ಯೆಶಾಯ 17 : 1 (ERVKN)
ಅರಾಮ್ಯರ ಕುರಿತು ದೇವರ ಸಂದೇಶ ದಮಸ್ಕಕ್ಕೆ ಇದು ದುಃಖಕರವಾದ ಸಂದೇಶ. ಯೆಹೋವನು ಹೇಳುವುದೇನೆಂದರೆ, “ದಮಸ್ಕವು ಈಗ ಒಂದು ದೊಡ್ಡ ನಗರವಾಗಿದೆ. ಆದರೆ ಅದು ನಾಶವಾಗುವದು. ಕೆಡವಲ್ಪಟ್ಟ ಕಟ್ಟಡಗಳು ಮಾತ್ರವೇ ದಮಸ್ಕದಲ್ಲಿರುವವು.
ಯೆಶಾಯ 17 : 2 (ERVKN)
ಅರೋಯೇರ್ ಪ್ರಾಂತ್ಯದ ನಗರಗಳನ್ನು ಜನರು ಬಿಟ್ಟುಹೋಗುವರು. ಆ ಪಾಳುಬಿದ್ದ ನಗರಗಳಲ್ಲಿ ಕುರಿಮಂದೆಗಳು ತಿರುಗಾಡುವವು. ಅವುಗಳಿಗೆ ತೊಂದರೆ ಕೊಡಲು ಯಾರೂ ಇರುವದಿಲ್ಲ.
ಯೆಶಾಯ 17 : 3 (ERVKN)
ಕೋಟೆಗೋಡೆಯುಳ್ಳ ಎಫ್ರಾಯೀಮನ ಪಟ್ಟಣಗಳು ನಾಶವಾಗುವವು. ದಮಸ್ಕದಲ್ಲಿರುವ ಸರ್ಕಾರವು ಕೊನೆಗೊಳ್ಳುವದು.
ಇಸ್ರೇಲರಿಗೆ ಆದಂತೆಯೇ ಅರಾಮ್ಯರಿಗೂ ಆಗುವದು. ಪ್ರಮುಖ ನಗರವಾಸಿಗಳು ಸೆರೆಹಿಡಿಯಲ್ಪಟ್ಟು ಒಯ್ಯಲ್ಪಡುವರು” ಇದು ಸರ್ವಶಕ್ತನಾದ ಯೆಹೋವನ ನುಡಿ.
ಯೆಶಾಯ 17 : 4 (ERVKN)
“ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.
ಯೆಶಾಯ 17 : 5 (ERVKN)
“ಆ ಸಮಯದಲ್ಲಿ ರೆಫಾಯೀಮ್ ಕಣಿವೆಯಲ್ಲಿ ಧಾನ್ಯದ ಸುಗ್ಗಿಯಂತಿರುವದು. ಕೆಲಸಗಾರರು ಹೊಲಗಳಲ್ಲಿ ಬೆಳೆಯನ್ನು ಕೊಯ್ದು ಧಾನ್ಯವನ್ನು ಶೇಖರಿಸುವರು.
ಯೆಶಾಯ 17 : 6 (ERVKN)
“ಆ ಸಮಯವು ಆಲೀವ್ ಬೀಜಗಳನ್ನು ಜನರು ಕೂಡಿಸಿಕೊಳ್ಳುವಂತೆ ಇರುವುದು. ಆಲೀವ್ ಮರಗಳಿಂದ ಜನರು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರಗಳ ತುದಿಯಲ್ಲಿ ಉಳಿದುಕೊಳ್ಳುವವು. ಎತ್ತರದ ಕೊಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿಯುವವು. ಅದೇ ರೀತಿಯಲ್ಲಿ ಆ ನಗರಗಳ ಸ್ಥಿತಿಯೂ ಇರುವುದು” ಇದು ಸರ್ವಶಕ್ತನಾದ ಯೆಹೋವನ ನುಡಿಗಳು.
ಯೆಶಾಯ 17 : 7 (ERVKN)
ಮಯಗಳಲ್ಲಿ ಜನರು ತಮ್ಮ ನಿರ್ಮಾಣಿಕನಾದ ದೇವರ ಕಡೆಗೆ ದೃಷ್ಟಿಸಿ ನೋಡುವರು. ಅವರ ಕಣ್ಣುಗಳು ಇಸ್ರೇಲಿನ ಪರಿಶುದ್ಧನನ್ನು ನೋಡುತ್ತವೆ.
ಯೆಶಾಯ 17 : 8 (ERVKN)
ಜನರು ತಮ್ಮ ಮಹಾಕಾರ್ಯಗಳ ಮೇಲೆ ನಂಬಿಕೆ ಇಡುವದಿಲ್ಲ. ಸುಳ್ಳುದೇವರುಗಳಿಗೆ, ತಾವು ಮಾಡಿದ ಬಲಿಪೀಠಗಳಿಗೆ, ಪೂಜಾಸ್ಥಳಗಳಿಗೆ ಅವರು ಹೋಗುವದಿಲ್ಲ.
ಯೆಶಾಯ 17 : 9 (ERVKN)
ಆ ಸಮಯದಲ್ಲಿ ಕೋಟೆಗೋಡೆಗಳಿರುವ ಎಲ್ಲಾ ಪಟ್ಟಣಗಳು ನಿರ್ಜನವಾಗುವದು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವ ಕಾಲದಲ್ಲಿ ಹೇಗೆ ಅಡವಿಗಳಂತೆಯೂ ಬೆಟ್ಟಗಳಂತೆಯೂ ಇದ್ದವೋ ಅದೇ ರೀತಿಯಲ್ಲಿ ಇರುವವು. ಆ ಸಮಯದಲ್ಲಿ ಇಸ್ರೇಲರು ದೇಶದೊಳಗೆ ಪ್ರವೇಶಿಸುವಾಗ ಅಲ್ಲಿಯ ನಿವಾಸಿಗಳೆಲ್ಲರೂ ಓಡಿಹೋದರು. ಮುಂಬರುವ ದಿವಸಗಳಲ್ಲಿ ದೇಶವು ಮತ್ತೆ ನಿರ್ಜನವಾಗುವದು.
ಯೆಶಾಯ 17 : 10 (ERVKN)
ನೀವು ನಿಮ್ಮ ರಕ್ಷಕನಾದ ದೇವರನ್ನು ಮರೆತುಬಿಟ್ಟಿದ್ದರಿಂದ ನಿಮಗೆ ಹೀಗೆ ಆಗುವದು. ದೇವರು ನಿಮ್ಮ ಆಶ್ರಯದುರ್ಗವಾಗಿದ್ದಾನೆಂಬುದನ್ನು ನೀವು ನೆನಪು ಮಾಡಿಕೊಳ್ಳಲಿಲ್ಲ. ದೂರದ ಪ್ರಾಂತ್ಯದಿಂದ ನೀವು ಉತ್ತಮ ತಳಿಯ ದ್ರಾಕ್ಷಿಯನ್ನು ತಂದಿರಿ. ಅದನ್ನು ನೀವು ನೆಟ್ಟರೂ ಅವು ಚಿಗುರುವದಿಲ್ಲ.
ಯೆಶಾಯ 17 : 11 (ERVKN)
ಒಂದು ದಿವಸ ಆ ಕೊಂಬೆಗಳನ್ನು ನೆಟ್ಟು ಅದು ಚಿಗುರುವಂತೆ ಮಾಡುವಿರಿ. ಮರುದಿವಸ ಅದು ಚಿಗುರುವದು. ಸುಗ್ಗಿಯ ಕಾಲದಲ್ಲಿ ನೀವು ದ್ರಾಕ್ಷಿತೋಟಕ್ಕೆ ಹೋದಾಗ ದ್ರಾಕ್ಷಿಬಳ್ಳಿಗಳೆಲ್ಲಾ ರೋಗದಿಂದ ಸತ್ತುಹೋಗಿರುವವು.
ಯೆಶಾಯ 17 : 12 (ERVKN)
ಇಗೋ! ಸಮುದ್ರವು ಭೋರ್ಗರೆಯುವ ಶಬ್ದದಂತೆ ಅನೇಕ ಜನಾಂಗಗಳು ರೋಧಿಸುವ ಶಬ್ದ ಕೇಳಿಸುತ್ತದೆ.
ಆ ಶಬ್ದವು ಸಮುದ್ರದ ತೆರೆಗಳು ದಡಕ್ಕೆ ಅಪ್ಪಳಿಸುವಂತಿದೆ.
ಯೆಶಾಯ 17 : 13 (ERVKN)
ದೇವರು ಗದರಿಸಿದಾಗ ಜನರು ಓಡಿಹೋಗುವರು.
ಆ ಜನರು ಗಾಳಿಯಲ್ಲಿ ಹಾರಿಹೋಗುವ ಹೊಟ್ಟಿನಂತಿರುವರು; ಬಿರುಗಾಳಿಯು ಬಹುದೂರಕ್ಕೆ ಕೊಂಡೊಯ್ಯುವ ಬೇರಿಲ್ಲದ ಹಣಜಿಗಳಂತಿರುವರು.
ಯೆಶಾಯ 17 : 14 (ERVKN)
ಆ ರಾತ್ರಿ ಜನರು ಭಯಗ್ರಸ್ತರಾಗುವರು. ಬೆಳಗಾಗುವದರೊಳಗೆ ಏನೂ ಉಳಿಯುವದಿಲ್ಲ.
ಹಾಗೆಯೇ ನಮ್ಮ ವೈರಿಗಳಿಗೆ ಏನೂ ದೊರಕುವದಿಲ್ಲ. ಅವರು ನಮ್ಮ ದೇಶಕ್ಕೆ ನುಗ್ಗಿದರೂ ಅವರಿಗೆ ಏನೂ ಸಿಗದು.
❮
❯
1
2
3
4
5
6
7
8
9
10
11
12
13
14