ಯೋಹಾನನು 17 : 1 (ERVKN)
{ಶಿಷ್ಯರಿಗೋಸ್ಕರ ಯೇಸುವಿನ ಪ್ರಾರ್ಥನೆ} [PS] ಯೇಸು ಈ ಸಂಗತಿಗಳನ್ನು ಹೇಳಿದ ಮೇಲೆ ಪರಲೋಕದ ಕಡೆಗೆ ನೋಡಿ ಹೀಗೆ ಪ್ರಾರ್ಥಿಸಿದನು: “ತಂದೆಯೇ, ಸಮಯವು ಬಂದಿದೆ. ನಿನ್ನ ಮಗನನ್ನು ಮಹಿಮೆಪಡಿಸು. ಆಗ ಮಗನು ನಿನ್ನನ್ನು ಮಹಿಮೆಪಡಿಸಬಲ್ಲನು.
ಯೋಹಾನನು 17 : 2 (ERVKN)
ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ.
ಯೋಹಾನನು 17 : 3 (ERVKN)
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನು ಮತ್ತು ನೀನು ಕಳುಹಿಸಿದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದೇ ನಿತ್ಯಜೀವ.
ಯೋಹಾನನು 17 : 4 (ERVKN)
ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮಾಡಿ ಪೂರೈಸಿದ್ದೇನೆ. ನಾನು ಭೂಲೋಕದಲ್ಲಿ ನಿನ್ನನ್ನು ಮಹಿಮೆ ಪಡಿಸಿದೆನು.
ಯೋಹಾನನು 17 : 5 (ERVKN)
ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು. [PE][PS]
ಯೋಹಾನನು 17 : 6 (ERVKN)
“ನೀನು ಈ ಲೋಕದೊಳಗಿಂದ ಕೆಲವು ಜನರನ್ನು ನನಗೆ ಕೊಟ್ಟೆ. ನಿನ್ನ ಸ್ವರೂಪವನ್ನು ನಾನು ಇವರಿಗೆ ತೋರಿಸಿದೆನು. ಇವರು ನಿನ್ನವರಾಗಿದ್ದಾರೆ ಮತ್ತು ನೀನೇ ಇವರನ್ನು ನನಗೆ ಕೊಟ್ಟೆ. ಇವರು ನಿನ್ನ ಆಜ್ಞೆಗಳಿಗೆ ವಿಧೇಯರಾದರು.
ಯೋಹಾನನು 17 : 7 (ERVKN)
ನೀನು ನನಗೆ ಕೊಟ್ಟ ಪ್ರತಿಯೊಂದೂ ನಿನ್ನಿಂದಲೇ ಬಂದಿದೆ ಎಂಬುದು ಇವರಿಗೆ ಈಗ ತಿಳಿದಿದೆ.
ಯೋಹಾನನು 17 : 8 (ERVKN)
ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ.
ಯೋಹಾನನು 17 : 9 (ERVKN)
ಈಗ ನಾನು ಇವರಿಗಾಗಿ ಪ್ರಾರ್ಥಿಸುವೆನು. ಈ ಲೋಕದಲ್ಲಿರುವ ಜನರಿಗೋಸ್ಕರ ನಾನು ಪ್ರಾರ್ಥಿಸುತ್ತಿಲ್ಲ. ಆದರೆ ನೀನು ನನಗೆ ಕೊಟ್ಟ ಇವರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಏಕೆಂದರೆ ಇವರು ನಿನ್ನವರಾಗಿದ್ದಾರೆ.
ಯೋಹಾನನು 17 : 10 (ERVKN)
ನನ್ನಲ್ಲಿರುವುದೆಲ್ಲಾ ನಿನ್ನದೇ ಮತ್ತು ನಿನ್ನಲ್ಲಿರುವುದೆಲ್ಲಾ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ. [PE][PS]
ಯೋಹಾನನು 17 : 11 (ERVKN)
“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಇನ್ನು ನಾನು ಈ ಲೋಕದಲ್ಲಿರುವುದಿಲ್ಲ. ಆದರೆ ಇವರು ಇನ್ನೂ ಈ ಲೋಕದಲ್ಲಿರುತ್ತಾರೆ. ಪವಿತ್ರನಾದ ತಂದೆಯೇ, (ನೀನು ನನಗೆ ಕೊಟ್ಟ) ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡು. ನೀನೂ ನಾನೂ ಒಂದಾಗಿರುವಂತೆ ಇವರೂ ಒಂದಾಗಿರಲು ಆಗ ಸಾಧ್ಯವಾಗುವುದು.
ಯೋಹಾನನು 17 : 12 (ERVKN)
ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು. [PE][PS]
ಯೋಹಾನನು 17 : 13 (ERVKN)
“ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ.
ಯೋಹಾನನು 17 : 14 (ERVKN)
ನಾನು ಇವರಿಗೆ ನಿನ್ನ ವಾಕ್ಯಗಳನ್ನು ಕೊಟ್ಟಿದ್ದೇನೆ. ಈ ಲೋಕವು ಇವರನ್ನು ದ್ವೇಷಿಸುತ್ತದೆ. ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ. ಆದ್ದರಿಂದ ಈ ಲೋಕವು ಇವರನ್ನು ದ್ವೇಷಿಸಿದೆ. [PE][PS]
ಯೋಹಾನನು 17 : 15 (ERVKN)
“ನೀನು ಇವರನ್ನು ಈ ಲೋಕದಿಂದ ತೆಗೆದುಕೊಳ್ಳಬೇಕೆಂದು ನಾನು ಕೇಳುತ್ತಿಲ್ಲ. ಆದರೆ ಇವರನ್ನು ಕೆಡುಕನಿಂದ (ಸೈತಾನನಿಂದ) ತಪ್ಪಿಸಿ ಸುರಕ್ಷಿತವಾಗಿರಿಸಬೇಕೆಂದು ನಾನು ಕೇಳಿಕೊಳ್ಳುತ್ತಿದ್ದೇನೆ.
ಯೋಹಾನನು 17 : 16 (ERVKN)
ನಾನು ಈ ಲೋಕಕ್ಕೆ ಯಾವ ರೀತಿ ಸೇರಿದವನಾಗಿಲ್ಲವೋ ಅದೇ ರೀತಿ ಇವರೂ ಈ ಲೋಕಕ್ಕೆ ಸೇರಿದವರಾಗಿಲ್ಲ.
ಯೋಹಾನನು 17 : 17 (ERVKN)
“ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.
ಯೋಹಾನನು 17 : 18 (ERVKN)
ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ.
ಯೋಹಾನನು 17 : 19 (ERVKN)
ಇವರು ನಿಜವಾಗಿ ನಿನ್ನ ಸೇವೆಗೆ ಪ್ರತಿಷ್ಠಿತರಾಗಬೇಕೆಂದು ನಾನು ನನ್ನನ್ನೇ ಪ್ರತಿಷ್ಠಿಸಿಕೊಂಡಿದ್ದೇನೆ. [PE][PS]
ಯೋಹಾನನು 17 : 20 (ERVKN)
“ನಾನು ಇವರಿಗಾಗಿಯೂ ಇವರ ವಾಕ್ಯದಿಂದ ನನ್ನಲ್ಲಿ ನಂಬಿಕೆ ಇಡುವ ಎಲ್ಲರಿಗಾಗಿಯೂ ಪ್ರಾರ್ಥಿಸುತ್ತಿದ್ದೇನೆ.
ಯೋಹಾನನು 17 : 21 (ERVKN)
ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
ಯೋಹಾನನು 17 : 22 (ERVKN)
ನೀನು ನನಗೆ ಕೊಟ್ಟ ಮಹಿಮೆಯನ್ನು ನಾನು ಈ ಜನರಿಗೆ ಕೊಟ್ಟಿದ್ದೇನೆ. ನೀನು ಮತ್ತು ನಾನು ಒಂದಾಗಿರುವಂತೆ ಇವರೂ ಒಂದಾಗಿರಬೇಕೆಂದು ನಾನು ಇವರಿಗೆ ಈ ಮಹಿಮೆಯನ್ನು ಕೊಟ್ಟೆನು.
ಯೋಹಾನನು 17 : 23 (ERVKN)
ನಾನು ಅವರಲ್ಲಿ ಇರುವೆನು ಮತ್ತು ನೀನು ನನ್ನಲ್ಲಿರುವೆ. ಆದ್ದರಿಂದ ಅವರು ಸಂಪೂರ್ಣವಾಗಿ ಒಂದಾಗಿರುವರು. ನೀನೇ ನನ್ನನ್ನು ಕಳುಹಿಸಿರುವುದಾಗಿ ಮತ್ತು ನೀನು ನನ್ನನ್ನು ಪ್ರೀತಿಸಿದಂತೆಯೇ ಈ ಜನರನ್ನೂ ಪ್ರೀತಿಸಿರುವುದಾಗಿ ಈ ಲೋಕವು ಆಗ ತಿಳಿದುಕೊಳ್ಳುವುದು. [PE][PS]
ಯೋಹಾನನು 17 : 24 (ERVKN)
“ತಂದೆಯೇ, ನೀನು ನನಗೆ ಕೊಟ್ಟಿರುವ ಇವರು, ನಾನು ಇರುವಲ್ಲೆಲ್ಲಾ ನನ್ನೊಂದಿಗೆ ಇರಬೇಕೆಂದು ಮತ್ತು ನನ್ನ ಮಹಿಮೆಯನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲೇ ನೀನು ನನ್ನನ್ನು ಪ್ರೀತಿಸಿದ್ದರಿಂದ ನೀನೇ ನನಗೆ ಈ ಮಹಿಮೆಯನ್ನು ಕೊಟ್ಟೆ.
ಯೋಹಾನನು 17 : 25 (ERVKN)
ನೀತಿಯುಳ್ಳ ತಂದೆಯೇ, ಈ ಲೋಕವು ನಿನ್ನನ್ನು ತಿಳಿದಿಲ್ಲ. ಆದರೆ ನಾನು ನಿನ್ನನ್ನು ತಿಳಿದಿರುವೆ ಮತ್ತು ನೀನೇ ನನ್ನನ್ನು ಕಳುಹಿಸಿರುವೆ ಎಂಬುದು ಈ ಜನರಿಗೆ ತಿಳಿದಿದೆ.
ಯೋಹಾನನು 17 : 26 (ERVKN)
ನಾನು ನಿನ್ನ ನಿಜಸ್ವಭಾವವನ್ನು ಇವರಿಗೆ ಗೊತ್ತುಪಡಿಸಿದೆನು. ನಾನು ನಿನ್ನ ಸ್ವರೂಪವನ್ನು ಇವರಿಗೆ ಮತ್ತೆ ತೋರಿಸುವೆನು. ಆಗ ನನ್ನ ಮೇಲೆ ನಿನಗೆ ಯಾವ ಪ್ರೀತಿಯಿದೆಯೋ, ಅದೇ ಪ್ರೀತಿಯು ಇವರಲ್ಲಿಯೂ ಇರುವುದು ಮತ್ತು ನಾನು ಇವರಲ್ಲಿ ಇರುವೆನು.” [PE]
❮
❯