ಯಾಕೋಬನು 1 : 1 (ERVKN)
ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.
ಯಾಕೋಬನು 1 : 2 (ERVKN)
ನಂಬಿಕೆ ಮತ್ತು ಜ್ಞಾನ ನನ್ನ ಸಹೋದರ ಸಹೋದರಿಯರೇ, ನಿಮಗೆ ಅನೇಕ ತೊಂದರೆಗಳು ಬರುತ್ತವೆ. ಆದರೆ ಅವುಗಳು ಬಂದಾಗ ನೀವು ಬಹಳ ಸಂತೋಷಪಡಬೇಕು.
ಯಾಕೋಬನು 1 : 3 (ERVKN)
ಏಕೆಂದರೆ ಅವುಗಳು ನಿಮ್ಮ ನಂಬಿಕೆಯನ್ನು ಪರಿಶೋಧಿಸಲು ಬಂದಿವೆ ಎಂಬುದು ನಿಮಗೆ ತಿಳಿದದೆ. ಅವು ನಿಮ್ಮಲ್ಲಿ ತಾಳ್ಮೆಯನ್ನು ಉಂಟುಮಾಡುತ್ತವೆ.
ಯಾಕೋಬನು 1 : 4 (ERVKN)
ತಾಳ್ಮೆಯು ತನ್ನ ಕಾರ್ಯವನ್ನು ಪೂರೈಸಲಿ. ಆಗ ನೀವು ನಿಷ್ಕಳಂಕರೂ ಮತ್ತು ಪರಿಪೂರ್ಣರೂ ಆಗುವಿರಿ ಮತ್ತು ನಿಮಗೆ ಬೇಕಾದುದೆಲ್ಲವೂ ದೊರೆಯುವುದು.
ಯಾಕೋಬನು 1 : 5 (ERVKN)
ಆದರೆ ನಿಮ್ಮಲ್ಲಿ ಯಾರಿಗಾದರೂ ಜ್ಞಾನವು ಬೇಕಾಗಿದ್ದರೆ ಅಂಥವರು ದೇವರಲ್ಲಿ ಕೇಳಿಕೊಳ್ಳಲಿ. ದೇವರು ಉದಾರಿಯಾಗಿರುವುದರಿಂದ ಮತ್ತು ಎಲ್ಲಾ ಜನರಿಗೆ ಸಂತೋಷದಿಂದ ಕೊಡುವುದರಿಂದ ನಿಮಗೆ ಜ್ಞಾನವನ್ನು ದಯಪಾಲಿಸುತ್ತಾನೆ.
ಯಾಕೋಬನು 1 : 6 (ERVKN)
ಆದರೆ ನೀವು ದೇವರನ್ನು ಕೇಳಿಕೊಳ್ಳುವಾಗ ಆತನಲ್ಲಿ ನಿಮಗೆ ನಂಬಿಕೆಯಿರಬೇಕು. ದೇವರ ಬಗ್ಗೆ ಸಂದೇಹಪಡದಿರಿ. ಸಂದೇಹಪಡುವವನು ಸಾಗರದಲ್ಲಿನ ಅಲೆಯಂತಿದ್ದಾನೆ. ಗಾಳಿಯು ಬೀಸಿದಾಗ ಅಲೆಯು ಮೇಲೆದ್ದು ಬೀಳುತ್ತದೆ. ಸಂದೇಹಪಡುವವನು ಆ ಅಲೆಯಂತಿರುವನು.
ಯಾಕೋಬನು 1 : 7 (ERVKN)
(7-8) ಅವನು ಒಂದೇ ಕಾಲದಲ್ಲಿ ಎರಡು ರೀತಿಯ ಸಂಗತಿಗಳನ್ನು ಯೋಚಿಸುತ್ತಾನೆ. ಅವನು ತಾನು ಮಾಡುವ ಯಾವುದೇ ಕಾರ್ಯದಲ್ಲಾಗಲಿ ಒಂದು ತೀರ್ಮಾನಕ್ಕೆ ಬರಲಾರನು. ಅಂಥವನು ತನಗೆ ಪ್ರಭುವಿನಿಂದ ಏನಾದರೂ ದೊರೆಯುತ್ತದೆ ಎಂದು ಯೋಚಿಸದಿರಲಿ.
ಯಾಕೋಬನು 1 : 8 (ERVKN)
ಯಾಕೋಬನು 1 : 9 (ERVKN)
ನಿಜ ಶ್ರೀಮಂತಿಕೆ ಬಡವನಾಗಿರುವ ವಿಶ್ವಾಸಿಯು ಹೆಮ್ಮೆಪಡಲಿ, ಏಕೆಂದರೆ ದೇವರು ಅವನನ್ನು ಆತ್ಮಿಕ ವಿಷಯದಲ್ಲಿ ಐಶ್ವರ್ಯವಂತನನ್ನಾಗಿ ಮಾಡಿದ್ದಾನೆ.
ಯಾಕೋಬನು 1 : 10 (ERVKN)
ಐಶ್ವರ್ಯವಂತನಾಗಿರುವ ವಿಶ್ವಾಸಿಯೂ ಹೆಮ್ಮೆಪಡಬೇಕು. ಏಕೆಂದರೆ ಆತ್ಮಿಕ ವಿಷಯದಲ್ಲಿ ಅವನಿಗಿರುವ ಬಡತನವನ್ನು ದೇವರು ಅವನಿಗೆ ತೋರಿಸಿಕೊಟ್ಟಿದ್ದಾನೆ. ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸುವನು.
ಯಾಕೋಬನು 1 : 11 (ERVKN)
ಸೂರ್ಯನು ಮೇಲೇರಿದಂತೆ ಬಿಸಿಲು ಹೆಚ್ಚಾಗುವುದು. ಸೂರ್ಯನ ತಾಪದಿಂದ ಗಿಡಗಳು ಒಣಗಿಹೋಗುವವು; ಹೂವುಗಳು ಉದುರಿ ಹೋಗುವವು. ಹೂವು ಸುಂದರವಾಗಿತ್ತು, ಆದರೆ ಈಗ ಅದು ಒಣಗಿಹೋಯಿತು. ಐಶ್ವರ್ಯವಂತನಿಗೂ ಇದೇ ರೀತಿಯಾಗುವುದು. ಅವನು ತನ್ನ ವ್ಯಾಪಾರದ ಬಗ್ಗೆ ಯೋಜನೆಗಳನ್ನು ಮಾಡುತ್ತಿರುವಾಗಲೇ ಸತ್ತುಹೋಗುವನು.
ಯಾಕೋಬನು 1 : 12 (ERVKN)
ಶೋಧನೆಯು ದೇವರಿಂದ ಬರುವುದಿಲ್ಲ ಶೋಧನೆಯನ್ನು ಎದುರಿಸುತ್ತಿದ್ದರೂ ದೃಢವಾಗಿರುವವನೇ ಧನ್ಯನು. ಏಕೆಂದರೆ ಅವನು ತನ್ನ ನಂಬಿಕೆಯನ್ನು ನಿರೂಪಿಸಿದಾಗ, ಜೀವವೆಂಬ ಜಯಮಾಲೆಯನ್ನು ಹೊಂದುವನು. ದೇವರು ತನ್ನನ್ನು ಪ್ರೀತಿಸುವ ಜನರಿಗೆಲ್ಲರಿಗೂ ಇದನ್ನು ವಾಗ್ದಾನ ಮಾಡಿದ್ದಾನೆ.
ಯಾಕೋಬನು 1 : 13 (ERVKN)
ಶೋಧನೆಗೆ ಗುರಿಯಾಗಿರುವ ವ್ಯಕ್ತಿಯು, “ದೇವರು ನನ್ನನ್ನು ಶೋಧಿಸುತ್ತಿದ್ದಾನೆ” ಎಂದು ಹೇಳಬಾರದು. ಕೆಟ್ಟದ್ದು ದೇವರನ್ನು ಶೋಧಿಸಲಾರದು. ದೇವರು ತಾನಾಗಿಯೇ ಯಾರನ್ನೂ ಶೋಧಿಸುವುದಿಲ್ಲ.
ಯಾಕೋಬನು 1 : 14 (ERVKN)
ಶೋಧನೆಗೆ ಗುರಿಯಾಗಿರುವವನು ತಾನು ಇಷ್ಟಪಡುವ ಕೆಟ್ಟಕಾರ್ಯಗಳಿಂದಲೇ ಶೋಧನೆಗೆ ಒಳಗಾಗಿದ್ದಾನೆ. ಅವನ ಕೆಟ್ಟ ಆಸೆಗಳೇ ಅವನನ್ನು ದೂರ ಸೆಳೆದು, ಬಿಡದೆ ಹಿಡಿದುಕೊಳ್ಳುತ್ತವೆ.
ಯಾಕೋಬನು 1 : 15 (ERVKN)
ಈ ಆಸೆಗಳು ಅವನಿಂದ ಪಾಪವನ್ನು ಮಾಡಿಸುತ್ತದೆ. ನಂತರ ಪಾಪವು ಬೆಳೆದು ಸಾವನ್ನು ತರುತ್ತದೆ.
ಯಾಕೋಬನು 1 : 16 (ERVKN)
ನನ್ನ ಪ್ರಿಯ ಸಹೋದರ ಸಹೋದರಿಯರೇ, ಈ ವಿಷಯದಲ್ಲಿ ನೀವು ಮೋಸಹೋಗಬೇಡಿರಿ.
ಯಾಕೋಬನು 1 : 17 (ERVKN)
ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.
ಯಾಕೋಬನು 1 : 18 (ERVKN)
ದೇವರು ಸತ್ಯವಾಕ್ಯದ ಮೂಲಕ ನಮಗೆ ಜೀವವನ್ನು ದಯಪಾಲಿಸಲು ತೀರ್ಮಾನಿಸಿದ್ದಾನೆ. ತನ್ನಿಂದ ಸೃಷ್ಟಿಸಲ್ಪಟ್ಟ ಎಲ್ಲಾ ವಸ್ತುಗಳಲ್ಲಿಯೂ ನಾವು ಅತ್ಯಂತ ಮುಖ್ಯರಾಗಬೇಕೆಂಬುದೇ ಆತನ ಅಪೇಕ್ಷೆ.
ಯಾಕೋಬನು 1 : 19 (ERVKN)
ಕೇಳುವಿಕೆ ಮತ್ತು ವಿಧೇಯತೆ ನನ್ನ ಸಹೋದರ ಸಹೋದರಿಯರೇ, ಯಾವಾಗಲೂ ಮಾತನಾಡುವುದಕ್ಕಿಂತ ಕೇಳುವುದರಲ್ಲಿ ಆಸಕ್ತರಾಗಿರಿ. ಸುಲಭವಾಗಿ ಕೋಪಗೊಳ್ಳದಿರಿ.
ಯಾಕೋಬನು 1 : 20 (ERVKN)
ಒಬ್ಬ ವ್ಯಕ್ತಿಯ ಕೋಪವು ದೇವರು ಅಪೇಕ್ಷಿಸಿದಂತೆ ಯೋಗ್ಯ ಜೀವನವನ್ನು ನಡೆಸಲು ಅವನಿಗೆ ಸಹಾಯಕವಾಗುವುದಿಲ್ಲ.
ಯಾಕೋಬನು 1 : 21 (ERVKN)
ಆದ್ದರಿಂದ ಎಲ್ಲಾ ನೀಚತನವನ್ನೂ ದುಷ್ಟತನವನ್ನೂ ನಿಮ್ಮ ಜೀವನದಿಂದ ದೂರತಳ್ಳಿರಿ. ನಿಮ್ಮ ಹೃದಯದಲ್ಲಿ ಬೇರೂರಿರುವ ದೇವರ ವಾಕ್ಯವನ್ನು ದೀನತೆಯಿಂದ ಒಪ್ಪಿಕೊಳ್ಳಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುತ್ತದೆ.
ಯಾಕೋಬನು 1 : 22 (ERVKN)
ದೇವರ ವಾಕ್ಯವನ್ನು ಕೇವಲ ಕೇಳುವವರಾಗಿರದೆ ಅದನ್ನು ಕಾರ್ಯರೂಪಕ್ಕೆ ತನ್ನಿರಿ. ಇಲ್ಲವಾದರೆ ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳುವಿರಿ.
ಯಾಕೋಬನು 1 : 23 (ERVKN)
ದೇವರ ವಾಕ್ಯವನ್ನು ಕೇಳಿಯೂ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡವನಂತಿರುವನು.
ಯಾಕೋಬನು 1 : 24 (ERVKN)
ಅವನು ಅಲ್ಲಿಂದ ಹೊರಟು ಹೋಗಿ, ತಾನು ಹೇಗಿದ್ದೇನೆಂಬುದನ್ನು ಬೇಗನೆ ಮರೆತುಬಿಡುತ್ತಾನೆ.
ಯಾಕೋಬನು 1 : 25 (ERVKN)
ಜನರನ್ನು ಬಿಡುಗಡೆ ಮಾಡುವ ದೇವರ ಪರಿಪೂರ್ಣ ನಿಯಮವನ್ನು ಎಚ್ಚರಿಕೆಯಿಂದ ಅಭ್ಯಾಸ ಮಾಡುವವನು ನಿಜವಾಗಿಯೂ ಸಂತೋಷಭರಿತನಾಗಿದ್ದಾನೆ. ಅವನು ಅದನ್ನು ಅಭ್ಯಾಸ ಮಾಡುತ್ತಲೇ ಇರುತ್ತಾನೆ. ಅವನು ದೇವರ ವಾಕ್ಯವನ್ನು ಕೇಳುತ್ತಾನೆ ಮತ್ತು ತಾನು ಕೇಳಿದ್ದನ್ನು ಮರೆತುಬಿಡುವುದಿಲ್ಲ. ಅವನು ದೇವರ ವಾಕ್ಯಕ್ಕೆ ವಿಧೇಯನಾಗಿರುತ್ತಾನೆ. ಆದ್ದರಿಂದಲೇ ಅವನು ಸಂತೋಷಭರಿತನಾಗಿರುತ್ತಾನೆ.
ಯಾಕೋಬನು 1 : 26 (ERVKN)
ದೇವರನ್ನು ಆರಾಧಿಸತಕ್ಕ ನಿಜವಾದ ಮಾರ್ಗ ಸದ್ಭಕ್ತನೆಂದು ತನ್ನ ಬಗ್ಗೆ ಹೇಳಿಕೊಳ್ಳುವವನು ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆಹೋದರೆ ಅವನು ತನ್ನನ್ನು ತಾನೇ ಮೋಸಗೊಳಿಸಿಕೊಂಡಂತಾಗುವುದು. ಅವನ “ಭಕ್ತಿ”ಗೆ ಬೆಲೆಯಿಲ್ಲ.
ಯಾಕೋಬನು 1 : 27 (ERVKN)
ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27