ಯೆಶಾಯ 64 : 1 (ERVKN)
ನೀನು ಆಕಾಶವನ್ನು ಹರಿದು ಕೆಳಗೆ ಭೂಮಿಗಿಳಿದು ಬರುವದಾದರೆ [QBR2] ಎಲ್ಲವೂ ಬದಲಾಗುವದು. [QBR2] ಪರ್ವತಗಳು ನಿನ್ನ ಎದುರು ಕರಗಿಹೋಗುವವು. [QBR]
ಯೆಶಾಯ 64 : 2 (ERVKN)
ಒಣಎಲೆಯು ಸುಟ್ಟುಹೋಗುವಂತೆ ಪರ್ವತಗಳು ಸುಟ್ಟು ಭಸ್ಮವಾಗುವವು. [QBR2] ಬೆಂಕಿಯಲ್ಲಿ ನೀರು ಕುದಿಯುವಂತೆ ಪರ್ವತಗಳು ಕುದಿಯುವವು. [QBR] ಆಗ ನಿನ್ನ ಶತ್ರುಗಳು ನಿನ್ನ ವಿಷಯವಾಗಿ ತಿಳಿಯುವರು. [QBR2] ಆಗ ಜನಾಂಗದವರೆಲ್ಲಾ ನಿನ್ನನ್ನು ನೋಡಿ ಭಯದಿಂದ ನಡುಗುವರು. [QBR]
ಯೆಶಾಯ 64 : 3 (ERVKN)
ಆದರೆ ನೀನು ಹೀಗೆ ಮಾಡುವುದು ನಿಜವಾಗಿಯೂ ನಮಗಿಷ್ಟವಿಲ್ಲ. [QBR2] ಪರ್ವತಗಳು ನಿನ್ನೆದುರು ಕರಗಿಹೋದರೂ [QBR]
ಯೆಶಾಯ 64 : 4 (ERVKN)
ನಿನ್ನ ಜನರು ನಿನಗೆ ಕಿವಿಗೊಡಲಿಲ್ಲ. [QBR2] ನೀನು ಹೇಳಿದ್ದನ್ನು ನಿನ್ನ ಜನರು ನಿಜವಾಗಿಯೂ ಕೇಳಲಿಲ್ಲ. [QBR] ನಿನ್ನಂಥ ದೇವರನ್ನು ಯಾರೂ ನೋಡಿಲ್ಲ. ನಿನ್ನ ಹೊರತು ಬೇರೆ ಯಾರೂ ದೇವರಿಲ್ಲ. [QBR2] ಜನರು ತಾಳ್ಮೆಯಿಂದಿದ್ದು ನಿನ್ನ ಸಹಾಯಕ್ಕಾಗಿ ಕಾದಿದ್ದರೆ [QBR2] ನೀನು ಅವರಿಗಾಗಿ ಮಹಾಕಾರ್ಯಗಳನ್ನು ಮಾಡುವೆ.
ಯೆಶಾಯ 64 : 5 (ERVKN)
ಒಳ್ಳೆಯದನ್ನು ಮಾಡುವದರಲ್ಲಿ ಸಂತೋಷಪಡುವವರೊಂದಿಗೆ ನೀನಿರುವೆ. [QBR2] ಅವರು ನಿನ್ನ ಮಾರ್ಗಗಳನ್ನು ನೆನಪಿನಲ್ಲಿಡುತ್ತಾರೆ. [QBR] ಇಗೋ, ಗತಿಸಿದ ದಿವಸಗಳಲ್ಲಿ ನಾವು ನಿನಗೆ ವಿರುದ್ಧವಾಗಿ ಪಾಪಮಾಡಿದೆವು. [QBR2] ಆದ್ದರಿಂದ ನೀನು ನಮ್ಮ ಮೇಲೆ ಕೋಪಗೊಂಡೆ. [QBR2] ಈಗ ನಾವು ಹೇಗೆ ರಕ್ಷಿಸಲ್ಪಡುವೆವು? [QBR]
ಯೆಶಾಯ 64 : 6 (ERVKN)
ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. [QBR2] ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. [QBR] ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. [QBR2] ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ. [QBR]
ಯೆಶಾಯ 64 : 7 (ERVKN)
ನಿನ್ನ ಹೆಸರನ್ನು ಯಾರೂ ಕರೆಯುವದಿಲ್ಲ. [QBR2] ನಿನ್ನನ್ನು ಹಿಂಬಾಲಿಸಲು ಯಾರಿಗೂ ಇಷ್ಟವಿಲ್ಲ; [QBR] ಯಾಕೆಂದರೆ ನೀನು ನಮಗೆ ವಿಮುಖನಾಗಿರುವೆ [QBR2] ಮತ್ತು ನಮ್ಮನ್ನು ನಮ್ಮ ಪಾಪಗಳ ದೋಷಕ್ಕೆ ಒಪ್ಪಿಸಿಕೊಟ್ಟಿರುವಿ. [QBR]
ಯೆಶಾಯ 64 : 8 (ERVKN)
ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. [QBR2] ನಾವು ಜೇಡಿಮಣ್ಣಿನಂತಿದ್ದೇವೆ. [QBR] ನೀನಾದರೋ ಕುಂಬಾರನಾಗಿರುವೆ. [QBR2] ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು. [QBR]
ಯೆಶಾಯ 64 : 9 (ERVKN)
ಯೆಹೋವನೇ, ನಮ್ಮ ಮೇಲೆ ಸಿಟ್ಟಿನಿಂದಲೇ ಇರಬೇಡ. [QBR2] ನಮ್ಮ ಪಾಪಗಳನ್ನು ನಿನ್ನ ನೆನಪಿನಲ್ಲಿಟ್ಟುಕೊಂಡೇ ಇರಬೇಡ. [QBR] ದಯಮಾಡಿ ನಮ್ಮ ಕಡೆಗೆ ನೋಡು. [QBR2] ನಾವು ನಿನ್ನ ಜನರೇ. [QBR]
ಯೆಶಾಯ 64 : 10 (ERVKN)
ನಿನ್ನ ಪವಿತ್ರ ಪಟ್ಟಣಗಳು ಜನಶೂನ್ಯವಾಗಿವೆ. ಆ ಪಟ್ಟಣಗಳು ಈಗ ಮರುಭೂಮಿಯಂತಿವೆ. [QBR2] ಚೀಯೋನು ಈಗ ಮರುಭೂಮಿಯಾಗಿದೆ. [QBR2] ಜೆರುಸಲೇಮ್ ನಿರ್ಜನವಾಗಿದೆ. [QBR]
ಯೆಶಾಯ 64 : 11 (ERVKN)
ನಮ್ಮ ಪವಿತ್ರ ಆಲಯವು ಬೆಂಕಿಯಿಂದ ಸುಡಲ್ಪಟ್ಟಿದೆ. [QBR2] ಆ ದೇವಾಲಯವು ನಮಗೆ ಅತ್ಯಂತ ಅಮೂಲ್ಯವಾದದ್ದಾಗಿದೆ. [QBR] ನಮ್ಮ ಪೂರ್ವಿಕರು ನಿನ್ನನ್ನು ಅಲ್ಲಿ ಆರಾಧಿಸಿದರು. [QBR2] ನಾವು ಹೊಂದಿದಂಥ ಎಲ್ಲಾ ಒಳ್ಳೆಯವುಗಳು ಈಗ ನಾಶವಾದವು. [QBR]
ಯೆಶಾಯ 64 : 12 (ERVKN)
ನಮ್ಮ ಮೇಲೆ ನಿನ್ನ ಪ್ರೀತಿಯನ್ನು ತೋರಿಸಲು ಇವುಗಳು ಯಾವಾಗಲೂ ನಿನಗೆ ಅಡ್ಡಿಮಾಡುತ್ತವೋ? [QBR2] ನಮ್ಮೊಂದಿಗೆ ಮಾತನಾಡದೆ ಇನ್ನೂ ಇರುವಿಯೋ? [QBR2] ನಮ್ಮನ್ನು ಸದಾಕಾಲ ನೀನು ಶಿಕ್ಷಿಸುವಿಯೋ? [PE]
❮
❯
1
2
3
4
5
6
7
8
9
10
11
12