ್ನು ಉಪಯೋಗಿಸಿದರು. ಆದ್ದರಿಂದ ಅವರು ನಾಶವಾಗುವರು.
ಹೋಶೇ 8 : 5 (ERVKN)
(5-6) ಯೆಹೋವನು ನೀವು ಮಾಡಿಕೊಂಡ ಬಸವನನ್ನು ನಿರಾಕರಿಸಿದ್ದಾನೆ. ಸಮಾರ್ಯವೇ, ಯೆಹೋವನು ಹೇಳುವುದೇನೆಂದರೆ, ‘ನಾನು ಇಸ್ರೇಲರ ವಿರುದ್ಧವಾಗಿ ತುಂಬಾ ಕೋಪಗೊಂಡಿದ್ದೇನೆ.’ ಇಸ್ರೇಲಿನ ಜನರು ಅವರ ಪಾಪಗಳಿಗಾಗಿ ಶಿಕ್ಷಿಸಲ್ಪಡುವರು. ಶಿಲ್ಪಿಯು ಅವರ ವಿಗ್ರಹಗಳನ್ನು ಮಾಡಿದನು. ಅವು ದೇವರಲ್ಲ. ಸಮಾರ್ಯದ ಬಸವನ ವಿಗ್ರಹಗಳು ಚೂರುಚೂರಾಗಿ ಒಡೆಯಲ್ಪಡುವವು.
ಹೋಶೇ 8 : 6 (ERVKN)
ಹೋಶೇ 8 : 7 (ERVKN)
ಇಸ್ರೇಲರು ಅಜ್ಞಾನದ ಕಾರ್ಯ ಮಾಡಿದರು. ಅವರು ಗಾಳಿಯನ್ನು ನೆಡಲು ಪ್ರಯತ್ನಿಸಿದರು. ಆದರೆ ಅವರಿಗೆ ತೊಂದರೆಗಳೇ ಪ್ರಾಪ್ತವಾಗುವದು. ಅವರು ಸುಂಟರಗಾಳಿಯನ್ನು ಕೊಯ್ಯುವರು. ಹೊಲದಲ್ಲಿ ಧಾನ್ಯವು ಬೆಳೆಯುವದು. ಆದರೆ ಅವು ಆಹಾರವನ್ನು ಕೊಡುವದಿಲ್ಲ. ಒಂದುವೇಳೆ ಅದು ಕೊಟ್ಟರೂ ಅಪರಿಚಿತರು ಅದನ್ನು ತಿನ್ನುವರು.
ಹೋಶೇ 8 : 8 (ERVKN)
“ಇಸ್ರೇಲ್ ನಾಶವಾಯಿತು. ಅವರು ಯಾರಿಗೂ ಬೇಡವಾದ ಪಾತ್ರೆಯನ್ನು ಬಿಸಾಡಿದಂತೆ ಜನಾಂಗಗಳ ಮಧ್ಯದಲ್ಲಿ ಚದರಿಸಲ್ಪಟ್ಟರು.
ಹೋಶೇ 8 : 9 (ERVKN)
ಎಫ್ರಾಯೀಮನು ತನ್ನ ಪ್ರೇಮಿಗಳ ಬಳಿಗೆ ಹೋದನು. ಕಾಡುಕತ್ತೆಯಂತೆ ಅಶ್ಶೂರ್ಯದ ಕಡೆಗೆ ಅಡ್ಡಾಡುತ್ತಾ ಹೋದನು.
ಹೋಶೇ 8 : 10 (ERVKN)
ಜನಾಂಗಗಳ ಮಧ್ಯೆ ಇರುವ ತನ್ನ ಪ್ರಿಯತಮರ ಕಡೆಗೆ ಇಸ್ರೇಲು ಹೋದನು. ಆದರೆ ನಾನು ಇಸ್ರೇಲರನ್ನು ಒಟ್ಟುಸೇರಿಸುವೆನು.
ಆದರೆ ಅದರ ಮೊದಲು ಆ ಬಲಿಷ್ಠ ರಾಜನ ಕೈಯಿಂದ ಅವರ ಸಂಕಟ ಅನುಭವಿಸಬೇಕು.
ಹೋಶೇ 8 : 11 (ERVKN)
ಇಸ್ರೇಲು ಯೆಹೋವನನ್ನು ಮರೆತು ವಿಗ್ರಹಗಳನ್ನು ಪೂಜಿಸಿದ್ದು “ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.
ಹೋಶೇ 8 : 12 (ERVKN)
ಎಫ್ರಾಯೀಮನಿಗೆ ನಾನು ಸಾವಿರಾರು ವಿಧಿನಿಯಮಗಳನ್ನು ಬರೆದರೂ ಅವನು ಅವುಗಳನ್ನು ಬೇರೆಯವರಿಗಾಗಿ ಬರೆದದೆ ಎಂದು ತಿಳಿದುಕೊಳ್ಳುವನು.
ಹೋಶೇ 8 : 13 (ERVKN)
ಇಸ್ರೇಲರು ಯಜ್ಞವನ್ನು ಪ್ರೀತಿಸುತ್ತಾರೆ. ಅವರು ಮಾಂಸವನ್ನು ಯಜ್ಞಮಾಡಿ ತಿನ್ನುತ್ತಾರೆ.
ಯೆಹೋವನು ಅವರ ಯಜ್ಞವನ್ನು ಸ್ವೀಕರಿಸುವುದಿಲ್ಲ. ಅವರ ಪಾಪಗಳನ್ನು ತನ್ನ ನೆನಪಿಗೆ ತಂದು
ಅವರನ್ನು ಶಿಕ್ಷಿಸುವನು. ಅವರು ಈಜಿಪ್ಟಿಗೆ ಸೆರೆಯಾಳುಗಳಾಗಿ ಒಯ್ಯಲ್ಪಡುವರು.
ಹೋಶೇ 8 : 14 (ERVKN)
ಇಸ್ರೇಲರು ರಾಜರ ಅರಮನೆಗಳನ್ನು ಕಟ್ಟಿದರು. ಆದರೆ ಅದರ ನಿರ್ಮಾಣಿಕನನ್ನು ಮರೆತರು.
ಯೆಹೂದವು ಕೋಟೆಗಳನ್ನು ಕಟ್ಟುತ್ತಾನೆ; ಆದರೆ ಯೆಹೂದದ ಪಟ್ಟಣಗಳ ಮೇಲೆ ನಾನು ಬೆಂಕಿಯನ್ನು ಕಳುಹಿಸುವೆನು. ಆ ಬೆಂಕಿಯು ಅರಮನೆಗಳನ್ನು ನಾಶಮಾಡುವದು.”

1 2 3 4 5 6 7 8 9 10 11 12 13 14