ಯೆಶಾಯ 38 : 1 (ERVKN)
ಹಿಜ್ಕೀಯನ ಅಸ್ವಸ್ಥತೆ ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’ ” ಎಂದು ಹೇಳಿದನು.
ಯೆಶಾಯ 38 : 2 (ERVKN)
ಹಿಜ್ಕೀಯನು ದೇವಾಲಯದ ಕಡೆಗಿರುವ ಗೋಡೆಯ ಕಡೆಗೆ ಮುಖ ಮಾಡಿ ದೇವರಿಗೆ,
ಯೆಶಾಯ 38 : 3 (ERVKN)
“ಯೆಹೋವನೇ, ನಾನು ನಿನಗೆ ಪೂರ್ಣಹೃದಯದಿಂದ ನಂಬಿಗಸ್ತನಾಗಿ ಸೇವೆಮಾಡಿದ್ದನ್ನು ಜ್ಞಾಪಿಸಿಕೋ. ನಿನಗೆ ಇಷ್ಟವಾದದ್ದನ್ನೆಲ್ಲ ನಾನು ಮಾಡಿದ್ದೇನೆ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.
ಯೆಶಾಯ 38 : 4 (ERVKN)
ಆಗ ಯೆಶಾಯನಿಗೆ ಈ ಸಂದೇಶವು ಯೆಹೋವನಿಂದ ಬಂದಿತು:
ಯೆಶಾಯ 38 : 5 (ERVKN)
“ಹಿಜ್ಕೀಯನ ಬಳಿಗೆ ಹೋಗಿ ಹೇಳು, ನಿನ್ನ ಪೂರ್ವಿಕನಾದ ದಾವೀದನ ದೇವರಾದ ಯೆಹೋವನು ಹೇಳುವುದೇನೆಂದರೆ: ‘ನಿನ್ನ ಪ್ರಾರ್ಥನೆಯನ್ನು ನಾನು ಕೇಳಿದೆನು; ನಿನ್ನ ಕಣ್ಣೀರನ್ನು ನೋಡಿದೆನು. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಸೇರಿಸಿದ್ದೇನೆ.
ಯೆಶಾಯ 38 : 6 (ERVKN)
ನಾನು ನಿನ್ನನ್ನೂ ಈ ಪಟ್ಟಣವನ್ನೂ ಕಾಪಾಡುವೆನು. ಅಶ್ಶೂರದ ಅರಸನಿಂದ ರಕ್ಷಿಸುವೆನು.’ ”
ಯೆಶಾಯ 38 : 7 (ERVKN)
“ದೇವರು ತಾನು ಹೇಳಿದ್ದನ್ನು ನೆರವೇರಿಸುತ್ತಾನೆ ಎಂಬುದಕ್ಕೆ ಗುರುತೇನೆಂದರೆ:
ಯೆಶಾಯ 38 : 8 (ERVKN)
ಇಗೋ, ಆಹಾಜನ ಮೆಟ್ಟಿಲಲ್ಲಿರುವ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಹೋಗುವಂತೆ ಮಾಡುವೆನು ಎಂದು ನಿನ್ನ ದೇವರಾಗಿರುವ ಯೆಹೋವನು ಹೇಳುತ್ತಾನೆಂಬದಾಗಿ ತಿಳಿಸು” ಎಂದು ಹೇಳಿದನು. ಅದರಂತೆ ಮೆಟ್ಟಿಲಲ್ಲಿರುವ ಸೂರ್ಯನ ನೆರಳು ಹತ್ತು ಮೆಟ್ಟಿಲು ಹಿಂದಕ್ಕೆ ಹೋಯಿತು.
ಯೆಶಾಯ 38 : 9 (ERVKN)
ಹಿಜ್ಕೀಯನ ಹಾಡು ಹಿಜ್ಕೀಯನು ತನ್ನ ಕಾಯಿಲೆಯಿಂದ ಗುಣಹೊಂದಿದ ಬಳಿಕ ಬರೆದ ಪತ್ರ:
ಯೆಶಾಯ 38 : 10 (ERVKN)
ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.
ಯೆಶಾಯ 38 : 11 (ERVKN)
ಅದಕ್ಕೆ ನಾನೆಂದೆ: “ಇನ್ನು ಮೇಲೆ ಜೀವಿತರ ಲೋಕದಲ್ಲಿ ಇನ್ನು ದೇವರಾದ ಯೆಹೋವನನ್ನು ನೋಡುವದಿಲ್ಲ. ಇನ್ನು ಮೇಲೆ ಜನರು ಲೋಕದಲ್ಲಿ ಜೀವಿಸುವದನ್ನು ನಾನು ನೋಡುವದಿಲ್ಲ.
ಯೆಶಾಯ 38 : 12 (ERVKN)
ನನ್ನ ಮನೆಯು ಅಂದರೆ ನನ್ನ ಕುರುಬನ ಗುಡಾರವು ಕೀಳಲ್ಪಟ್ಟು ನನ್ನಿಂದ ತೆಗೆಯಲ್ಪಡುತ್ತಿದೆ. ಒಬ್ಬನು ಮಗ್ಗದಲ್ಲಿ ಬಟ್ಟೆಯನ್ನು ಸುತ್ತಿ ಕತ್ತರಿಸಿಬಿಡುವಂತೆ ನಾನು ಕತ್ತರಿಸಲ್ಪಟ್ಟಿದ್ದೇನೆ. ನನ್ನ ಆಯುಷ್ಯವನ್ನು ಚಿಕ್ಕ ವಯಸ್ಸಿನಲ್ಲಿಯೇ ಮುಗಿಸಿಬಿಟ್ಟಿರುವೆ.
ಯೆಶಾಯ 38 : 13 (ERVKN)
ಇಡೀರಾತ್ರಿ ನಾನು ಸಿಂಹದಂತೆ ಗರ್ಜಿಸಿದೆನು. ಆದರೆ ಸಿಂಹವು ಎಲುಬುಗಳನ್ನು ಜಗಿದು ಪುಡಿಮಾಡುವಂತೆ ನನ್ನ ನಿರೀಕ್ಷೆಯೆಲ್ಲಾ ಜಜ್ಜಿಹೋಯಿತು.
ನೀನು ನನ್ನ ಜೀವಿತವನ್ನು ಅಷ್ಟು ಅಲ್ಪಕಾಲಕ್ಕೇ ಕೊನೆಗೊಳಿಸಿದೆ!
ಯೆಶಾಯ 38 : 14 (ERVKN)
ನಾನು ಪಾರಿವಾಳದಂತೆ ಕೂಗಿಕೊಂಡೆನು. ಪಕ್ಷಿಯಂತೆ ಅರಚಿಕೊಂಡೆನು.
ನನ್ನ ಕಣ್ಣುಗಳು ಸ್ವರ್ಗದ ಕಡೆಗೆ ನೋಡುತ್ತಾ ಆಯಾಸಗೊಂಡವು.
ನನ್ನ ಒಡೆಯನೇ, ನಾನು ತುಂಬಾ ಚಿಂತಾಕ್ರಾಂತನಾಗಿದ್ದೇನೆ. ನೀನು ನನಗೆ ಸಹಾಯ ಮಾಡುವುದಾಗಿ ವಾಗ್ದಾನ ಮಾಡು.”
ಯೆಶಾಯ 38 : 15 (ERVKN)
ನಾನೇನು ಹೇಳಲಿ? ನನಗೆ ಸಂಭವಿಸಲಿರುವುದನ್ನು ನನ್ನ ಒಡೆಯನು ತಿಳಿಸಿದ್ದಾನೆ. ನನ್ನ ಒಡೆಯನು ಅದನ್ನು ನೆರವೇರಿಸುತ್ತಾನೆ.
ನನ್ನ ಆತ್ಮದಲ್ಲಿ ಸಂಕಟಗಳೆಲ್ಲಾ ತುಂಬಿವೆ. ನಾನು ನನ್ನ ಜೀವಮಾನವೆಲ್ಲಾ ದೀನನಾಗುವೆನು.
ಯೆಶಾಯ 38 : 16 (ERVKN)
ನನ್ನ ಒಡೆಯನೇ, ನನ್ನ ಆತ್ಮವು ಪುನರುಜ್ಜೀವಿಸುವಂತೆ ಮಾಡು. ನನ್ನ ಆತ್ಮವು ಬಲಗೊಂಡು ಆರೋಗ್ಯದಾಯಕವಾಗುವಂತೆ ಸಹಾಯಮಾಡು. ನಾನು ತಿರುಗಿ ಸ್ವಸ್ಥತೆ ಹೊಂದುವಂತೆ ಮಾಡು. ನಾನು ಮತ್ತೆ ಜೀವಿಸುವಂತೆ ಮಾಡು.
ಯೆಶಾಯ 38 : 17 (ERVKN)
ಇಗೋ, ನನ್ನ ಸಂಕಟವೆಲ್ಲಾ ಹೊರಟುಹೋಯಿತು. ನನಗೀಗ ಸಮಾಧಾನವಿದೆ.
ನೀನು ನನ್ನನ್ನು ಬಹಳವಾಗಿ ಪ್ರೀತಿಸುವದರಿಂದ ನನ್ನ ಶರೀರವು ಸಮಾಧಿಯಲ್ಲಿ ಕೊಳೆಯುವಂತೆ ಮಾಡಲಿಲ್ಲ.
ನೀನು ನನ್ನ ಪಾಪಗಳನ್ನು ಕ್ಷಮಿಸಿದೆ. ನನ್ನ ಪಾಪಗಳನ್ನು ಬಹುದೂರ ಬಿಸಾಡಿದೆ.
ಯೆಶಾಯ 38 : 18 (ERVKN)
ಸತ್ತವರು ನಿನ್ನನ್ನು ಸ್ತುತಿಸುವದಿಲ್ಲ. ಪಾತಾಳದಲ್ಲಿರುವ ಜನರು ನಿನ್ನನ್ನು ಸ್ತುತಿಸುವದಿಲ್ಲ.
ಸತ್ತುಹೋದವರು ಸಹಾಯಕ್ಕಾಗಿ ನಿನ್ನ ಮೇಲೆ ಭರವಸವಿಡರು. ಅವರು ಭೂಮಿಯಲ್ಲಿರುವ ಆಳವಾದ ಕುಣಿಗೆ ಸೇರುವರು. ಅವರು ತಿರುಗಿ ಮಾತನಾಡುವದೇ ಇಲ್ಲ.
ಯೆಶಾಯ 38 : 19 (ERVKN)
ನನ್ನ ಹಾಗೆ ಈ ದಿನ ಜೀವಿಸುವವರೆಲ್ಲಾ ನಿನ್ನನ್ನು ಕೊಂಡಾಡುವರು. ತಂದೆಯು ತನ್ನ ಮಕ್ಕಳಿಗೆ ನಿನ್ನ ಮೇಲೆ ಭರವಸವಿಡಲು ಕಲಿಸುವರು.
ಯೆಶಾಯ 38 : 20 (ERVKN)
ನಾನು ಹೇಳುವುದೇನೆಂದರೆ: “ಯೆಹೋವನು ನನ್ನನ್ನು ರಕ್ಷಿಸಿದನು. ನಮ್ಮ ಜೀವಮಾನದ ಕಾಲವೆಲ್ಲಾ ಯೆಹೋವನ ಆಲಯದಲ್ಲಿ ನಾವು ಹಾಡುತ್ತಾ ವಾದ್ಯಬಾರಿಸುತ್ತಾ ಆತನನ್ನು ಸ್ತುತಿಸುವೆವು.”
ಯೆಶಾಯ 38 : 21 (ERVKN)
ಆಗ ಯೆಶಾಯನು ಹಿಜ್ಕೀಯನಿಗೆ, “ನೀನು ಅಂಜೂರದ ಉಂಡೆ ಮಾಡಿ ಅದನ್ನು ನಿನ್ನ ಗಾಯದ ಮೇಲಿಡು. ಆಗ ನೀನು ಗುಣಹೊಂದುವೆ” ಎಂದು ಹೇಳಿದನು. *ಈ ವಚನಗಳು ಕ್ರಮವಾಗಿ ಹೀಬ್ರೂ ಪ್ರತಿಯಲ್ಲಿ ಅಧ್ಯಾಯದ ಕೊನೆಯಲ್ಲಿ ಬರೆಯಲ್ಲಟ್ಟಿವೆ.
ಯೆಶಾಯ 38 : 22 (ERVKN)
ಆಗ ಹಿಜ್ಕೀಯನು ಯೆಶಾಯನಿಗೆ, “ನಾನು ಸ್ವಸ್ಥ ಹೊಂದುವೆನೆಂಬುದಕ್ಕೆ ಗುರುತೇನು? ನಾನು ದೇವರ ಆಲಯಕ್ಕೆ ಮತ್ತೆ ಹೋಗುವೆನೆಂಬುದಕ್ಕೆ ಗುರುತೇನು?” ಎಂದು ಕೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22