ಯೋಹಾನನು 11 : 1 (ERVKN)
ಲಾಜರನೆಂಬ ಒಬ್ಬನು ಅಸ್ವಸ್ಥನಾಗಿದ್ದನು. ಅವನು ಬೆಥಾನಿ ಎಂಬ ಊರಿನಲ್ಲಿ ವಾಸವಾಗಿದ್ದನು. ಮರಿಯಳು ಮತ್ತು ಆಕೆಯ ಸಹೋದರಿಯಾದ ಮಾರ್ಥಳು ಈ ಊರಿನಲ್ಲೇ ವಾಸವಾಗಿದ್ದರು.
ಯೋಹಾನನು 11 : 2 (ERVKN)
ಪ್ರಭುವಿಗೆ (ಯೇಸುವಿಗೆ) ಪರಿಮಳತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆಕೂದಲಿನಿಂದ ಒರಸಿದವಳೇ ಈ ಮರಿಯಳು. ಅಸ್ವಸ್ಥನಾಗಿದ್ದ ಲಾಜರನು ಮರಿಯಳ ಸಹೋದರನಾಗಿದ್ದನು.
ಯೋಹಾನನು 11 : 3 (ERVKN)
ಆದ್ದರಿಂದ ಮರಿಯಳು ಮತ್ತು ಮಾರ್ಥಳು, “ಪ್ರಭುವೇ, ನಿನ್ನ ಪ್ರಿಯ ಸ್ನೇಹಿತನಾದ ಲಾಜರನು ಅಸ್ವಸ್ಥನಾಗಿದ್ದಾನೆ” ಎಂಬ ಸಂದೇಶವನ್ನು ಆತನಿಗೆ ತಿಳಿಸಲು ಒಬ್ಬನನ್ನು ಕಳುಹಿಸಿಕೊಟ್ಟರು.
ಯೋಹಾನನು 11 : 4 (ERVKN)
ಯೇಸು ಇದನ್ನು ಕೇಳಿದಾಗ, “ಈ ಕಾಯಿಲೆಯು ದೇವರ ಮತ್ತು ದೇವಕುಮಾರನ ಮಹಿಮೆಗಾಗಿ ಬಂದಿದೆಯೇ ಹೊರತು ಮರಣಕ್ಕಾಗಿಯಲ್ಲ” ಎಂದು ಹೇಳಿದನು.
ಯೋಹಾನನು 11 : 5 (ERVKN)
(ಯೇಸು ಮಾರ್ಥಳನ್ನು, ಆಕೆಯ ಸಹೋದರಿಯನ್ನು ಮತ್ತು ಲಾಜರನ್ನು ಪ್ರೀತಿಸುತ್ತಿದ್ದನು.)
ಯೋಹಾನನು 11 : 6 (ERVKN)
؅ಲಾಜರನು ಅಸ್ವಸ್ಥನಾಗಿದ್ದಾನೆ؆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.
ಯೋಹಾನನು 11 : 7 (ERVKN)
ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಜುದೇಯಕ್ಕೆ ಹಿಂತಿರುಗಿ ಹೋಗಬೇಕು” ಎಂದು ಹೇಳಿದನು.
ಯೋಹಾನನು 11 : 8 (ERVKN)
ಶಿಷ್ಯರು, “ಗುರುವೇ, ಜುದೇಯದ ಯೆಹೂದ್ಯರು ನಿನ್ನನ್ನು ಕಲ್ಲುಗಳಿಂದ ಕೊಲ್ಲಲು ಪ್ರಯತ್ನಿಸಿದರು. ಅದಾದದ್ದು ಕೇವಲ ಸ್ವಲ್ಪಕಾಲದ ಹಿಂದೆಯಷ್ಟೇ. ಈಗ ನೀನು ಮತ್ತೆ ಅಲ್ಲಿಗೆ ಹೋಗಬೇಕೆನ್ನುವಿಯಾ?” ಎಂದು ಉತ್ತರಕೊಟ್ಟರು.
ಯೋಹಾನನು 11 : 9 (ERVKN)
ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿ ಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.
ಯೋಹಾನನು 11 : 10 (ERVKN)
ಆದರೆ ರಾತ್ರಿಯಲ್ಲಿ ನಡೆಯುವವನು ಎಡವುತ್ತಾನೆ. ಏಕೆಂದರೆ ನೋಡಿಕೊಂಡು ನಡೆಯಲು ಅವನಿಗೆ ಯಾವ ಬೆಳಕೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.
ಯೋಹಾನನು 11 : 11 (ERVKN)
ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ, “ನಮ್ಮ ಸ್ನೇಹಿತನಾದ ಲಾಜರನು ಈಗ ನಿದ್ರಿಸುತ್ತಿದ್ದಾನೆ. ಅವನನ್ನು ಎಬ್ಬಿಸಲು ನಾನು ಅಲ್ಲಿಗೆ ಹೋಗುತ್ತಿದ್ದೇನೆ” ಎಂದು ಹೇಳಿದನು.
ಯೋಹಾನನು 11 : 12 (ERVKN)
ಶಿಷ್ಯರು, “ಪ್ರಭುವೇ, ಅವನು ನಿದ್ರೆ ಮಾಡುತ್ತಿದ್ದರೆ ಆರೋಗ್ಯ ಹೊಂದುವನು” ಎಂದು ಉತ್ತರಕೊಟ್ಟರು.
ಯೋಹಾನನು 11 : 13 (ERVKN)
ಲಾಜರನು ಸತ್ತುಹೋಗಿದ್ದಾನೆ. ಎಂಬರ್ಥದಲ್ಲಿ ಯೇಸು ಹೇಳಿದನು. ಆದರೆ ಲಾಜರನು ನಿಜವಾಗಿಯೂ ನಿದ್ರಿಸುತ್ತಿದ್ದಾನೆ ಎಂಬರ್ಥದಲ್ಲಿ ಯೇಸು ಹೇಳಿದನೆಂಬುದಾಗಿ ಶಿಷ್ಯರು ಭಾವಿಸಿಕೊಂಡರು.
ಯೋಹಾನನು 11 : 14 (ERVKN)
ಆದ್ದರಿಂದ ಯೇಸು, “ಲಾಜರನು ಸತ್ತುಹೋಗಿದ್ದಾನೆ.
ಯೋಹಾನನು 11 : 15 (ERVKN)
ಆದರೆ ನಾನು ಅಲ್ಲಿ ಇಲ್ಲದಿದ್ದ ಕಾರಣ ಸಂತೋಷಿಸುತ್ತೇನೆ. ನಿಮ್ಮ ವಿಷಯದಲ್ಲಿಯೂ ನಾನು ಸಂತೋಷಪಡುತ್ತೇನೆ. ಏಕೆಂದರೆ, ಆಗ ನೀವು ನನ್ನಲ್ಲಿ ನಂಬಿಕೆ ಇಡುವಿರಿ. ಬನ್ನಿ, ಅವನ ಬಳಿಗೆ ಹೋಗೋಣ” ಎಂದು ಸ್ವಷ್ಟವಾಗಿ ಹೇಳಿದನು.
ಯೋಹಾನನು 11 : 16 (ERVKN)
ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಹೋಗಿ ಜುದೇಯದಲ್ಲಿ ಸಾಯೋಣ” ಎಂದು ಹೇಳಿದನು.
ಯೋಹಾನನು 11 : 17 (ERVKN)
ಯೇಸು ಬೆಥಾನಿಯಕ್ಕೆ ಬಂದನು. ಈಗಾಗಲೇ ಲಾಜರನು ಸತ್ತು ಸಮಾಧಿಯಾಗಿ ನಾಲ್ಕು ದಿನಗಳಾಯಿತೆಂಬುದು ಯೇಸುವಿಗೆ ತಿಳಿಯಿತು.
ಯೋಹಾನನು 11 : 18 (ERVKN)
ಬೆಥಾನಿಯು ಜೆರುಸಲೇಮಿನಿಂದ ಸುಮಾರು ಎರಡು ಮೈಲಿಗಳಷ್ಟು ದೂರದಲ್ಲಿತ್ತು.
ಯೋಹಾನನು 11 : 19 (ERVKN)
ಅನೇಕ ಯೆಹೂದ್ಯರು ಮಾರ್ಥ ಮತ್ತು ಮರಿಯಳ ಬಳಿಗೆ ಬಂದಿದ್ದರು. ಮಾರ್ಥ ಮತ್ತು ಮರಿಯಳನ್ನು ಅವರ ತಮ್ಮನಾದ ಲಾಜರನ ವಿಷಯದಲ್ಲಿ ಸಂತೈಸಲು ಯೆಹೂದ್ಯರು ಬಂದಿದ್ದರು.
ಯೋಹಾನನು 11 : 20 (ERVKN)
ಯೇಸು ಬರುತ್ತಿದ್ದಾನೆ ಎಂಬ ಸುದ್ದಿಯನ್ನು ಕೇಳಿ ಮಾರ್ಥಳು ಆತನನ್ನು ವಂದಿಸಲು ಹೊರಗೆ ಹೋದಳು. ಆದರೆ ಮರಿಯಳು ಮನೆಯಲ್ಲೇ ಇದ್ದಳು.
ಯೋಹಾನನು 11 : 21 (ERVKN)
ಮಾರ್ಥಳು ಯೇಸುವಿಗೆ, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ.
ಯೋಹಾನನು 11 : 22 (ERVKN)
ಆದರೆ ಈಗಲೂ ಸಹ ನೀನು ಏನನ್ನೇ ಕೇಳಿಕೊಂಡರೂ ದೇವರು ನಿನಗೆ ಕೊಡುತ್ತಾನೆ ಎಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.
ಯೋಹಾನನು 11 : 23 (ERVKN)
ಯೇಸು, “ನಿನ್ನ ಸಹೋದರನು ಮತ್ತೆ ಜೀವಂತವಾಗಿ ಎದ್ದುಬರುವನು” ಎಂದು ಹೇಳಿದನು.
ಯೋಹಾನನು 11 : 24 (ERVKN)
ಮಾರ್ಥಳು, “ಅಂತಿಮ ದಿನದಂದು ಪುನರುತ್ಥಾನವಾಗುವಾಗ ಅವನು ಮತ್ತೆ ಎದ್ದುಬರುವನೆಂದು ನನಗೆ ಗೊತ್ತಿದೆ” ಎಂಬುದಾಗಿ ಉತ್ತರ ಕೊಟ್ಟಳು.
ಯೋಹಾನನು 11 : 25 (ERVKN)
ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.
ಯೋಹಾನನು 11 : 26 (ERVKN)
ಮತ್ತು ಬದುಕುತ್ತಾ ನನ್ನನ್ನು ನಂಬುವವನು ಎಂದಿಗೂ ನಿಜವಾಗಿ ಸಾಯುವುದಿಲ್ಲ. ಮಾರ್ಥಳೇ, ನೀನು ಇದನ್ನು ನಂಬುವಿಯಾ?” ಎಂದನು.
ಯೋಹಾನನು 11 : 27 (ERVKN)
ಮಾರ್ಥಳು, “ಹೌದು ಪ್ರಭುವೇ, ನೀನು ದೇವರ ಮಗನಾದ ಕ್ರಿಸ್ತನೆಂದು ನಾನು ನಂಬುವೆ. ಈ ಲೋಕಕ್ಕೆ ಬರಬೇಕಾಗಿದ್ದವನು ನೀನೇ” ಎಂದು ಉತ್ತರಕೊಟ್ಟಳು.
ಯೋಹಾನನು 11 : 28 (ERVKN)
ಮಾರ್ಥಳು ಹೀಗೆ ಹೇಳಿದ ಮೇಲೆ, ತನ್ನ ಸಹೋದರಿಯಾದ ಮರಿಯಳ ಬಳಿಗೆ ಹಿಂತಿರುಗಿ ಹೋದಳು. ಮಾರ್ಥಳು ಮರಿಯಳೊಂದಿಗೆ ಪ್ರತ್ಯೇಕವಾಗಿ ಮಾತಾಡಿ, “ಗುರುವು (ಯೇಸು) ನಿನ್ನನ್ನು ಕರೆಯುತ್ತಿದ್ದಾನೆ” ಎಂದು ತಿಳಿಸಿದಳು.
ಯೋಹಾನನು 11 : 29 (ERVKN)
ಇದನ್ನು ಕೇಳಿದ ಕೂಡಲೇ ಮರಿಯಳು ಎದ್ದು ಯೇಸುವಿನ ಬಳಿಗೆ ಬೇಗಬೇಗನೆ ಹೋದಳು.
ಯೋಹಾನನು 11 : 30 (ERVKN)
ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ತನ್ನನ್ನು ಸಂಧಿಸಿದ ಸ್ಥಳದಲ್ಲೇ ಆತನಿದ್ದನು.
ಯೋಹಾನನು 11 : 31 (ERVKN)
ಯೆಹೂದ್ಯರು ಮರಿಯಳೊಂದಿಗೆ ಮನೆಯಲ್ಲಿದ್ದರು. ಅವರು ಆಕೆಯನ್ನು ಸಂತೈಸುತ್ತಿದ್ದರು. ಮರಿಯಳು ಎದ್ದು ಬೇಗನೆ ಹೋಗುವುದನ್ನು ಅವರು ಕಂಡರು. ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಅವರು ಭಾವಿಸಿಕೊಂಡು ಆಕೆಯನ್ನು ಹಿಂಬಾಲಿಸಿದರು.
ಯೋಹಾನನು 11 : 32 (ERVKN)
ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.
ಯೋಹಾನನು 11 : 33 (ERVKN)
ಮರಿಯಳ ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದಾಗ, ತನ್ನ ಹೃದಯದಲ್ಲಿ ಬಹಳವಾಗಿ ದುಃಖಗೊಂಡು ತತ್ತರಿಸಿದನು.
ಯೋಹಾನನು 11 : 34 (ERVKN)
ಯೇಸು ಅವರಿಗೆ, “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದು ಕೇಳಿದನು. ಅದಕ್ಕೆ ಅವರು, “ಸ್ವಾಮೀ, ಬಂದು ನೋಡು” ಎಂದರು.
ಯೋಹಾನನು 11 : 35 (ERVKN)
ಯೇಸು ಕಣ್ಣೀರಿಟ್ಟನು.
ಯೋಹಾನನು 11 : 36 (ERVKN)
ಆಗ ಯೆಹೂದ್ಯರು, “ನೋಡಿ! ಯೇಸು ಅವನನ್ನು ಬಹಳವಾಗಿ ಪ್ರೀತಿಸುತ್ತಿದ್ದನು!” ಎಂದರು.
ಯೋಹಾನನು 11 : 37 (ERVKN)
ಆದರೆ ಕೆಲವು ಯೆಹೂದ್ಯರು, “ಯೇಸು ಕುರುಡನ ಕಣ್ಣುಗಳನ್ನು ಗುಣಪಡಿಸಿದನಲ್ಲಾ; ಲಾಜರನಿಗೂ ಸಹಾಯಮಾಡಿ ಅವನನ್ನು ಸಾವಿನಿಂದ ತಪ್ಪಿಸಬಾರದಾಗಿತ್ತೇ?” ಎಂದರು.
ಯೋಹಾನನು 11 : 38 (ERVKN)
ಯೇಸು ತನ್ನ ಹೃದಯದಲ್ಲಿ ಮತ್ತೆ ಬಹಳವಾಗಿ ದುಃಖಗೊಂಡು, ಲಾಜರನಿದ್ದ ಸಮಾಧಿಯ ಬಳಿಗೆ ಬಂದನು. ಆ ಸಮಾಧಿಯು ಒಂದು ಗವಿಯಾಗಿತ್ತು. ಅದರ ಬಾಯಿಗೆ ದೊಡ್ಡಕಲ್ಲನ್ನು ಮುಚ್ಚಿದ್ದರು.
ಯೋಹಾನನು 11 : 39 (ERVKN)
”ಆ ಕಲ್ಲನ್ನು ತೆಗೆದುಹಾಕಿರಿ” ಎಂದು ಯೇಸು ಹೇಳಿದನು. ಲಾಜರನ ಅಕ್ಕಳಾದ ಮಾರ್ಥಳು, “ಪ್ರಭುವೇ, ಲಾಜರನು ಸತ್ತು ನಾಲ್ಕು ದಿನಗಳಾಗಿವೆ. ಆದ್ದರಿಂದ ಅಲ್ಲಿ ದುರ್ವಾಸನೆಯಿರುತ್ತದೆ” ಎಂದು ಹೇಳಿದಳು.
ಯೋಹಾನನು 11 : 40 (ERVKN)
ಯೇಸು ಮಾರ್ಥಳಿಗೆ, “ನಾನು ನಿನಗೆ ಹೇಳಿದ್ದನ್ನು ಜ್ಞಾಪಿಸಿಕೊಳ್ಳುವಿಯಾ? ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಿದೆನು” ಎಂದನು.
ಯೋಹಾನನು 11 : 41 (ERVKN)
ಆದ್ದರಿಂದ ಅವರು ಸಮಾಧಿಯ ಬಾಯಿಂದ ಕಲ್ಲನ್ನು ತೆಗೆದು ಹಾಕಿದರು. ಆಗ ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ, ನನ್ನ ಪ್ರಾರ್ಥನೆಯನ್ನು ಕೇಳಿದರಿಂದ ನಿನ್ನನ್ನು ಕೊಂಡಾಡುತ್ತೇನೆ.
ಯೋಹಾನನು 11 : 42 (ERVKN)
ನೀನು ಯಾವಾಗಲೂ ನನಗೆ ಕಿವಿಗೊಡುವೆ ಎಂಬುದು ನನಗೆ ತಿಳಿದಿದೆ. ಆದರೆ ಇಲ್ಲಿ ನನ್ನ ಸುತ್ತಲೂ ನೆರೆದಿರುವ ಜನರಿಗೋಸ್ಕರವಾಗಿ ನಾನು ಈ ಸಂಗತಿಗಳನ್ನು ಹೇಳಿದೆನು. ನೀನೇ ನನ್ನನ್ನು ಕಳುಹಿಸಿರುವುದಾಗಿ ಅವರು ನಂಬಬೇಕೆಂದು ನಾನು ಬಯಸುತ್ತೇನೆ” ಎಂದನು.
ಯೋಹಾನನು 11 : 43 (ERVKN)
ಬಳಿಕ ಯೇಸು ಗಟ್ಟಿಯಾದ ಧ್ವನಿಯಿಂದ, “ಲಾಜರನೇ, ಹೊರಗೆ ಬಾ!” ಎಂದು ಕರೆದನು.
ಯೋಹಾನನು 11 : 44 (ERVKN)
ಸತ್ತುಹೋಗಿದ್ದವನು (ಲಾಜರನು) ಹೊರಗೆ ಬಂದನು. ಅವನ ಕೈಕಾಲುಗಳನ್ನು ಬಟ್ಟೆಗಳಿಂದ ಸುತ್ತಲಾಗಿತ್ತು. ಅವನ ಮುಖವನ್ನು ಕರವಸ್ತ್ರದಿಂದ ಮುಚ್ಚಲಾಗಿತ್ತು. ಆಗ ಯೇಸು, “ಅವನಿಗೆ ಸುತ್ತಿರುವ ಬಟ್ಟೆಗಳನ್ನು ತೆಗೆದುಹಾಕಿರಿ, ಅವನು ಹೋಗಲಿ” ಎಂದು ಹೇಳಿದನು.
ಯೋಹಾನನು 11 : 45 (ERVKN)
ಮರಿಯಳನ್ನು ಸಂದರ್ಶಿಸಲು ಬಂದಿದ್ದ ಅನೇಕ ಯೆಹೂದ್ಯರು ಅಲ್ಲಿದ್ದರು. ಯೇಸು ಮಾಡಿದ ಈ ಕಾರ್ಯವನ್ನು ಕಂಡ ಇವರಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.
ಯೋಹಾನನು 11 : 46 (ERVKN)
ಆದರೆ ಕೆಲವು ಯೆಹೂದ್ಯರು ಫರಿಸಾಯರ ಬಳಿಗೆ ಹೋಗಿ, ಯೇಸು ಮಾಡಿದ್ದನ್ನು ತಿಳಿಸಿದರು.
ಯೋಹಾನನು 11 : 47 (ERVKN)
ಆಗ ಮಹಾಯಾಜಕರು ಮತ್ತು ಫರಿಸಾಯರು ಯೆಹೂದ್ಯರ ಆಲೋಚನಾಸಭೆಯನ್ನು ಕರೆದು, “ನಾವು ಏನು ಮಾಡಬೇಕು? ಈ ಮನುಷ್ಯನು (ಯೇಸು) ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಿದ್ದಾನೆ.
ಯೋಹಾನನು 11 : 48 (ERVKN)
ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.
ಯೋಹಾನನು 11 : 49 (ERVKN)
ಅವರಲ್ಲಿ ಕಾಯಫನೆಂಬ ಒಬ್ಬನಿದ್ದನು. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಅವನು, “ನಿಮಗೆ ಏನೂ ಗೊತ್ತಿಲ್ಲ!
ಯೋಹಾನನು 11 : 50 (ERVKN)
ಇಡೀ ಜನಾಂಗವು ನಾಶವಾಗುವುದಕ್ಕಿಂತ ಒಬ್ಬನು ಅವರಿಗೋಸ್ಕರವಾಗಿ ಸಾಯುವುದು ಉತ್ತಮ. ಆದರೆ ನೀವು ಇದನ್ನು ಅರ್ಥಮಾಡಿಕೊಳ್ಳುತ್ತಿಲ್ಲ” ಎಂದು ಹೇಳಿದನು.
ಯೋಹಾನನು 11 : 51 (ERVKN)
ಇದು ಕಾಯಫನ ಸ್ವಂತ ಆಲೋಚನೆಯಾಗಿರಲಿಲ್ಲ. ಅವನು ಆ ವರ್ಷ ಮಹಾಯಾಜಕನಾಗಿದ್ದನು. ಆದ್ದರಿಂದ ಯೆಹೂದ್ಯರಿಗೋಸ್ಕರವಾಗಿ ಯೇಸು ಸಾಯುತ್ತಾನೆಂದು ಅವನು ನಿಜವಾಗಿಯೂ ಪ್ರವಾದಿಸಿದನು.
ಯೋಹಾನನು 11 : 52 (ERVKN)
ಹೌದು, ಯೆಹೂದ್ಯರಿಗಾಗಿಯೂ ಲೋಕದಲ್ಲೆಲ್ಲಾ ಚದರಿಹೋಗಿರುವ ದೇವರ ಮಕ್ಕಳನ್ನೆಲ್ಲ ಒಂದುಗೂಡಿಸುವುದಕ್ಕಾಗಿಯೂ ಆತನು ಸಾಯಲಿದ್ದನು.
ಯೋಹಾನನು 11 : 53 (ERVKN)
ಅಂದಿನಿಂದ ಯೆಹೂದ್ಯನಾಯಕರು ಯೇಸುವನ್ನು ಕೊಲ್ಲಲು ಸಂಚು ಮಾಡಲಾರಂಭಿಸಿದರು.
ಯೋಹಾನನು 11 : 54 (ERVKN)
ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.
ಯೋಹಾನನು 11 : 55 (ERVKN)
ಆಗ ಯೆಹೂದ್ಯರ ಪಸ್ಕಹಬ್ಬವು ಸಮೀಪವಾಗಿತ್ತು. ಪಸ್ಕಹಬ್ಬಕ್ಕಿಂತ ಮೊದಲೇ ತಮ್ಮ ಗ್ರಾಮಗಳಿಂದ ಅನೇಕ ಜನರು ಜೆರುಸಲೇಮಿಗೆ ಹೋಗಿದ್ದರು. ವಿಶೇಷವಾದ ಕಾರ್ಯಗಳನ್ನು ಮಾಡಿ ಪಸ್ಕಹಬ್ಬಕ್ಕಾಗಿ ತಮ್ಮನ್ನು ಶುದ್ಧೀಕರಿಸಿಕೊಳ್ಳಬೇಕೆಂದು ಅವರು ಹೋಗಿದ್ದರು.
ಯೋಹಾನನು 11 : 56 (ERVKN)
ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
ಯೋಹಾನನು 11 : 57 (ERVKN)
ಆದರೆ ಮಹಾ ಯಾಜಕರು ಮತ್ತು ಫರಿಸಾಯರು, ಯೇಸು ಎಲ್ಲಿದ್ದಾನೆಂಬುದು ಯಾರಿಗಾದರೂ ತಿಳಿದು ಬಂದರೆ ತಮಗೆ ತಿಳಿಸಬೇಕೆಂದು ವಿಶೇಷ ಆಜ್ಞೆಯನ್ನು ಪ್ರಕಟಿಸಿದ್ದರು. ಅವರು ಆತನನ್ನು ಬಂಧಿಸಬೇಕೆಂದಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51 52 53 54 55 56 57

BG:

Opacity:

Color:


Size:


Font: