ಯೆಶಾಯ 52 : 1 (ERVKN)
{ಇಸ್ರೇಲ್ ರಕ್ಷಿಸಲ್ಪಡುವದು} [PS] ಚೀಯೋನೇ, ಎಚ್ಚರಗೊಳ್ಳು, ಎದ್ದೇಳು! [QBR2] ನಿನ್ನ ಉಡುಪನ್ನು ಹಾಕಿಕೊ; ನಿನ್ನ ಪ್ರತಾಪವನ್ನು ಧರಿಸಿಕೊ. [QBR] ಪರಿಶುದ್ಧ ಜೆರುಸಲೇಮೇ, ಎದ್ದುನಿಲ್ಲು. [QBR2] ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನಲ್ಲಿಗೆ ಮತ್ತೇ ಪ್ರವೇಶಿಸರು. [QBR]
ಯೆಶಾಯ 52 : 2 (ERVKN)
ನಿನ್ನ ಧೂಳನ್ನು ಝಾಡಿಸು. [QBR] ನಿನ್ನ ಮನೋಹರವಾದ ವಸ್ತ್ರಗಳನ್ನು ಧರಿಸಿಕೊ. [QBR2] ಚೀಯೋನಿನ ಕುಮಾರ್ತೆಯಾದ ಜೆರುಸಲೇಮೇ, ನೀನು ಒಮ್ಮೆ ಸೆರೆಯಾಳಾಗಿದ್ದೆ. [QBR2] ಈಗ ನೀನು ನಿನ್ನ ಕುತ್ತಿಗೆಗೆ ಬಂಧಿಸಲ್ಪಟ್ಟ ಸಂಕೋಲೆಗಳಿಂದ ಬಿಡಿಸಿಕೊ. [QBR]
ಯೆಶಾಯ 52 : 3 (ERVKN)
ಯೆಹೋವನು ಹೇಳುವುದೇನೆಂದರೆ: [QBR2] “ನಾನು ನಿನ್ನನ್ನು ಮಾರಿದ್ದು ಹಣಕ್ಕಾಗಿಯಲ್ಲ; [QBR2] ಆದ್ದರಿಂದ ನಾನು ನಿನ್ನನ್ನು ಹಣ ಕೊಡದೆ ಬಿಡುಗಡೆ ಮಾಡುವೆನು.” [PS]
ಯೆಶಾಯ 52 : 4 (ERVKN)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: “ನನ್ನ ಜನರು ಮೊದಲು ಈಜಿಪ್ಟಿನಲ್ಲಿ ನೆಲೆಸಲು ಹೋಗಿ, ನಂತರ ಅಲ್ಲಿ ಅವರು ದಾಸರಾದರು. ಆ ಬಳಿಕ ಅಶ್ಶೂರವು ಅವರನ್ನು ಗುಲಾಮರನ್ನಾಗಿ ಮಾಡಿತು.
ಯೆಶಾಯ 52 : 5 (ERVKN)
ಈಗ ನೋಡು, ಸಂಭವಿಸಿದ್ದನ್ನು ಗಮನಿಸು. ಇನ್ನೊಂದು ಜನಾಂಗವು ಅವರನ್ನು ಗುಲಾಮರನ್ನಾಗಿ ಮಾಡಿತು. ಈ ದೇಶವು ನನ್ನ ಜನರನ್ನು ತೆಗೆದುಕೊಂಡು ಹೋಗಲು ಹಣ ಕೊಡಲಿಲ್ಲ. ಈ ದೇಶವು ನನ್ನ ಜನರ ಮೇಲೆ ದಬ್ಬಾಳಿಕೆ ನಡಿಸಿ ನಕ್ಕಿತ್ತು. ಈಗ ಜನರು ನನ್ನನ್ನೂ ನನ್ನ ಹೆಸರನ್ನೂ ಯಾವಾಗಲೂ ಗೇಲಿ ಮಾಡುತ್ತಾರೆ.” [PE][PS]
ಯೆಶಾಯ 52 : 6 (ERVKN)
ಯೆಹೋವನು ಹೇಳುವುದೇನೆಂದರೆ, “ಜನರು ನನ್ನನ್ನು ತಿಳಿದುಕೊಳ್ಳಲೆಂದು ಹೀಗಾಯಿತು. ನಾನು ಯಾರೆಂದು ನನ್ನ ಜನರಿಗೆ ಗೊತ್ತಾಗುವದು. ನನ್ನ ಜನರಿಗೆ ನನ್ನ ಹೆಸರಿನ ಪರಿಚಯವಾಗುವದು. ‘ನಾನೇ’ ಎಂಬಾತನಾದ ನಾನೇ ಅವರ ಸಂಗಡ ಮಾತನಾಡುತ್ತಿದ್ದೇನೆ ಎಂದು ಅವರಿಗೆ ಗೊತ್ತಾಗುವದು.” [PE][PS]
ಯೆಶಾಯ 52 : 7 (ERVKN)
ಒಬ್ಬ ಸಂದೇಶವಾಹಕನು ಬೆಟ್ಟದ ಮೇಲಿನಿಂದ ಒಳ್ಳೆಯ ಸಮಾಚಾರವನ್ನು ತರುವದು ಎಷ್ಟೋ ಅಂದವಾಗಿದೆ. ಸಂದೇಶಕಾರನು, “ನಮಗೆ ಸಮಾಧಾನವಿದೆ, ನಾವು ರಕ್ಷಿಸಲ್ಪಟ್ಟಿದ್ದೇವೆ. ಚೀಯೋನೇ, ನಿನ್ನ ದೇವರು ಅರಸನಾಗಿದ್ದಾನೆ!” ಎಂಬ ಸಂದೇಶವನ್ನು ಕೇಳುವದು ಎಷ್ಟೋ ಸಂತೋಷ ಕೊಡುವದಾಗಿದೆ.
ಯೆಶಾಯ 52 : 8 (ERVKN)
ಪಟ್ಟಣವನ್ನು ಕಾಯುವವರು ಸಂತೋಷದಿಂದ ಹರ್ಷಧ್ವನಿ ಮಾಡುತ್ತಾರೆ. [QBR2] ಒಟ್ಟಾಗಿ ಸಂತಸಪಡುತ್ತಿದ್ದಾರೆ. [QBR] ಯಾಕೆಂದರೆ ಯೆಹೋವನು ಚೀಯೋನಿಗೆ ಹಿಂದಿರುಗುವದನ್ನು ಪ್ರತಿಯೊಬ್ಬನು ನೋಡುವನು.
ಯೆಶಾಯ 52 : 9 (ERVKN)
ಜೆರುಸಲೇಮೇ, ನಿನ್ನ ಕೆಡವಲ್ಪಟ್ಟ ಕಟ್ಟಡಗಳು ಮತ್ತೆ ಸಂತೋಷಿಸುವವು. [QBR] ನೀವೆಲ್ಲರೂ ಒಟ್ಟಾಗಿ ಹರ್ಷಿಸುವಿರಿ. [QBR2] ಯಾಕೆಂದರೆ ಯೆಹೋವನು ಜೆರುಸಲೇಮನ್ನು ಬಿಡಿಸಿ ತನ್ನ ಜನರನ್ನು ಸಂತೈಸುವನು. [QBR]
ಯೆಶಾಯ 52 : 10 (ERVKN)
ಯೆಹೋವನು ತನ್ನ ಪರಿಶುದ್ಧ ಸಾಮರ್ಥ್ಯವನ್ನು ಎಲ್ಲಾ ಜನಾಂಗಗಳಿಗೆ ಪ್ರದರ್ಶಿಸುವನು. [QBR2] ಯೆಹೋವನು ತನ್ನ ಜನರನ್ನು ರಕ್ಷಿಸುವದನ್ನು ದೂರದೇಶದವರು ನೋಡುವರು.
ಯೆಶಾಯ 52 : 11 (ERVKN)
ನೀವು ಬಾಬಿಲೋನಿನಿಂದ ಹೊರಟುಹೋಗಬೇಕು; [QBR2] ನೀವು ಆ ಸ್ಥಳವನ್ನು ಬಿಟ್ಟುಹೋಗಬೇಕು. [QBR] ಯಾಜಕರೇ, ಆರಾಧನೆಗೆ ಬೇಕಾದ ಸಾಮಗ್ರಿಗಳನ್ನು ಹೊತ್ತುಕೊಳ್ಳಿರಿ. [QBR2] ನಿಮ್ಮನ್ನು ಶುದ್ಧಿ ಮಾಡಿಕೊಳ್ಳಿರಿ; [QBR2] ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. [QBR]
ಯೆಶಾಯ 52 : 12 (ERVKN)
ನೀವು ಬಾಬಿಲೋನಿನಿಂದ ಹೊರಗೆ ಬರುವಿರಿ. [QBR2] ತ್ವರೆಪಟ್ಟು ಬರುವಂತೆ ಅವರು ಬಲವಂತ ಮಾಡುವದಿಲ್ಲ. ನೀವು ಓಡಿ ಹೋಗುವಂತೆ ಅವರು ಒತ್ತಾಯಪಡಿಸುವದಿಲ್ಲ. [QBR2] ನೀವು ಹೊರಗೆ ನಡೆಯುವಿರಿ. [QBR] ಯೆಹೋವನು ನಿಮ್ಮೊಂದಿಗೆ ನಡೆಯುವನು. ಯೆಹೋವನು ನಿಮ್ಮ ಮುಂದೆ ಇರುವನು. [QBR2] ಇಸ್ರೇಲರ ದೇವರು ನಿಮ್ಮ ಹಿಂದೆಯೂ ಇರುವನು. [PS]
ಯೆಶಾಯ 52 : 13 (ERVKN)
{ದೇವಸೇವಕನ ಸಂಕಟ} [PS] ಯೆಹೋವನು ಹೇಳುವುದೇನೆಂದರೆ, “ನನ್ನ ಸೇವಕನನ್ನು ದೃಷ್ಟಿಸಿರಿ. ಆತನು ಯಶಸ್ವಿಯಾಗುವನು. ಅವನು ಬಹಳ ಮುಖ್ಯವಾದವನಾಗಿರುವನು. ಮುಂದಿನ ದಿವಸಗಳಲ್ಲಿ ಜನರು ಆತನನ್ನು ಸನ್ಮಾನಿಸಿ ಗೌರವಿಸುವರು.
ಯೆಶಾಯ 52 : 14 (ERVKN)
ಆದರೆ ನನ್ನ ಜನರು ನನ್ನ ಸೇವಕನನ್ನು ನೋಡಿದಾಗ ಆಶ್ಚರ್ಯಗೊಂಡರು. ಆತನು ಮನುಷ್ಯನೆಂಬ ಗುರುತೇ ಅವರಿಗೆ ಸಿಕ್ಕಲಿಲ್ಲ. ಆತನ ರೂಪವು ವಿಕಾರವಾಗುವಷ್ಟರ ಮಟ್ಟಿಗೆ ಆತನು ಗಾಯಗೊಂಡಿದ್ದನು.
ಯೆಶಾಯ 52 : 15 (ERVKN)
ಅನೇಕ ಜನಾಂಗಗಳವರು ಆತನನ್ನು ಕಂಡು ಆಶ್ಚರ್ಯಪಡುವರು. ಅರಸರು ದಿಗ್ಭ್ರಮೆಯಿಂದ ಆತನನ್ನು ದೃಷ್ಟಿಸಿ ನೋಡುವರು. ಅವರು ನನ್ನ ಸೇವಕನ ಬಗ್ಗೆ ಕೇಳಲಿಲ್ಲ. ಆತನಿಗೆ ಸಂಭವಿಸಿದ್ದನ್ನೇ ನೋಡಿದರು. ಅವರು ಆತನ ವಿಚಾರ ಕೇಳದಿದ್ದರೂ ಅವರಿಗೆ ತಿಳಿದುಬಂತು.” [PE]

1 2 3 4 5 6 7 8 9 10 11 12 13 14 15

BG:

Opacity:

Color:


Size:


Font: