ಯೆಹೋಶುವ 23 : 1 (ERVKN)
ಯೆಹೋಶುವನಿಂದ ಜನರಿಗೆ ಪ್ರೇರಣೆ ಯೆಹೋವನು ಇಸ್ರೇಲರ ಶತ್ರುಗಳನ್ನು ಸದೆಬಡೆದು ಅವರಿಗೆ ವಿಶ್ರಾಂತಿಯನ್ನು ಕೊಟ್ಟನು. ಯೆಹೋವನು ಇಸ್ರೇಲನ್ನು ಸುರಕ್ಷಿತಗೊಳಿಸಿದನು. ಅನೇಕ ವರ್ಷಗಳು ಕಳೆದವು. ಯೆಹೋಶುವನು ಬಹಳ ಮುದುಕನಾದನು.
ಯೆಹೋಶುವ 23 : 2 (ERVKN)
ಆಗ ಯೆಹೋಶುವನು ಎಲ್ಲಾ ಹಿರಿಯನಾಯಕರನ್ನು, ಕುಟುಂಬದ ಮುಖ್ಯಸ್ಥರನ್ನು, ನ್ಯಾಯಾಧೀಶರನ್ನು ಮತ್ತು ಇಸ್ರೇಲರ ಅಧಿಕಾರಿಗಳನ್ನು ಸಭೆ ಸೇರಿಸಿದನು. ಯೆಹೋಶುವನು ಅವರಿಗೆ, “ನಾನು ಬಹಳ ಮುದುಕನಾಗಿದ್ದೇನೆ.
ಯೆಹೋಶುವ 23 : 3 (ERVKN)
ಯೆಹೋವನು ನಮ್ಮ ಶತ್ರುಗಳಿಗೆ ಏನು ಮಾಡಿದನೆಂಬುದು ನೀವು ನೋಡಿದ್ದೀರಿ. ನಮಗೆ ಸಹಾಯ ಮಾಡುವುದಕ್ಕಾಗಿ ನಮ್ಮ ದೇವರಾದ ಯೆಹೋವನು ನಮಗಾಗಿ ಯುದ್ಧಮಾಡಿದನು.
ಯೆಹೋಶುವ 23 : 4 (ERVKN)
ಪಶ್ಚಿಮದಲ್ಲಿ ಮೆಡಿಟರೇನಿಯನ್ ಸಮುದ್ರವನ್ನು ಮತ್ತು ಜೋರ್ಡನ್ ನದಿಯ ಮಧ್ಯದ ಪ್ರದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳಬಹುದೆಂದು ನಾನು ನಿಮಗೆ ತಿಳಿಸಿದ್ದನ್ನು ಸ್ಮರಿಸಿಕೊಳ್ಳಿ. ನಾನು ಆ ಪ್ರದೇಶವನ್ನು ನಿಮಗೆ ಕೊಡುವುದಾಗಿ ವಾಗ್ದಾನ ಮಾಡಿದ್ದೆ. ಆದರೆ ಇಲ್ಲಿಯವರೆಗೂ ಅದು ನಿಮ್ಮ ಅಧೀನಕ್ಕೆ ಬಂದಿಲ್ಲ.
ಯೆಹೋಶುವ 23 : 5 (ERVKN)
ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.
ಯೆಹೋಶುವ 23 : 6 (ERVKN)
“ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.
ಯೆಹೋಶುವ 23 : 7 (ERVKN)
ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.
ಯೆಹೋಶುವ 23 : 8 (ERVKN)
ನಿಮ್ಮ ದೇವರಾದ ಯೆಹೋವನನ್ನೇ ಅನುಸರಿಸಿಕೊಂಡಿರಿ. ಈವರೆಗೆ ನೀವು ಹೇಗಿದ್ದಿರೊ ಅದೇ ರೀತಿಯಲ್ಲಿ ಮುಂದೆಯೂ ಇರಿ.
ಯೆಹೋಶುವ 23 : 9 (ERVKN)
“ದೊಡ್ಡದಾದ ಮತ್ತು ಪ್ರಬಲವಾದ ಜನಾಂಗಗಳನ್ನು ಸೋಲಿಸಲು ಯೆಹೋವನು ನಿಮಗೆ ನೆರವಾದನು. ಆತನು ಅವರನ್ನು ತನ್ನ ಬಲವುಳ್ಳ ಹಸ್ತದಿಂದ ಹೊರಗಟ್ಟಿದನು. ನಿಮ್ಮನ್ನು ಸೋಲಿಸಲು ಯಾವ ಜನಾಂಗಕ್ಕೂ ಸಾಧ್ಯವಿಲ್ಲ.
ಯೆಹೋಶುವ 23 : 10 (ERVKN)
ಯೆಹೋವನ ಸಹಾಯದಿಂದ ನಿಮ್ಮಲ್ಲಿ ಒಬ್ಬ ಇಸ್ರೇಲಿಯು ಒಂದು ಸಾವಿರ ಮಂದಿ ಶತ್ರುಗಳನ್ನು ಸೋಲಿಸುವಂತಾಯಿತು; ಏಕೆಂದರೆ ನಿಮ್ಮ ದೇವರಾದ ಯೆಹೋವನು ನಿಮಗಾಗಿ ಯುದ್ಧ ಮಾಡುವುದಾಗಿ ಪ್ರಮಾಣ ಮಾಡಿದ್ದಾನೆ.
ಯೆಹೋಶುವ 23 : 11 (ERVKN)
ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.
ಯೆಹೋಶುವ 23 : 12 (ERVKN)
“ಯೆಹೋವನನ್ನೇ ಅನುಸರಿಸಿರಿ. ಇಸ್ರೇಲಿಗೆ ಸೇರಿಲ್ಲದ ಅನ್ಯರೊಂದಿಗೆ ಸ್ನೇಹ ಮಾಡಬೇಡಿ. ಅವರ ಜನರನ್ನು ಮದುವೆಯಾಗಬೇಡಿ. ನೀವು ಅವರೊಂದಿಗೆ ಸ್ನೇಹ ಮಾಡಿದರೆ,
ಯೆಹೋಶುವ 23 : 13 (ERVKN)
ನಿಮ್ಮ ದೇವರಾದ ಯೆಹೋವನು ಶತ್ರುಗಳನ್ನು ಸೋಲಿಸಲು ನಿಮಗೆ ಸಹಾಯ ಮಾಡುವುದಿಲ್ಲ, ಅವರು ನಿಮಗೆ ಉರುಲಿನಂತಾಗುತ್ತಾರೆ. ಹೊಗೆ ಮತ್ತು ಧೂಳು ನಿಮ್ಮ ಕಣ್ಣಿಗೆ ನೋವನ್ನುಂಟು ಮಾಡುವಂತೆ ಅವರು ನಿಮಗೆ ನೋವನ್ನುಂಟು ಮಾಡುತ್ತಾರೆ; ಈ ಒಳ್ಳೆಯ ದೇಶದಿಂದ ನಿಮ್ಮನ್ನು ಬಲಾತ್ಕಾರದಿಂದ ಹೊರಗಟ್ಟಲಾಗುವುದು. ನಿಮ್ಮ ದೇವರಾದ ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿದ್ದಾನೆ. ಆದರೆ ಯೆಹೋವನ ಆಜ್ಞೆಯನ್ನು ಪಾಲಿಸದಿದ್ದಲ್ಲಿ ನೀವು ಇದನ್ನು ಕಳೆದುಕೊಳ್ಳಬೇಕಾಗುತ್ತದೆ.
ಯೆಹೋಶುವ 23 : 14 (ERVKN)
“ನಾನು ಇಹಲೋಕ ಯಾತ್ರೆಯನ್ನು ಮುಗಿಸುವ ಕಾಲಬಂದಂತಿದೆ. ಯೆಹೋವನು ನಿಮಗಾಗಿ ಅನೇಕ ಮಹತ್ಕಾರ್ಯಗಳನ್ನು ಮಾಡಿದ್ದು ನಿಮಗೆ ಗೊತ್ತಿದೆ; ಅದನ್ನು ನೀವು ಮನಃಪೂರ್ವಕವಾಗಿ ನಂಬುತ್ತೀರಿ. ಆತನು ತನ್ನ ಯಾವ ವಾಗ್ದಾನವನ್ನೂ ನೆರವೇರಿಸದೆ ಬಿಟ್ಟಿಲ್ಲ. ಯೆಹೋವನು ನಮಗೆ ಮಾಡಿದ ಪ್ರತಿಯೊಂದು ವಾಗ್ದಾನಗಳನ್ನು ನೆರವೇರಿಸಿದ್ದಾನೆ.
ಯೆಹೋಶುವ 23 : 15 (ERVKN)
ನಿಮ್ಮ ದೇವರಾದ ಯೆಹೋವನು ಮಾಡಿದ ಪ್ರತಿಯೊಂದು ಒಳ್ಳೆಯ ವಾಗ್ದಾನವು ನೆರವೇರಿದೆ. ಅದೇ ರೀತಿಯಲ್ಲಿ ಯೆಹೋವನು ತನ್ನ ಉಳಿದ ವಾಗ್ದಾನವನ್ನು ನೆರವೇರಿಸುವನು. ನೀವು ತಪ್ಪುಗಳನ್ನು ಮಾಡಿದರೆ ನಿಮಗೆ ಕೆಟ್ಟದ್ದಾಗುವುದೆಂದೂ ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಗಟ್ಟವುದಾಗಿಯೂ ಆತನು ಹೇಳಿದ್ದಾನೆ.
ಯೆಹೋಶುವ 23 : 16 (ERVKN)
ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.
❮
❯
1
2
3
4
5
6
7
8
9
10
11
12
13
14
15
16