ಯೆರೆಮಿಯ 47 : 1 (ERVKN)
{ಫಿಲಿಷ್ಟಿಯರ ಬಗ್ಗೆ ಸಂದೇಶ} [PS] ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಬಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಬಂದಿತು.
ಯೆರೆಮಿಯ 47 : 2 (ERVKN)
ಯೆಹೋವನು ಹೀಗೆನ್ನುತ್ತಾನೆ: [QBR] “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. [QBR2] ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. [QBR] ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. [QBR2] ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. [QBR] ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ [QBR2] ಸಹಾಯಕ್ಕಾಗಿ ಗೋಳಿಡುವರು. [QBR]
ಯೆರೆಮಿಯ 47 : 3 (ERVKN)
ಅವರು ವೇಗವಾಗಿ ಓಡುವ [QBR2] ಕುದುರೆಗಳ ಶಬ್ಧವನ್ನು ಕೇಳುವರು. [QBR] ಅವರು ರಭಸವಾಗಿ ಚಲಿಸುವ ರಥಗಳ ಶಬ್ಧವನ್ನು ಕೇಳುವರು. [QBR2] ಅವರು ಚಕ್ರಗಳ ಗಡಗಡ ಶಬ್ಧವನ್ನು ಕೇಳುವರು. [QBR] ತಂದೆಗಳು ತಮ್ಮತಮ್ಮ ಮಕ್ಕಳಿಗೆ ಸುರಕ್ಷಣೆಯನ್ನು [QBR2] ಕೊಡಲಾಗದಷ್ಟು ದುಬರ್ಲರಾಗಿರುವರು. [QBR]
ಯೆರೆಮಿಯ 47 : 4 (ERVKN)
ಎಲ್ಲಾ ಫಿಲಿಷ್ಟಿಯರ ವಿನಾಶನದ ಕಾಲ ಬಂದಿದೆ. [QBR] ತೂರಿನ ಮತ್ತು ಚೀದೋನಿನ ಸಹಾಯಕರಲ್ಲಿ [QBR2] ಅಳಿದುಳಿದವರನ್ನೆಲ್ಲ ನಾಶಮಾಡುವ ಕಾಲ ಬಂದಿದೆ. [QBR] ಯೆಹೋವನು ಬಹುಬೇಗ ಫಿಲಿಷ್ಟಿಯರನ್ನು ನಾಶಮಾಡುವನು. [QBR2] ಕಪ್ತೋರ್ ದಿಬಪದ ಅಳಿದುಳಿದ ಜನರನ್ನು ಆತನು ನಾಶಮಾಡುವನು. [QBR]
ಯೆರೆಮಿಯ 47 : 5 (ERVKN)
ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. [QBR2] ಅಷ್ಕೆಲೋನಿನ ಜನರನ್ನು ಸ್ತಬ್ಧಗೊಳಿಸಲಾಗುವುದು. [QBR] ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, [QBR2] ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?
ಯೆರೆಮಿಯ 47 : 6 (ERVKN)
“ಅಯ್ಯೋ, ಯೆಹೋವನ ಖಡ್ಗವೇ, ನೀನಿನ್ನೂ ಹೋಗಲಿಲ್ಲವೇ? [QBR2] ಎಷ್ಟು ಹೊತ್ತು ನೀನು ಹೋರಾಡುತ್ತಿರುವೆ? [QBR] ನಿನ್ನ ಒರೆಯಲ್ಲಿ ಹೋಗು! [QBR2] ಸುಮ್ಮನಿರು, ಶಾಂತವಾಗಿರು! [QBR]
ಯೆರೆಮಿಯ 47 : 7 (ERVKN)
ಆದರೆ ಯೆಹೋವನ ಖಡ್ಗವು ವಿಶ್ರಾಂತಿ ಪಡೆಯುವುದು ಹೇಗೆ ಸಾಧ್ಯ? [QBR2] ಯೆಹೋವನು ಅದಕ್ಕೆ ಒಂದು ಆಜ್ಞೆಯನ್ನು ಕೊಟ್ಟಿದ್ದಾನೆ. [QBR] ಅಷ್ಕೆಲೋನ್ ನಗರದ ಮೇಲೆ ಮತ್ತು ಕರಾವಳಿಯ ಮೇಲೆ [QBR2] ಧಾಳಿ ಮಾಡಬೇಕೆಂದು ಯೆಹೋವನು ಅದಕ್ಕೆ ಆಜ್ಞೆ ವಿಧಿಸಿದ್ದಾನೆ.” [PE]

1 2 3 4 5 6 7

BG:

Opacity:

Color:


Size:


Font: