ಯೆಶಾಯ 26 : 1 (ERVKN)
{ದೇವರಿಗೆ ಸ್ತೋತ್ರ ಗೀತೆ} [PS] ಆ ಸಮಯದಲ್ಲಿ ಜನರು ಈ ಹಾಡನ್ನು ಯೆಹೂದದಲ್ಲಿ ಹಾಡುವರು: ಯೆಹೋವನು ನಮಗೆ ರಕ್ಷಣೆಯನ್ನು ಕೊಡುತ್ತಾನೆ. [QBR2] ನಮಗೆ ಬಲವಾದ ಪಟ್ಟಣವಿದೆ. ಅದಕ್ಕೆ ಬಲವಾದ ಗೋಡೆಗಳೂ ಕೋಟೆಗಳೂ ಇವೆ. [QBR]
ಯೆಶಾಯ 26 : 2 (ERVKN)
ದ್ವಾರಗಳನ್ನು ತೆರೆಯಿರಿ. ಒಳ್ಳೆಯ ಜನರು ಅದರಲ್ಲಿ ಪ್ರವೇಶಿಸುವರು. [QBR2] ಅವರು ದೇವರ ನಿಯಮಗಳನ್ನು ಅನುಸರಿಸುತ್ತಾರೆ.
ಯೆಶಾಯ 26 : 3 (ERVKN)
ಯೆಹೋವನೇ, ನಿನ್ನಲ್ಲಿ ಭರವಸವಿಟ್ಟವರಿಗೆ [QBR2] ನೀನು ನಿಜವಾದ ಸಮಾಧಾನವನ್ನು ಅನುಗ್ರಹಿಸುವೆ.
ಯೆಶಾಯ 26 : 4 (ERVKN)
ಆದ್ದರಿಂದ ಯೆಹೋವನ ಮೇಲೆ ಯಾವಾಗಲೂ ಭರವಸವಿಡಿರಿ. [QBR2] ಯಾಕೆಂದರೆ ನಿಮಗೆ ದೇವರಾದ ಯೆಹೋವನಲ್ಲಿ ಸುರಕ್ಷತೆಯ ಸ್ಥಳವಿದೆ. [QBR]
ಯೆಶಾಯ 26 : 5 (ERVKN)
ಆದರೆ ಯೆಹೋವನು ಗರ್ವದ ನಗರವನ್ನು ನಾಶಮಾಡುವನು. [QBR2] ಅಲ್ಲಿ ವಾಸಿಸುವವರನ್ನು ಆತನು ಶಿಕ್ಷಿಸುತ್ತಾನೆ. [QBR] ಯೆಹೋವನು ಆ ಉನ್ನತವಾದ ನಗರವನ್ನು ಧೂಳಿಗೆ ಹಾಕಿಬಿಡುವನು. [QBR2]
ಯೆಶಾಯ 26 : 6 (ERVKN)
ಅದು ಕಾಲುತುಳಿತಕ್ಕೆ ಈಡಾಗಿದೆ. [QBR] ಆಗ ದೀನರೂ ಬಡಜನರೂ ಆ ಅವಶೇಷಗಳ ಮೇಲೆ ನಡೆಯುವರು.
ಯೆಶಾಯ 26 : 7 (ERVKN)
ಪ್ರಾಮಾಣಿಕತೆಯು ಒಳ್ಳೆಯವರ ಜೀವನ ಶೈಲಿ. [QBR2] ಅವರು ನೇರವಾದ ಮತ್ತು ಸತ್ಯವಾದ ಮಾರ್ಗವನ್ನು ಅನುಸರಿಸುವರು. [QBR] ಯೆಹೋವನೇ, ನೀನು ಆ ಮಾರ್ಗವನ್ನು ಅನುಸರಿಸಲು [QBR2] ಸುಲಭವಾಗುವಂತೆ ಮಾಡುವೆ. [QBR]
ಯೆಶಾಯ 26 : 8 (ERVKN)
ಆದರೆ ಯೆಹೋವನೇ, ನಾವು ನಿನ್ನ ನ್ಯಾಯವಿಚಾರಣೆಯ ರೀತಿಗಾಗಿ ಕಾಯುತ್ತಿದ್ದೇವೆ. [QBR2] ನಮ್ಮ ಆತ್ಮಗಳು ನಿನ್ನನ್ನೂ ನಿನ್ನ ನಾಮವನ್ನೂ ನೆನಪು ಮಾಡುತ್ತವೆ. [QBR]
ಯೆಶಾಯ 26 : 9 (ERVKN)
ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. [QBR2] ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. [QBR] ಹೊಸ ದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. [QBR2] ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು. [QBR]
ಯೆಶಾಯ 26 : 10 (ERVKN)
ದುಷ್ಟರಿಗೆ ದಯೆತೋರಿಸಿದರೆ [QBR2] ಅವರು ಸುಕಾರ್ಯಗಳನ್ನು ಮಾಡಲು ಕಲಿಯುವುದಿಲ್ಲ. [QBR] ದುಷ್ಟರು ಯಥಾರ್ಥರ ಲೋಕದಲ್ಲಿ ಜೀವಿಸಿದರೂ ಅವರು ದುಷ್ಕೃತ್ಯಗಳನ್ನೇ ಮಾಡುವರು. [QBR2] ಆ ದುಷ್ಟರು ಯೆಹೋವನ ಮಹತ್ವವನ್ನು ಎಂದೂ ಗಮನಿಸಲಾರರು. [QBR]
ಯೆಶಾಯ 26 : 11 (ERVKN)
ಆದರೆ ದೇವರೇ, ನೀನು ಅವರನ್ನು ಶಿಕ್ಷಿಸಿದರೆ [QBR2] ಅವರು ಅದನ್ನು ನೋಡುವರು. [QBR] ನಿನ್ನ ಜನರ ಮೇಲೆ ನಿನಗಿರುವ ಗಾಢಪ್ರೀತಿಯನ್ನು ಆ ದುಷ್ಟಜನರು ನೋಡಲಿ. [QBR2] ಆಗ ಅವರು ಅವಮಾನ ಹೊಂದುವರು. [QBR2] ನಿನ್ನ ಶತ್ರುಗಳು ತಮ್ಮ ದುಷ್ಟತನದ ಬೆಂಕಿಯಲ್ಲಿಯೇ ಸುಟ್ಟುಹೋಗುವರು. [QBR]
ಯೆಶಾಯ 26 : 12 (ERVKN)
ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. [QBR2] ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.
ಯೆಶಾಯ 26 : 13 (ERVKN)
{ದೇವರು ತನ್ನ ಜನರಿಗೆ ಹೊಸ ಜೀವವನ್ನು ಕೊಡುವನು} [PS] ಯೆಹೋವನೇ, ನೀನೇ ನಮ್ಮ ದೇವರು. ಆದರೆ ಹಿಂದಿನ ಕಾಲದಲ್ಲಿ ನಾವು ಇತರ ಪ್ರಭುಗಳನ್ನು ಅನುಸರಿಸಿದೆವು. [QBR] ನಾವು ನಮ್ಮ ಒಡೆಯರುಗಳಿಗೆ ಸೇರಿದ್ದೆವು. [QBR2] ಆದರೆ ಈಗ ಜನರು ಒಂದೇ ಹೆಸರನ್ನು, ಅಂದರೆ ನಿನ್ನ ಹೆಸರನ್ನೇ ನೆನಪುಮಾಡಲಿ. [QBR]
ಯೆಶಾಯ 26 : 14 (ERVKN)
ಇತರ ದೇವರುಗಳಿಗೆ ಜೀವವಿಲ್ಲ. [QBR2] ಪ್ರೇತಗಳು ಸತ್ತವರೊಳಗಿಂದ ಏಳುವದಿಲ್ಲ. [QBR] ನೀನು ಅವುಗಳನ್ನು ನಾಶಮಾಡಲು ತೀರ್ಮಾನಿಸಿದೆ. [QBR2] ಅದರ ಬಗ್ಗೆ ನಮಗೆ ನೆನಪು ಹುಟ್ಟಿಸುವ ಎಲ್ಲಾ ವಿಚಾರಗಳನ್ನು ನೀನು ನಾಶಮಾಡಿದೆ. [QBR]
ಯೆಶಾಯ 26 : 15 (ERVKN)
ನೀನು ಪ್ರೀತಿಸುವ ಜನಾಂಗಕ್ಕೆ ನೀನು ಸಹಾಯ ಮಾಡಿದೆ. [QBR2] ಬೇರೆ ಜನಾಂಗದವರು ಅವರನ್ನು ಸೋಲಿಸದಂತೆ ಮಾಡಿದೆ. [QBR]
ಯೆಶಾಯ 26 : 16 (ERVKN)
ಯೆಹೋವನೇ, ಕಷ್ಟ ಬಂದಾಗ [QBR2] ಜನರಿಗೆ ನಿನ್ನ ನೆನಪಾಗುವುದು. [QBR] ನೀನು ಅವರನ್ನು ಶಿಕ್ಷಿಸಿದಾಗ [QBR2] ಅವರು ನಿನಗೆ ಮೌನ ಪ್ರಾರ್ಥನೆ ಮಾಡುವರು. [QBR]
ಯೆಶಾಯ 26 : 17 (ERVKN)
ಯೆಹೋವನೇ, ನಾವು ನಿನ್ನೊಂದಿಗೆ ಇಲ್ಲದಿರುವಾಗ [QBR2] ಪ್ರಸವವೇದನೆಯಿಂದ ನರಳುವ ಸ್ತ್ರೀಯರಂತಿದ್ದೇವೆ. [QBR]
ಯೆಶಾಯ 26 : 18 (ERVKN)
ಅದೇ ರೀತಿಯಲ್ಲಿ ನಾವು ನೋವನ್ನು ಅನುಭವಿಸುತ್ತೇವೆ. [QBR2] ನಾವು ಹೆರುವದು ಕೇವಲ ಗಾಳಿಯನ್ನೇ. [QBR] ನಾವು ಈ ಲೋಕದೊಳಗೆ ಹೊಸಜೀವಿಗಳನ್ನು ನಿರ್ಮಿಸುವದಿಲ್ಲ. [QBR2] ನಾವು ದೇಶಕ್ಕೆ ರಕ್ಷಣೆಯನ್ನು ತರುವದಿಲ್ಲ. [QBR]
ಯೆಶಾಯ 26 : 19 (ERVKN)
ಆದರೆ ಯೆಹೋವನು ಹೇಳುವುದೇನೆಂದರೆ, [QBR] “ನಿನ್ನ ಜನರು ಸತ್ತಿದ್ದಾರೆ. [QBR2] ಆದರೆ ಅವರು ಮತ್ತೆ ಬದುಕುವರು. [QBR] ನನ್ನ ಜನರ ದೇಹಗಳು [QBR2] ಸತ್ತವರೊಳಗಿಂದ ಏಳುವವು. [QBR] ಭೂಮಿಯ ಮೇಲೆ ಸತ್ತಿರುವ ಜನರೇ, [QBR2] ಎದ್ದುನಿಂತು ಸಂತೋಷಿಸಿರಿ. [QBR] ನಿಮ್ಮನ್ನು ಆವರಿಸಿದ ಮಂಜು [QBR2] ಮುಂಜಾನೆಯ ಬೆಳಕಿನಂತೆ ಪ್ರಕಾಶಿಸುತ್ತದೆ. [QBR] ಭೂಮಿಯು ತನ್ನಲ್ಲಿರುವ ಸತ್ತವರನ್ನು ಒಪ್ಪಿಸಿಕೊಡುವಾಗ [QBR2] ಪ್ರಾರಂಭವಾಗುವ ಹೊಸ ದಿನವನ್ನು ಅದು ಸೂಚಿಸುವದು.”
ಯೆಶಾಯ 26 : 20 (ERVKN)
{ಶಿಕ್ಷೆ ಅಥವಾ ಬಹುಮಾನ} [PS] ನನ್ನ ಜನರೇ, ನಿಮ್ಮ ನಿಮ್ಮ ಕೋಣೆಯೊಳಗೆ [QBR2] ಹೋಗಿ ಕದಮುಚ್ಚಿರಿ. [QBR] ಸ್ವಲ್ಪಕಾಲ ನೀವು ಅಲ್ಲಿಯೇ ಅಡಗಿಕೊಳ್ಳಿರಿ. [QBR2] ದೇವರ ಕೋಪ ತೀರುವ ತನಕ ಅಲ್ಲಿಯೇ ಅವಿತುಕೊಳ್ಳಿರಿ. [QBR]
ಯೆಶಾಯ 26 : 21 (ERVKN)
ಇಗೋ, ಈ ಲೋಕದ ಜನರು ಮಾಡಿದ ಪಾಪಕೃತ್ಯಗಳಿಗೆ [QBR2] ನ್ಯಾಯತೀರಿಸಲು ಯೆಹೋವನು ತನ್ನ ಸ್ಥಳದಿಂದ ಎದ್ದಿದ್ದಾನೆ. [QBR] ಭೂಮಿಯು ತನ್ನಲ್ಲಿರುವ ರಕ್ತವನ್ನು ತೋರಿಸುವದು. [QBR2] ಭೂಮಿಯು ಇನ್ನುಮುಂದೆ ಸತ್ತವರನ್ನು ಮರೆಮಾಡುವುದಿಲ್ಲ. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: