ಯೋಹಾನನು 12 : 1 (ERVKN)
ಬೆಥಾನಿಯಲ್ಲಿ ಯೇಸು (ಮತ್ತಾಯ 26:6-13; ಮಾರ್ಕ 14:3-9) ಪಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿದ್ದಾಗ ಯೇಸು ಬೆಥಾನಿಗೆ ಹೋದನು. ಲಾಜರನು ವಾಸವಾಗಿದ್ದ ಊರೇ ಬೆಥಾನಿ. (ಯೇಸು ಸತ್ತವರೊಳಗಿಂದ ಎಬ್ಬಿಸಿದ ಮನುಷ್ಯನೇ ಲಾಜರನು.)
ಯೋಹಾನನು 12 : 2 (ERVKN)
ಅವರು ಯೇಸುವಿಗೆ ರಾತ್ರಿಭೋಜನವನ್ನು ಏರ್ಪಡಿಸಿದ್ದರು. ಮಾರ್ಥಳು ಊಟವನ್ನು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟ ಮಾಡುತ್ತಿದ್ದವರಲ್ಲಿ ಲಾಜರನೂ ಒಬ್ಬನಾಗಿದ್ದನು.
ಯೋಹಾನನು 12 : 3 (ERVKN)
ಆಗ ಮರಿಯಳು, ಬಹು ಬೆಲೆಬಾಳುವ ಸುಗಂಧತೈಲವನ್ನು *ಸುಗಂಧತೈಲ ನಾರ್ಡ್ ಗಿಡದ ಅಪ್ಪಟ ಬೇರಿನಿಂದ ಮಾಡಿದ ಅತ್ಯಂತ ಬೆಲೆಬಾಳುವ ತೈಲ. ಅರ್ಧ ಲೀಟರಿನಷ್ಟು ತೆಗೆದುಕೊಂಡು ಬಂದು, ಯೇಸುವಿನ ಪಾದಗಳಿಗೆ ಹಚ್ಚಿದಳು. ಬಳಿಕ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರೆಸಿದಳು. ಆ ಪರಿಮಳದ್ರವ್ಯದ ಸುವಾಸನೆಯು ಇಡೀ ಮನೆಯನ್ನೇ ತುಂಬಿಕೊಂಡಿತು.
ಯೋಹಾನನು 12 : 4 (ERVKN)
ಇಸ್ಕರಿಯೋತ ಯೂದನು ಅಲ್ಲಿದ್ದನು. ಅವನು ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದನು. (ಮುಂದೆ, ಯೇಸುವಿಗೆ ದ್ರೋಹ ಮಾಡಿದವನು ಇವನೇ.) ಮರಿಯಳು ಮಾಡಿದ ಈ ಕಾರ್ಯವನ್ನು ಯೂದನು ಇಷ್ಟಪಡಲಿಲ್ಲ.
ಯೋಹಾನನು 12 : 5 (ERVKN)
ಅವನು, “ಆ ಪರಿಮಳದ ದ್ರವ್ಯದ ಬೆಲೆ ಮುನ್ನೂರು ಬೆಳ್ಳಿನಾಣ್ಯಗಳು. †ಬೆಳ್ಳಿನಾಣ್ಯ ಮೂಲ ದಿನಾರಿ. ಒಬ್ಬ ಕೆಲಸಗಾರನ ಒಂದು ದಿನದ ಸಂಬಳ. ಅದನ್ನು ಮಾರಿ ಆ ಹಣವನ್ನು ಬಡವರಿಗೆ ಕೊಡಬೇಕಿತ್ತು” ಎಂದು ಟೀಕಿಸಿದನು.
ಯೋಹಾನನು 12 : 6 (ERVKN)
ಆದರೆ ಯೂದನಿಗೆ ಬಡವರ ಬಗ್ಗೆ ನಿಜವಾಗಿಯೂ ಚಿಂತೆಯಿರಲಿಲ್ಲ. ಅವನು ಕಳ್ಳನಾಗಿದ್ದುದರಿಂದ ಹಾಗೆ ಹೇಳಿದನು. ಶಿಷ್ಯಸಮುದಾಯಕ್ಕೋಸ್ಕರವಿದ್ದ ಹಣದ ಪೆಟ್ಟಿಗೆಯು ಅವನ ವಶದಲ್ಲಿತ್ತು. ಅವನು ಆಗಾಗ್ಗೆ ಆ ಪೆಟ್ಟಿಗೆಯಿಂದ ಹಣವನ್ನು ಕದ್ದುಕೊಳ್ಳುತ್ತಿದ್ದನು.
ಯೋಹಾನನು 12 : 7 (ERVKN)
ಯೇಸು ಅವನಿಗೆ, “ಆಕೆಯನ್ನು ತಡೆಯಬೇಡ. ನನ್ನನ್ನು ಶವಸಂಸ್ಕಾರಕ್ಕೆ ಸಿದ್ಧಪಡಿಸುವ ಈ ದಿನಕ್ಕೋಸ್ಕರ ಆಕೆ ಸುಗಂಧ ದ್ರವ್ಯವನ್ನು ಶೇಖರಿಸಿದ್ದು ಒಳ್ಳೆಯದೇ ಸರಿ.
ಯೋಹಾನನು 12 : 8 (ERVKN)
ಬಡವರು ಯಾವಾಗಲೂ ನಿಮ್ಮೊಂದಿಗಿರುತ್ತಾರೆ ಆದರೆ ನಾನು ನಿಮ್ಮೊಂದಿಗೆ ಯಾವಾಗಲೂ ಇರುವುದಿಲ್ಲ” ಎಂದು ಉತ್ತರಕೊಟ್ಟನು.
ಯೋಹಾನನು 12 : 9 (ERVKN)
ಲಾಜರನ ವಿರುದ್ಧ ಸಂಚು ಯೇಸು ಬೆಥಾನಿಯಲ್ಲಿದ್ದಾನೆ ಎಂಬ ಸುದ್ದಿಯನ್ನು ಅನೇಕ ಯೆಹೂದ್ಯರು ಕೇಳಿ ಆತನನ್ನೂ ಲಾಜರನನ್ನೂ ನೋಡಬೇಕೆಂದು ಅಲ್ಲಿಗೆ ಹೋದರು. ಯೇಸುವಿನಿಂದ ಜೀವಂತವಾಗಿ ಎಬ್ಬಿಸಲ್ಪಟ್ಟವನೇ ಲಾಜರನು.
ಯೋಹಾನನು 12 : 10 (ERVKN)
ಆದರೆ ಮಹಾಯಾಜಕರು ಲಾಜರನನ್ನು ಸಹ ಕೊಲ್ಲಲು ಯೋಜನೆಗಳನ್ನು ಮಾಡಿದರು.
ಯೋಹಾನನು 12 : 11 (ERVKN)
ಲಾಜರನ ನಿಮಿತ್ತ ಅನೇಕ ಯೆಹೂದ್ಯರು ತಮ್ಮ ನಾಯಕರನ್ನು ತೊರೆದು ಯೇಸುವಿನಲ್ಲಿ ನಂಬಿಕೆ ಇಡುತ್ತಿದ್ದರು. ಆದಕಾರಣವೇ ಯೆಹೂದ್ಯ ನಾಯಕರು ಲಾಜರನನ್ನು ಸಹ ಕೊಲ್ಲಬೇಕೆಂದಿದ್ದರು.
ಯೋಹಾನನು 12 : 12 (ERVKN)
ಜೆರುಸಲೇಮಿಗೆ ಯೇಸುವಿನ ಪ್ರವೇಶ (ಮತ್ತಾಯ 21:1-11; ಮಾರ್ಕ 11:1-11; ಲೂಕ 19:28-40) ಮರುದಿನ, ಯೇಸು ಜೆರುಸಲೇಮಿಗೆ ಬರುತ್ತಿದ್ದಾನೆ ಎಂಬ ಸುದ್ದಿ ಅಲ್ಲಿಯ ಜನರಿಗೆ ತಿಳಿಯಿತು. ಪಸ್ಕಹಬ್ಬಕ್ಕಾಗಿ ಬಂದಿದ್ದ ಅನೇಕರು ಅಲ್ಲಿದ್ದರು.
ಯೋಹಾನನು 12 : 13 (ERVKN)
ಜನರು ಖರ್ಜೂರದ ಗರಿಗಳನ್ನು ತೆಗೆದುಕೊಂಡು ಯೇಸುವನ್ನು ಎದುರುಗೊಳ್ಳಲು ಹೋದರು. “ಆತನಿಗೆ ಸ್ತೋತ್ರವಾಗಲಿ! ‘ಪ್ರಭುವಿನ ಹೆಸರಿನಲ್ಲಿ ಬರುವಾತನಿಗೆ ದೇವರಾಶೀರ್ವಾದವಾಗಲಿ!’ ಕೀರ್ತನೆ. 118:25-26] ಇಸ್ರೇಲ್ ರಾಜನಿಗೆ ದೇವರಾಶೀರ್ವಾದವಾಗಲಿ!” ಎಂದು ಜನರು ಕೂಗಿದರು.
ಯೋಹಾನನು 12 : 14 (ERVKN)
ಯೇಸು ಅಲ್ಲಿದ್ದ ಕತ್ತೆಯೊಂದನ್ನು ಕಂಡು, ಅದರ ಮೇಲೆ ಕುಳಿತುಕೊಂಡು ಹೊರಟನು. ಪವಿತ್ರ ಗ್ರಂಥ ಹೇಳುವಂತೆಯೇ ಇದು ನೆರವೇರಿತು:
ಯೋಹಾನನು 12 : 15 (ERVKN)
“ಸಿಯೋನ್ ನಗರವೇ, ಭಯಪಡಬೇಡ! ನೋಡು! ನಿನ್ನ ರಾಜನು ಬರುತ್ತಿದ್ದಾನೆ.
ಆತನು ಪ್ರಾಯದ ಕತ್ತೆಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ.” ಜಕರ್ಯ 9:9
ಯೋಹಾನನು 12 : 16 (ERVKN)
ಯೇಸುವಿನ ಶಿಷ್ಯರು ಆ ಸಮಯದಲ್ಲಿ ಇದನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ಯೇಸು ಮಹಿಮಾಪದವಿಗೆ ಏರಿಹೋದ ನಂತರ, ಈ ಸಂಗತಿಗಳು ಆತನ ವಿಷಯವಾಗಿ ಬರೆಯಲ್ಪಟ್ಟಿವೆ ಎಂಬುದನ್ನು ಶಿಷ್ಯರು ಅರ್ಥಮಾಡಿಕೊಂಡರು; ಮತ್ತು ತಾವು ಆತನಿಗಾಗಿ ಮಾಡಿದ ಕಾರ್ಯಗಳನ್ನು ಜ್ಞಾಪಿಸಿಕೊಂಡರು.
ಯೋಹಾನನು 12 : 17 (ERVKN)
ಯೇಸುವಿನ ಬಗ್ಗೆ ಜನರ ಹೇಳಿಕೆ ಯೇಸು ಲಾಜರನಿಗೆ ಸಮಾಧಿಯೊಳಗಿಂದ ಬರುವಂತೆ ಹೇಳಿ ಅವನನ್ನು ಜೀವಂತವಾಗಿ ಎಬ್ಬಿಸಿದಾಗ ಅನೇಕ ಜನರು ಯೇಸುವಿನ ಸಂಗಡ ಇದ್ದರು. ಯೇಸು ಮಾಡಿದ ಈ ಕಾರ್ಯದ ಬಗ್ಗೆ ಅವರು ಇತರರಿಗೆ ಹೇಳುತ್ತಿದ್ದರು.
ಯೋಹಾನನು 12 : 18 (ERVKN)
ಯೇಸು ಮಾಡಿದ ಈ ಅದ್ಭುತಕಾರ್ಯವನ್ನು ಕೇಳಿ, ಅನೇಕ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.
ಯೋಹಾನನು 12 : 19 (ERVKN)
ಆದ್ದರಿಂದ ಫರಿಸಾಯರು, “ನೋಡಿ! ನಮ್ಮ ಯೋಜನೆಯು ನಿಷ್ಪ್ರಯೋಜಕವಾಯಿತು. ಜನರು ಆತನನ್ನೇ ಹಿಂಬಾಲಿಸುತ್ತಿದ್ದಾರೆ!” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು. ಜೀವ, ಮರಣಗಳ ಬಗ್ಗೆ ಯೇಸುವಿನ ಉಪದೇಶ
ಯೋಹಾನನು 12 : 20 (ERVKN)
ಅಲ್ಲಿ ಗ್ರೀಕ್ ಜನರು ಸಹ ಇದ್ದರು. ಪಸ್ಕಹಬ್ಬದಲ್ಲಿ ಆರಾಧಿಸುವುದಕ್ಕಾಗಿ ಜೆರುಸಲೇಮಿಗೆ ಹೋಗಿದ್ದವರಲ್ಲಿ ಇವರೂ ಸೇರಿದ್ದರು.
ಯೋಹಾನನು 12 : 21 (ERVKN)
ಈ ಗ್ರೀಕ್ ಜನರು ಫಿಲಿಪ್ಪನ ಬಳಿಗೆ ಹೋದರು. (ಫಿಲಿಪ್ಪನು ಗಲಿಲಾಯದ ಬೆತ್ಸಾಯಿ ಎಂಬ ಊರಿನವನಾಗಿದ್ದವನು.) ಅವರು, “ಸ್ವಾಮೀ, ನಾವು ಯೇಸುವನ್ನು ನೋಡಬೇಕು” ಎಂದು ಅವನನ್ನು ಕೇಳಿಕೊಂಡರು.
ಯೋಹಾನನು 12 : 22 (ERVKN)
ಫಿಲಿಪ್ಪನು ಅಂದ್ರೆಯನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದನು. ಬಳಿಕ ಅಂದ್ರೆಯನು ಮತ್ತು ಫಿಲಿಪ್ಪನು ಒಟ್ಟಾಗಿ ಯೇಸುವಿನ ಬಳಿಗೆ ಹೋಗಿ ಈ ವಿಷಯವನ್ನು ತಿಳಿಸಿದರು.
ಯೋಹಾನನು 12 : 23 (ERVKN)
ಯೇಸು ಅವರಿಗೆ, “ಮನುಷ್ಯಕುಮಾರನು ತನ್ನ ಮಹಿಮೆಯನ್ನು ಹೊಂದುವ ಸಮಯ ಇದೇ ಆಗಿದೆ.
ಯೋಹಾನನು 12 : 24 (ERVKN)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.
ಯೋಹಾನನು 12 : 25 (ERVKN)
ತನ್ನ ಸ್ವಂತ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಆದರೆ ಈ ಲೋಕದಲ್ಲಿ ತನ್ನ ಪ್ರಾಣವನ್ನು ದ್ವೇಷಿಸುವವನು ಅದನ್ನು ಉಳಿಸಿಕೊಳ್ಳುವನು. ಅವನು ನಿತ್ಯಜೀವವನ್ನು ಹೊಂದುವನು.
ಯೋಹಾನನು 12 : 26 (ERVKN)
ನನ್ನ ಸೇವೆ ಮಾಡುವವನು ನನ್ನನ್ನು ಹಿಂಬಾಲಿಸಬೇಕು. ಆಗ ನಾನು ಇರುವಲ್ಲೆಲ್ಲಾ ನನ್ನ ಸೇವಕನು ಇರುವನು. ನನ್ನ ಸೇವೆಮಾಡುವ ಜನರನ್ನು ನನ್ನ ತಂದೆಯು ಸನ್ಮಾನಿಸುವನು” ಎಂದು ಹೇಳಿದನು.
ಯೋಹಾನನು 12 : 27 (ERVKN)
ತನ್ನ ಮರಣದ ಕುರಿತು ಯೇಸುವಿನ ಹೇಳಿಕೆ ಯೇಸು ಮಾತನ್ನು ಮುಂದುವರಿಸಿ, “ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ನನ್ನನ್ನು ಈ ಸಂಕಟ ಕಾಲದಿಂದ ರಕ್ಷಿಸು ಎನ್ನಬೇಕೇ?’ ಇಲ್ಲ! ಸಂಕಟಪಡುವುದಕ್ಕೋಸ್ಕರವೇ ನಾನು ಬಂದಿದ್ದೇನೆ.
ಯೋಹಾನನು 12 : 28 (ERVKN)
ತಂದೆಯೇ, ನಿನ್ನ ಹೆಸರನ್ನು ಮಹಿಮೆಪಡಿಸಿಕೊ!” ಎಂದು ಹೇಳಿದನು. ಆಗ ಪರಲೋಕದಿಂದ, “ನನ್ನ ಹೆಸರನ್ನು ಮಹಿಮೆಪಡಿಸಿಕೊಂಡಿದ್ದೇನೆ. ನಾನು ಮತ್ತೆ ಮಹಿಮೆಪಡಿಸಿಕೊಳ್ಳುವೆನು” ಎಂಬ ವಾಣಿ ಆಯಿತು.
ಯೋಹಾನನು 12 : 29 (ERVKN)
ಅಲ್ಲಿ ನಿಂತಿದ್ದ ಜನರು ಈ ವಾಣಿಯನ್ನು ಕೇಳಿ “ಅದು ಗುಡುಗು” ಎಂದರು. ಆದರೆ ಇತರರು, “ದೇವದೂತನೊಬ್ಬನು ಯೇಸುವಿನೊಂದಿಗೆ ಮಾತಾಡಿದನು!” ಎಂದರು.
ಯೋಹಾನನು 12 : 30 (ERVKN)
ಯೇಸು ಜನರಿಗೆ, “ಆ ವಾಣಿಯಾದದ್ದು ನನಗೋಸ್ಕರವಲ್ಲ, ನಿಮಗೋಸ್ಕರ.
ಯೋಹಾನನು 12 : 31 (ERVKN)
ಈ ಲೋಕಕ್ಕೆ ತೀರ್ಪಾಗುವ ಕಾಲ ಇದೇ ಆಗಿದೆ. ಈಗ ಈ ಲೋಕದ ಅಧಿಪತಿಯನ್ನು (ಸೈತಾನ) ಹೊರಗೆ ದಬ್ಬಲಾಗುವುದು.
ಯೋಹಾನನು 12 : 32 (ERVKN)
ನಾನು ಭೂಮಿಯಿಂದ ಮೇಲೆತ್ತಲ್ಪಡುವೆನು. ಆಗ ನಾನು ಎಲ್ಲಾ ಜನರನ್ನು ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.
ಯೋಹಾನನು 12 : 33 (ERVKN)
ತಾನು ಸಾಯುವ ರೀತಿಯನ್ನು ಯೇಸು ಈ ಮಾತಿನ ಮೂಲಕ ಸೂಚಿಸಿದನು.
ಯೋಹಾನನು 12 : 34 (ERVKN)
ಜನರು, “ಕ್ರಿಸ್ತನು ಸದಾಕಾಲ ಜೀವಿಸುತ್ತಾನೆ ಎಂದು ನಮ್ಮ ಧರ್ಮಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ, ‘ಮನುಷ್ಯಕುಮಾರನು ಮೇಲೆತ್ತಲ್ಪಡುವನು’ ಎಂದು ನೀನು ಹೇಳುವುದೇಕೆ? ಈ ಮನುಷ್ಯಕುಮಾರನು ಯಾರು?” ಎಂದು ಕೇಳಿದರು.
ಯೋಹಾನನು 12 : 35 (ERVKN)
ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.
ಯೋಹಾನನು 12 : 36 (ERVKN)
ಆದ್ದರಿಂದ ನೀವು ಬೆಳಕನ್ನು ಇನ್ನೂ ಹೊಂದಿರುವಾಗಲೇ ಅದರಲ್ಲಿ ನಂಬಿಕೆ ಇಡಿರಿ. ಆಗ ನೀವು ಬೆಳಕಿನವರಾಗುವಿರಿ” ಎಂದು ಹೇಳಿದನು. ಈ ಸಂಗತಿಗಳನ್ನು ಹೇಳಿದ ಮೇಲೆ ಯೇಸು ಅಲ್ಲಿಂದ ಹೊರಟು, ತನ್ನನ್ನು ಜನರು ಕಂಡುಕೊಳ್ಳಲಾಗದ ಸ್ಥಳಕ್ಕೆ ಹೋದನು.
ಯೋಹಾನನು 12 : 37 (ERVKN)
ಯೆಹೂದ್ಯರ ಅಪನಂಬಿಕೆ ಯೇಸು ಅನೇಕ ಮಹತ್ಕಾರ್ಯಗಳನ್ನು ಮಾಡಿದನು. ಜನರು ಆ ಕಾರ್ಯಗಳನ್ನೆಲ್ಲಾ ನೋಡಿದರೂ ಆತನಲ್ಲಿ ನಂಬಿಕೆ ಇಡಲಿಲ್ಲ.
ಯೋಹಾನನು 12 : 38 (ERVKN)
ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1]
ಯೋಹಾನನು 12 : 39 (ERVKN)
ಆದಕಾರಣವೇ ಜನರು ನಂಬಲಾಗಲಿಲ್ಲ. ಏಕೆಂದರೆ ಯೆಶಾಯನು ಮತ್ತೊಂದು ಕಡೆಯಲ್ಲಿ ಹೀಗೆ ಹೇಳಿದ್ದಾನೆ:
ಯೋಹಾನನು 12 : 40 (ERVKN)
“ತಮ್ಮ ಕಣ್ಣುಗಳಿಂದ ಕಾಣದಂತೆ ತಮ್ಮ ಮನಸ್ಸುಗಳಿಂದ ಅರ್ಥಮಾಡಿಕೊಳ್ಳದಂತೆ
ಪರಿವರ್ತನೆಗೊಂಡು ಗುಣಹೊಂದದಂತೆ ಆತನು ಅವರನ್ನು ಕುರುಡರನ್ನಾಗಿ ಮಾಡಿದ್ದಾನೆ,
ಅವರ ಮನಸ್ಸುಗಳನ್ನು ಕಲ್ಲಾಗಿಸಿದ್ದಾನೆ.” ಯೆಶಾಯ 6:10]
ಯೋಹಾನನು 12 : 41 (ERVKN)
ಯೆಶಾಯನು ಆತನ (ಯೇಸುವಿನ) ಮಹಿಮೆಯನ್ನು ನೋಡಿದ್ದರಿಂದಲೇ ಹೀಗೆ ಹೇಳಿದನು.
ಯೋಹಾನನು 12 : 42 (ERVKN)
ಆದರೆ ಅನೇಕ ಜನರು ಯೇಸುವಿನಲ್ಲಿ ನಂಬಿಕೆ ಇಟ್ಟರು. ಅನೇಕ ಯೆಹೂದ್ಯನಾಯಕರು ಸಹ ಯೇಸುವಿನಲ್ಲಿ ನಂಬಿಕೆಯಿಟ್ಟರು. ಆದರೆ ಅವರು ಫರಿಸಾಯರಿಗೆ ಹೆದರಿಕೊಂಡು ತಮ್ಮ ನಂಬಿಕೆಯನ್ನು ಬಹಿರಂಗಪಡಿಸಲಿಲ್ಲ. ತಮ್ಮನ್ನು ಫರಿಸಾಯರು ಸಭಾಮಂದಿರದಿಂದ ಬಹಿಷ್ಕರಿಸುತ್ತಾರೆ ಎಂಬ ಭಯ ಅವರಿಗಿತ್ತು.
ಯೋಹಾನನು 12 : 43 (ERVKN)
ಈ ಜನರು ದೇವರ ಹೊಗಳಿಕೆಗಿಂತಲೂ ಜನರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.
ಯೋಹಾನನು 12 : 44 (ERVKN)
ಯೇಸುವಿನ ಉಪದೇಶ ಜನರಿಗೆ ತೀರ್ಪು ಮಾಡುವುದು ಬಳಿಕ ಯೇಸು ಗಟ್ಟಿಯಾಗಿ ಹೀಗೆಂದನು: “ನನ್ನಲ್ಲಿ ನಂಬಿಕೆ ಇಡುವವನು ನನ್ನನ್ನು ಕಳುಹಿಸಿದಾತನಲ್ಲಿ (ದೇವರು) ನಿಜವಾಗಿಯೂ ನಂಬಿಕೆ ಇಡುವವನಾಗಿದ್ದಾನೆ.
ಯೋಹಾನನು 12 : 45 (ERVKN)
ನನ್ನನ್ನು ನೋಡುವವನು ನನ್ನನ್ನು ಕಳುಹಿಸಿದಾತನನ್ನು ನಿಜವಾಗಿಯೂ ನೋಡುವವನಾಗಿದ್ದಾನೆ.
ಯೋಹಾನನು 12 : 46 (ERVKN)
ನಾನೇ ಬೆಳಕಾಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಕತ್ತಲೆಯಲ್ಲಿ ಇರಬಾರದೆಂದು ನಾನೇ ಈ ಲೋಕಕ್ಕೆ ಬಂದಿದ್ದೇನೆ.
ಯೋಹಾನನು 12 : 47 (ERVKN)
“ನಾನು ಈ ಲೋಕಕ್ಕೆ ಬಂದದ್ದು ಜನರಿಗೆ ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದಲ್ಲಿರುವ ಜನರನ್ನು ರಕ್ಷಿಸುವುದಕ್ಕಾಗಿ ನಾನು ಬಂದೆನು. ಆದ್ದರಿಂದ ನನ್ನ ಮಾತುಗಳನ್ನು ಕೇಳಿಯೂ ನಂಬದಿರುವ ಜನರಿಗೆ ತೀರ್ಪು ಮಾಡುವವನು ನಾನಲ್ಲ.
ಯೋಹಾನನು 12 : 48 (ERVKN)
ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.
ಯೋಹಾನನು 12 : 49 (ERVKN)
ಏಕೆಂದರೆ, ನನ್ನ ಮಾತುಗಳು ನನ್ನಿಂದ ಬಂದವುಗಳಲ್ಲ. ನನ್ನನ್ನು ಕಳುಹಿಸಿದ ತಂದೆಯೇ ನಾನು ಏನು ಹೇಳಬೇಕು, ಏನು ಮಾತಾಡಬೇಕು ಎಂದು ನನಗೆ ಹೇಳಿಕೊಟ್ಟಿದ್ದಾನೆ.
ಯೋಹಾನನು 12 : 50 (ERVKN)
ತಂದೆಯ ಆಜ್ಞೆಯು ನಿತ್ಯಜೀವಕ್ಕೆ ನಡೆಸುತ್ತದೆ ಎಂದು ನಾನು ಬಲ್ಲೆನು. ಆದ್ದರಿಂದ ತಂದೆಯು ನನಗೆ ಹೇಳಿಕೊಟ್ಟ ಸಂಗತಿಗಳನ್ನೇ ನಾನು ತಿಳಿಸುತ್ತೇನೆ.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50