ಯೆಹೋಶುವ 17 : 1 (ERVKN)
ಆಮೇಲೆ ಮನಸ್ಸೆ ಕುಲದವರಿಗೆ ಭೂಮಿಯನ್ನು ಕೊಡಲಾಯಿತು. ಮನಸ್ಸೆಯು ಯೋಸೇಫನ ಚೊಚ್ಚಲ ಮಗನು. ಗಿಲ್ಯಾದನ ತಂದೆಯಾದ ಮಾಕೀರನು ಮನಸ್ಸೆಯ ಚೊಚ್ಚಲ ಮಗನು. ಮಾಕೀರನು ವೀರ ಸೈನಿಕನಾಗಿದ್ದನು. ಈ ಕಾರಣದಿಂದ ಗಿಲ್ಯಾದ್ ಮತ್ತು ಬಾಷಾನ್ ಕ್ಷೇತ್ರಗಳನ್ನು ಮಾಕೀರ ಮನೆತನದವರಿಗೆ ಕೊಡಲಾಯಿತು.
ಯೆಹೋಶುವ 17 : 2 (ERVKN)
ಮನಸ್ಸೆ ಕುಲದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೇರ್, ಶೆಮೀದಾ ಎಂಬವರ ವಂಶದವರಿಗೂ ಭೂಮಿಯನ್ನು ಕೊಡಲಾಯಿತು. ಇವರೆಲ್ಲರು ಯೋಸೇಫನ ಮಗನಾದ ಮನಸ್ಸೆಯ ಉಳಿದ ಗಂಡುಮಕ್ಕಳು. ಈ ಜನರ ವಂಶದವರೂ ತಮ್ಮ ಪಾಲಿನ ಭೂಮಿಯನ್ನು ಪಡೆದುಕೊಂಡರು.
ಯೆಹೋಶುವ 17 : 3 (ERVKN)
ಚಲ್ಪಹಾದನು ಹೇಫೆರನ ಮಗನು, ಹೇಫೆರನು ಗಿಲ್ಯಾದನ ಮಗನು, ಗಿಲ್ಯಾದನು ಮಾಕೀರನ ಮಗನು. ಮಾಕೀರನು ಮನಸ್ಸೆಯ ಮಗನು. ಚಲ್ಪಹಾದನಿಗೆ ಗಂಡುಮಕ್ಕಳಿರಲಿಲ್ಲ. ಆದರೆ ಅವನಿಗೆ ಐದು ಜನ ಹೆಣ್ಣುಮಕ್ಕಳಿದ್ದರು. ಅವರ ಹೆಸರುಗಳು: ಮಹ್ಲಾ, ನೋಹಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.
ಯೆಹೋಶುವ 17 : 4 (ERVKN)
ಆ ಹೆಣ್ಣುಮಕ್ಕಳು ಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ ಮತ್ತು ಇಸ್ರೇಲರ ನಾಯಕರ ಹತ್ತಿರ ಹೋಗಿ, “ಗಂಡುಮಕ್ಕಳಿಗೆ ಕೊಟ್ಟ ಹಾಗೆ ನಮಗೂ ಭೂಮಿಯನ್ನು ಕೊಡಬೇಕೆಂದು ಯೆಹೋವನು ಮೋಶೆಗೆ ಹೇಳಿದ್ದಾನೆ” ಅಂದರು. ಎಲ್ಲಾಜಾರನು ಯೆಹೋವನ ಆಜ್ಞೆಯನ್ನು ಪಾಲಿಸಿ ಆ ಹೆಣ್ಣುಮಕ್ಕಳಿಗೆ ಸ್ವಲ್ಪ ಭೂಮಿಯನ್ನು ಕೊಟ್ಟನು. ಹೀಗೆ ಈ ಹೆಣ್ಣಮಕ್ಕಳು ಗಂಡು ಮಕ್ಕಳಂತೆಯೇ ಭೂಮಿಯನ್ನು ಪಡೆದರು.
ಯೆಹೋಶುವ 17 : 5 (ERVKN)
ಮನಸ್ಸೆ ಕುಲದವರು ಜೋರ್ಡನ್ ನದಿಯ ಪಶ್ಚಿಮದಲ್ಲಿ ಹತ್ತು ಭೂಭಾಗಗಳನ್ನು ಮತ್ತು ಆ ನದಿಯ ಮತ್ತೊಂದು ದಿಕ್ಕಿನಲ್ಲಿ ಗಿಲ್ಯಾದ್ ಮತ್ತು ಬಾಷಾನ್ ಎಂಬ ಮತ್ತೆರಡು ಭೂಭಾಗಗಳನ್ನು ಪಡೆದುಕೊಂಡರು.
ಯೆಹೋಶುವ 17 : 6 (ERVKN)
ಮನಸ್ಸೆಯ ಹೆಣ್ಣುಮಕ್ಕಳು ಗಂಡುಮಕ್ಕಳಂತೆಯೇ ಭೂಮಿಯನ್ನು ಪಡೆದರು. ಗಿಲ್ಯಾದ್ ಪ್ರದೇಶವನ್ನು ಮನಸ್ಸೆ ಕುಲದ ಉಳಿದ ಕುಟುಂಬಗಳಿಗೆ ಕೊಡಲಾಯಿತು.
ಯೆಹೋಶುವ 17 : 7 (ERVKN)
ಮನಸ್ಸೆ ಕುಲದವರ ಪ್ರದೇಶಗಳು ಆಶೇರ್ ಮತ್ತು ಶೆಕಮಿನ ಹತ್ತಿರವಿದ್ದ ಮಿಕ್ಮೆತಾತಿನ ಮಧ್ಯದಲ್ಲಿ ಬರುತ್ತವೆ. ಅದರ ಸೀಮೆಯು ದಕ್ಷಿಣದಲ್ಲಿ ಎನ್‌ತಪ್ಪೂಹ ಪ್ರದೇಶಕ್ಕೆ ಮುಟ್ಟುತ್ತದೆ.
ಯೆಹೋಶುವ 17 : 8 (ERVKN)
ಎನ್‌ತಪ್ಪೂಹದ ಸುತ್ತಮುತ್ತಲಿನ ಭೂಮಿ ಮನಸ್ಸೆಕುಲದವರ ಸ್ವತ್ತಾಗಿದ್ದರೂ ಆ ಊರು ಮಾತ್ರ ಅವರ ಅಧೀನದಲ್ಲಿರಲಿಲ್ಲ. ಎನ್‌ತಪ್ಪೂಹ ಎಂಬ ಊರು ಮನಸ್ಸೆ ಕುಲದವರ ಪ್ರಾಂತ್ಯದ ಸೀಮೆಯಲ್ಲಿದ್ದರೂ ಅದು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿತ್ತು.
ಯೆಹೋಶುವ 17 : 9 (ERVKN)
ಮನಸ್ಸೆ ಪ್ರಾಂತ್ಯದ ಸೀಮೆ ದಕ್ಷಿಣದಲ್ಲಿ ಕಾನಾ ನದಿಯವರೆಗೆ ಹೋಗುತ್ತದೆ. ಈ ಕ್ಷೇತ್ರ ಮನಸ್ಸೆ ಕುಲದವರ ಸ್ವಾಸ್ತ್ಯದಲ್ಲಿದ್ದರೂ ಪಟ್ಟಣಗಳು ಎಫ್ರಾಯೀಮ್ ಜನರ ಸ್ವಾಸ್ತ್ಯದಲ್ಲಿದ್ದವು. ಮನಸ್ಸೆ ಪ್ರಾಂತ್ಯದ ಸೀಮೆಯು ನದಿಯ ಉತ್ತರದಿಕ್ಕಿನಿಂದ ಪಶ್ಚಿಮದಲ್ಲಿ ಮೆಡಿಟರೆನಿಯನ್ ಸಮುದ್ರದವರೆಗೆ ಮುಂದುವರೆದಿದೆ.
ಯೆಹೋಶುವ 17 : 10 (ERVKN)
ದಕ್ಷಿಣದ ಭೂಮಿ ಎಫ್ರಾಯೀಮ್ ಜನರಿಗೆ ಸೇರಿದೆ. ಉತ್ತರದ ಭೂಮಿ ಮನಸ್ಸೆಯ ಜನರಿಗೆ ಸೇರಿದೆ. ಮೆಡಿಟರೆನಿಯನ್ ಸಮುದ್ರವು ಅದರ ಪಶ್ಚಿಮದ ಗಡಿಯಾಗಿತ್ತು. ಅದರ ಸೀಮೆಯು ಉತ್ತರದಲ್ಲಿ ಆಶೇರ್ ಕುಲದವರ ಪ್ರಾಂತ್ಯವನ್ನೂ ಪೂರ್ವದಲ್ಲಿ ಇಸ್ಸಾಕಾರ್ ಕುಲದವರ ನಾಡನ್ನೂ ಮುಟ್ಟುತ್ತದೆ.
ಯೆಹೋಶುವ 17 : 11 (ERVKN)
ಮನಸ್ಸೆ ಕುಲದವರು ಇಸ್ಸಾಕಾರ್, ಆಶೇರ್ ಪ್ರಾಂತಗಳಲ್ಲಿಯೂ ಕೆಲವು ಊರುಗಳನ್ನು ಹೊಂದಿದ್ದರು. ಬೇತ್‌ಷೆಯಾನ್, ಇಬ್ಲೆಯಾಮ್ ಮತ್ತು ಅವುಗಳ ಸುತ್ತಮುತ್ತಲಿನ ಸಣ್ಣ ಊರುಗಳು ಮನಸ್ಸೆಯ ಜನರ ಅಧೀನದಲ್ಲಿದ್ದವು. ಮನಸ್ಸೆಯ ಜನರು ದೋರ್, ಎಂದೋರ್, ತಾನಕ್, ಮೆಗಿದ್ದೋ ಮತ್ತು ಆ ಪಟ್ಟಣಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿಯೂ ವಾಸವಾಗಿದ್ದರು. ಅವರು ನಾಫೊತ್‌ನ ಮೂರು ಊರುಗಳಲ್ಲಿಯೂ ಇದ್ದರು.
ಯೆಹೋಶುವ 17 : 12 (ERVKN)
ಮನಸ್ಸೆ ಕುಲದವರಿಗೆ ಆ ಪಟ್ಟಣಗಳಲ್ಲಿದ್ದ ಜನರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ಅಲ್ಲಿಯೇ ನೆಲೆಸಿದರು.
ಯೆಹೋಶುವ 17 : 13 (ERVKN)
ಆದರೆ ಸ್ವಲ್ಪ ಕಾಲದ ನಂತರ ಇಸ್ರೇಲರು ಬಲಶಾಲಿಗಳಾಗಿ ಕಾನಾನ್ಯರನ್ನು ತಮ್ಮ ಗುಲಾಮರನ್ನಾಗಿ ಮಾಡಿಕೊಂಡರು. ಆದರೆ ಅವರನ್ನು ಅಲ್ಲಿಂದ ಹೊರಗಟ್ಟಲಿಲ್ಲ.
ಯೆಹೋಶುವ 17 : 14 (ERVKN)
ಯೋಸೇಫನ ವಂಶಸ್ಥರು ಯೆಹೋಶುವನೊಂದಿಗೆ ಮಾತನಾಡಿ, “ನೀನು ನಮಗೆ ಸ್ವಾಸ್ತ್ಯದ ಒಂದು ಕ್ಷೇತ್ರವನ್ನು ಮಾತ್ರ ಕೊಟ್ಟಿರುವೆ. ಆದರೆ ನಾವು ಬಹಳ ಜನರಿದ್ದೇವೆ. ಯೆಹೋವನು ತನ್ನ ಜನರಿಗೆ ಕೊಟ್ಟ ಈ ದೇಶದಲ್ಲಿ ನೀನು ನಮಗೆ ಕೇವಲ ಒಂದು ಭಾಗವನ್ನು ಮಾತ್ರ ಏಕೆ ಕೊಟ್ಟೆ?” ಎಂದು ಕೇಳಿದರು.
ಯೆಹೋಶುವ 17 : 15 (ERVKN)
ಯೆಹೋಶುವನು, “ನಿಮ್ಮಲ್ಲಿ ಬಹಳ ಜನರಿದ್ದರೆ ಬೆಟ್ಟಪ್ರದೇಶಕ್ಕೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ. ಆ ಭೂಮಿಯು ಈಗ ಪೆರಿಜ್ಜೀಯರ ಮತ್ತು ರೆಫಾಯರ ಸ್ವತ್ತಾಗಿದೆ. ನಿಮಗೆ ಕೊಟ್ಟಿರುವ ಎಫ್ರಾಯೀಮ್ ಬೆಟ್ಟಪ್ರದೇಶವು ಚಿಕ್ಕದೆನಿಸಿದರೆ ಹೋಗಿ ಆ ಭೂಮಿಯನ್ನು ತೆಗೆದುಕೊಳ್ಳಿರಿ” ಎಂದನು.
ಯೆಹೋಶುವ 17 : 16 (ERVKN)
ಯೋಸೇಫನ ಜನರು, “ಎಫ್ರಾಯೀಮ್ ಬೆಟ್ಟಪ್ರದೇಶವು ನಮಗೆ ಸಾಕಾಗುವುದಿಲ್ಲ ಎಂಬುದೇನೋ ನಿಜ. ಆದರೆ ಅಲ್ಲಿ ವಾಸಮಾಡುವ ಕಾನಾನ್ಯರಲ್ಲಿ ಬಲವಾದ ಆಯುಧಗಳಿವೆ; ಕಬ್ಬಿಣದ ರಥಗಳಿವೆ. ಇಜ್ರೇಲ್, ಬೇತ್‌ಷೆಯಾನ್ ಕಣಿವೆಗಳು ಮತ್ತು ಆ ಕ್ಷೇತ್ರದ ಎಲ್ಲ ಸಣ್ಣ ಹಳ್ಳಿಗಳು ಅವರ ಅಧೀನದಲ್ಲಿವೆ” ಎಂದರು.
ಯೆಹೋಶುವ 17 : 17 (ERVKN)
ಆಗ ಯೆಹೋಶುವನು ಯೋಸೇಫನ ಮನೆತನದವರಾದ ಎಫ್ರಾಯೀಮನ ಮತ್ತು ಮನಸ್ಸೆಯ ಜನರಿಗೆ, “ನೀವು ಬಹಳಷ್ಟು ಜನರಿದ್ದೀರಿ. ನೀವು ಬಹಳ ಶಕ್ತಿಶಾಲಿಗಳಾಗಿದ್ದೀರಿ. ಆದ್ದರಿಂದ ನೀವು ದೇಶದ ಒಂದು ಪಾಲಿಗಿಂತಲೂ ಹೆಚ್ಚು ಪಡೆಯಬೇಕು.
ಯೆಹೋಶುವ 17 : 18 (ERVKN)
ನೀವು ಬೆಟ್ಟಪ್ರದೇಶವನ್ನು ತೆಗೆದುಕೊಳ್ಳಿರಿ. ಅದೊಂದು ಕಾಡು. ಆದರೆ ನೀವು ಆ ಮರಗಳನ್ನು ಕಡಿದುಹಾಕಿ ಅದನ್ನು ವಾಸಿಸಲು ಒಳ್ಳೆಯ ಸ್ಥಳವನ್ನಾಗಿ ಮಾಡಿಕೊಳ್ಳಬಹುದು. ನೀವು ಆ ಪ್ರದೇಶವನ್ನೆಲ್ಲಾ ನಿಮ್ಮ ಸ್ವತ್ತನ್ನಾಗಿ ಮಾಡಿಕೊಳ್ಳಿರಿ. ಆ ಪ್ರದೇಶವನ್ನು ಬಿಟ್ಟುಹೋಗುವಂತೆ ಕಾನಾನ್ಯರನ್ನು ಒತ್ತಾಯಿಸಿರಿ. ಅವರು ಶಕ್ತಿಯುತರಾಗಿದ್ದರೂ ಅವರ ಬಳಿ ಬಲವಾದ ಆಯುಧಗಳಿದ್ದರೂ ನೀವು ಅವರನ್ನು ಸೋಲಿಸುವಿರಿ” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: