ಯೆರೆಮಿಯ 10 : 1 (ERVKN)
{ಯೆಹೋವನು ಮತ್ತು ವಿಗ್ರಹಗಳು} [PS] ಇಸ್ರೇಲ್ ವಂಶದವರೇ, ಯೆಹೋವನ ಮಾತುಗಳನ್ನು ಕೇಳಿರಿ.
ಯೆರೆಮಿಯ 10 : 2 (ERVKN)
ಯೆಹೋವನು ಹೀಗೆ ಹೇಳುತ್ತಾನೆ: “ಬೇರೆ ಜನಾಂಗಗಳಂತೆ ಜೀವಿಸಬೇಡಿ. [QBR2] ಆಕಾಶದಲ್ಲಿ ಕಾಣುವ ವಿಶೇಷ ಉತ್ಪಾತಗಳಿಗೆ ಹೆದರಬೇಡಿರಿ. [QBR] ಆಕಾಶದಲ್ಲಿ ಕಾಣುವ ಉತ್ಪಾತಗಳಿಗೆ ಬೇರೆ ಜನಾಂಗಗಳು ಹೆದರುತ್ತವೆ. [QBR2] ಆದರೆ ನೀವು ಅವುಗಳಿಗೆ ಹೆದರಬಾರದು. [QBR]
ಯೆರೆಮಿಯ 10 : 3 (ERVKN)
ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. [QBR] ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. [QBR] ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು. [QBR]
ಯೆರೆಮಿಯ 10 : 4 (ERVKN)
ಅವರು ತಮ್ಮ ವಿಗ್ರಹಗಳನ್ನು ಬೆಳ್ಳಿಬಂಗಾರಗಳಿಂದ ಸುಂದರವಾಗಿ ಅಲಂಕರಿಸುತ್ತಾರೆ. [QBR] ಸುತ್ತಿಗೆಯಿಂದ ಮೊಳೆ ಬಡಿದು ಅವುಗಳು ಬೀಳದಂತೆ ನಿಲ್ಲಿಸುತ್ತಾರೆ. [QBR]
ಯೆರೆಮಿಯ 10 : 5 (ERVKN)
ಬೇರೆ ಜನಾಂಗದವರ ವಿಗ್ರಹಗಳು [QBR2] ಸೌತೆಕಾಯಿ ತೋಟಗಳಲ್ಲಿ ನಿಲ್ಲಿಸುವ ಬೆದರುಕಂಬಗಳಂತಿವೆ. [QBR] ಅವರ ವಿಗ್ರಹಗಳು ಮಾತಾಡಲಾರವು; [QBR2] ಅವು ನಡೆಯಲಾರವು. ಜನರು ಆ ವಿಗ್ರಹಗಳನ್ನು ಹೊತ್ತುಕೊಂಡು ಹೋಗಬೇಕು. [QBR] ಆದ್ದರಿಂದ ಆ ವಿಗ್ರಹಗಳಿಗೆ ಹೆದರಬೇಡಿರಿ. [QBR2] ಅವು ನಿಮಗೆ ಕೇಡನ್ನೂ ಮಾಡಲಾರವು; [QBR] ಸಹಾಯವನ್ನೂ ಮಾಡಲಾರವು.”
ಯೆರೆಮಿಯ 10 : 6 (ERVKN)
ಯೆಹೋವನೇ, ನಿನ್ನತೆ ಯಾರೂ ಇಲ್ಲ. [QBR2] ನೀನೇ ಮಹೋನ್ನತನು. [QBR] ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು. [QBR]
ಯೆರೆಮಿಯ 10 : 7 (ERVKN)
ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. [QBR2] ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. [QBR] ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ [QBR2] ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.
ಯೆರೆಮಿಯ 10 : 8 (ERVKN)
ಬೇರೆ ಜನಾಂಗಗಳ ಎಲ್ಲಾ ಜನರು ಮಂದಬುದ್ಧಿಯವರಾಗಿದ್ದಾರೆ ಮತ್ತು ಮೂರ್ಖರಾಗಿದ್ದಾರೆ; [QBR] ಅವರ ಉಪದೇಶಗಳು ನಿಷ್ಪ್ರಯೋಜಕವಾದ ಮರದ ಬೊಂಬೆಗಳಿಂದ ಬಂದವುಗಳಾಗಿವೆ. [QBR]
ಯೆರೆಮಿಯ 10 : 9 (ERVKN)
ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ [QBR2] ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. [QBR] ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; [QBR] ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. [QBR2] ಅವು ಕುಶಲರ ಕೌಶಲ್ಯವಾಗಿವೆ. [QBR]
ಯೆರೆಮಿಯ 10 : 10 (ERVKN)
ಯೆಹೋವನೊಬ್ಬನೇ ನಿಜವಾದ ದೇವರು. [QBR2] ಆತನು ನಿಜವಾಗಿಯೂ ಜೀವಸ್ವರೂಪನಾಗಿದ್ದಾನೆ. [QBR2] ಆತನು ಶಾಶ್ವತವಾಗಿ ಆಳುವ ರಾಜನಾಗಿದ್ದಾನೆ. [QBR] ಆತನು ಕೋಪಿಸಿಕೊಂಡಾಗ ಭೂಮಿಯು ನಡುಗುತ್ತದೆ. [QBR2] ಜನಾಂಗಗಳು ಆತನ ಕೋಪವನ್ನು ತಡೆಯಲಾರವು.
ಯೆರೆಮಿಯ 10 : 11 (ERVKN)
ಯೆಹೋವನು ಹೇಳುತ್ತಾನೆ, “ಈ ಸಂದೇಶವನ್ನು ಆ ಜನರಿಗೆ ಹೇಳು: [QBR] ‘ಆ ಸುಳ್ಳುದೇವರುಗಳು ಭೂಲೋಕವನ್ನೂ ಪರಲೋಕವನ್ನೂ ಸೃಷ್ಟಿ ಮಾಡಿಲ್ಲ. [QBR2] ಆ ಸುಳ್ಳುದೇವರುಗಳನ್ನು ನಾಶಮಾಡಲಾಗುವುದು; ಅವುಗಳು ಭೂಲೋಕದಿಂದಲೂ ಆಕಾಶದಿಂದಲೂ ಕಣ್ಮರೆಯಾಗುವವು.’ ”
ಯೆರೆಮಿಯ 10 : 12 (ERVKN)
ದೇವರು ತನ್ನ ಶಕ್ತಿಯಿಂದ ಭೂಲೋಕವನ್ನು ಸೃಷ್ಟಿಸಿದನು. [QBR2] ದೇವರು ತನ್ನ ಜ್ಞಾನದಿಂದ ಈ ಜಗತ್ತನ್ನು ನಿರ್ಮಿಸಿದನು. [QBR] ತನ್ನ ವಿವೇಕದಿಂದ ದೇವರು [QBR2] ಈ ಭೂಮಂಡಲದ ಮೇಲೆ ಆಕಾಶವನ್ನು ಹೊದಿಸಿದ್ದಾನೆ. [QBR]
ಯೆರೆಮಿಯ 10 : 13 (ERVKN)
ಯೆಹೋವನು ಗರ್ಜಿಸುವ ಗುಡುಗನ್ನು ಬರಮಾಡುತ್ತಾನೆ. [QBR2] ಆತನು ಆಕಾಶದಿಂದ ನೀರನ್ನು ಮಹಾಪ್ರವಾಹದಂತೆ ಸುರಿಸುತ್ತಾನೆ. [QBR] ಆತನು ಭೂಮಿಯ ಎಲ್ಲೆಡೆಯಿಂದ ಮೇಘಗಳು ಆಕಾಶಕ್ಕೆ ಏರಿಹೋಗುವಂತೆ ಮಾಡುತ್ತಾನೆ. [QBR2] ಆತನು ಮಳೆಯೊಂದಿಗೆ ಸಿಡಿಲನ್ನು ಬೀಳಿಸುತ್ತಾನೆ. [QBR2] ತನ್ನ ಭಂಡಾರದಿಂದ ಹೊರಗೆ ಗಾಳಿ ಬೀಸುವಂತೆ ಮಾಡುತ್ತಾನೆ.
ಯೆರೆಮಿಯ 10 : 14 (ERVKN)
ಜನರು ಬುದ್ಧಿಗೇಡಿಗಳಾಗಿದ್ದಾರೆ. [QBR2] ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. [QBR] ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. [QBR2] ಅವುಗಳಲ್ಲಿ ಜೀವವಿಲ್ಲ. [*ಅವುಗಳಲ್ಲಿ ಜೀವವಿಲ್ಲ ಅಕ್ಷರಶಃ ಅವುಗಳಲ್ಲಿ ಆತ್ಮವಿಲ್ಲ. ಅವುಗಳು ಜೀವಂತವಾಗಿಲ್ಲ ಎಂದಾಗಲಿ ದೇವರಾತ್ಮವು ಅವುಗಳಲ್ಲಿಲ್ಲ ಎಂದಾಗಲಿ ಇದು ಅರ್ಥಕೊಡಬಲ್ಲದು.] [QBR]
ಯೆರೆಮಿಯ 10 : 15 (ERVKN)
ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. [QBR2] ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. [QBR] ನ್ಯಾಯನಿರ್ಣಯದ ಸಮಯದಲ್ಲಿ [QBR2] ಆ ವಿಗ್ರಹಗಳನ್ನು ನಾಶಪಡಿಸಲಾಗುವುದು. [QBR]
ಯೆರೆಮಿಯ 10 : 16 (ERVKN)
ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. [QBR] ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. [QBR2] ಇಸ್ರೇಲು ಆತನ ಸಾಬಸ್ತ್ಯವಾದ ಜನಾಂಗ. [QBR] “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.
ಯೆರೆಮಿಯ 10 : 17 (ERVKN)
{ವಿನಾಶವು ಬರುತ್ತಿದೆ} [PS] ನಿಮ್ಮದಾದ ಎಲ್ಲವನ್ನು ತೆಗೆದುಕೊಂಡು ಇಲ್ಲಿಂದ ಹೊರಡುವುದಕ್ಕೆ ಸಿದ್ಧರಾಗಿರಿ. [QBR] ಯೆಹೂದದ ಜನರಾದ ನೀವು ನಗರದಲ್ಲಿ ಸಿಕ್ಕಿಹಾಕಿಕೊಂಡಿದ್ದೀರಿ. [QBR2] ವೈರಿಯು ನಗರವನ್ನು ಮುತ್ತಿದ್ದಾನೆ. [QBR]
ಯೆರೆಮಿಯ 10 : 18 (ERVKN)
ಯೆಹೋವನು ಹೇಳುತ್ತಾನೆ: [QBR] “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. [QBR2] ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. [QBR2] ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”
ಯೆರೆಮಿಯ 10 : 19 (ERVKN)
ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. [QBR2] ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. [QBR] ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” [QBR2] ಎಂದು ಸಮಾಧಾನ ತಂದುಕೊಂಡೆ. [QBR]
ಯೆರೆಮಿಯ 10 : 20 (ERVKN)
ನನ್ನ ಗುಡಾರವು ಹಾಳಾಗಿದೆ. [QBR2] ಗುಡಾರದ ಎಲ್ಲಾ ಹಗ್ಗಗಳು ಕಿತ್ತುಹೋಗಿವೆ. [QBR] ನನ್ನ ಮಕ್ಕಳು ನನ್ನನ್ನು ಬಿಟ್ಟು [QBR2] ಹೊರಟುಹೋಗಿದ್ದಾರೆ. [QBR] ನನ್ನ ಗುಡಾರವನ್ನು ಹಾಕುವದಕ್ಕೆ ಯಾರೂ ಉಳಿದಿಲ್ಲ. [QBR2] ನನಗಾಗಿ ಒಂದು ಆಸರೆಯನ್ನು ನಿರ್ಮಿಸುವದಕ್ಕೆ ಯಾರೂ ಉಳಿದಿಲ್ಲ. [QBR]
ಯೆರೆಮಿಯ 10 : 21 (ERVKN)
ಕುರುಬರು ಬುದ್ಧಿಗೇಡಿಗಳಾಗಿದ್ದಾರೆ. [QBR2] ಅವರು ಯೆಹೋವನನ್ನು ಹುಡುಕುವ ಪ್ರಯತ್ನ ಮಾಡುವುದಿಲ್ಲ. [QBR] ಅವರು ಜ್ಞಾನಿಗಳಲ್ಲ, [QBR2] ಅವರ ಹಿಂಡುಗಳು ಚದರಿಹೋಗುವವು; ಕಳೆದುಹೋಗುವವು. [QBR]
ಯೆರೆಮಿಯ 10 : 22 (ERVKN)
ಕೇಳಿರಿ, ಉತ್ತರ ದಿಕ್ಕಿನಿಂದ [QBR2] ಬರುತ್ತಿರುವ ಮಹಾಧ್ವನಿಯನ್ನು! [QBR] ಇದು ಯೆಹೂದದ ನಗರಗಳನ್ನು ನಾಶಮಾಡುತ್ತದೆ. [QBR2] ಯೆಹೂದವು ಒಂದು ಬರಿದಾದ ಮರಳುಗಾಡಾಗುವದು, ನರಿಗಳ ನಿವಾಸವಾಗುವುದು.
ಯೆರೆಮಿಯ 10 : 23 (ERVKN)
ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. [QBR2] ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ. [QBR]
ಯೆರೆಮಿಯ 10 : 24 (ERVKN)
ಯೆಹೋವನೇ, ನಮ್ಮನ್ನು ತಿದ್ದು, [QBR2] ಆದರೆ ಕಠೋರನಾಗಬೇಡ, [QBR2] ಕೋಪದಲ್ಲಿ ನಮ್ಮನ್ನು ದಂಡಿಸಬೇಡ. [QBR]
ಯೆರೆಮಿಯ 10 : 25 (ERVKN)
ನಿನಗೆ ಕೋಪ ಬಂದಿದ್ದರೆ [QBR2] ಬೇರೆ ಜನಾಂಗಗಳನ್ನು ಶಿಕ್ಷಿಸು. [QBR] ಅವರು ನಿನ್ನನ್ನು ಅರಿಯದವರಾಗಿದ್ದಾರೆ; ಗೌರವಿಸದವರಾಗಿದ್ದಾರೆ. [QBR2] ಅವರು ನಿನ್ನನ್ನು ಆರಾಧಿಸುವುದಿಲ್ಲ. [QBR] ಆ ಜನಾಂಗಗಳು ಯಾಕೋಬ್ಯರ ವಂಶವನ್ನು ನಾಶಮಾಡಿದರು. [QBR2] ಅವರು ಇಸ್ರೇಲನ್ನು ಸಂಪೂರ್ಣವಾಗಿ ನಾಶಮಾಡಿದರು. [QBR2] ಅವರು ಇಸ್ರೇಲರ ವಾಸಸ್ಥಳವನ್ನು ನಾಶಮಾಡಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: