ಯೆಹೋಶುವ 18 : 1 (ERVKN)
ಇಸ್ರೇಲರೆಲ್ಲರು ಶೀಲೋವಿನಲ್ಲಿ ಒಟ್ಟಾಗಿ ಸೇರಿದರು. ಆ ಸ್ಥಳದಲ್ಲಿ ಅವರು ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ಇಸ್ರೇಲರು ಆ ದೇಶವನ್ನು ಸ್ವಾಧೀನ ಮಾಡಿಕೊಂಡಿದ್ದರು. ಅವರು ಆ ದೇಶದ ಎಲ್ಲ ಶತ್ರುಗಳನ್ನು ಸೋಲಿಸಿದ್ದರು.
ಯೆಹೋಶುವ 18 : 2 (ERVKN)
ಆದರೂ ದೇವರು ವಾಗ್ದಾನ ಮಾಡಿದ ಭೂಮಿಯನ್ನು ಇಸ್ರೇಲರ ಏಳು ಕುಲಗಳು ಇನ್ನೂ ಪಡೆದಿರಲಿಲ್ಲ.
ಯೆಹೋಶುವ 18 : 3 (ERVKN)
ಆದುದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಈ ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ.
ಯೆಹೋಶುವ 18 : 4 (ERVKN)
ಆದ್ದರಿಂದ ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ಆರಿಸಬೇಕು. ಭೂಮಿಯನ್ನು ಪರಿಶೀಲಿಸಲು ನಾನು ಅವರನ್ನು ಕಳುಹಿಸುತ್ತೇನೆ. ಅವರು ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಅದರ ನಕ್ಷೆಯನ್ನು ಮಾಡಿ ನನ್ನ ಬಳಿಗೆ ತೆಗೆದುಕೊಂಡು ಬರಲಿ.
ಯೆಹೋಶುವ 18 : 5 (ERVKN)
ಅವರು ಆ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಲಿ. ಯೆಹೂದದ ಜನರು ದಕ್ಷಿಣದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ. ಯೋಸೇಫನ ಜನರು ಉತ್ತರದಲ್ಲಿ ತಮ್ಮ ಭೂಮಿಯನ್ನು ಇಟ್ಟುಕೊಳ್ಳಲಿ.
ಯೆಹೋಶುವ 18 : 6 (ERVKN)
ಆದರೆ ನೀವು ಒಂದು ನಕ್ಷೆಯನ್ನು ಮಾಡಿ ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಬೇಕು. ಆ ನಕ್ಷೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿ. ಯಾವ ಕುಲದವರು ಯಾವ ಭೂಮಿಯನ್ನು ತೆಗೆದುಕೊಳ್ಳಬೇಕೆಂಬುದನ್ನು ನಮ್ಮ ದೇವರಾದ ಯೆಹೋವನು ನಿರ್ಣಯಿಸಲಿ.
ಯೆಹೋಶುವ 18 : 7 (ERVKN)
ಲೇವಿಯ ಕುಲದವರಿಗೆ ಭೂಮಿಯಲ್ಲಿ ಪಾಲು ದೊರೆಯುವುದಿಲ್ಲ. ಯಾಜಕರಾಗಿ ಯೆಹೋವನ ಸೇವೆ ಮಾಡುವುದೇ ಅವರ ಪಾಲು. ಗಾದ್ಯರು, ರೂಬೇನ್ಯರು ಮತ್ತು ಮನಸ್ಸೆ ಕುಲದ ಅರ್ಧಜನರು ವಾಗ್ದಾನ ಮಾಡಲಾದ ಭೂಮಿಯನ್ನು ಈಗಾಗಲೇ ಪಡೆದುಕೊಂಡಿದ್ದಾರೆ. ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿದ್ದಾರೆ. ಯೆಹೋವನ ಸೇವಕನಾದ ಮೋಶೆಯು ಈಗಾಗಲೇ ಆ ಭೂಮಿಯನ್ನು ಅವರಿಗೆ ಕೊಟ್ಟಿದ್ದಾನೆ” ಎಂದನು.
ಯೆಹೋಶುವ 18 : 8 (ERVKN)
ಆದುದರಿಂದ ಭೂಮಿಯನ್ನು ಪರಿಶೀಲಿಸಲು ಆರಿಸಲ್ಪಟ್ಟ ಜನರಿಗೆ ಯೆಹೋಶುವನು, “ಹೋಗಿ, ಭೂಮಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿರಿ; ಅದರ ನಕ್ಷೆಗಳನ್ನು ತೆಗೆಯಿರಿ. ಆಮೇಲೆ ಶೀಲೋವಿನಲ್ಲಿ ನಾನಿರುವ ಸ್ಥಳಕ್ಕೆ ಬನ್ನಿ. ಆಗ ನಾನು ಚೀಟುಹಾಕುತ್ತೇನೆ. ಯೆಹೋವನು ನಿಮ್ಮ ಪಾಲುಗಳನ್ನು ಕೊಡಲಿ” ಅಂದನು.
ಯೆಹೋಶುವ 18 : 9 (ERVKN)
ಅಂತೆಯೇ ಅವರು ಹೋಗಿ ಭೂಮಿಯನ್ನು ಚೆನ್ನಾಗಿ ಪರಿಶೀಲಿಸಿದರು; ಯೆಹೋಶುವನಿಗಾಗಿ ನಕ್ಷೆಗಳನ್ನು ತೆಗೆದರು. ಅವರು ಪ್ರತಿಯೊಂದು ಹಳ್ಳಿಯನ್ನು ಪರಿಶೀಲಿಸಿದರು. ಭೂಮಿಯನ್ನು ಏಳು ಭಾಗಗಳಾಗಿ ವಿಂಗಡಿಸಿದರು. ಅವರು ನಕ್ಷೆಗಳನ್ನು ತೆಗೆದು ಯೆಹೋಶುವನ ಬಳಿಗೆ ಶೀಲೋವಿಗೆ ಹಿಂತಿರುಗಿ ಹೋದರು.
ಯೆಹೋಶುವ 18 : 10 (ERVKN)
ಯೆಹೋಶುವನು ಅವರಿಗಾಗಿ ಶೀಲೋವಿನಲ್ಲಿ ಯೆಹೋವನ ಮುಂದೆ ಚೀಟುಹಾಕಿದನು. ಹೀಗೆ ಯೆಹೋಶುವನು ಭೂಮಿಯನ್ನು ಹಂಚಿದನು; ಪ್ರತಿಯೊಂದು ಕುಲಕ್ಕೆ ಅದರ ಭೂಭಾಗವನ್ನು ಕೊಟ್ಟನು.
ಯೆಹೋಶುವ 18 : 11 (ERVKN)
ಬೆನ್ಯಾಮೀನ್ ಕುಲದವರಿಗೆ ಯೆಹೂದ್ಯರ ಮತ್ತು ಯೋಸೇಫ್ಯರ ಪ್ರಾಂತ್ಯಗಳ ಮಧ್ಯದಲ್ಲಿರುವ ಭೂಮಿಯನ್ನು ಕೊಡಲಾಯಿತು. ಬೆನ್ಯಾಮೀನ್ ಕುಲದ ಪ್ರತಿಯೊಂದು ಗೋತ್ರವು ತಮ್ಮ ಭೂಮಿಯನ್ನು ಪಡೆದುಕೊಂಡಿತು. ಇದು ಬೆನ್ಯಾಮೀನ್ ಕುಲದವರಿಗೆ ಆರಿಸಲ್ಪಟ್ಟ ಭೂಮಿಯಾಗಿತ್ತು.
ಯೆಹೋಶುವ 18 : 12 (ERVKN)
ಅದರ ಉತ್ತರದಿಕ್ಕಿನ ಮೇರೆಯು ಜೋರ್ಡನ್ ನದಿಯಿಂದ ಆರಂಭವಾಗುತ್ತದೆ. ಅದು ಜೆರಿಕೊವಿನ ಉತ್ತರ ಅಂಚಿನೊಂದಿಗೆ ಹೊರಟು ಪಶ್ಚಿಮದ ಬೆಟ್ಟಪ್ರದೇಶದೊಳಗೆ ಹೋಗುತ್ತದೆ. ಆ ಸೀಮೆಯು ಬೇತಾವೆನಿನ ಪೂರ್ವದಿಕ್ಕಿಗೆ ಅತಿಸಮೀಪದಲ್ಲಿ ಮುಂದುವರೆದು
ಯೆಹೋಶುವ 18 : 13 (ERVKN)
ದಕ್ಷಿಣದಲ್ಲಿರುವ ಬೇತೇಲ್ ಎಂಬ ಲೂಜಿಗೆ ಹೋಗುತ್ತದೆ. ಅಲ್ಲಿಂದ ಇಳಿದು ಅಟಾರೋತದ್ದಾರ್‌ಗೆ ಹೋಗುತ್ತದೆ. ಅಟಾರೋತದ್ದಾರ್ ಕೆಳಗಿನ ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದ ಮೇಲೆ ಇದೆ.
ಯೆಹೋಶುವ 18 : 14 (ERVKN)
ಬೇತ್‌ಹೋರೋನಿನ ದಕ್ಷಿಣದಲ್ಲಿರುವ ಬೆಟ್ಟದಿಂದ ಆ ಸೀಮೆಯು ದಕ್ಷಿಣಕ್ಕೆ ತಿರುಗಿಕೊಂಡು ಆ ಬೆಟ್ಟದ ಪಶ್ಚಿಮಭಾಗದ ಜೊತೆಗೆ ಮುಂದುವರೆಯುತ್ತದೆ. ಆ ಸೀಮೆಯು ಕಿರ್ಯತ್ಯಾರೀಮ್ ಎಂಬ ಕಿರ್ಯತ್‌ಬಾಳ್‌ಗೆ ಹೋಗುತ್ತದೆ. ಈ ಪಟ್ಟಣವು ಯೆಹೂದ್ಯರಿಗೆ ಸೇರಿದ್ದು. ಇದು ಪಶ್ಚಿಮದಿಕ್ಕಿನ ಸೀಮೆಯಾಗಿತ್ತು.
ಯೆಹೋಶುವ 18 : 15 (ERVKN)
ದಕ್ಷಿಣದಿಕ್ಕಿನ ಮೇರೆಯು ಕಿರ್ಯತ್ಯಾರೀಮಿನ ಹತ್ತಿರದಿಂದ ಪ್ರಾರಂಭವಾಗಿ ನೆಪ್ತೋಹ ನದಿಯವರೆಗೆ ಹೋಗುತ್ತದೆ.
ಯೆಹೋಶುವ 18 : 16 (ERVKN)
ಅಲ್ಲಿಂದ ಆ ಮೇರೆಯು ರೆಫಾಯಿಮ್ ತಗ್ಗಿನ ಉತ್ತರದಲ್ಲಿರುವ ಬೆನ್‌ಹಿನ್ನೋಮ್ ತಗ್ಗಿನ ಹತ್ತಿರ ಆ ಬೆಟ್ಟದ ಬುಡಕ್ಕೆ ಇಳಿಯುತ್ತದೆ. ಆ ಮೇರೆಯು ಹಿನ್ನೋಮ್ ತಗ್ಗಿನಿಂದ ಯೆಬೂಸಿಯ ಪಟ್ಟಣದ ದಕ್ಷಿಣದವರೆಗೆ ಮುಂದುವರೆಯುತ್ತದೆ. ಅಲ್ಲಿಂದ ಅದು ಏನ್‌ರೋಗೆಲಿಗೆ ಬರುತ್ತದೆ.
ಯೆಹೋಶುವ 18 : 17 (ERVKN)
ಅಲ್ಲಿಂದ ಆ ಸೀಮೆಯು ಉತ್ತರಕ್ಕೆ ತಿರುಗಿ ಏನ್‌ಷೆಮೆಸ್‌ಗೆ ಹೋಗುತ್ತದೆ. ಅದು ಗೆಲೀಲೋತದವರೆಗೆ ಮುಂದುವರೆಯುತ್ತದೆ. (ಬೆಟ್ಟಗಳಲ್ಲಿರುವ ಅದುಮ್ಮೀಮ್ ಎಂಬ ಇಕ್ಕಟ್ಟಾದ ಮಾರ್ಗದ ಸಮೀಪದಲ್ಲಿದೆ ಗೆಲೀಲೋತ್.) ಆ ಸೀಮೆಯು ರೂಬೇನನ ಮಗನಾದ ಬೋಹನನ ಹೆಸರಿನ ಮಹಾಬಂಡೆಗೆ ಹೋಗುತ್ತದೆ.
ಯೆಹೋಶುವ 18 : 18 (ERVKN)
ಆ ಸೀಮೆಯು ಬೇತ್‌ಅರಾಬ ಉತ್ತರಭಾಗಕ್ಕೆ ಮುಂದುವರೆದು ಅಲ್ಲಿಂದ ಅದು ಜೋರ್ಡನ್ ಕಣಿವೆಗೆ ಇಳಿಯುತ್ತದೆ.
ಯೆಹೋಶುವ 18 : 19 (ERVKN)
ಅಲ್ಲಿಂದ ಆ ಮೇರೆಯು ಬೇತ್‌ಹೊಗ್ಲಾವಿನ ಉತ್ತರಭಾಗದಲ್ಲಿ ಮುಂದುವರೆದು ಲವಣಸಮುದ್ರದ ಉತ್ತರ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. ಜೋರ್ಡನ್ ನದಿಯು ಸಮುದ್ರಕ್ಕೆ ಸೇರುವುದು ಇಲ್ಲಿಯೇ. ಇದು ದಕ್ಷಿಣದಿಕ್ಕಿನ ಸೀಮೆ.
ಯೆಹೋಶುವ 18 : 20 (ERVKN)
ಜೋರ್ಡನ್ ನದಿಯು ಅವರ ಪೂರ್ವದಿಕ್ಕಿನ ಮೇರೆ. ಬೆನ್ಯಾಮೀನ್ ಗೋತ್ರಗಳ ಸ್ವಾಸ್ತ್ಯದ ಸುತ್ತಲಿನ ಮೇರೆಯು ಇದೇ.
ಯೆಹೋಶುವ 18 : 21 (ERVKN)
ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಪಟ್ಟಣಗಳು: ಜೆರಿಕೊ, ಬೇತ್‌ಹೊಗ್ಲಾ, ಏಮೆಕ್ಕೆಚ್ಚೀಚ್,
ಯೆಹೋಶುವ 18 : 22 (ERVKN)
ಬೇತ್‌ಅರಾಬಾ, ಚೆಮಾರಯಿಮ್, ಬೇತೇಲ್,
ಯೆಹೋಶುವ 18 : 23 (ERVKN)
ಅವ್ವೀಮ್, ಪಾರಾ, ಒಫ್ರಾ,
ಯೆಹೋಶುವ 18 : 24 (ERVKN)
ಅಮ್ಮೋನ್ಯ, ಕೆಫೆರ್, ಒಫ್ನೀ ಮತ್ತು ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲ ಹೊಲಗದ್ದೆಗಳು.
ಯೆಹೋಶುವ 18 : 25 (ERVKN)
ಬೆನ್ಯಾಮೀನ್ ಗೋತ್ರದವರು ಹದಿನಾಲ್ಕು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಎಲ್ಲಾ ಹೊಲಗದ್ದೆಗಳನ್ನು ಪಡೆದುಕೊಂಡರು. ಆ ಊರುಗಳು ಇಂತಿವೆ: ಗಿಬ್ಯೋನ್, ರಾಮಾ, ಬೇರೋತ್,
ಯೆಹೋಶುವ 18 : 26 (ERVKN)
ಮಿಚ್ಪೆ, ಕೆಫೀರಾ, ಮೋಚಾ,
ಯೆಹೋಶುವ 18 : 27 (ERVKN)
ರೆಕೆಮ್, ಇರ್ಫೇಲ್, ತರಲಾ,
ಯೆಹೋಶುವ 18 : 28 (ERVKN)
ಚೇಲ, ಎಲೆಫ್, ಜೆರುಸಲೇಮ್ ಎಂದು ಕರೆಯಲ್ಪಡುವ ಯೆಬೂಸಿಯರ ಪಟ್ಟಣ, ಗಿಬೆಯತ್ ಮತ್ತು ಕಿರ್ಯತ್. ಬೆನ್ಯಾಮೀನ್ ಗೋತ್ರಗಳವರು ಈ ಪ್ರದೇಶಗಳನ್ನೆಲ್ಲ ಪಡೆದುಕೊಂಡರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: