ಯೆರೆಮಿಯ 6 : 1 (ERVKN)
{ಶತ್ರುಗಳು ಜೆರುಸಲೇಮ್ ನಗರವನ್ನು ಮುತ್ತಿದರು} [PS] ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; [QBR2] ಜೆರುಸಲೇಮ್ ನಗರದಿಂದ ಓಡಿಹೋಗಿರಿ. [QBR] ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; [QBR2] ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. [QBR] ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. [QBR] ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ. [QBR]
ಯೆರೆಮಿಯ 6 : 2 (ERVKN)
ಚೀಯೋನ್ ಕುಮಾರಿಯೇ, [*ಚೀಯೋನ್ ಕುಮಾರಿಯೇ ಜೆರುಸಲೇಮ್ ಪಟ್ಟಣವೇ.] ನೀನು ಬಹು ಸುಂದರವಾಗಿಯೂ ಮೃದುವಾಗಿಯೂ ಇರುವೆ. [QBR]
ಯೆರೆಮಿಯ 6 : 3 (ERVKN)
ಕುರುಬರು ಜೆರುಸಲೇಮಿಗೆ ಬರುತ್ತಾರೆ. [QBR2] ಮತ್ತು ಕುರಿಮಂದೆಗಳನ್ನು ತರುತ್ತಾರೆ. [QBR] ಅದರ ಸುತ್ತಲೂ ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಾರೆ. [QBR2] ಪ್ರತಿಯೊಬ್ಬ ಕುರುಬನು ತನ್ನ ಕುರಿಹಿಂಡನ್ನು ನೋಡಿಕೊಳ್ಳುತ್ತಾನೆ.
ಯೆರೆಮಿಯ 6 : 4 (ERVKN)
“ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. [QBR2] ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. [QBR] ಆದರೆ ಈಗಾಗಲೇ ಹೊತ್ತಾಗಿದೆ. [QBR2] ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ. [QBR]
ಯೆರೆಮಿಯ 6 : 5 (ERVKN)
ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. [QBR2] ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.”
ಯೆರೆಮಿಯ 6 : 6 (ERVKN)
ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: [QBR2] “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; [QBR2] ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. [QBR] ನಗರವನ್ನು ದಂಡಿಸಬೇಕು. [QBR2] ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ. [QBR]
ಯೆರೆಮಿಯ 6 : 7 (ERVKN)
ಬಾವಿಯಲ್ಲಿ ಹೊಸ ನೀರು ಬರುವಂತೆ [QBR2] ಜೆರುಸಲೇಮಿನಲ್ಲಿ ಹೊಸಹೊಸ ದುಷ್ಟತನ ಉಂಟಾಗುತ್ತದೆ. [QBR] ಈ ಪಟ್ಟಣದಲ್ಲಿ ಬಲಾತ್ಕಾರ ಮತ್ತು ವಿನಾಶಗಳೇ ಕೇಳಿಬರುತ್ತವೆ. [QBR2] ನನಗೆ ಯಾವಾಗಲೂ ಜೆರುಸಲೇಮಿನ ರೋಗ ಮತ್ತು ಗಾಯಗಳು ಕಣ್ಣಿಗೆ ಬೀಳುತ್ತವೆ. [QBR]
ಯೆರೆಮಿಯ 6 : 8 (ERVKN)
ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. [QBR2] ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. [QBR] ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. [QBR2] ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”
ಯೆರೆಮಿಯ 6 : 9 (ERVKN)
ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: [QBR] “ದೇಶದಲ್ಲಿ ಅಳಿದುಳಿದ ಇಸ್ರೇಲಿಯರನ್ನು [QBR2] ಒಟ್ಟಾಗಿ ಸೇರಿಸಿರಿ. [QBR] ದ್ರಾಕ್ಷಿತೋಟದಲ್ಲಿ ಕೊನೆಯ ದ್ರಾಕ್ಷಿಯನ್ನು ಕೀಳುವಂತೆ [QBR2] ಅವರನ್ನು ಒಟ್ಟಾಗಿ ಸೇರಿಸಿ. [QBR] ಕೊಯ್ಲುಗಾರನು ಪ್ರತಿಯೊಂದು ಬಳ್ಳಿಯನ್ನು ನೋಡಿ ದ್ರಾಕ್ಷಿಕೀಳುವಂತೆ [QBR2] ನೀವು ಸೂಕ್ಷ್ಮವಾಗಿ ಗಮನಿಸಿ ಅವರನ್ನು ಒಟ್ಟಾಗಿ ಸೇರಿಸಿರಿ.” [QBR]
ಯೆರೆಮಿಯ 6 : 10 (ERVKN)
ನಾನು ಯಾರೊಂದಿಗೆ ಮಾತನಾಡಲಿ? [QBR2] ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? [QBR2] ನನ್ನ ಮಾತನ್ನು ಯಾರು ಕೇಳುತ್ತಾರೆ? [QBR] ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. [QBR2] ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. [QBR] ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. [QBR2] ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ. [QBR]
ಯೆರೆಮಿಯ 6 : 11 (ERVKN)
ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, [QBR2] ತಡೆದುತಡೆದು ನನಗೆ ಸಾಕಾಗಿದೆ. [QBR] “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. [QBR2] ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. [QBR] ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು. [QBR]
ಯೆರೆಮಿಯ 6 : 12 (ERVKN)
ಅವರ ಮನೆಗಳನ್ನು ಬೇರೆಯವರಿಗೆ ಕೊಡಲಾಗುವುದು. [QBR2] ಅವರ ಹೊಲಗಳನ್ನೂ ಅವರ ಹೆಂಡಂದಿರನ್ನೂ ಬೇರೆಯವರಿಗೆ ಕೊಡಲಾಗುವುದು. [QBR] ನಾನು ನನ್ನ ಕೈ ಎತ್ತಿ ಯೆಹೂದದ ಜನರನ್ನು ದಂಡಿಸುವೆನು.” [QBR] ಇದು ಯೆಹೋವನ ಸಂದೇಶ.
ಯೆರೆಮಿಯ 6 : 13 (ERVKN)
“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. [QBR2] ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. [QBR2] ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ. [QBR]
ಯೆರೆಮಿಯ 6 : 14 (ERVKN)
ಪ್ರವಾದಿಗಳು ಮತ್ತು ಯಾಜಕರು [QBR2] ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. [QBR2] ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ. [QBR]
ಯೆರೆಮಿಯ 6 : 15 (ERVKN)
ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. [QBR2] ಆದರೆ ಅವರು ನಾಚಿಕೆಪಡುವದೇ ಇಲ್ಲ. [QBR] ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. [QBR2] ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. [QBR2] ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” [QBR] ಎಂದು ಯೆಹೋವನು ಅನ್ನುತ್ತಾನೆ.
ಯೆರೆಮಿಯ 6 : 16 (ERVKN)
ಯೆಹೋವನು ಹೀಗೆ ಹೇಳುತ್ತಾನೆ: [QBR] “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. [QBR2] ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. [QBR2] ಆ ರಸ್ತೆಯನ್ನು ಹಿಡಿದು ನಡೆಯಿರಿ. [QBR] ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. [QBR] ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ. [QBR]
ಯೆರೆಮಿಯ 6 : 17 (ERVKN)
ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. [QBR2] ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. [QBR2] ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು. [QBR]
ಯೆರೆಮಿಯ 6 : 18 (ERVKN)
ಆದಕಾರಣ ಸರ್ವಜನಾಂಗಗಳೇ ಕೇಳಿರಿ, [QBR2] ಜನಸಮೂಹಗಳೇ ಗಮನಿಸಿರಿ. ಯೆಹೂದದ ಜನರಿಗೆ ನಾನು ಮಾಡುವುದನ್ನು ಕೇಳಿರಿ. [QBR]
ಯೆರೆಮಿಯ 6 : 19 (ERVKN)
ಭೂಲೋಕದ ಜನರೇ, ಕೇಳಿರಿ, [QBR2] ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. [QBR2] ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, [QBR2] ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”
ಯೆರೆಮಿಯ 6 : 20 (ERVKN)
ಯೆಹೋವನು ಹೇಳುವುದೇನೆಂದರೆ, “ನೀವು ನನ್ನ ಸಲುವಾಗಿ ಶೆಬ ದೇಶದಿಂದ ಧೂಪವನ್ನು ಏಕೆ ತರುವಿರಿ? [QBR2] ನೀವು ದೂರದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವದರಿಂದ ಪ್ರಯೋಜನವೇನು? [QBR] ನಿಮ್ಮ ಹೋಮಗಳಿಂದ ನನಗೆ ಸಂತೋಷವಾಗುವದಿಲ್ಲ. [QBR2] ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.”
ಯೆರೆಮಿಯ 6 : 21 (ERVKN)
“ನಾನು ಯೆಹೂದದ ಜನರೆದುರಿಗೆ ಸಮಸ್ಯೆಗಳನ್ನು ಒಡ್ಡುವೆನು. [QBR2] ಅವುಗಳು ಜನರು ಎಡವಿಬೀಳುವ ಕಲ್ಲುಗಳಂತಾಗುವವು. [QBR] ತಂದೆಗಳೂ ಮಕ್ಕಳೂ ಅವುಗಳಿಂದ ಎಡವಿಬೀಳುವರು. [QBR2] ಸ್ನೇಹಿತರು ಮತ್ತು ನೆರೆಹೊರೆಯವರು ಅವುಗಳಿಂದ ನಾಶವಾಗುವರು” ಅಂದನು.
ಯೆರೆಮಿಯ 6 : 22 (ERVKN)
ಯೆಹೋವನು ಹೇಳುವುದೇನೆಂದರೆ: [QBR] “ಉತ್ತರ ದಿಕ್ಕಿನಿಂದ ಒಂದು ಸೈನ್ಯವು ಬರಲಿದೆ. [QBR2] ಭೂಮಿಯ ಬಹುದೂರದ ಸ್ಥಳಗಳಿಂದ ಒಂದು ಮಹಾಜನಾಂಗವು ಬರಲಿದೆ. [QBR]
ಯೆರೆಮಿಯ 6 : 23 (ERVKN)
ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. [QBR2] ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. [QBR] ಅವರು ಬಲಶಾಲಿಗಳಾಗಿದ್ದಾರೆ. [QBR2] ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. [QBR] ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. [QBR2] ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.” [QBR]
ಯೆರೆಮಿಯ 6 : 24 (ERVKN)
ಆ ಸೈನ್ಯದ ಬಗ್ಗೆ ಸಮಾಚಾರವನ್ನು ನಾವು ಕೇಳಿದ್ದೇವೆ. [QBR2] ಭಯದಿಂದ ನಾವು ಅಸಹಾಯಕರಾಗಿದ್ದೇವೆ. [QBR] ಕಷ್ಟಗಳಲ್ಲಿ ನಾವು ಸಿಕ್ಕಿಹಾಕಿಕೊಂಡಿದ್ದೇವೆ. [QBR2] ಸ್ತ್ರೀಯರ ಪ್ರಸವವೇದನೆಯಂತಿರುವ ಯಾತನೆಯಿಂದ ನಾವು ಬಳಲುತ್ತಿದ್ದೇವೆ. [QBR]
ಯೆರೆಮಿಯ 6 : 25 (ERVKN)
ಊರ ಹೊರಗೆ ಹೋಗಬೇಡಿರಿ. [QBR2] ರಸ್ತೆಗಳ ಮೇಲೆ ಹೋಗಬೇಡಿರಿ. [QBR] ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. [QBR2] ಎಲ್ಲಾ ಕಡೆಗೂ ಅಪಾಯವಿದೆ. [QBR]
ಯೆರೆಮಿಯ 6 : 26 (ERVKN)
ಅಯ್ಯೋ ನನ್ನ ಜನರೇ, [QBR2] ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. [QBR] ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. [QBR2] ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. [QBR] ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
ಯೆರೆಮಿಯ 6 : 27 (ERVKN)
“ಯೆರೆಮೀಯನೇ, ನಾನು ನಿನ್ನನ್ನು [QBR2] ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. [QBR] ನೀನು ನನ್ನ ಜನರನ್ನು ಪರೀಕ್ಷಿಸು. [QBR2] ಅವರ ವ್ಯವಹಾರವನ್ನು ಅವಲೋಕಿಸು. [QBR]
ಯೆರೆಮಿಯ 6 : 28 (ERVKN)
ಅವರೆಲ್ಲರು ನನಗೆ ವಿರುದ್ಧವಾಗಿ ದಂಗೆ ಎದ್ದಿದ್ದಾರೆ; [QBR2] ಅವರು ಬಹಳ ಹಟಮಾರಿಗಳಾಗಿದ್ದಾರೆ. [QBR] ಅವರು ಜನರ ಬಗ್ಗೆ ಅಪಪ್ರಚಾರ ಮಾಡುತ್ತಾ ತಿರುಗಾಡುತ್ತಾರೆ. [QBR2] ಅವರು ಬಣ್ಣಗುಂದಿದ, ತುಕ್ಕುಹಿಡಿದ ಕಂಚಿನಂತೆಯೂ ಕಬ್ಬಿಣದಂತೆಯೂ ಇದ್ದಾರೆ. [QBR]
ಯೆರೆಮಿಯ 6 : 29 (ERVKN)
ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು [†ತಿದಿ ಬೆಂಕಿಗೆ ಗಾಳಿ ಬೀಸುವಂತೆ ಮಾಡುವ ಉಪಕರಣ.] ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. [QBR2] ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. [QBR] ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. [QBR2] ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ. [QBR]
ಯೆರೆಮಿಯ 6 : 30 (ERVKN)
ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ [QBR] ಎಂದು ಕರೆಯಲಾಗುವದು. [QBR2] ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: