ಯೋಹಾನನು 10 : 1 (ERVKN)
ಕುರುಬನು ಮತ್ತು ಅವನ ಕುರಿಗಳು ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಕುರಿಹಟ್ಟಿಯೊಳಗೆ ಪ್ರವೇಶಿಸುವಾಗ ಬಾಗಿಲಿನ ಮೂಲಕ ಪ್ರವೇಶಿಸಬೇಕು. ಮತ್ತೆಲ್ಲಿಂದಾದರೂ ಹತ್ತಿ ಬರುವವನು ಸುಲಿಗೆಗಾರನಾಗಿದ್ದಾನೆ; ಕುರಿಗಳನ್ನು ಕದ್ದುಕೊಳ್ಳಲು ಪ್ರಯತ್ನಿಸುವವನಾಗಿದ್ದಾನೆ.
ಯೋಹಾನನು 10 : 2 (ERVKN)
ಆದರೆ ಕುರುಬನು ಬಾಗಿಲ ಮೂಲಕ ಪ್ರವೇಶಿಸುತ್ತಾನೆ.
ಯೋಹಾನನು 10 : 3 (ERVKN)
ಕಾವಲುಗಾರನು ಕುರುಬನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ. ಕುರುಬನು ತನ್ನ ಸ್ವಂತ ಕುರಿಗಳನ್ನು ಹೆಸರು ಹಿಡಿದು ಕರೆದು ಹೊರಗೆ ಬಿಡುತ್ತಾನೆ.
ಯೋಹಾನನು 10 : 4 (ERVKN)
ಆ ಬಳಿಕ ಅವುಗಳ ಮುಂದೆ ಹೋಗುತ್ತಾ ಅವುಗಳಿಗೆ ಮಾರ್ಗದರ್ಶನ ಮಾಡುತ್ತಾನೆ. ಕುರಿಗಳು ಅವನನ್ನು ಹಿಂಬಾಲಿಸುತ್ತವೆ; ಏಕೆಂದರೆ ಅವು ಅವನ ಸ್ವರವನ್ನು ತಿಳಿದಿವೆ.
ಯೋಹಾನನು 10 : 5 (ERVKN)
ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ಆ ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.
ಯೋಹಾನನು 10 : 6 (ERVKN)
ಯೇಸು ಹೇಳಿದ ಈ ಸಾಮ್ಯದ ಅರ್ಥವನ್ನು ಜನರು ಗ್ರಹಿಸಿಕೊಳ್ಳಲಿಲ್ಲ.
ಯೋಹಾನನು 10 : 7 (ERVKN)
ಯೇಸು ಒಳ್ಳೆಯ ಕುರುಬ ಆದ್ದರಿಂದ ಯೇಸು ಮತ್ತೆ, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಾನೇ ಕುರಿಗಳಿಗೆ ಬಾಗಿಲಾಗಿದ್ದೇನೆ.
ಯೋಹಾನನು 10 : 8 (ERVKN)
ನಾನು ಬರುವುದಕ್ಕಿಂತ ಮೊದಲು ಬಂದವರೆಲ್ಲರೂ ಕಳ್ಳರಾಗಿದ್ದರು ಮತ್ತು ಸುಲಿಗೆಗಾರರಾಗಿದ್ದರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
ಯೋಹಾನನು 10 : 9 (ERVKN)
ನಾನೇ ಬಾಗಿಲಾಗಿದ್ದೇನೆ. ನನ್ನ ಮೂಲಕವಾಗಿ ಪ್ರವೇಶಿಸುವವರು ರಕ್ಷಣೆ ಹೊಂದುವರು. ಅವರು ಒಳಗೆ ಬರಬಲ್ಲರು. ಹೊರಗೆ ಹೋಗಬಲ್ಲರು ಮತ್ತು ಹುಲ್ಲುಗಾವಲನ್ನು ಕಂಡುಕೊಳ್ಳುವರು.
ಯೋಹಾನನು 10 : 10 (ERVKN)
ಕಳ್ಳನು ಕದಿಯುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆ. ನಾನಾದರೋ ಸಮೃದ್ಧಿಕರವಾದ ಜೀವವನ್ನು ಕೊಡಲು ಬಂದೆನು.
ಯೋಹಾನನು 10 : 11 (ERVKN)
“ನಾನೇ ಒಳ್ಳೆಯ ಕುರುಬ. ಒಳ್ಳೆಯ ಕುರುಬನು ಕುರಿಗಳಿಗಾಗಿ ತನ್ನ ಪ್ರಾಣವನ್ನು ಕೊಡುತ್ತಾನೆ.
ಯೋಹಾನನು 10 : 12 (ERVKN)
ಕುರಿಗಳನ್ನು ನೋಡಿಕೊಳ್ಳುವುದಕ್ಕಾಗಿ ನೇಮಿತನಾಗಿರುವ ಕೂಲಿಯಾಳು ಕುರುಬನಿಗಿಂತ ಭಿನ್ನವಾಗಿದ್ದಾನೆ. ಕೂಲಿಯಾಳು ಕುರಿಗಳ ಒಡೆಯನಲ್ಲ. ಆದ್ದರಿಂದ ಕೂಲಿಯಾಳು ತೋಳ ಬರುವುದನ್ನು ಕಾಣುವಾಗ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳ ಮೇಲೆ ಬಿದ್ದು ಅವುಗಳನ್ನು ಚದರಿಸಿಬಿಡುತ್ತದೆ.
ಯೋಹಾನನು 10 : 13 (ERVKN)
ಆ ವ್ಯಕ್ತಿಯು ಓಡಿಹೋಗುತ್ತಾನೆ. ಏಕೆಂದರೆ ಅವನು ಕೇವಲ ಕೂಲಿಗಾರನಾಗಿದ್ದಾನೆ. ಅವನ ಕುರಿಗಳ ಬಗ್ಗೆ ನಿಜವಾಗಿಯೂ ಚಿಂತಿಸುವುದಿಲ್ಲ.
ಯೋಹಾನನು 10 : 14 (ERVKN)
(14-15) “ನಾನು ಕುರಿಗಳಿಗಾಗಿ (ಜನರಿಗಾಗಿ) ಚಿಂತಿಸುವ ಕುರುಬನಾಗಿದ್ದೇನೆ. ನನ್ನ ತಂದೆಯು ನನ್ನನ್ನು ತಿಳಿದಿರುವಂತೆ ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ಮತ್ತು ನಾನು ನನ್ನ ತಂದೆಯನ್ನು ತಿಳಿದಿರುವಂತೆ ನನ್ನ ಕುರಿಗಳು ನನ್ನನ್ನು ತಿಳಿದಿವೆ. ಈ ಕುರಿಗಳಿಗೋಸ್ಕರ ನನ್ನ ಜೀವವನ್ನೇ ಕೊಡುತ್ತೇನೆ.
ಯೋಹಾನನು 10 : 16 (ERVKN)
ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಈ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.
ಯೋಹಾನನು 10 : 17 (ERVKN)
ತಂದೆಯು ನನ್ನನ್ನು ಪ್ರೀತಿಸುತ್ತಾನೆ. ಏಕೆಂದರೆ ನಾನು ನನ್ನ ಪ್ರಾಣವನ್ನು ಮತ್ತೆ ಪಡೆದುಕೊಳ್ಳುವುದಕ್ಕಾಗಿ ಕೊಡುತ್ತೇನೆ.
ಯೋಹಾನನು 10 : 18 (ERVKN)
ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.
ಯೋಹಾನನು 10 : 19 (ERVKN)
ಯೇಸು ಈ ಸಂಗತಿಗಳನ್ನು ಹೇಳಿದ್ದರಿಂದ ಯೆಹೂದ್ಯರಲ್ಲಿ ಮತ್ತೆ ಭೇದ ಉಂಟಾಯಿತು.
ಯೋಹಾನನು 10 : 20 (ERVKN)
ಅವರಲ್ಲಿ ಅನೇಕರು, “ಅವನೊಳಗೆ ದೆವ್ವವು ಸೇರಿಕೊಂಡು ಅವನನ್ನು ಹುಚ್ಚನನ್ನಾಗಿ ಮಾಡಿದೆ. ಅವನಿಗೆ ಏಕೆ ಕಿವಿಗೊಡುತ್ತೀರಿ?” ಎಂದು ಹೇಳಿದರು.
ಯೋಹಾನನು 10 : 21 (ERVKN)
ಆದರೆ ಇತರರು, “ದೆವ್ವದಿಂದ ಹುಚ್ಚು ಹಿಡಿದಿರುವ ಮನುಷ್ಯನು ಈ ರೀತಿಯ ಸಂಗತಿಗಳನ್ನು ಹೇಳುವುದಿಲ್ಲ. ಕುರುಡರ ಕಣ್ಣುಗಳನ್ನು ಗುಣಪಡಿಸಲು ದೆವ್ವಕ್ಕೆ ಸಾಧ್ಯವೇ? ಇಲ್ಲ!” ಎಂದು ಹೇಳಿದರು.
ಯೋಹಾನನು 10 : 22 (ERVKN)
ಯೇಸುವಿನ ವಿರುದ್ಧ ಯೆಹೂದ್ಯರು ಜೆರುಸಲೇಮಿನಲ್ಲಿ ಆಚರಿಸುವ ಪ್ರತಿಷ್ಠೆಯ ಹಬ್ಬವು ನಡೆಯುತ್ತಿತ್ತು. ಅದು ಚಳಿಗಾಲದಲ್ಲಿ ಆಚರಿಸುವ ಹಬ್ಬ.
ಯೋಹಾನನು 10 : 23 (ERVKN)
ಯೇಸು ದೇವಾಲಯದೊಳಗೆ ಸೊಲೊಮೋನನ ಆಲಯದಲ್ಲಿದ್ದನು.
ಯೋಹಾನನು 10 : 24 (ERVKN)
ಯೆಹೂದ್ಯರು ಯೇಸುವಿನ ಸುತ್ತಲೂ ನೆರೆದರು. ಅವರು ಆತನಿಗೆ, “ಇನ್ನೆಷ್ಟುಕಾಲ ನೀನು ನಿನ್ನ ಬಗ್ಗೆ ನಮ್ಮನ್ನು ಆಶ್ಚರ್ಯಗೊಳಿಸುವೆ? ನೀನು ಕ್ರಿಸ್ತನಾಗಿದ್ದರೆ, ನಮಗೆ ಸ್ಪಷ್ಟವಾಗಿ ತಿಳಿಸು” ಎಂದು ಹೇಳಿದರು.
ಯೋಹಾನನು 10 : 25 (ERVKN)
ಯೇಸು, “ನಾನು ಆಗಲೇ ನಿಮಗೆ ಹೇಳಿದೆನು. ಆದರೆ ನೀವು ನಂಬಲಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಅದ್ಭುತಕಾರ್ಯಗಳನ್ನು ಮಾಡುತ್ತೇನೆ. ನಾನು ಯಾರೆಂಬುದನ್ನು ಆ ಅದ್ಭುತಕಾರ್ಯಗಳು ತೋರಿಸುತ್ತವೆ.
ಯೋಹಾನನು 10 : 26 (ERVKN)
ಆದರೆ ನೀವು ನಂಬುವುದಿಲ್ಲ. ಏಕೆಂದರೆ ನೀವು ನನ್ನ ಕುರಿಗಳಲ್ಲ (ಜನರಲ್ಲ).
ಯೋಹಾನನು 10 : 27 (ERVKN)
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು ಮತ್ತು ಅವುಗಳು ನನ್ನನ್ನು ಹಿಂಬಾಲಿಸುತ್ತವೆ.
ಯೋಹಾನನು 10 : 28 (ERVKN)
ನನ್ನ ಕುರಿಗಳಿಗೆ ನಾನು ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ಸಾಯುವುದಿಲ್ಲ, ಮತ್ತು ಅವುಗಳನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು.
ಯೋಹಾನನು 10 : 29 (ERVKN)
ನನ್ನ ಕುರಿಗಳನ್ನು ನನ್ನ ತಂದೆಯೇ ನನಗೆ ಕೊಟ್ಟನು. ಆತನು ಎಲ್ಲರಿಗಿಂತಲೂ ದೊಡ್ಡವನಾಗಿದ್ದಾನೆ. ನನ್ನ ಕುರಿಗಳನ್ನು ನನ್ನ ತಂದೆಯ ಕೈಯಿಂದ ಯಾರೂ ಕದ್ದುಕೊಳ್ಳಲಾರರು.
ಯೋಹಾನನು 10 : 30 (ERVKN)
ತಂದೆಯು ಮತ್ತು ನಾನು ಒಂದೇ ಆಗಿದ್ದೇವೆ” ಎಂದು ಉತ್ತರಕೊಟ್ಟನು.
ಯೋಹಾನನು 10 : 31 (ERVKN)
ಯೆಹೂದ್ಯರು ಯೇಸುವನ್ನು ಕೊಲ್ಲಲು ಮತ್ತೆ ಕಲ್ಲುಗಳನ್ನು ತೆಗೆದುಕೊಂಡರು.
ಯೋಹಾನನು 10 : 32 (ERVKN)
ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಆ ಕಾರ್ಯಗಳನ್ನು ನೋಡಿದ್ದೀರಿ. ಆ ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
ಯೋಹಾನನು 10 : 33 (ERVKN)
ಯೆಹೂದ್ಯರು, “ನಾವು ನಿನ್ನನ್ನು ಕೊಲ್ಲುತ್ತಿರುವುದು ನೀನು ಮಾಡಿದ ಯಾವುದೇ ಒಳ್ಳೆಯ ಕಾರ್ಯದ ನಿಮಿತ್ತದಿಂದಲ್ಲ. ನೀನು ಮಾಡುತ್ತಿರುವ ದೇವದೂಷಣೆಗಾಗಿ. ನೀನು ಕೇವಲ ಒಬ್ಬ ಮನುಷ್ಯ. ನೀನು ನಿನ್ನನ್ನೇ ದೇವರೆಂದು ಹೇಳಿಕೊಳ್ಳುತ್ತಿರುವೆ! ಆದಕಾರಣ ಕಲ್ಲುಗಳಿಂದ ನಿನ್ನನ್ನು ಕೊಲ್ಲಬೇಕೆಂದಿದ್ದೇವೆ!” ಎಂದು ಉತ್ತರಕೊಟ್ಟರು.
ಯೋಹಾನನು 10 : 34 (ERVKN)
ಅದಕ್ಕೆ ಯೇಸು, “ನಿಮ್ಮ ಧರ್ಮಶಾಸ್ತ್ರದಲ್ಲಿ, ‘ನಾನು ನಿಮ್ಮನ್ನು ದೇವರುಗಳೆಂದು ಹೇಳಿದೆನು’ ✡ಉಲ್ಲೇಖನ: ಕೀರ್ತನೆ. 82:6. ಎಂಬುದಾಗಿ ಬರೆದಿದೆ.
ಯೋಹಾನನು 10 : 35 (ERVKN)
ದೇವರ ಸಂದೇಶವನ್ನು ಹೊಂದಿದ್ದ ಜನರನ್ನು ಈ ಪವಿತ್ರ ಗ್ರಂಥವು ದೇವರುಗಳೆಂದು ಕರೆದಿದೆ. ಪವಿತ್ರ ಗ್ರಂಥವು ಯಾವಾಗಲೂ ಸತ್ಯವಾದದ್ದು.
ಯೋಹಾನನು 10 : 36 (ERVKN)
ತಂದೆಯೇ ನನ್ನನ್ನು ಪ್ರತಿಷ್ಠಿಸಿ ಈ ಲೋಕಕ್ಕೆ ಕಳುಹಿಸಿಕೊಟ್ಟಿರುವುದರಿಂದ ನಾನು ದೇವರ ಮಗನು ಎಂದು ಹೇಳಿದ್ದಕ್ಕೆ ನೀವು ನನ್ನನ್ನು ದೇವದೂಷಣೆ ಮಾಡುವವನೆಂದು ಹೇಳುವುದೇಕೆ?
ಯೋಹಾನನು 10 : 37 (ERVKN)
ನನ್ನ ತಂದೆಯು ಮಾಡುವುದನ್ನು ನಾನು ಮಾಡದಿದ್ದರೆ, ನಾನು ಹೇಳುವುದನ್ನು ನಂಬಬೇಡಿ.
ಯೋಹಾನನು 10 : 38 (ERVKN)
ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಆ ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದುಕೊಳ್ಳುವಿರಿ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.
ಯೋಹಾನನು 10 : 39 (ERVKN)
ಯೇಸುವನ್ನು ಬಂಧಿಸಲು ಯೆಹೂದ್ಯರು ಮತ್ತೆ ಪ್ರಯತ್ನಿಸಿದರು. ಆದರೆ ಯೇಸು ಅವರಿಂದ ತಪ್ಪಿಸಿಕೊಂಡನು.
ಯೋಹಾನನು 10 : 40 (ERVKN)
ಬಳಿಕ ಯೇಸು ಜೋರ್ಡನ್ ನದಿಯ ಆಚೆಯ ದಡಕ್ಕೆ ಹೋದನು. ಯೋಹಾನನು ಮೊದಲು ದೀಕ್ಷಾಸ್ನಾನ ಕೊಡುತ್ತಿದ್ದ ಸ್ಥಳಕ್ಕೆ ಯೇಸು ಹೋಗಿ ಅಲ್ಲಿ ತಂಗಿದನು.
ಯೋಹಾನನು 10 : 41 (ERVKN)
ಆಗ ಅನೇಕ ಜನರು ಆತನ ಬಳಿಗೆ ಬಂದರು. “ಯೋಹಾನನು ಎಂದೂ ಅದ್ಭುತಕಾರ್ಯವನ್ನು ಮಾಡಲಿಲ್ಲ. ಆದರೆ ಯೋಹಾನನು ಈ ಮನುಷ್ಯನ (ಯೇಸುವಿನ) ಬಗ್ಗೆ ಹೇಳಿದ ಪ್ರತಿಯೊಂದೂ ಸತ್ಯವಾದದ್ದು” ಎಂದು ಅವರು ಮಾತಾಡಿಕೊಂಡರು.
ಯೋಹಾನನು 10 : 42 (ERVKN)
ಮತ್ತು ಅಲ್ಲಿ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42