ಯೆರೆಮಿಯ 8 : 1 (ERVKN)
ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು.
ಯೆರೆಮಿಯ 8 : 2 (ERVKN)
ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.
ಯೆರೆಮಿಯ 8 : 3 (ERVKN)
“ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
ಯೆರೆಮಿಯ 8 : 4 (ERVKN)
ಪಾಪ ಮತ್ತು ಶಿಕ್ಷೆ “ಯೆರೆಮೀಯನೇ, ಯೆಹೂದದ ಜನರಿಗೆ ಹೀಗೆ ಹೇಳು: ‘ಯೆಹೋವನು ಈ ಮಾತನ್ನು ಹೇಳುತ್ತಾನೆ. “ ‘ಒಬ್ಬ ಮನುಷ್ಯನು ಕೆಳಗೆ ಬಿದ್ದರೆ ಪುನಃ ಅವನು ಮೇಲಕ್ಕೆ ಏಳುತ್ತಾನೆ;
ಒಬ್ಬ ಮನುಷ್ಯನು ತಪ್ಪುದಾರಿ ಹಿಡಿದರೆ ಅವನು ಹಿಂತಿರುಗಿ ಬರುತ್ತಾನೆಂಬುದು ನಿಮಗೆ ಗೊತ್ತು.
ಯೆರೆಮಿಯ 8 : 5 (ERVKN)
ಯೆಹೂದದ ಜನರು ತಪ್ಪುದಾರಿಯನ್ನು ಹಿಡಿದಿದ್ದಾರೆ.
ಆದರೆ ಜೆರುಸಲೇಮಿನ ಜನರು ಆ ತಪ್ಪು ದಾರಿಯ ಮೇಲೆ ನಡೆಯುವದನ್ನು ಏಕೆ ಮುಂದುವರಿಸಿದ್ದಾರೆ?
ತಮ್ಮ ಸುಳ್ಳುಗಳನ್ನೇ ಅವರು ನಂಬಿದ್ದಾರೆ, ಅವರು ಹಿಂತಿರುಗಿ ಬರಲು ಸಿದ್ಧರಿಲ್ಲ.
ಯೆರೆಮಿಯ 8 : 6 (ERVKN)
ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ.
ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ.
ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.
ಯೆರೆಮಿಯ 8 : 7 (ERVKN)
ಆಕಾಶದಲ್ಲಿ ಹಾರಾಡುವ ಬಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ.
ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಬೇಕಾದ ಕಾಲವನ್ನು ಬಲ್ಲವು.
ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.
ಯೆರೆಮಿಯ 8 : 8 (ERVKN)
“ ‘ “ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿ ಇದೆ. ಆದ್ದರಿಂದ ನಾವು ಜ್ಞಾನಿಗಳು” ಎಂದು ನೀವು ಹೇಳುವಿರಿ.
ಆದರೆ ಅದು ನಿಜವಲ್ಲ. ಏಕೆಂದರೆ ಲಿಪಿಗಾರರು ತಮ್ಮ ಲೇಖನಿಯಿಂದ ಸುಳ್ಳು ಬರೆದಿದ್ದಾರೆ.
ಯೆರೆಮಿಯ 8 : 9 (ERVKN)
ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ.
ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.
ಯೆರೆಮಿಯ 8 : 10 (ERVKN)
ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ.
ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
ಯೆರೆಮಿಯ 8 : 11 (ERVKN)
ಪ್ರವಾದಿಗಳು ಮತ್ತು ಯಾಜಕರು ನಮ್ಮ ಜನರ ಆಳವಾದ ಗಾಯಗಳನ್ನು ಕೇವಲ ಅಲ್ಪಗಾಯಗಳಂತೆ ಪರಿಗಣಿಸಿ ಚಿಕಿತ್ಸೆ ಕೊಡುತ್ತಿದ್ದಾರೆ.
“ಎಲ್ಲಾ ಚೆನ್ನಾಗಿದೆ, ಎಲ್ಲಾ ಚೆನ್ನಾಗಿದೆ” ಎಂದು ಅವರು ಹೇಳುತ್ತಾರೆ. ಆದರೆ ಎಲ್ಲಾ ಚೆನ್ನಾಗಿಲ್ಲ.
ಯೆರೆಮಿಯ 8 : 12 (ERVKN)
ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ.
ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’ ”
ಯೆಹೋವನ ನುಡಿಗಳಿವು.
ಯೆರೆಮಿಯ 8 : 13 (ERVKN)
“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ.
ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು.
ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.
ಯೆರೆಮಿಯ 8 : 14 (ERVKN)
“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ.
ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ.
ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.
ಯೆರೆಮಿಯ 8 : 15 (ERVKN)
ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ.
ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.
ಯೆರೆಮಿಯ 8 : 16 (ERVKN)
ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ.
ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ.
ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.
ಯೆರೆಮಿಯ 8 : 17 (ERVKN)
“ಯೆಹೂದದ ಜನರೇ, ನಿಮ್ಮನ್ನು ಕಚ್ಚುವದಕ್ಕಾಗಿ ವಿಷಪೂರಿತ ಹಾವುಗಳನ್ನು ಕಳಿಸುತ್ತಿದ್ದೇನೆ. ಆ ಹಾವುಗಳನ್ನು ತಡೆಯಲಾಗದು. ಅವುಗಳು ನಿಮ್ಮನ್ನು ಕಚ್ಚುವವು.”
ಇದು ಯೆಹೋವನ ನುಡಿ.
ಯೆರೆಮಿಯ 8 : 18 (ERVKN)
ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.
ಯೆರೆಮಿಯ 8 : 19 (ERVKN)
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ.
“ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”
ಯೆರೆಮಿಯ 8 : 20 (ERVKN)
“ಸುಗ್ಗಿಯ ಕಾಲ ಮುಗಿಯಿತು, ಬೇಸಿಗೆ ಕಾಲ ಹೋಯಿತು, ಆದರೆ ನಮಗಿನ್ನೂ ರಕ್ಷಣೆ ಆಗಲಿಲ್ಲ” ಎಂದು ಜನರು ಅನ್ನುತ್ತಾರೆ.
ಯೆರೆಮಿಯ 8 : 21 (ERVKN)
ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.
ಯೆರೆಮಿಯ 8 : 22 (ERVKN)
ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ.
ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?

1 2 3 4 5 6 7 8 9 10 11 12 13 14 15 16 17 18 19 20 21 22