ಯೋಹಾನನು 3 : 1 (ERVKN)
{ಯೇಸು ಮತ್ತು ನಿಕೊದೇಮ} [PS] ನಿಕೊದೇಮ ಎಂಬ ಒಬ್ಬ ಮನುಷ್ಯನಿದ್ದನು. ನಿಕೊದೇಮನು ಫರಿಸಾಯರಲ್ಲಿ ಒಬ್ಬನಾಗಿದ್ದನು. ಅವನು ಒಬ್ಬ ಮುಖ್ಯ ಯೆಹೂದ್ಯ ನಾಯಕನಾಗಿದ್ದನು.
ಯೋಹಾನನು 3 : 2 (ERVKN)
ಒಂದು ರಾತ್ರಿ ನಿಕೊದೇಮನು ಯೇಸುವಿನ ಬಳಿಗೆ ಬಂದನು. ನಿಕೊದೇಮನು, “ಗುರುವೇ, ನೀನು ದೇವರಿಂದ ಕಳುಹಿಸಲ್ಪಟ್ಟ ಉಪದೇಶಕನೆಂದು ನಮಗೆ ಗೊತ್ತಿದೆ. ನೀನು ಮಾಡುವ ಈ ಸೂಚಕಕಾರ್ಯಗಳನ್ನು ದೇವರ ಸಹಾಯದಿಂದಲ್ಲದೆ ಯಾರೂ ಮಾಡಲಾರರು” ಎಂದು ಹೇಳಿದನು. [PE][PS]
ಯೋಹಾನನು 3 : 3 (ERVKN)
ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು. [PE][PS]
ಯೋಹಾನನು 3 : 4 (ERVKN)
ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು. [PE][PS]
ಯೋಹಾನನು 3 : 5 (ERVKN)
ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.
ಯೋಹಾನನು 3 : 6 (ERVKN)
ದೇಹವು ಮಾನುಷ ತಂದೆತಾಯಿಗಳಿಂದ ಹುಟ್ಟಿದ್ದು. ಆದರೆ ಆತ್ಮಿಕ ಜೀವನವು ಆತ್ಮನಿಂದ ಹುಟ್ಟಿದ್ದು.
ಯೋಹಾನನು 3 : 7 (ERVKN)
‘ನೀನು ಹೊಸದಾಗಿ ಹುಟ್ಟಲೇಬೇಕು’ ಎಂದು ನಾನು ಹೇಳಿದ್ದಕ್ಕೆ ಆಶ್ಚರ್ಯಪಡಬೇಡ.
ಯೋಹಾನನು 3 : 8 (ERVKN)
ಗಾಳಿಯು ತನಗಿಷ್ಟ ಬಂದ ಕಡೆಗೆ ಹೋಗುತ್ತದೆ. ಗಾಳಿ ಬೀಸುವ ಶಬ್ದವನ್ನು ನೀನು ಕೇಳುವೆ. ಆದರೆ ಗಾಳಿ ಎಲ್ಲಿಂದ ಬರುತ್ತದೋ ಮತ್ತು ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬರೂ ಅದರಂತಿದ್ದಾರೆ” ಎಂದು ಹೇಳಿದನು. [PE][PS]
ಯೋಹಾನನು 3 : 9 (ERVKN)
ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು. [PE][PS]
ಯೋಹಾನನು 3 : 10 (ERVKN)
ಯೇಸು, “ನೀನು ಇಸ್ರೇಲಿನ ಉಪದೇಶಕನಾಗಿರುವೆ. ಆದರೆ ನಿನಗೆ ಈ ಸಂಗತಿಗಳು ಇನ್ನೂ ಅರ್ಥವಾಗುವುದಿಲ್ಲವೇ?
ಯೋಹಾನನು 3 : 11 (ERVKN)
ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ನಮಗೆ ಗೊತ್ತಿರುವುದರ ಬಗ್ಗೆ ನಾವು ಮಾತಾಡುತ್ತೇವೆ. ನಾವು ಕಂಡದ್ದರ ಬಗ್ಗೆ ನಾವು ಸಾಕ್ಷಿ ಕೊಡುತ್ತೇವೆ. ಆದರೆ ನಾವು ಹೇಳುವುದನ್ನು ನೀವು ಸ್ವೀಕರಿಸಿಕೊಳ್ಳುವುದಿಲ್ಲ.
ಯೋಹಾನನು 3 : 12 (ERVKN)
ನಾನು ನಿಮಗೆ ಭೂಲೋಕದ ಸಂಗತಿಗಳ ಬಗ್ಗೆ ಹೇಳಿದೆ, ಆದರೆ ನೀವು ನನ್ನನ್ನು ನಂಬುವುದಿಲ್ಲ. ಆದ್ದರಿಂದ ನಾನು ಪರಲೋಕದ ಸಂಗತಿಗಳ ಬಗ್ಗೆ ನಿನಗೆ ಹೇಳಿದರೂ ನೀವು ಖಂಡಿತವಾಗಿ ನಂಬುವುದಿಲ್ಲ!
ಯೋಹಾನನು 3 : 13 (ERVKN)
ಪರಲೋಕದಿಂದ ಇಳಿದುಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ. [PE][PS]
ಯೋಹಾನನು 3 : 14 (ERVKN)
“ಮೋಶೆಯು ಮರಳುಗಾಡಿನಲ್ಲಿ ಸರ್ಪವನ್ನು ಎತ್ತರವಾದ ಕಂಬದ ಮೇಲಿಟ್ಟನು. ಅಂತೆಯೇ ಮನುಷ್ಯಕುಮಾರನನ್ನು ಸಹ ಎತ್ತರವಾದ ಕಂಬದ ಮೇಲಿಡಬೇಕು.
ಯೋಹಾನನು 3 : 15 (ERVKN)
ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಹೊಂದಿಕೊಳ್ಳುವರು” ಎಂದು ಹೇಳಿದನು. [PE][PS]
ಯೋಹಾನನು 3 : 16 (ERVKN)
ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.
ಯೋಹಾನನು 3 : 17 (ERVKN)
ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.
ಯೋಹಾನನು 3 : 18 (ERVKN)
ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.
ಯೋಹಾನನು 3 : 19 (ERVKN)
ಆ ತೀರ್ಪು ಏನೆಂದರೆ: ಬೆಳಕು ಈ ಲೋಕಕ್ಕೆ ಬಂದಿದೆ, ಆದರೆ ಜನರು ಬೆಳಕನ್ನು ಅಪೇಕ್ಷಿಸದೆ ಕತ್ತಲೆಯನ್ನೇ ಬಯಸಿದರು. ಏಕೆಂದರೆ ಅವರು ದುಷ್ಕೃತ್ಯಗಳನ್ನು ಮಾಡುತ್ತಿದ್ದರು.
ಯೋಹಾನನು 3 : 20 (ERVKN)
ಕೇಡನ್ನು ಮಾಡುವ ಪ್ರತಿಯೊಬ್ಬನೂ ಬೆಳಕನ್ನು ದ್ವೇಷಿಸುವನು. ಅವನು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವನು ಮಾಡಿರುವ ಕೆಟ್ಟಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.
ಯೋಹಾನನು 3 : 21 (ERVKN)
ಆದರೆ ಸತ್ಯಮಾರ್ಗವನ್ನು ಅನುಸರಿಸುವವನು ಬೆಳಕಿಗೆ ಬರುತ್ತಾನೆ. ಅವನು ಮಾಡಿರುವ ಕಾರ್ಯಗಳೆಲ್ಲಾ ದೇವರ ಮೂಲಕವಾಗಿ ಮಾಡಿದ ಕಾರ್ಯಗಳೆಂದು ಬೆಳಕು ತೋರಿಸುತ್ತದೆ. [PS]
ಯೋಹಾನನು 3 : 22 (ERVKN)
{ಯೇಸು ಮತ್ತು ಸ್ನಾನಿಕ ಯೋಹಾನ} [PS] ಇದಾದ ನಂತರ, ಯೇಸು ಮತ್ತು ಆತನ ಶಿಷ್ಯರು ಜುದೇಯ ಪ್ರಾಂತ್ಯಕ್ಕೆ ಹೋದರು. ಅಲ್ಲಿ ಯೇಸು ತನ್ನ ಶಿಷ್ಯರೊಡನೆ ತಂಗಿದ್ದು, ಜನರಿಗೆ ದೀಕ್ಷಾಸ್ನಾನ ಮಾಡಿಸಿದನು.
ಯೋಹಾನನು 3 : 23 (ERVKN)
ಯೋಹಾನನು ಸಹ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಐನೋನ್ ಎಂಬ ಊರು ಸಲೀಮ್ ಊರಿನ ಸಮೀಪದಲ್ಲಿದೆ. ಅಲ್ಲಿ ಬೇಕಾದಷ್ಟು ನೀರಿದ್ದುದರಿಂದ ಯೋಹಾನನು ಅಲ್ಲಿ ಜನರಿಗೆ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಜನರು ಅಲ್ಲಿಗೆ ಬಂದು ದೀಕ್ಷಾಸ್ನಾನ ತೆಗೆದುಕೊಳ್ಳುತ್ತಿದ್ದರು.
ಯೋಹಾನನು 3 : 24 (ERVKN)
(ಆಗ ಯೋಹಾನನನ್ನು ಇನ್ನೂ ಸೆರೆಮನೆಗೆ ಹಾಕಿರಲಿಲ್ಲ.) [PE][PS]
ಯೋಹಾನನು 3 : 25 (ERVKN)
ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಮತ್ತೊಬ್ಬ ಯೆಹೂದ್ಯನಿಗೂ ಶುದ್ಧಾಚಾರದ ಬಗ್ಗೆ ವಾದವಾಯಿತು.
ಯೋಹಾನನು 3 : 26 (ERVKN)
ಆದ್ದರಿಂದ ಶಿಷ್ಯರು ಯೋಹಾನನ ಬಳಿಗೆ ಬಂದು, “ಗುರುವೇ, ಜೋರ್ಡನ್ ನದಿಯ ಆಚೆದಡದಲ್ಲಿ ನಿನ್ನೊಂದಿಗಿದ್ದ ವ್ಯಕ್ತಿಯನ್ನು ಜ್ಞಾಪಿಸಿಕೊ. ಆತನ ಕುರಿತಾಗಿ ನೀನೇ ಸಾಕ್ಷಿ ಹೇಳಲಿಲ್ಲವೇ? ಆತನು ಜನರಿಗೆ ದೀಕ್ಷಾಸ್ನಾನ ಕೊಡುತ್ತಿದ್ದಾನೆ. ಅನೇಕ ಜನರು ಆತನ ಬಳಿಗೆ ಹೋಗುತ್ತಿದ್ದಾರೆ” ಎಂದು ಹೇಳಿದರು. [PE][PS]
ಯೋಹಾನನು 3 : 27 (ERVKN)
ಯೋಹಾನನು, “ದೇವರು ಏನು ಕೊಡುತ್ತಾನೋ ಅದನ್ನು ಮಾತ್ರ ಒಬ್ಬನು ಪಡೆದುಕೊಳ್ಳಬಲ್ಲನು.
ಯೋಹಾನನು 3 : 28 (ERVKN)
‘ನಾನು ಕ್ರಿಸ್ತನಲ್ಲ. ಆತನಿಗಾಗಿ ಹಾದಿಯನ್ನು ಸಿದ್ಧಪಡಿಸುವುದಕ್ಕಾಗಿ ಮಾತ್ರ ಕಳುಹಿಸಲ್ಪಟ್ಟಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
ಯೋಹಾನನು 3 : 29 (ERVKN)
ಮದುಮಗಳು ಮದುಮಗನಿಗೆ ಮಾತ್ರ ಸೇರಿದವಳಾಗಿದ್ದಾಳೆ. ಮದುಮಗನಿಗೆ ಸಹಾಯಮಾಡುವ ಸ್ನೇಹಿತನು ಮದುಮಗನ ಬರುವಿಕೆಗಾಗಿ ಕಾಯುತ್ತಿರುತ್ತಾನೆ ಮತ್ತು ಆತನ ಕರೆಗಾಗಿ ಆಲಿಸುತ್ತಿರುತ್ತಾನೆ. ಮದುಮಗನ ಸ್ವರವನ್ನು ಕೇಳುವಾಗ ಈ ಸ್ನೇಹಿತನು ಬಹು ಸಂತೋಷಪಡುವನು. ಅದೇ ಸಂತೋಷ ನನಗಿದೆ. ನನ್ನ ಪೂರ್ಣಾನಂದದ ಸಮಯವು ಇದೇ ಆಗಿದೆ.
ಯೋಹಾನನು 3 : 30 (ERVKN)
ಆತನು (ಯೇಸು) ವೃದ್ಧಿಯಾಗಬೇಕು ಮತ್ತು ನಾನು ಕಡಿಮೆಯಾಗಬೇಕು. [PS]
ಯೋಹಾನನು 3 : 31 (ERVKN)
{ಪರಲೋಕದಿಂದ ಬರುವ ವ್ಯಕ್ತಿ} [PS] “ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.
ಯೋಹಾನನು 3 : 32 (ERVKN)
ಆತನು ತಾನು ಕಂಡಿರುವುದರ ಬಗ್ಗೆ ಮತ್ತು ಕೇಳಿರುವುದರ ಬಗ್ಗೆ ಸಾಕ್ಷಿ ನೀಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಜನರು ಸ್ವೀಕರಿಸಿಕೊಳ್ಳುವುದಿಲ್ಲ.
ಯೋಹಾನನು 3 : 33 (ERVKN)
ಆತನ ಸಾಕ್ಷಿಯನ್ನು ಸ್ವೀಕರಿಸಿಕೊಳ್ಳುವ ವ್ಯಕ್ತಿಯು ದೇವರೇ ಸತ್ಯವಂತನೆಂದು ನಿರೂಪಿಸುತ್ತಾನೆ.
ಯೋಹಾನನು 3 : 34 (ERVKN)
ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.
ಯೋಹಾನನು 3 : 35 (ERVKN)
ತಂದೆಯು ಮಗನನ್ನು ಪ್ರೀತಿಸುತ್ತಾನೆ. ತಂದೆಯು ಮಗನಿಗೆ ಪ್ರತಿಯೊಂದರ ಮೇಲೆಯೂ ಅಧಿಕಾರವನ್ನು ಕೊಟ್ಟಿದ್ದಾನೆ.
ಯೋಹಾನನು 3 : 36 (ERVKN)
ಮಗನಲ್ಲಿ ನಂಬಿಕೆ ಇಡುವವನು ನಿತ್ಯಜೀವವನ್ನು ಹೊಂದಿದ್ದಾನೆ. ಆದರೆ ಮಗನಿಗೆ ವಿಧೇಯನಾಗದವನು ಆ ಜೀವವನ್ನು ಎಂದಿಗೂ ಹೊಂದಿಕೊಳ್ಳುವುದಿಲ್ಲ. ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು” ಎಂದು ಉತ್ತರಕೊಟ್ಟನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: