ಯೆಶಾಯ 24 : 1 (ERVKN)
ದೇವರು ಇಸ್ರೇಲನ್ನು ಶಿಕ್ಷಿಸುವನು ಇಗೋ, ಯೆಹೋವನು ಈ ದೇಶವನ್ನು ನಾಶಮಾಡುವನು. ಆತನು ಅದನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವನು. ಜನರನ್ನು ಅತಿದೂರಕ್ಕೆ ಚದರಿಸಿಬಿಡುವನು.
ಯೆಶಾಯ 24 : 2 (ERVKN)
ಆ ಸಮಯದಲ್ಲಿ ಸಾಧಾರಣ ಜನರಿಗೂ ಯಾಜಕವರ್ಗದವರಿಗೂ ವ್ಯತ್ಯಾಸವಿರದು. ಸೇವಕರಿಗೂ ಅವರ ಯಜಮಾನರಿಗೂ ವ್ಯತ್ಯಾಸವಿರದು. ದಾಸಿಯರಿಗೂ ಅವರ ಯಜಮಾನಿಯರಿಗೂ ವ್ಯತ್ಯಾಸವಿರದು. ಮಾರುವವರಿಗೂ ಕೊಳ್ಳುವವರಿಗೂ ವ್ಯತ್ಯಾಸವಿರದು. ಸಾಲಕೊಡುವವರಿಗೂ ಸಾಲ ತೆಗೆದುಕೊಳ್ಳುವವರಿಗೂ ವ್ಯತ್ಯಾಸವಿರದು. ಬಡ್ಡಿಹಾಕುವವನಿಗೂ ಬಡ್ಡಿಕೊಡುವವನಿಗೂ ವ್ಯತ್ಯಾಸವಿರದು.
ಯೆಶಾಯ 24 : 3 (ERVKN)
ಎಲ್ಲಾ ಜನರು ದೇಶದಿಂದ ಹೊರಕ್ಕೆ ಹಾಕಲ್ಪಡುವರು. ದೇಶದ ಸಂಪತ್ತನ್ನು ಕಿತ್ತುಕೊಳ್ಳಲಾಗುವದು. ಇದು ಯೆಹೋವನ ಆಜ್ಞೆಯಾಗಿರುವದರಿಂದ ನೆರವೇರುವದು.
ಯೆಶಾಯ 24 : 4 (ERVKN)
ದೇಶವು ನಿರ್ಜನವಾಗಿ ಶೋಕಿಸುವದು. ಇಡೀ ಪ್ರಪಂಚವೇ ನಿರ್ಜನವಾಗಿ ಬಲಹೀನವಾಗುವದು. ಈ ಪ್ರಪಂಚದ ಪ್ರಸಿದ್ಧ ಜನರೂ ಬಲಹೀನರಾಗುವರು.
ಯೆಶಾಯ 24 : 5 (ERVKN)
ದೇಶದ ಜನರು ದೇವರ ಉಪದೇಶಗಳಿಗೆ ವಿರುದ್ಧವಾಗಿ ನಡೆದು ತಮ್ಮ ದೇಶವನ್ನು ಹೊಲಸುಮಾಡಿದರು. ದೇವರ ಕಟ್ಟಳೆಗಳನ್ನು ಅವರು ಅನುಸರಿಸಲಿಲ್ಲ. ಬಹಳ ಕಾಲದ ಹಿಂದೆ ಜನರು ದೇವರೊಂದಿಗೆ ಒಡಂಬಡಿಕೆ ಮಾಡಿಕೊಂಡರು. ಆದರೆ ಆ ಜನರು ಆ ಒಡಂಬಡಿಕೆಯನ್ನು ಮುರಿದರು.
ಯೆಶಾಯ 24 : 6 (ERVKN)
ಆ ದೇಶದಲ್ಲಿ ವಾಸಿಸುವ ಜನರು ದೇವರಿಗೆ ವಿರುದ್ಧವಾಗಿ ನಡೆದರು. ಆದ್ದರಿಂದ ದೇವರು ಈ ದೇಶವನ್ನು ನಾಶಮಾಡಲು ತೀರ್ಮಾನಿಸಿದನು. ಜನರು ಶಿಕ್ಷಿಸಲ್ಪಡುವರು. ಕೆಲವೇ ಮಂದಿ ಮಾತ್ರ ಉಳಿಯುವರು.
ಯೆಶಾಯ 24 : 7 (ERVKN)
ದ್ರಾಕ್ಷಿಬಳ್ಳಿಗಳು ಸಾಯುತ್ತಲಿವೆ. ಹೊಸ ದ್ರಾಕ್ಷಾರಸವು ಹುಳಿಯಾಗಿದೆ. ಹಿಂದಿನ ಕಾಲದಲ್ಲಿ ಜನರು ಹರ್ಷಭರಿತರಾಗಿದ್ದರು. ಆದರೆ ಈಗ ಆ ಜನರು ದುಃಖದಲ್ಲಿರುತ್ತಾರೆ.
ಯೆಶಾಯ 24 : 8 (ERVKN)
ಅವರು ತಮ್ಮ ಸಂತೋಷವನ್ನು ವ್ಯಕ್ತಪಡಿಸುವದಿಲ್ಲ. ಸಂತಸದ ಗದ್ದಲವು ಕೇಳಿಸುವದಿಲ್ಲ. ಆ ಶಬ್ದಗಳೆಲ್ಲಾ ನಿಂತುಹೋಗಿವೆ. ಹಾರ್ಪ್‌ವಾದ್ಯದ ಮತ್ತು ದಮ್ಮಡಿಗಳ ಶಬ್ದವು ನಿಂತಿದೆ.
ಯೆಶಾಯ 24 : 9 (ERVKN)
ಜನರು ದ್ರಾಕ್ಷಾರಸ ಕುಡಿಯುತ್ತಿರುವಾಗ ಹಾಡು ಹಾಡುವುದಿಲ್ಲ. ಅವರು ಕುಡಿಯುವ ಮದ್ಯವು ಅವರಿಗೆ ಕಹಿಯಾಗಿದೆ.
ಯೆಶಾಯ 24 : 10 (ERVKN)
ಈ ನಗರಕ್ಕೆ “ಪೂರ್ಣ ಗಲಿಬಿಲಿ” ಎಂಬುದೇ ತಕ್ಕ ಹೆಸರು. ನಗರವು ಕೆಡವಲ್ಪಟ್ಟಿತು. ಜನರು ಮನೆಗಳಿಗೆ ಪ್ರವೇಶಿಸಲಿಕ್ಕಾಗದು. ಕದಗಳನ್ನು ತೆರೆಯಲು ಸಾಧ್ಯವಾಗದು.
ಯೆಶಾಯ 24 : 11 (ERVKN)
ಮಾರುಕಟ್ಟೆಗಳಲ್ಲಿ ಜನರು ಈಗಲೂ ದ್ರಾಕ್ಷಾರಸವನ್ನು ಕೇಳುವರು. ಆದರೆ ಸಂತೋಷವೇ ಹೋಗಿಬಿಟ್ಟಿದೆ. ಹರ್ಷವು ಬಹುದೂರ ಒಯ್ಯಲ್ಪಟ್ಟಿದೆ.
ಯೆಶಾಯ 24 : 12 (ERVKN)
ನಗರಕ್ಕೆ ನಾಶನವು ಕಾದಿದೆ; ಪುರದ್ವಾರವು ನಜ್ಜುಗುಜ್ಜಾಗಿದೆ.
ಯೆಶಾಯ 24 : 13 (ERVKN)
ಕೊಯ್ಯುವ ಕಾಲದಲ್ಲಿ ಜನರು ಆಲೀವ್ ಮರಗಳನ್ನು ಹೊಡೆದು ಕಾಯಿಗಳನ್ನು ಉದುರಿಸುವರು. ಆದರೆ ಕೆಲವು ಕಾಯಿಗಳು ಮರದಲ್ಲಿ ಉಳಿಯುವವು.
ಜನಾಂಗಗಳ ಮಧ್ಯದಲ್ಲಿ ದೇಶವೂ ಹೀಗೆಯೇ ಇರುವದು.
ಯೆಶಾಯ 24 : 14 (ERVKN)
ಉಳಿದ ಜನರು ಚೀರಾಡುವರು. ಅದು ಭೋರ್ಗರೆಯುವ ಸಮುದ್ರದ ಶಬ್ದಕ್ಕಿಂತಲೂ ಜೋರಾಗಿ ಕೇಳಿಸುವದು. ದೇವರ ಕೃಪೆಯ ನಿಮಿತ್ತ ಅವರು ಸಂತೋಷದಲ್ಲಿರುವರು.
ಯೆಶಾಯ 24 : 15 (ERVKN)
ಆ ಜನರು, “ಪೂರ್ವದಲ್ಲಿರುವ ಜನರೇ, ದೇವರಿಗೆ ಸ್ತೋತ್ರಮಾಡಿರಿ! ದೂರ ದೇಶಗಳಲ್ಲಿರುವ ಜನರೇ, ಇಸ್ರೇಲರ ದೇವರಾದ ಯೆಹೋವನ ಹೆಸರನ್ನು ಕೊಂಡಾಡಿರಿ” ಎಂದು ಹೇಳುವರು.
ಯೆಶಾಯ 24 : 16 (ERVKN)
ದೇವರ ಸ್ತುತಿಯನ್ನು ನಾವು ಭೂಮಿಯ ಎಲ್ಲಾ ಕಡೆಗಳಿಂದಲೂ ಕೇಳಿಸಿಕೊಳ್ಳುತ್ತೇವೆ. ಈ ಸ್ತುತಿಹಾಡುಗಳು ದೇವರ ಒಳ್ಳೆತನವನ್ನು ವರ್ಣಿಸುವವು.
ಆದರೆ ನಾನು, “ಸಾಕು, ನನಗೆ ಸಾಕು.
ನಾನು ನೋಡುವ ವಿಷಯಗಳು ಭಯಂಕರವಾಗಿವೆ. ದ್ರೋಹಿಗಳು ಜನರಿಗೆ ವಿರುದ್ಧವಾಗಿ ಎದ್ದು ಅವರಿಗೆ ಹಾನಿಮಾಡುವರು.”
ಯೆಶಾಯ 24 : 17 (ERVKN)
ಈ ದೇಶದಲ್ಲಿ ವಾಸಿಸುವ ಜನರಿಗೆ ಅಪಾಯವು ಕಾದಿದೆ ಎಂದು ನನಗೆ ತೋರುತ್ತಿದೆ. ಅವರಿಗೆ ಭಯ, ಉರುಲು, ಗುಂಡಿಗಳು ಕಾದಿವೆ.
ಯೆಶಾಯ 24 : 18 (ERVKN)
ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು.
ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು.
ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು.
ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.
ಯೆಶಾಯ 24 : 19 (ERVKN)
ಭೂಕಂಪಗಳಾಗುವವು. ಭೂಮಿಯು ಸೀಳಿಹೋಗುವದು.
ಯೆಶಾಯ 24 : 20 (ERVKN)
ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು.
ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.
ಯೆಶಾಯ 24 : 21 (ERVKN)
ಆ ಸಮಯದಲ್ಲಿ ಯೆಹೋವನು ಪರಲೋಕ ಸೈನ್ಯಕ್ಕೆ ಪರಲೋಕದಲ್ಲಿ ನ್ಯಾಯತೀರಿಸುವನು. ಭೂಮಿಯ ಅರಸರನ್ನು ಭೂಮಿಯ ಮೇಲೆ ನ್ಯಾಯವಿಚಾರಣೆಮಾಡುವನು.
ಯೆಶಾಯ 24 : 22 (ERVKN)
ಅನೇಕ ಮಂದಿ ಒಟ್ಟು ಸೇರುವರು. ಕೆಲವರು ಗುಂಡಿಯಲ್ಲಿ ಸಿಕ್ಕಿಹಾಕಿಕೊಳ್ಳುವರು. ಕೆಲವರು ಸೆರೆಹಿಡಿಯಲ್ಪಡುವರು. ಆಮೇಲೆ ಸ್ವಲ್ಪ ಕಾಲದ ನಂತರ ಅವರ ನ್ಯಾಯವಿಚಾರಣೆ ನಡಿಯುವದು.
ಯೆಶಾಯ 24 : 23 (ERVKN)
ಯೆಹೋವನು ಜೆರುಸಲೇಮಿನ ಚೀಯೋನ್ ಪರ್ವತದಿಂದ ರಾಜ್ಯವನ್ನಾಳುವನು. ಆತನ ಮಹಿಮೆಯು ಹಿರಿಯರ ಮುಂದಿರುವದು. ಆತನ ಮಹಿಮೆಯ ಪ್ರಕಾಶಕ್ಕೆ ಚಂದ್ರನು ನಾಚಿಕೊಳ್ಳುವನು; ಸೂರ್ಯನು ಲಜ್ಜೆಗೊಳ್ಳುವನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23