ಯಾಕೋಬನು 2 : 1 (ERVKN)
ಜನರೆಲ್ಲರನ್ನೂ ಪ್ರೀತಿಸಿ ನನ್ನ ಪ್ರಿಯ ಸಹೋದರ ಸಹೋದರಿಯರೇ, ಮಹಿಮಾಪೂರ್ಣನಾದ ಪ್ರಭು ಯೇಸು ಕ್ರಿಸ್ತನಲ್ಲಿ ನೀವು ನಂಬಿಕೆಯಿಟ್ಟಿದ್ದೀರಿ. ಆದ್ದರಿಂದ ಕೆಲವರು ಇತರ ಜನರಿಗಿಂತ ಬಹಳ ಮುಖ್ಯರೆಂದು ಯೋಚಿಸಬೇಡಿ.
ಯಾಕೋಬನು 2 : 2 (ERVKN)
ನಿಮ್ಮ ಸಭೆಗೆ ಒಬ್ಬನು ಬರುತ್ತಾನೆಂದು ನೆನೆಸಿರಿ. ಅವನು ಒಳ್ಳೆಯ ವಸ್ತ್ರಗಳನ್ನೂ ಬಂಗಾರದ ಉಂಗುರವನ್ನೂ ಧರಿಸಿರುತ್ತಾನೆ. ಅದೇ ಸಮಯಕ್ಕೆ ಕೊಳೆಯಾದ ಮತ್ತು ಹಳೆಯದಾದ ವಸ್ತ್ರಗಳನ್ನು ಧರಿಸಿರುವ ಒಬ್ಬ ಬಡವನೂ ಬರುತ್ತಾನೆ.
ಯಾಕೋಬನು 2 : 3 (ERVKN)
ಒಳ್ಳೆಯ ವಸ್ತ್ರಗಳನ್ನು ಧರಿಸಿರುವವನಿಗೆ ವಿಶೇಷ ಗಮನವನ್ನು ನೀಡುವಿರಿ. “ಉತ್ತಮವಾದ ಈ ಸ್ಥಳದಲ್ಲಿ ನೀವು ಕುಳಿತುಕೊಳ್ಳಿ” ಎಂದು ಅವನಿಗೆ ಹೇಳುವಿರಿ. ಆದರೆ ಆ ಬಡ ಮನುಷ್ಯನಿಗೆ “ಅಲ್ಲೇ ನಿಂತುಕೊ!” ಎಂದಾಗಲಿ, “ನಮ್ಮ ಪಾದಗಳ ಬಳಿ ನೆಲದ ಮೇಲೆ ಕುಳಿತುಕೊ!” ಎಂದಾಗಲಿ ಹೇಳುವಿರಿ.
ಯಾಕೋಬನು 2 : 4 (ERVKN)
ನೀವು ಮಾಡುತ್ತಿರುವುದೇನು? ಕೆಲವರನ್ನು ಇತರ ಜನರಿಗಿಂತ ಬಹಳ ಮುಖ್ಯರೆಂದು ಪರಿಗಣಿಸುತ್ತಿರುವಿರಿ. ನಿಮ್ಮ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.
ಯಾಕೋಬನು 2 : 5 (ERVKN)
ನನ್ನ ಪ್ರಿಯ ಸಹೋದರ ಸಹೋದರಿಯರೇ, ಕೇಳಿರಿ! ಈ ಲೋಕದಲ್ಲಿ ಬಡವರು ನಂಬಿಕೆಯಲ್ಲಿ ಶ್ರೀಮಂತರಾಗಿರಲೆಂದು ದೇವರು ಅವರನ್ನು ಆರಿಸಿಕೊಂಡಿದ್ದಾನೆ. ತನ್ನನ್ನು ಪ್ರೀತಿಸುವ ಜನರಿಗೆ ದೇವರು ವಾಗ್ದಾನಮಾಡಿದ ರಾಜ್ಯವನ್ನು ಹೊಂದಿಕೊಳ್ಳಲು ಆತನು ಅವರನ್ನು ಆರಿಸಿಕೊಂಡಿದ್ದಾನೆ.
ಯಾಕೋಬನು 2 : 6 (ERVKN)
ಆದರೆ ಬಡವನಿಗೆ ನೀವು ಗೌರವವನ್ನೇ ತೋರುವುದಿಲ್ಲ. ಶ್ರೀಮಂತ ಜನರು ಯಾವಾಗಲೂ ನಿಮ್ಮ ಬದುಕನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಂಡಿದ್ದಾರೆಂಬುದು ನಿಮಗೆ ತಿಳಿದಿದೆ. ನಿಮ್ಮನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುವವರು ಅವರೇ.
ಯಾಕೋಬನು 2 : 7 (ERVKN)
ನಿಮ್ಮನ್ನು ತನ್ನವರನ್ನಾಗಿ ಮಾಡಿಕೊಂಡಿರುವ ಯೇಸುವಿನ ಶ್ರೇಷ್ಠವಾದ ಹೆಸರಿಗೆ ವಿರುದ್ಧವಾಗಿ ಕೆಟ್ಟಮಾತುಗಳನ್ನು ಆಡುವವರು ಶ್ರೀಮಂತರೇ.
ಯಾಕೋಬನು 2 : 8 (ERVKN)
ಪವಿತ್ರ ಗ್ರಂಥದಲ್ಲಿ ಬರೆದಿರುವ, “ನಿನ್ನನ್ನು ಪ್ರೀತಿಸುವಂತೆ ಇತರರನ್ನೂ ಪ್ರೀತಿಸು” ಉಲ್ಲೇಖನ: ಯಾಜಕ. 19:18. ಎಂಬ ರಾಜಾಜ್ಞೆಗೆ ನೀವು ವಿಧೇಯರಾಗಿದ್ದರೆ ಸರಿಯಾದುದನ್ನೇ ಮಾಡುವವರಾಗಿದ್ದೀರಿ.
ಯಾಕೋಬನು 2 : 9 (ERVKN)
ಆದರೆ ನೀವು ಒಬ್ಬನನ್ನು ಇನ್ನೊಬ್ಬನಿಗಿಂತ ಮುಖ್ಯನೆಂದು ಪರಿಗಣಿಸಿ ಪಕ್ಷಪಾತ ಮಾಡಿದರೆ ಪಾಪವನ್ನು ಮಾಡುವವರಾಗಿದ್ದೀರಿ. ದೇವರ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ದೋಷಿಗಳಾಗಿದ್ದೀರೆಂದು ಆ ರಾಜಾಜ್ಞೆಯು ನಿರೂಪಿಸುತ್ತದೆ.
ಯಾಕೋಬನು 2 : 10 (ERVKN)
ಒಬ್ಬನು ದೇವರ ಎಲ್ಲಾ ಆಜ್ಞೆಗಳನ್ನು ಅನುಸರಿಸುತ್ತಿರಬಹುದು. ಆದರೆ ಅವನು ಒಂದು ಆಜ್ಞೆಗೆ ಅವಿಧೇಯನಾದರೆ ಅವನು ಧರ್ಮಶಾಸ್ತ್ರದ ಎಲ್ಲಾ ಆಜ್ಞೆಗಳನ್ನು ಮೀರಿದನೆಂಬ ಅಪರಾಧಕ್ಕೆ ಗುರಿಯಾಗುವನು.
ಯಾಕೋಬನು 2 : 11 (ERVKN)
“ವ್ಯಭಿಚಾರ ಮಾಡಬಾರದು” ಉಲ್ಲೇಖನ: ವಿಮೋಚನ. 20:14; ಧರ್ಮೋಪದೇಶ. 5:18. ಎಂದು ದೇವರು ಹೇಳಿದನು. “ಕೊಲ್ಲಬಾರದು” ಉಲ್ಲೇಖನ: ವಿಮೋಚನ. 20:13; ಧರ್ಮೋಪದೇಶ. 5:17. ಎಂದೂ ಅದೇ ದೇವರು ಹೇಳಿದನು. ಹೀಗಿರಲಾಗಿ, ನೀವು ವ್ಯಭಿಚಾರವನ್ನು ಮಾಡದಿದ್ದರೂ ಯಾರನ್ನೇ ಆಗಲಿ ಕೊಂದರೆ, ದೇವರ ಇಡೀ ಧರ್ಮಶಾಸ್ತ್ರವನ್ನೇ ಉಲ್ಲಂಘಿಸಿದವರಾಗಿದ್ದೀರಿ.
ಯಾಕೋಬನು 2 : 12 (ERVKN)
ಜನರನ್ನು ಬಿಡುಗಡೆ ಮಾಡುವ ಧರ್ಮಶಾಸ್ತ್ರದಿಂದಲೇ ನಿಮಗೆ ತೀರ್ಪಾಗುವುದು. ನೀವು ಕೇಳುವ ಮತ್ತು ಮಾಡುವ ಪ್ರತಿಯೊಂದರಲ್ಲಿಯೂ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ.
ಯಾಕೋಬನು 2 : 13 (ERVKN)
ಹೌದು, ಇತರರಿಗೆ ನೀವು ಕರುಣೆ ತೋರಬೇಕು. ಇಲ್ಲವಾದರೆ ದೇವರು ತೀರ್ಪು ನೀಡುವಾಗ ನಿಮಗೂ ಕರುಣೆ ತೋರನು. ಕರುಣೆ ತೋರುವವನು ದೇವರ ನ್ಯಾಯತೀರ್ಪಿನಲ್ಲಿ ಭಯವಿಲ್ಲದೆ ಇರುವನು.
ಯಾಕೋಬನು 2 : 14 (ERVKN)
ನಂಬಿಕೆ ಮತ್ತು ಉತ್ತಮ ಕಾರ್ಯಗಳು ನನ್ನ ಸಹೋದರ ಸಹೋದರಿಯರೇ, ಒಬ್ಬ ವ್ಯಕ್ತಿಯು ತನ್ನಲ್ಲಿ ನಂಬಿಕೆಯಿದೆಯೆಂದು ಹೇಳಿಕೊಂಡರೂ ಅದನ್ನು ಕಾರ್ಯರೂಪಕ್ಕೆ ತರದಿದ್ದರೆ, ಅವನ ನಂಬಿಕೆಯಿಂದ ಪ್ರಯೋಜನವೇನೂ ಇಲ್ಲ. ಆ ರೀತಿಯ ನಂಬಿಕೆಯು ಅವನನ್ನು ರಕ್ಷಿಸಬಲ್ಲದೇ? ಇಲ್ಲ!
ಯಾಕೋಬನು 2 : 15 (ERVKN)
ಕ್ರಿಸ್ತನಲ್ಲಿ ಸಹೋದರನಾಗಿರುವವನಿಗೆ ಅಥವಾ ಸಹೋದರಿಯಾಗಿರುವವಳಿಗೆ ಬಟ್ಟೆಗಳು ಬೇಕಾಗಿರಬಹುದು ಅಥವಾ ತಿನ್ನಲು ಆಹಾರ ಬೇಕಾಗಿರಬಹುದು.
ಯಾಕೋಬನು 2 : 16 (ERVKN)
ಆದರೆ ನೀವು ಆ ವ್ಯಕ್ತಿಗೆ, “ದೇವರು ನಿನ್ನೊಂದಿಗಿರಲಿ! ಚಳಿಕಾಯಿಸಿಕೊಂಡು ತೃಪ್ತಿಯಾಗುವಷ್ಟು ಊಟ ಮಾಡು” ಎಂಬುದಾಗಿ ಹೇಳಿ ಬೇಕಾದವುಗಳನ್ನು ಅವನಿಗೆ ಕೊಡದೆ ಹೋದರೆ ನಿಮ್ಮ ಮಾತುಗಳಿಗೆ ಯಾವ ಬೆಲೆಯೂ ಇಲ್ಲ.
ಯಾಕೋಬನು 2 : 17 (ERVKN)
ಇದೇ ನಿಯಮ ನಂಬಿಕೆಗೂ ಅನ್ವಯಿಸುತ್ತದೆ. ಕ್ರಿಯೆಯಿಲ್ಲದ ನಂಬಿಕೆಯು ತನ್ನಲ್ಲಿಯೇ ಸತ್ತುಹೋಗಿದೆ.
ಯಾಕೋಬನು 2 : 18 (ERVKN)
ಆದರೆ ಯಾವನಾದರೂ, “ನಿನ್ನಲ್ಲಿ ನಂಬಿಕೆಯಿದೆ; ನನ್ನಲಿ ಕ್ರಿಯೆಗಳಿವೆ” ಎಂದು ವಾದಿಸಬಹುದು. ಅದಕ್ಕೆ ನನ್ನ ಉತ್ತರವೇನೆಂದರೆ ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ತೋರಿಸಲಾರೆ. ನಾನಾದರೊ ನನ್ನ ಒಳ್ಳೆಯ ಕಾರ್ಯಗಳ ಮೂಲಕ ನನ್ನ ನಂಬಿಕೆಯನ್ನು ನಿನಗೆ ತೋರಿಸುವೆ ಎಂದು ಹೇಳಬಹುದು.
ಯಾಕೋಬನು 2 : 19 (ERVKN)
ಒಬ್ಬನೇ ದೇವರಿರುವನೆಂದು ನೀವು ನಂಬಿದ್ದೀರಿ. ಒಳ್ಳೆಯದು! ಆದರೆ ದೆವ್ವಗಳೂ ಅದನ್ನು ನಂಬುತ್ತವೆ ಮತ್ತು ಭಯದಿಂದ ನಡುಗುತ್ತವೆ.
ಯಾಕೋಬನು 2 : 20 (ERVKN)
ಬುದ್ಧಿಹೀನರೇ, ಕ್ರಿಯೆಯಿಲ್ಲದ ನಂಬಿಕೆಯು ನಿಷ್ಪ್ರಯೋಜಕವೆಂದು ನಿಮಗೆ ತೋರಿಸಬೇಕೋ?
ಯಾಕೋಬನು 2 : 21 (ERVKN)
ಅಬ್ರಹಾಮನು ನಮ್ಮ ಪಿತೃ. ಅವನು ತನ್ನ ಕ್ರಿಯೆಗಳಿಂದ ನೀತಿವಂತನಾದನು. ಅವನು ಯಜ್ಞವೇದಿಕೆಯ ಮೇಲೆ ತನ್ನ ಮಗನಾದ ಇಸಾಕನನ್ನು ದೇವರಿಗೆ ಅರ್ಪಿಸಿದನು.
ಯಾಕೋಬನು 2 : 22 (ERVKN)
ಆದ್ದರಿಂದ ಅವನ ನಂಬಿಕೆ ಮತ್ತು ಅವನ ಕ್ರಿಯೆ ಒಟ್ಟಿಗೆ ಕಾರ್ಯ ಮಾಡಿದವು. ಅವನ ನಂಬಿಕೆಯು ಅವನ ಕ್ರಿಯೆಗಳಿಂದಲೇ ಪರಿಪೂರ್ಣಗೊಂಡಿತು.
ಯಾಕೋಬನು 2 : 23 (ERVKN)
ಹೀಗೆ ಪವಿತ್ರಗ್ರಂಥದ ಈ ಮಾತುಗಳು ನೆರವೇರಿದವು: “ಅಬ್ರಹಾಮನು ದೇವರನ್ನು ನಂಬಿದನು. ದೇವರು ಅಬ್ರಹಾಮನ ನಂಬಿಕೆಯನ್ನು ಒಪ್ಪಿಕೊಂಡು ಅವನನ್ನು ನೀತಿವಂತನೆಂದು ಪರಿಗಣಿಸಿದನು.” ಉಲ್ಲೇಖನ: ಆದಿಕಾಂಡ 15:6. ಅಬ್ರಹಾಮನನ್ನು “ದೇವರ ಸ್ನೇಹಿತ” 2 ಉಲ್ಲೇಖನ: ಪೂರ್ವಕಾಲವೃತ್ತಾಂತ 20:7; ಯೆಶಾಯ 41:8. ನೆಂದು ಕರೆಯಲಾಯಿತು.
ಯಾಕೋಬನು 2 : 24 (ERVKN)
ಹೀಗಿರಲು ಒಬ್ಬನು ತನ್ನ ಕ್ರಿಯೆಗಳಿಂದ ನೀತಿವಂತನಾಗುತ್ತಾನೆ ಎಂಬುದು ಸ್ಪಷ್ಟವಾಗಿದೆ. ಒಬ್ಬನು ಕೇವಲ ನಂಬಿಕೆಯೊಂದರಿಂದಲೇ ನೀತಿವಂತನಾಗಲು ಸಾಧ್ಯವಿಲ್ಲ.
ಯಾಕೋಬನು 2 : 25 (ERVKN)
ರಹಾಬಳು ಮತ್ತೊಬ್ಬ ಉದಾಹರಣೆಯಾಗಿದ್ದಾಳೆ. ಆಕೆ ಒಬ್ಬ ವೇಶ್ಯೆ. ಆದರೆ ಅವಳು ತನ್ನ ಕ್ರಿಯೆಗಳಿಂದಲೇ ನೀತಿವಂತಳಾದಳು. ಅವಳು ದೇವರ ಜನರಿಗೋಸ್ಕರ ಗೂಢಚಾರರನ್ನು ತನ್ನ ಮನೆಗೆ ಬರಮಾಡಿಕೊಂಡು, ಬೇರೊಂದು ರಸ್ತೆಯಲ್ಲಿ ತಪ್ಪಿಸಿಕೊಂಡು ಹೋಗಲು ಅವರಿಗೆ ಸಹಾಯ ಮಾಡಿದಳು. *ರಹಾಬಳು … ಮಾಡಿದಳು ಯೆಹೋಶುವನು 2:1-21 ರಲ್ಲಿದೆ.
ಯಾಕೋಬನು 2 : 26 (ERVKN)
ಒಬ್ಬ ವ್ಯಕ್ತಿಯ ದೇಹದಲ್ಲಿ ಆತ್ಮವಿಲ್ಲದಿದ್ದರೆ, ಅವನ ದೇಹವು ಸತ್ತದ್ದೇ. ಅದೇ ರೀತಿಯಲ್ಲಿ ಕ್ರಿಯೆಯಿಲ್ಲದ ನಂಬಿಕೆಯು ಸತ್ತದ್ದೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26