ಯೆಹೋಶುವ 13 : 1 (ERVKN)
{ವಶಪಡಿಸಿಕೊಂಡಿಲ್ಲದ ಪ್ರದೇಶ} [PS] ಯೆಹೋಶುವನು ತುಂಬಾ ಮುದುಕನಾದಾಗ ಯೆಹೋವನು ಅವನಿಗೆ, “ಯೆಹೋಶುವನೆ, ನೀನು ವೃದ್ಧನಾದೆ. ಆದರೆ ನೀನು ಇನ್ನೂ ಸ್ವಾಧೀನಪಡಿಸಿಕೊಳ್ಳಬೇಕಾದ ಪ್ರದೇಶ ಬಹಳಷ್ಟಿದೆ” ಅಂದನು.
ಯೆಹೋಶುವ 13 : 2 (ERVKN)
ನೀನು ಗೆಷೂರ ಪ್ರದೇಶವನ್ನು ಮತ್ತು ಫಿಲಿಷ್ಟಿಯರ ಪ್ರದೇಶವನ್ನು ಇನ್ನೂ ವಶಪಡಿಸಿಕೊಂಡಿಲ್ಲ.
ಯೆಹೋಶುವ 13 : 3 (ERVKN)
ಈಜಿಪ್ಟಿನ ಶೀಹೋರ್ ನದಿಯಿಂದ ಉತ್ತರದ ಎಕ್ರೋನ್ ಸೀಮೆಯವರೆಗೂ ಚಾಚಿಕೊಂಡಿರುವ ಭೂಮಿಯನ್ನು ನೀನು ವಶಪಡಿಸಿಕೊಂಡಿಲ್ಲ. ಆ ಭೂಮಿಯು ಇನ್ನೂ ಕಾನಾನ್ಯರ ಅಧೀನದಲ್ಲಿದೆ. ನೀನು ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರು ಮತ್ತು ಎಕ್ರೋನಿನ ಎಂಬ ಐದು ಮಂದಿ ಫಿಲಿಷ್ಟಿಯರ ನಾಯಕರನ್ನು ಇನ್ನೂ ಸೋಲಿಸಬೇಕಾಗಿದೆ.
ಯೆಹೋಶುವ 13 : 4 (ERVKN)
ಗೆಷೂರ್ಯ ಸೀಮೆಯು, ಕಾನಾನ್ ದೇಶದ ದಕ್ಷಿಣದಲ್ಲಿ ವಾಸವಾಗಿರುವ ಅವ್ವೀಯರನ್ನು ಸಹ ನೀನು ಸೋಲಿಸಬೇಕಾಗಿದೆ.
ಯೆಹೋಶುವ 13 : 5 (ERVKN)
ನೀನು ಇಲ್ಲಿಯವರೆಗೂ ಗೆಬಾಲ್ಯರನ್ನು ಸೋಲಿಸಿಲ್ಲ. ಹೆರ್ಮೋನ್ ಬೆಟ್ಟದ ಬುಡದಲ್ಲಿರುವ ಬಾಲ್ಗಾದಿನ ಪೂರ್ವದಿಂದಿಡಿದು ಲೆಬೊಹಾಮಾತಿನವರೆಗೆ ಇರುವ ಪ್ರದೇಶವನ್ನು ನೀನು ಗೆಲ್ಲಬೇಕು. ಬಾಲ್ಗಾದ್ ಲೆಬನೋನ್ ಪ್ರದೇಶದಲ್ಲಿದೆ. ನ [PE][PS]
ಯೆಹೋಶುವ 13 : 6 (ERVKN)
“ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಈ ಪ್ರದೇಶವನ್ನು ಸೇರಿಸಿ
ಯೆಹೋಶುವ 13 : 7 (ERVKN)
ಒಂಭತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲು ಮಾಡಿಕೊಡು.” [PS]
ಯೆಹೋಶುವ 13 : 8 (ERVKN)
{ದೇಶದ ಹಂಚಿಕೆ} [PS] ಮನಸ್ಸೆ ಕುಲದ ಅರ್ಧಜನರು, ರೂಬೇನ್ ಮತ್ತು ಗಾದ್ ಕುಲಗಳವರು ಈಗಾಗಲೇ ತಮ್ಮ ಸ್ವಾಸ್ತ್ಯವನ್ನು ತೆಗೆದುಕೊಂಡಿದ್ದರು. ಯೆಹೋವನ ಸೇವಕನಾದ ಮೋಶೆಯು ಜೋರ್ಡನ್ ನದಿಯ ಪೂರ್ವದಿಕ್ಕಿನ ಪ್ರದೇಶವನ್ನು ಅವರಿಗೆ ಕೊಟ್ಟಿದ್ದನು.
ಯೆಹೋಶುವ 13 : 9 (ERVKN)
ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.
ಯೆಹೋಶುವ 13 : 10 (ERVKN)
ಅಮೋರಿಯರ ಅರಸನಾದ ಸೀಹೋನನು ಆಳುತ್ತಿದ್ದ ಎಲ್ಲ ಪಟ್ಟಣಗಳು ಆ ಪ್ರದೇಶದಲ್ಲಿದ್ದವು. ಆ ಅರಸನು ಹೆಷ್ಬೋನ್ ನಗರದಲ್ಲಿ ಆಳುತ್ತಿದ್ದನು. ಅಮ್ಮೋನಿಯರು ಮೊದಲು ನೆಲೆಸಿದ್ದ ಪ್ರದೇಶದವರೆಗೆ ಈ ಪ್ರದೇಶ ವಿಸ್ತರಿಸಿತ್ತು.
ಯೆಹೋಶುವ 13 : 11 (ERVKN)
ಗಿಲ್ಯಾದ್ ಪಟ್ಟಣವೂ ಸಹ ಈ ಪ್ರದೇಶಕ್ಕೆ ಒಳಪಟ್ಟಿತ್ತು. ಗೆಷೂರ್ಯರು ಮತ್ತು ಮಾಕತೀಯರು ವಾಸಮಾಡುತ್ತಿದ್ದ ಪ್ರದೇಶವು ಸಹ ಈ ಪ್ರದೇಶಕ್ಕೆ ಸೇರಿತ್ತು. ಇಡೀ ಹೆರ್ಮೋನ್ ಬೆಟ್ಟಪ್ರದೇಶ ಮತ್ತು ಸಲ್ಕಾ ಪಟ್ಟಣದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು ಆ ಪ್ರದೇಶಕ್ಕೆ ಸೇರಿಕೊಂಡಿದ್ದವು.
ಯೆಹೋಶುವ 13 : 12 (ERVKN)
ಓಗ್ ರಾಜನ ಎಲ್ಲ ಪ್ರಾಂತ್ಯಗಳು ಆ ಪ್ರದೇಶದಲ್ಲಿ ಸೇರಿತ್ತು. ಓಗ್ ರಾಜನು ಬಾಷಾನಿನಲ್ಲಿ ಆಳುತ್ತಿದ್ದನು. ಮೊದಲು ಅವನು ಅಷ್ಟರೋತ್ ಮತ್ತು ಎದ್ರೈಗಳಲ್ಲಿದ್ದುಕೊಂಡು ಆಳುತ್ತಿದ್ದನು. ಓಗನು ರೆಫಾಯರ ವಂಶಸ್ಥನಾಗಿದ್ದನು. ಮೊದಲು ಮೋಶೆಯು ಆ ಜನರನ್ನು ಸೋಲಿಸಿ ಅವರ ಪ್ರದೇಶವನ್ನು ತೆಗೆದುಕೊಂಡಿದ್ದನು.
ಯೆಹೋಶುವ 13 : 13 (ERVKN)
ಇಸ್ರೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರತಳ್ಳಲಿಲ್ಲ. ಅವರು ಇಂದಿಗೂ ಇಸ್ರೇಲರ ಜೊತೆಯಲ್ಲಿಯೇ ಇರುತ್ತಾರೆ. [PE][PS]
ಯೆಹೋಶುವ 13 : 14 (ERVKN)
ಲೇವಿಕುಲದವರಿಗೆ ಮಾತ್ರ ಯಾವ ಪ್ರದೇಶವೂ ಸಿಕ್ಕಲಿಲ್ಲ. ಅದಕ್ಕೆ ಬದಲಾಗಿ, ಇಸ್ರೇಲರ ದೇವರಾದ ಯೆಹೋವನು ಅವರಿಗೆ ವಾಗ್ದಾನ ಮಾಡಿದಂತೆ ಸರ್ವಾಂಗಹೋಮಗಳಾಗಿ ಅರ್ಪಿತವಾಗುವ ಎಲ್ಲಾ ಪಶುಗಳಲ್ಲಿ ಉಳಿದ ಭಾಗವನ್ನು ಅವರು ಪಡೆದುಕೊಳ್ಳುವರು. [PE][PS]
ಯೆಹೋಶುವ 13 : 15 (ERVKN)
ಮೋಶೆಯು ರೂಬೇನನ ಕುಲದ ಪ್ರತಿಯೊಂದು ಗೋತ್ರದವರಿಗೆ ಸ್ವಲ್ಪಸ್ವಲ್ಪ ಪ್ರದೇಶವನ್ನು ಕೊಟ್ಟಿದ್ದನು. ಅವರಿಗೆ ಕೊಟ್ಟ ಪ್ರದೇಶದ ವಿವರ ಹೀಗಿದೆ:
ಯೆಹೋಶುವ 13 : 16 (ERVKN)
ಅರ್ನೋನ್ ತಗ್ಗಿನ ಸಮೀಪದಲ್ಲಿದ್ದ ಅರೋಯೇರ್‌ನಿಂದ ಮೇದೆಬದವರೆಗಿರುವ ಪ್ರದೇಶ. ಇದು ಇಡೀ ತಪ್ಪಲ ಪ್ರದೇಶವನ್ನು ಮತ್ತು ಆ ತಗ್ಗು ಪ್ರದೇಶದ ಮಧ್ಯದಲ್ಲಿದ್ದ ಊರುಗಳನ್ನು ಒಳಗೊಂಡಿತ್ತು.
ಯೆಹೋಶುವ 13 : 17 (ERVKN)
ಆ ಪ್ರದೇಶವು ಹೆಷ್ಬೋನಿನವರೆಗೆ ವಿಸ್ತರಿಸಿ ತಪ್ಪಲಪ್ರದೇಶದ ಎಲ್ಲಾ ಊರುಗಳನ್ನೊಳಗೊಂಡಿತ್ತು. ಆ ಊರುಗಳು ಯಾವುವೆಂದರೆ: ದೀಬೋನ್, ಬಾಮೋತ್‌ಬಾಳ್, ಬೇತ್ಬಾಳ್ಮೆಯೋನ್,
ಯೆಹೋಶುವ 13 : 18 (ERVKN)
ಯಹಚಾ, ಕೆದೇಮೋತ್, ಮೇಫಾಯತ್,
ಯೆಹೋಶುವ 13 : 19 (ERVKN)
ಕಣಿವೆಯಲ್ಲಿರುವ ಪ್ರದೇಶ, ಬೆಟ್ಟದ ಮೇಲಿನ ಕಿರ್ಯಾತಯಿಮ್, ಸಿಬ್ಮಾ, ಚೆರೆತ್‌ಶಹರ್,
ಯೆಹೋಶುವ 13 : 20 (ERVKN)
ಬೇತ್ಪೆಗೋರ್, ಪಿಸ್ಗಾ ಬೆಟ್ಟಗಳು ಮತ್ತು ಬೇತ್‌ಯೆಷಿಮೋತ್.
ಯೆಹೋಶುವ 13 : 21 (ERVKN)
ಆದ್ದರಿಂದ ಅಮೋರಿಯರ ಅರಸನಾದ ಸೀಹೋನನ ಆಳ್ವಿಕೆಯಲ್ಲಿದ್ದ ಎಲ್ಲ ಊರುಗಳನ್ನು ಆ ಪ್ರದೇಶವು ಒಳಗೊಂಡಿತ್ತು. ಆ ಅರಸನು ಹೆಷ್ಬೋನ್ ಪಟ್ಟಣದಲ್ಲಿ ಆಳಿದನು. ಆದರೆ ಮೋಶೆಯು ಅವನನ್ನು ಮತ್ತು ಮಿದ್ಯಾನ್ ಜನರ ನಾಯಕರನ್ನು ಸೋಲಿಸಿದ್ದನು. ಎವೀ, ರೆಕೆಮ್, ಚೂರ್, ಹೂರ್ ಮತ್ತು ರೆಬಾ, ಇವರೇ ಆ ನಾಯಕರಾಗಿದ್ದರು. (ಈ ನಾಯಕರೆಲ್ಲ ಸೀಹೋನನ ಜೊತೆ ಸೇರಿ ಯುದ್ಧಮಾಡಿದ್ದರು.) ಈ ನಾಯಕರೆಲ್ಲ ಅದೇ ದೇಶದಲ್ಲಿ ವಾಸವಾಗಿದ್ದರು.
ಯೆಹೋಶುವ 13 : 22 (ERVKN)
ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.
ಯೆಹೋಶುವ 13 : 23 (ERVKN)
ರೂಬೇನನ ಜನರಿಗೆ ಕೊಟ್ಟ ಪ್ರದೇಶ ಜೋರ್ಡನ್ ನದಿಯ ದಡಕ್ಕೆ ಸೀಮಿತವಾಗಿತ್ತು. ಈ ಪ್ರಕಾರ ರೂಬೇನನ ಕುಲದ ಗೋತ್ರದವರಿಗೆ ಕೊಟ್ಟ ಪ್ರದೇಶವು ಇಲ್ಲಿ ಪಟ್ಟಿ ಮಾಡಿದ ಎಲ್ಲ ಊರುಗಳನ್ನು ಮತ್ತು ಅವುಗಳ ಹೊಲಗಳನ್ನು ಒಳಗೊಂಡಿತ್ತು. [PE][PS]
ಯೆಹೋಶುವ 13 : 24 (ERVKN)
ಮೋಶೆಯು ಗಾದನ ಕುಲದ ಪ್ರತಿಯೊಂದು ಗೋತ್ರದವರಿಗೆ ಕೊಟ್ಟ ಪ್ರದೇಶ ಇಂತಿದೆ: [PE][PS]
ಯೆಹೋಶುವ 13 : 25 (ERVKN)
ಮೋಶೆ ಅವರಿಗೆ ಯಗ್ಜೇರಿನ ಪ್ರದೇಶ ಮತ್ತು ಗಿಲ್ಯಾದಿನ ಎಲ್ಲ ಪಟ್ಟಣಗಳನ್ನೂ ರಬ್ಬಾದ ಹತ್ತಿರವಿದ್ದ ಅರೋಯೇರ್‌ವರೆಗಿನ ಅಮ್ಮೋನಿಯರ ಅರ್ಧಪ್ರದೇಶವನ್ನು ಕೊಟ್ಟನು.
ಯೆಹೋಶುವ 13 : 26 (ERVKN)
ಆ ಪ್ರದೇಶವು ಹೆಷ್ಬೋನ್‌ನಿಂದ ರಾಮತ್‌ಮಿಚ್ಛೆ ಮತ್ತು ಬೆಟೋನೀಮ್ ಊರುಗಳವರೆಗೂ ಇರುವ ಪ್ರದೇಶ ಮತ್ತು ಮಹನಯಿಮಿನಿಂದ ದೆಬೀರ್ ಪ್ರಾಂತ್ಯದವರೆಗೆ ಇರುವ ಪ್ರದೇಶವನ್ನು ಒಳಗೊಂಡಿತ್ತು.
ಯೆಹೋಶುವ 13 : 27 (ERVKN)
ಆ ಪ್ರದೇಶವು ಬೇತ್‌ಹಾರಾಮ್, ಬೇತ್‌ನಿಮ್ರಾ, ಸುಕ್ಕೋತ್ ಮತ್ತು ಚಾಫೋನ್ ಕಣಿವೆಗಳನ್ನು ಒಳಗೊಂಡಿತ್ತು. ಹೆಷ್ಬೋನಿನ ಅರಸನಾದ ಸೀಹೋನನ ರಾಜ್ಯಕ್ಕೆ ಸೇರಿದ ಉಳಿದೆಲ್ಲ ಪ್ರದೇಶವನ್ನು ಇದರಲ್ಲಿ ಸೇರಿಸಲಾಗಿತ್ತು. ಈ ಪ್ರದೇಶವು ಜೋರ್ಡನ್ ನದಿಯ ಪೂರ್ವ ಭಾಗದಲ್ಲಿತ್ತು. ಈ ಪ್ರದೇಶವು ಗಲಿಲೇಯ ಸರೋವರದ ಕೊನೆಯವರೆಗೆ ವಿಸ್ತರಿಸಿತ್ತು.
ಯೆಹೋಶುವ 13 : 28 (ERVKN)
ಮೋಶೆಯು ಗಾದ್ ಕುಲದವರಿಗೆ ಈ ಪ್ರದೇಶವನ್ನು ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದನು. ಈ ಪ್ರದೇಶಕ್ಕೆ ಸೇರಿದ್ದ ಊರುಗಳನ್ನೆಲ್ಲ ಮೋಶೆಯು ಅವರ ಕುಟುಂಬಗಳಿಗನುಸಾರವಾಗಿ ಹಂಚಿಕೊಟ್ಟಿದ್ದನು. [PE][PS]
ಯೆಹೋಶುವ 13 : 29 (ERVKN)
ಮೋಶೆಯು ಮನಸ್ಸೆ ಕುಲದ ಅರ್ಧಕುಲದವರಿಗೆ ಅವರ ಕುಟುಂಬಗಳಿಗನುಸಾರವಾಗಿ ಕೊಟ್ಟ ಪ್ರದೇಶದ ವಿವರ: [PE][PS]
ಯೆಹೋಶುವ 13 : 30 (ERVKN)
ಈ ಪ್ರದೇಶವು ಮಹನಯಿಮಿನಿಂದ ಪ್ರಾರಂಭವಾಗುತ್ತದೆ. ಇಡೀ ಬಾಷಾನ್, ಅರಸನಾದ ಓಗನ ಆಳ್ವಿಕೆಗೆ ಒಳಪಟ್ಟ ಪ್ರದೇಶ, ಬಾಷಾನಿನಲ್ಲಿರುವ ಯಾಯೀರನ ಎಲ್ಲ ಊರುಗಳು (ಒಟ್ಟು ಅರವತ್ತು ಊರುಗಳು) ಇದರಲ್ಲಿ ಸೇರಿವೆ.
ಯೆಹೋಶುವ 13 : 31 (ERVKN)
ಗಿಲ್ಯಾದಿನ ಅರ್ಧಭಾಗವು, ಅಷ್ಟರೋತ್, ಎದ್ರೈ ಎಂಬ ಪಟ್ಟಣಗಳೂ ಇದರಲ್ಲಿ ಸೇರಿವೆ. (ಗಿಲ್ಯಾದ್, ಅಷ್ಟರೋತ್ ಮತ್ತು ಎದ್ರೈ ಎಂಬ ಪಟ್ಟಣಗಳಲ್ಲಿ ರಾಜನಾದ ಓಗ್ ವಾಸವಾಗಿದ್ದನು.) ಈ ಎಲ್ಲ ಪ್ರದೇಶವನ್ನು ಮನಸ್ಸೆಯ ಮಗನಾದ ಮಾಕೀರನ ಅರ್ಧಗೋತ್ರದವರಿಗೆ ಕೊಡಲಾಯಿತು. [PE][PS]
ಯೆಹೋಶುವ 13 : 32 (ERVKN)
ಮೋಶೆಯು ಈ ಪ್ರದೇಶಗಳನ್ನೆಲ್ಲ ಆಯಾ ಕುಲಗಳಿಗೆ ಮೋವಾಬ್ ಬಯಲಿನಲ್ಲಿ ಇಳಿದುಕೊಂಡಿದ್ದಾಗ ಹಂಚಿಕೊಟ್ಟನು. ಮೋವಾಬ್ ಬಯಲು ಜೆರಿಕೊ ನಗರಕ್ಕೆ ಪೂರ್ವದಲ್ಲಿಯೂ ಜೋರ್ಡನ್ ನದಿಯ ಆಚೆದಡದಲ್ಲೂ ಇತ್ತು.
ಯೆಹೋಶುವ 13 : 33 (ERVKN)
ಮೋಶೆಯು ಲೇವಿಕುಲದವರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಇಸ್ರೇಲಿನ ದೇವರಾದ ಯೆಹೋವನು ಲೇವಿಯ ಕುಲದವರಿಗೆ ವಾಗ್ದಾನ ಮಾಡಿದಂತೆ ಆತನೇ ಅವರಿಗೆ ಸ್ವಾಸ್ತ್ಯವಾಗಿದ್ದನು. [PE]
❮
❯