ಯೆಶಾಯ 2 : 1 (ERVKN)
{ಯೆಹೂದ ಮತ್ತು ಜೆರುಸಲೇಮಿಗೆ ದೈವಸಂದೇಶ} [PS] ಆಮೋಚನ ಮಗನಾದ ಯೆಶಾಯನು ಯೆಹೂದ ಮತ್ತು ಜೆರುಸಲೇಮಿನ ಬಗ್ಗೆ ನೋಡಿದ ದರ್ಶನ.
ಯೆಶಾಯ 2 : 2 (ERVKN)
ಕೊನೆಯ ದಿನಗಳಲ್ಲಿ ಯೆಹೋವನಾಲಯದ ಪರ್ವತವು [QBR2] ಎಲ್ಲಾ ಬೆಟ್ಟಗಳಿಗಿಂತಲೂ ಮಹೋನ್ನತವಾದ ಪರ್ವತವಾಗಿರುವುದು. [QBR]
ಯೆಶಾಯ 2 : 3 (ERVKN)
ಅಲ್ಲಿಗೆ ಎಲ್ಲಾ ದೇಶಗಳಿಂದ ಜನರು ಸತತವಾಗಿ ತೊರೆಗಳಂತೆ ಬರುವರು. [QBR2] ಹೊರಟುಬಂದ ಆ ಜನರು, “ಬನ್ನಿರಿ, ನಾವು ಯೆಹೋವನ ಪರ್ವತಕ್ಕೆ ಹೋಗೋಣ. [QBR2] ಯಾಕೋಬನ ದೇವರ ಆಲಯಕ್ಕೆ ಹೋಗೋಣ. [QBR] ಆತನು ನಮಗೆ ಜೀವಮಾರ್ಗವನ್ನು ಅಲ್ಲಿ ಬೋಧಿಸುವನು. [QBR2] ನಾವು ಆತನನ್ನು ಹಿಂಬಾಲಿಸೋಣ” ಎಂದು ಹೇಳುವರು. ಯೆಹೋವನ ಸಂದೇಶ, ಬೋಧನೆಗಳು ಜೆರುಸಲೇಮಿನಲ್ಲಿರುವ [QBR2] ಚೀಯೋನ್ ಪರ್ವತದಿಂದ ಪ್ರಾರಂಭವಾಗಿ ಇಡೀ ಪ್ರಪಂಚಕ್ಕೆ ಹರಡುವದು. [QBR]
ಯೆಶಾಯ 2 : 4 (ERVKN)
ಈಗ ಎಲ್ಲಾ ದೇಶಗಳಿಗೆ ದೇವರೇ ನ್ಯಾಯಾಧೀಶನಾಗಿರುವನು. [QBR2] ಅನೇಕ ಜನರ ತರ್ಕಗಳನ್ನು ದೇವರು ಕೊನೆಗಾಣಿಸುವನು. [QBR] ಆ ಜನರು ಯುದ್ಧಕ್ಕಾಗಿ ಆಯುಧಗಳನ್ನು ಉಪಯೋಗಿಸುವದನ್ನು ನಿಲ್ಲಿಸುವರು; [QBR2] ತಮ್ಮ ಖಡ್ಗಗಳಿಂದ ಅವರು ನೇಗಿಲುಗಳನ್ನು ತಯಾರಿಸುವರು; [QBR2] ತಮ್ಮ ಬರ್ಜಿಗಳಿಂದ ಸಸಿಗಳನ್ನು ಕೊಯ್ಯುವ ಕುಡುಗೋಲುಗಳನ್ನು ಮಾಡುವರು. [QBR] ಪರಸ್ಪರ ಹೊಡೆದಾಡಿಕೊಳ್ಳುವದನ್ನು ಜನಾಂಗಗಳು ನಿಲ್ಲಿಸುವರು. [QBR2] ಇನ್ನೆಂದಿಗೂ ಜನಾಂಗಗಳು ಯುದ್ಧಾಭ್ಯಾಸ ತರಬೇತಿಯನ್ನು ಹೊಂದುವುದಿಲ್ಲ. [PS]
ಯೆಶಾಯ 2 : 5 (ERVKN)
ಯಾಕೋಬನ ಮನೆತನದವರೇ, ನೀವು ಯೆಹೋವನ ಬೆಳಕನ್ನು ಹಿಂಬಾಲಿಸುವವರಾಗಬೇಕು. [PE][PS]
ಯೆಶಾಯ 2 : 6 (ERVKN)
ನೀವು ನಿಮ್ಮ ಜನರನ್ನು ತೊರೆದದ್ದರಿಂದ ನಾನು ನಿಮಗೆ ಹೀಗೆ ಹೇಳಿದೆನು. ಪೂರ್ವದೇಶದ ಜನರಿಗಿರುವ ತಪ್ಪು ತಿಳುವಳಿಕೆಯು ನಿಮ್ಮ ಜನರಲ್ಲಿ ತುಂಬಿಹೋಯಿತು. ಫಿಲಿಷ್ಟಿಯರಂತೆ ನಿಮ್ಮ ಜನರು ಭವಿಷ್ಯ ಹೇಳಲು ಪ್ರಯತ್ನಿಸಿ ಆ ತಪ್ಪು ತಿಳುವಳಿಕೆಗೆ ಮಾರುಹೋದರು.
ಯೆಶಾಯ 2 : 7 (ERVKN)
ನಿಮ್ಮ ದೇಶವು ಬೆಳ್ಳಿಬಂಗಾರಗಳಿಂದಲೂ ಮಿತಿಯಿಲ್ಲದ ನಿಕ್ಷೇಪಗಳಿಂದಲೂ ಕುದುರೆಗಳಿಂದಲೂ ಅಸಂಖ್ಯಾತವಾದ ರಥಗಳಿಂದಲೂ ತುಂಬಿಹೋಯಿತು.
ಯೆಶಾಯ 2 : 8 (ERVKN)
ನಿಮ್ಮ ದೇಶವು ಕೈಯಿಂದ ಮಾಡಿದ ವಿಗ್ರಹಗಳಿಂದ ತುಂಬಿದ್ದು ಜನರು ಅವುಗಳನ್ನು ಆರಾಧಿಸುತ್ತಾರೆ.
ಯೆಶಾಯ 2 : 9 (ERVKN)
ಜನರು ಕೆಟ್ಟದಾರಿಯಲ್ಲಿ ಹೋಗುತ್ತಿದ್ದಾರೆ; ಹೀನಸ್ಥಿತಿಯಲ್ಲಿ ಮುಂದುವರಿಯುತ್ತಿದ್ದಾರೆ. ದೇವರೇ, ನೀನು ಅವರನ್ನು ಖಂಡಿತವಾಗಿಯೂ ಕ್ಷಮಿಸಬೇಡ. [PE][PS]
ಯೆಶಾಯ 2 : 10 (ERVKN)
ಬಂಡೆಗಳ ಹಿಂಬದಿಯಲ್ಲಿಯೂ ಹೊಲಸಿನಲ್ಲಿಯೂ ಅವಿತುಕೊಳ್ಳಿರಿ. ನೀವು ಯೆಹೋವನಿಗೆ ಭಯಪಟ್ಟು ಆತನ ಮಹಾಶಕ್ತಿಗೆ ಮರೆಯಾಗಿ ಅವಿತುಕೊಳ್ಳಬೇಕು. [PE][PS]
ಯೆಶಾಯ 2 : 11 (ERVKN)
ಗರ್ವಿಷ್ಠರ ಗರ್ವವು ಕುಗ್ಗಿಸಲ್ಪಡುವುದು; ಅಹಂಕಾರಿಗಳ ಅಹಂಕಾರವು ತಗ್ಗಿಸಲ್ಪಡುವುದು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು. [PE][PS]
ಯೆಶಾಯ 2 : 12 (ERVKN)
ಸರ್ವಶಕ್ತನಾದ ಯೆಹೋವನು ಒಂದು ವಿಶೇಷ ದಿನವನ್ನು ಯೋಜಿಸಿರುತ್ತಾನೆ. ಆ ದಿನದಲ್ಲಿ ಯೆಹೋವನು ಅಹಂಕಾರಿಗಳನ್ನೂ ಜಂಬಕೊಚ್ಚಿಕೊಳ್ಳುವವರನ್ನೂ ಶಿಕ್ಷಿಸುವನು. ಆಗ ಆ ಅಹಂಕಾರಿಗಳನ್ನು ಜನರು ದೊಡ್ಡಜನರೆಂದು ಪರಿಗಣಿಸುವುದಿಲ್ಲ.
ಯೆಶಾಯ 2 : 13 (ERVKN)
ಆ ಅಹಂಕಾರದ ಜನರು ಲೆಬನೋನಿನ ದೇವದಾರು ಮರಗಳಂತಿರುವರು. ಬಾಷಾನಿನ ಮಹಾದೇವದಾರು ಮರಗಳಂತಿರುವರು. ಆದರೆ ಯೆಹೋವನು ಅವರನ್ನು ಶಿಕ್ಷಿಸುವನು.
ಯೆಶಾಯ 2 : 14 (ERVKN)
ಆ ಅಹಂಕಾರಿಗಳು ಉನ್ನತವಾದ ಪರ್ವತಗಳಂತೆಯೂ, ಎತ್ತರವಾದ ಬೆಟ್ಟಗಳಂತೆಯೂ ಇದ್ದಾರೆ.
ಯೆಶಾಯ 2 : 15 (ERVKN)
ಅವರು ಎತ್ತರವಾದ ಬುರುಜುಗಳಂತೆಯೂ ಬಲಿಷ್ಠವಾದ ಕೋಟೆಗೋಡೆಯಂತೆಯೂ ಇರುವರು. ಆದರೆ ದೇವರು ಅವರನ್ನು ಶಿಕ್ಷಿಸುವನು.
ಯೆಶಾಯ 2 : 16 (ERVKN)
ಆ ಅಹಂಕಾರಿಗಳು ತಾರ್ಷೀಷಿನ ದೊಡ್ಡ ಹಡಗುಗಳಂತಿದ್ದಾರೆ. ಈ ಹಡಗುಗಳಲ್ಲಿ ಶ್ರೇಷ್ಠವಾದ ವಸ್ತುಗಳು ತುಂಬಿವೆ. ಆದರೆ ದೇವರು ಆ ಅಹಂಕಾರಿಗಳನ್ನು ಶಿಕ್ಷಿಸುವನು. [PE][PS]
ಯೆಶಾಯ 2 : 17 (ERVKN)
ಆ ಸಮಯದಲ್ಲಿ ಜನರು ತಮ್ಮ ಅಹಂಕಾರವನ್ನು ತೋರಿಸುವುದಿಲ್ಲ. ಈಗ ಅಹಂಕಾರಿಗಳಾಗಿರುವವರು ನೆಲದತನಕ ಬಗ್ಗಿಹೋಗುವರು. ಆ ಸಮಯದಲ್ಲಿ ಯೆಹೋವನೊಬ್ಬನೇ ಉನ್ನತೋನ್ನತವಾಗಿರುವನು.
ಯೆಶಾಯ 2 : 18 (ERVKN)
ಎಲ್ಲಾ ವಿಗ್ರಹಗಳು ಇಲ್ಲವಾಗುವವು.
ಯೆಶಾಯ 2 : 19 (ERVKN)
ಜನರು ಬಂಡೆಗಳ ಸಂದುಗಳಲ್ಲಿಯೂ ನೆಲದ ಬಿರುಕುಗಳಲ್ಲಿಯೂ ಅಡಗಿಕೊಳ್ಳುವರು. ಜನರು ಯೆಹೋವನಿಗೂ ಆತನ ಪರಾಕ್ರಮಕ್ಕೂ ಭಯಪಡುವರು. ಯೆಹೋವನು ಎದ್ದು ಈ ಪ್ರಪಂಚವನ್ನು ಅಲುಗಾಡಿಸುವಾಗ ಇವೆಲ್ಲಾ ಸಂಭವಿಸುವವು. [PE][PS]
ಯೆಶಾಯ 2 : 20 (ERVKN)
ಆ ಸಮಯದಲ್ಲಿ ಜನರು ತಮ್ಮ ಬೆಳ್ಳಿಬಂಗಾರಗಳ ವಿಗ್ರಹಗಳನ್ನೆತ್ತಿ ಬಿಸಾಡಿಬಿಡುವರು. ಈ ವಿಗ್ರಹಗಳನ್ನು ಜನರು ಪೂಜಿಸುವದಕ್ಕಾಗಿ ಮಾಡಿಕೊಂಡರು. ಬಾವಲಿಗಳೂ, ಇಲಿಗಳೂ ವಾಸಿಸುವ ಸಂದುಗಳಲ್ಲಿ ಈ ವಿಗ್ರಹಗಳನ್ನು
ಯೆಶಾಯ 2 : 21 (ERVKN)
ಜನರು ಬಿಸಾಡಿ, ಸಂದುಗೊಂದುಗಳಲ್ಲಿ ಅಡಗಿಕೊಳ್ಳುವರು. ಯೆಹೋವನಿಗೂ ಆತನ ಮಹಾಶಕ್ತಿಗೂ ಹೆದರಿ ಅವರು ಹಾಗೆ ಮಾಡುವರು. ಯೆಹೋವನು ಎದ್ದು ಭೂಮಿಯನ್ನು ಅಲುಗಾಡಿಸುವ ಸಮಯದಲ್ಲಿ ಇವೆಲ್ಲಾ ಸಂಭವಿಸುವವು. [PE][PS]
ಯೆಶಾಯ 2 : 22 (ERVKN)
ನಿಮ್ಮ ರಕ್ಷಣೆಗಾಗಿ ನೀವು ಇತರರ ಮೇಲೆ ನಂಬಿಕೆ ಇಡಕೂಡದು. ಅವರು ಕೇವಲ ಸಾಯುವ ಮನುಷ್ಯರಷ್ಟೇ. ಆದ್ದರಿಂದ ಅವರನ್ನು ನೀವು ದೇವರಂತೆ ಬಲಿಷ್ಠರೆಂದು ನೆನಸಬಾರದು. [PE]
❮
❯