ಯಾಕೋಬನು 3 : 1 (ERVKN)
ಹತೋಟಿಮೀರಿ ಮಾತಾಡಬೇಡಿ ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಅನೇಕರು ಬೋಧಕರಾಗಬಾರದು. ಏಕೆಂದರೆ ಬೋಧಕರಾದ ನಮಗೆ ಇತರ ಜನರಿಗಿಂತ ಕಠಿಣವಾದ ತೀರ್ಪಾಗುತ್ತದೆ ಎಂಬುದು ನಿಮಗೆ ತಿಳಿದಿದೆ.
ಯಾಕೋಬನು 3 : 2 (ERVKN)
ನಾವೆಲ್ಲರೂ ಅನೇಕ ವಿಷಯಗಳಲ್ಲಿ ತಪ್ಪುವುದುಂಟು. ಆದರೆ ಮಾತಿನಲ್ಲಿ ಎಂದೂ ತಪ್ಪುಮಾಡಿಲ್ಲದ ವ್ಯಕ್ತಿಯು ಪರಿಪೂರ್ಣನೂ ತನ್ನ ದೇಹವನ್ನು ಸ್ವಾಧೀನದಲ್ಲಿಟ್ಟುಕೊಳ್ಳಲು ಸಮರ್ಥನೂ ಆಗಿದ್ದಾನೆ.
ಯಾಕೋಬನು 3 : 3 (ERVKN)
ನಾವು ಕುದುರೆಗಳನ್ನು ಸ್ವಾಧೀನ ಪಡಿಸಿಕೊಳ್ಳಲು ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ಸ್ವಾಧೀನ ಪಡಿಸಿಕೊಳ್ಳಬಹುದು.
ಯಾಕೋಬನು 3 : 4 (ERVKN)
ಇದೇ ನಿಯಮ ಹಡಗುಗಳಿಗೂ ಅನ್ವಯಿಸುತ್ತದೆ. ಹಡಗು ಬಹಳ ದೊಡ್ಡದಾಗಿರುತ್ತದೆ ಮತ್ತು ಬಲವಾದ ಗಾಳಿಯು ಅದನ್ನು ತಳ್ಳಿಕೊಂಡು ಹೋಗುತ್ತದೆ. ಆದರೆ ಒಂದು ಸಣ್ಣ ಚುಕ್ಕಾಣಿಯು ಆ ದೊಡ್ಡ ಹಡಗನ್ನು ನಿಯಂತ್ರಿಸುತ್ತದೆ. ಚುಕ್ಕಾಣಿಯನ್ನು ಹತೋಟಿಯಲ್ಲಿ ಇಟ್ಟುಕೊಂಡಿರುವವನು ಹಡಗು ಹೋಗಬೇಕಾದ ಮಾರ್ಗವನ್ನು ತೀರ್ಮಾನಿಸುತ್ತಾನೆ. ಅವನ ಅಪೇಕ್ಷೆಯಂತೇ ಹಡಗು ಹೋಗುತ್ತದೆ.
ಯಾಕೋಬನು 3 : 5 (ERVKN)
ನಮ್ಮ ನಾಲಿಗೆಯೂ ಅದರಂತೆಯೆ. ಅದು ದೇಹದ ಒಂದು ಸಣ್ಣ ಭಾಗವಾದರೂ, ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಚಿಕ್ಕ ಬೆಂಕಿಯ ಕಿಡಿಯು ದೊಡ್ಡ ಕಾಡ್ಗಿಚ್ಚಿಗೆ ಕಾರಣವಾಗುತ್ತದೆ.
ಯಾಕೋಬನು 3 : 6 (ERVKN)
ನಾಲಿಗೆಯು ಬೆಂಕಿಯ ಕಿಡಿಯಂತೆ ನಮ್ಮ ದೇಹದ ಭಾಗಗಳಲ್ಲಿ ಅದು ಕೆಟ್ಟ ಲೋಕದಂತಿದೆ. ಹೇಗೆಂದರೆ, ನಾಲಿಗೆಯು ನಮ್ಮ ದೇಹದಲ್ಲೆಲ್ಲಾ ಕೆಟ್ಟತನವನ್ನು ಹರಡುತ್ತದೆ. ನಮ್ಮ ಜೀವಿತದ ಮೇಲೆಲ್ಲಾ ಪ್ರಭಾವ ಬೀರುವ ಬೆಂಕಿಯನ್ನು ಅದು ನರಕದಿಂದ ಪಡೆದು ಹೊತ್ತಿಸುತ್ತದೆ.
ಯಾಕೋಬನು 3 : 7 (ERVKN)
ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.
ಯಾಕೋಬನು 3 : 8 (ERVKN)
ಆದರೆ ಯಾರೂ ನಾಲಿಗೆಯನ್ನು ಹತೋಟಿಗೆ ತಂದಿಲ್ಲ. ಅದು ಕ್ರೂರವಾದದ್ದೂ ಕೆಟ್ಟದ್ದೂ ಆಗಿದೆ. ಅದು ಮರಣಕರವಾದ ವಿಷವನ್ನು ತುಂಬಿಕೊಂಡಿದೆ.
ಯಾಕೋಬನು 3 : 9 (ERVKN)
ನಮ್ಮ ಪ್ರಭುವನ್ನು ಮತ್ತು ತಂದೆಯನ್ನು (ದೇವರು) ಸ್ತುತಿಸಲು ನಮ್ಮ ನಾಲಿಗೆಯನ್ನು ಬಳಸುತ್ತೇವೆ; ಆದರೆ ಅದರಿಂದಲೇ ಜನರನ್ನು ಶಪಿಸುತ್ತೇವೆ. ದೇವರು ಆ ಜನರನ್ನೂ ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿಸಿದ್ದಾನೆ.
ಯಾಕೋಬನು 3 : 10 (ERVKN)
ಹೊಗಳಿಕೆ ಮತ್ತು ತೆಗಳಿಕೆಗಳೆರಡೂ ಒಂದೇ ಬಾಯಿಂದ ಬರುತ್ತವೆ! ನನ್ನ ಸಹೋದರ ಸಹೋದರಿಯರೇ, ಇದು ಸಂಭವಿಸಲೇಬಾರದು.
ಯಾಕೋಬನು 3 : 11 (ERVKN)
ಸಿಹಿಯಾದ ನೀರು ಮತ್ತು ಕಹಿಯಾದ ನೀರು ಒಂದೇ ಬುಗ್ಗೆಯಿಂದ ಹರಿಯುತ್ತವೆಯೋ? ಇಲ್ಲ!
ಯಾಕೋಬನು 3 : 12 (ERVKN)
ನನ್ನ ಸಹೋದರ ಸಹೋದರಿಯರೇ, ಅಂಜೂರದ ಮರವು ಆಲಿವ್ ಕಾಯಿಗಳನ್ನು ಬಿಡುವುದೇ? ಇಲ್ಲ! ದ್ರಾಕ್ಷಿಬಳ್ಳಿಯು ಅಂಜೂರದ ಹಣ್ಣನ್ನು ಬಿಡುವುದೇ? ಇಲ್ಲ! ಉಪ್ಪು ನೀರಿನಿಂದ ತುಂಬಿದ ಬಾವಿಯು ಸಿಹಿ ನೀರನ್ನು ಕೊಡುವುದಿಲ್ಲ.
ಯಾಕೋಬನು 3 : 13 (ERVKN)
ನಿಜವಾದ ಜ್ಞಾನ ನಿಮ್ಮಲ್ಲಿ ಜ್ಞಾನವಂತರಾಗಲಿ ಬದ್ಧಿವಂತರಾಗಲಿ ಇದ್ದಾರೋ? ಅಂಥವನು ತನ್ನ ಜ್ಞಾನವನ್ನು ಯೋಗ್ಯವಾಗಿ ಬದುಕುವುದರ ಮೂಲಕ ತೋರ್ಪಡಿಸಲಿ. ಅವನು ಒಳ್ಳೆಯ ಕಾರ್ಯಗಳನ್ನು ದೀನತೆಯಿಂದ ಮಾಡಲಿ. ಜ್ಞಾನಿಯಾದವನು ಕೊಚ್ಚಿಕೊಳ್ಳುವುದಿಲ್ಲ.
ಯಾಕೋಬನು 3 : 14 (ERVKN)
ನೀವು ಸ್ವಾರ್ಥಿಗಳೂ ತೀಕ್ಷ್ಣವಾದ ಮತ್ಸರವನ್ನು ಹೃದಯದಲ್ಲಿ ಹೊಂದಿರುವವರೂ ಆಗಿದ್ದರೆ, ನೀವು ಕೊಚ್ಚಿಕೊಳ್ಳುವುದರಲ್ಲಿ ಅರ್ಥವೇ ಇಲ್ಲ. ಏಕೆಂದರೆ ಅದು ಕೇವಲ ಸುಳ್ಳಷ್ಟೇ.
ಯಾಕೋಬನು 3 : 15 (ERVKN)
ಇಂಥ “ಜ್ಞಾನ”ವು ದೇವರಿಂದ ಬರದೆ ಲೋಕದಿಂದ ಬರುತ್ತದೆ. ಅದು ಆತ್ಮ ಸಂಬಂಧವಾದುದಲ್ಲ. ಅದು ದೆವ್ವಗಳಿಂದ ಬಂದುದು.
ಯಾಕೋಬನು 3 : 16 (ERVKN)
ಹೊಟ್ಟೆಕಿಚ್ಚು ಮತ್ತು ಸ್ವಾರ್ಥತೆಗಳು ಎಲ್ಲಿರುವವೋ ಅಲ್ಲಿ ಗಲಿಬಿಲಿಯೂ ಎಲ್ಲಾ ಬಗೆಯ ನೀಚತನಗಳೂ ಇರುತ್ತವೆ.
ಯಾಕೋಬನು 3 : 17 (ERVKN)
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.
ಯಾಕೋಬನು 3 : 18 (ERVKN)
ಶಾಂತಿ ಸ್ಥಾಪಿಸುವುದಕ್ಕಾಗಿ ಸಮಾಧಾನಕರವಾದ ರೀತಿಯಲ್ಲಿ ಕಾರ್ಯ ಮಾಡುವವರು ಯೋಗ್ಯವಾದ ಬದುಕಿನಿಂದ ಬರುವ ಉತ್ತಮ ಫಲಗಳನ್ನು ಪಡೆಯುತ್ತಾರೆ.

1 2 3 4 5 6 7 8 9 10 11 12 13 14 15 16 17 18