ಯೋಹಾನನು 14 : 1 (ERVKN)
ಶಿಷ್ಯರಿಗೆ ಯೇಸುವಿನ ಆದರಣೆ ಮಾತುಗಳು ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.
ಯೋಹಾನನು 14 : 2 (ERVKN)
ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.
ಯೋಹಾನನು 14 : 3 (ERVKN)
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.
ಯೋಹಾನನು 14 : 4 (ERVKN)
ನಾನು ಹೋಗಲಿರುವ ಸ್ಥಳದ ದಾರಿಯು ನಿಮಗೆ ತಿಳಿದಿದೆ” ಎಂದು ಹೇಳಿದನು.
ಯೋಹಾನನು 14 : 5 (ERVKN)
ತೋಮನು ಯೇಸುವಿಗೆ, “ಪ್ರಭುವೇ, ನೀನು ಹೋಗುತ್ತಿರುವುದು ಎಲ್ಲಿಗೆಂಬುದೇ ನಮಗೆ ಗೊತ್ತಿಲ್ಲ. ಹೀಗಿರಲು, ಆ ದಾರಿಯನ್ನು ನಾವು ಹೇಗೆ ತಿಳಿದುಕೊಳ್ಳಲಾದೀತು?” ಎಂದನು.
ಯೋಹಾನನು 14 : 6 (ERVKN)
ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.
ಯೋಹಾನನು 14 : 7 (ERVKN)
ನೀವು ನನ್ನನ್ನು ನಿಜವಾಗಿಯೂ ತಿಳಿದಿದ್ದರೆ, ನನ್ನ ತಂದೆಯನ್ನು ಸಹ ತಿಳಿದುಕೊಳ್ಳುತ್ತಿದ್ದಿರಿ. ಆದರೆ ಈಗ ನೀವು ತಂದೆಯನ್ನು ತಿಳಿದಿದ್ದೀರಿ. ನೀವು ಆತನನ್ನು ನೋಡಿದ್ದೀರಿ” ಎಂದು ಹೇಳಿದನು.
ಯೋಹಾನನು 14 : 8 (ERVKN)
ಫಿಲಿಪ್ಪನು ಯೇಸುವಿಗೆ, “ಪ್ರಭುವೇ, ನಮಗೆ ತಂದೆಯನ್ನು ತೋರಿಸು. ನಮಗೆ ಅಷ್ಟೇ ಸಾಕು” ಎಂದು ಹೇಳಿದನು.
ಯೋಹಾನನು 14 : 9 (ERVKN)
ಯೇಸು, “ಫಿಲಿಪ್ಪನೇ, ನಾನು ಇಷ್ಟು ಕಾಲದಿಂದ ನಿನ್ನೊಂದಿಗಿದ್ದರೂ ನೀನು ನನ್ನನ್ನು ತಿಳಿದುಕೊಳ್ಳಲಿಲ್ಲವೇ? ನನ್ನನ್ನು ನೋಡಿದವನು ತಂದೆಯನ್ನು ಸಹ ನೋಡಿದವನಾಗಿದ್ದಾನೆ. ಆದ್ದರಿಂದ, ‘ತಂದೆಯನ್ನು ನಮಗೆ ತೋರಿಸು’ ಎಂದು ಏಕೆ ಕೇಳುವಿರಿ?
ಯೋಹಾನನು 14 : 10 (ERVKN)
ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂದು ನೀವು ನಿಜವಾಗಿಯೂ ನಂಬುವಿರಾ? ನಾನು ನಿಮಗೆ ಹೇಳುವ ಸಂಗತಿಗಳು ನನ್ನಿಂದಲೇ ಬಂದಂಥವುಗಳಲ್ಲ. ತಂದೆಯು ನನ್ನಲ್ಲಿ ವಾಸವಾಗಿದ್ದಾನೆ ಮತ್ತು ಆತನು ತನ್ನ ಕಾರ್ಯವನ್ನು ಮಾಡುತ್ತಿದ್ದಾನೆ.
ಯೋಹಾನನು 14 : 11 (ERVKN)
ನಾನು ತಂದೆಯಲ್ಲಿದ್ದೇನೆ ಮತ್ತು ತಂದೆಯು ನನ್ನಲ್ಲಿದ್ದಾನೆ ಎಂಬ ನನ್ನ ಮಾತನ್ನು ನಂಬಿರಿ. ಇಲ್ಲದಿದ್ದರೆ ನಾನು ಮಾಡಿದ ಅದ್ಭುತಕಾರ್ಯಗಳ ನಿಮಿತ್ತವಾದರೂ ನಂಬಿರಿ.
ಯೋಹಾನನು 14 : 12 (ERVKN)
“ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನಲ್ಲಿ ನಂಬಿಕೆ ಇಡುವ ವ್ಯಕ್ತಿಯು ನಾನು ಮಾಡಿದ ಕಾರ್ಯಗಳನ್ನೇ ಮಾಡುವನು. ಹೌದು ನಾನು ಮಾಡುವ ಕಾರ್ಯಗಳಿಗಿಂತಲೂ ದೊಡ್ಡಕಾರ್ಯಗಳನ್ನು ಅವನು ಮಾಡುವನು. ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತಿದ್ದೇನೆ.
ಯೋಹಾನನು 14 : 13 (ERVKN)
ಮತ್ತು ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ನಿಮಗೋಸ್ಕರ ಅದನ್ನು ನೆರವೇರಿಸುವೆನು. ಆಗ ಮಗನ ಮೂಲಕವಾಗಿ ತಂದೆಗೆ ಮಹಿಮೆ ಆಗುವುದು.
ಯೋಹಾನನು 14 : 14 (ERVKN)
ನೀವು ನನ್ನ ಹೆಸರಿನಲ್ಲಿ ಏನಾದರೂ ಬೇಡಿಕೊಂಡರೆ, ನಾನು ಅದನ್ನು ನೆರವೇರಿಸುವೆನು.
ಯೋಹಾನನು 14 : 15 (ERVKN)
ಪವಿತ್ರಾತ್ಮನನ್ನು ಕೊಡುವುದಾಗಿ ವಾಗ್ದಾನ “ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.
ಯೋಹಾನನು 14 : 16 (ERVKN)
ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ಆತನು ಬೇರೊಬ್ಬ ಸಹಾಯಕನನ್ನು ನಿಮಗೆ ಕೊಡುವನು. ಆ ಸಹಾಯಕನು ಸದಾಕಾಲ ನಿಮ್ಮೊಂದಿಗಿರುವನು.
ಯೋಹಾನನು 14 : 17 (ERVKN)
ಸತ್ಯದ ಆತ್ಮನೇ ಈ ಸಹಾಯಕನು. ಈ ಲೋಕವು ಆತನನ್ನು ಸ್ವೀಕರಿಸಿಕೊಳ್ಳಲಾರದು. ಏಕೆಂದರೆ ಲೋಕವು ಆತನನ್ನು ಕಾಣುವುದೂ ಇಲ್ಲ, ತಿಳಿದುಕೊಳ್ಳುವುದೂ ಇಲ್ಲ. ಆದರೆ ನೀವು ಆತನನ್ನು ಬಲ್ಲಿರಿ. ಆತನು ನಿಮ್ಮೊಂದಿಗೆ ಮತ್ತು ನಿಮ್ಮೊಳಗೆ ವಾಸಿಸುವವನಾಗಿದ್ದಾನೆ.
ಯೋಹಾನನು 14 : 18 (ERVKN)
“ನಾನು ನಿಮ್ಮನ್ನು ತಂದೆತಾಯಿಗಳಿಲ್ಲದ ಮಕ್ಕಳಂತೆ ಒಬ್ಬಂಟಿಗರನ್ನಾಗಿ ಬಿಟ್ಟುಹೋಗುವುದಿಲ್ಲ. ನಾನು ನಿಮ್ಮ ಬಳಿಗೆ ಬರುತ್ತೇನೆ.
ಯೋಹಾನನು 14 : 19 (ERVKN)
ಇನ್ನು ಸ್ವಲ್ಪ ಕಾಲವಾದ ಮೇಲೆ ಈ ಲೋಕದ ಜನರು ನನ್ನನ್ನು ಇನ್ನೆಂದಿಗೂ ಕಾಣುವುದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವೂ ಜೀವಿಸುವಿರಿ.
ಯೋಹಾನನು 14 : 20 (ERVKN)
ನಾನು ನನ್ನ ತಂದೆಯಲ್ಲಿರುವುದನ್ನು ನೀವು ಆ ದಿನದಂದು ತಿಳಿದುಕೊಳ್ಳುವಿರಿ. ನೀವು ನನ್ನಲ್ಲಿರುವುದನ್ನೂ ನಾನು ನಿಮ್ಮಲ್ಲಿರುವುದನ್ನೂ ತಿಳಿದುಕೊಳ್ಳುವಿರಿ.
ಯೋಹಾನನು 14 : 21 (ERVKN)
ಒಬ್ಬನು ನನ್ನ ಆಜ್ಞೆಗಳನ್ನು ಸ್ವೀಕರಿಸಿಕೊಂಡು ಅವುಗಳಿಗೆ ವಿಧೇಯನಾದರೆ ಅವನು ನನ್ನನ್ನು ನಿಜವಾಗಿಯೂ ಪ್ರೀತಿಸುವವನಾಗಿದ್ದಾನೆ. ಅಲ್ಲದೆ ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು ಮತ್ತು ನಾನೂ ಅವನನ್ನು ಪ್ರೀತಿಸುವೆನು. ನಾನು ಅವನಿಗೆ ನನ್ನನ್ನೇ ತೋರ್ಪಡಿಸಿಕೊಳ್ಳುವೆನು” ಎಂದು ಉತ್ತರಕೊಟ್ಟನು.
ಯೋಹಾನನು 14 : 22 (ERVKN)
ಆಗ ಯೂದನು (ಇಸ್ಕರಿಯೋತ ಯೂದನಲ್ಲ), “ಪ್ರಭುವೇ, ನೀನು ನಿನ್ನನ್ನು ಈ ಲೋಕಕ್ಕೆ ತೋರ್ಪಡಿಸಿಕೊಳ್ಳದೆ ನಮಗೆ ಮಾತ್ರ ತೋರ್ಪಡಿಸಿಕೊಳ್ಳಬೇಕೆಂದಿರುವುದೇಕೆ?” ಎಂದು ಕೇಳಿದನು.
ಯೋಹಾನನು 14 : 23 (ERVKN)
ಯೇಸು ಹೀಗೆ ಉತ್ತರಕೊಟ್ಟನು: “ನನ್ನನ್ನು ಪ್ರೀತಿಸುವವನು ನನ್ನ ಉಪದೇಶಕ್ಕೆ ವಿಧೇಯನಾಗುವನು. ನನ್ನ ತಂದೆಯು ಅವನನ್ನು ಪ್ರೀತಿಸುವನು. ನನ್ನ ತಂದೆ ಮತ್ತು ನಾನು ಅವನ ಬಳಿಗೆ ಬಂದು ಅವನೊಂದಿಗೆ ವಾಸಿಸುವೆವು.
ಯೋಹಾನನು 14 : 24 (ERVKN)
ಆದರೆ ನನ್ನನ್ನು ಪ್ರೀತಿಸದವನು, ನನ್ನ ಉಪದೇಶಕ್ಕೆ ವಿಧೇಯನಾಗುವುದಿಲ್ಲ. ನೀವು ಕೇಳುತ್ತಿರುವ ಈ ಉಪದೇಶವು ನಿಜವಾಗಿಯೂ ನನ್ನದಲ್ಲ, ನನ್ನನ್ನು ಕಳುಹಿಸಿರುವ ನನ್ನ ತಂದೆಯದು.
ಯೋಹಾನನು 14 : 25 (ERVKN)
“ನಾನು ನಿಮ್ಮೊಂದಿಗೆ ಇರುವಾಗಲೇ ಈ ಸಂಗತಿಗಳನ್ನೆಲ್ಲಾ ನಿಮಗೆ ಹೇಳಿದ್ದೇನೆ.
ಯೋಹಾನನು 14 : 26 (ERVKN)
ಆದರೆ ಆ ಸಹಾಯಕನು ನಿಮಗೆ ಪ್ರತಿಯೊಂದನ್ನೂ ಉಪದೇಶಿಸುವನು. ನಾನು ನಿಮಗೆ ಹೇಳಿದ ಸಂಗತಿಗಳನ್ನೆಲ್ಲಾ ಆ ಸಹಾಯಕನು ನಿಮ್ಮ ನೆನಪಿಗೆ ತರುವನು. ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪವಿತ್ರಾತ್ಮನೇ ಆ ಸಹಾಯಕನು.
ಯೋಹಾನನು 14 : 27 (ERVKN)
“ನಾನು ನಿಮಗೆ ಶಾಂತಿಯನ್ನು ನೀಡುತ್ತೇನೆ. ಈ ಲೋಕವು ಕೊಡುವುದಕ್ಕಿಂತ ಭಿನ್ನವಾದ ರೀತಿಯಲ್ಲಿ ನಾನು ನಿಮಗೆ ಶಾಂತಿಯನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ಭಯಪಡಬೇಡಿರಿ.
ಯೋಹಾನನು 14 : 28 (ERVKN)
‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.
ಯೋಹಾನನು 14 : 29 (ERVKN)
ಇದು ಸಂಭವಿಸುವುದಕ್ಕಿಂತ ಮೊದಲೇ ನಾನು ನಿಮಗೆ ಇದನ್ನು ಈಗಲೇ ತಿಳಿಸಿದ್ದೇನೆ. ಹೀಗಿರಲು, ಇದು ಸಂಭವಿಸುವಾಗ ನೀವು ನಂಬುವಿರಿ.
ಯೋಹಾನನು 14 : 30 (ERVKN)
“ನಾನು ನಿಮ್ಮೊಂದಿಗೆ ಇನ್ನು ಬಹಳ ಹೊತ್ತು ಮಾತಾಡುವುದಿಲ್ಲ. ಈ ಲೋಕದ ಅಧಿಪತಿಯು (ಸೈತಾನನು) ಬರುತ್ತಿದ್ದಾನೆ. ಅವನಿಗೆ ನನ್ನ ಮೇಲೆ ಯಾವ ಅಧಿಕಾರವೂ ಇಲ್ಲ.
ಯೋಹಾನನು 14 : 31 (ERVKN)
ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆ ಎಂಬುದನ್ನು ಈ ಲೋಕವು ತಿಳಿದುಕೊಳ್ಳಬೇಕು. ಆದ್ದರಿಂದ ತಂದೆಯು ನನಗೆ ಹೇಳಿರುವುದನ್ನೇ ನಾನು ಮಾಡುತ್ತೇನೆ. “ಬನ್ನಿ, ನಾವು ಇಲ್ಲಿಂದ ಹೋಗೋಣ.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31