ಯೆಹೋಶುವ 5 : 1 (ERVKN)
ಇಸ್ರೇಲರು ಜೋರ್ಡನ್ ನದಿಯನ್ನು ದಾಟುವವರೆಗೆ ಯೆಹೋವನು ಆ ನದಿಯನ್ನು ಬತ್ತಿಸಿದನು. ಜೋರ್ಡನ್ ನದಿಯ ಪಶ್ಚಿಮ ದಿಕ್ಕಿನಲ್ಲಿರುವ ಅಮೋರಿಯರ ಅರಸರು ಮತ್ತು ಭೂಮಧ್ಯ ಸಾಗರದ ಹತ್ತಿರವಿರುವ ಕಾನಾನ್ಯರ ಅರಸರು ಈ ಸಂಗತಿಯನ್ನು ಕೇಳಿ ಭಯಗ್ರಸ್ತರಾದರು; ಇಸ್ರೇಲರ ವಿರುದ್ಧವಾಗಿ ಹೋರಾಡುವಷ್ಟು ಧೈರ್ಯವಿಲ್ಲದವರಾದರು.
ಯೆಹೋಶುವ 5 : 2 (ERVKN)
ಇಸ್ರೇಲಿನ ಜನರಿಗೆ ಸುನ್ನತಿ ಮಾಡಲಾಯಿತು ಆ ಸಮಯದಲ್ಲಿ ಯೆಹೋವನು ಯೆಹೋಶುವನಿಗೆ, “ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲಿನ ಗಂಡಸರಿಗೆ ಇನ್ನೊಮ್ಮೆ ಸುನ್ನತಿಯನ್ನು ಮಾಡಿಸು” ಎಂದು ಹೇಳಿದನು.
ಯೆಹೋಶುವ 5 : 3 (ERVKN)
ಯೆಹೋಶುವನು ಕಲ್ಲುಗಳಿಂದ ಚೂರಿಗಳನ್ನು ಮಾಡಿಸಿ ಇಸ್ರೇಲರಿಗೆ ಗಿಬೆಯತ್ ಹಾರಲೋತ್‌ನಲ್ಲಿ* ಗಿಬೆಯತ್ ಹಾರಲೋತ್ ಈ ಹೆಸರಿನ ಅರ್ಥ, “ಸುನ್ನತಿ ಗುಡ್ಡ.” ಸುನ್ನತಿಯನ್ನು ಮಾಡಿದನು.
ಯೆಹೋಶುವ 5 : 4 (ERVKN)
(4-7)ಯೆಹೋಶುವನು ಸುನ್ನತಿ ಮಾಡಲು ಕಾರಣವೇನೆಂದರೆ: ಈಜಿಪ್ಟನ್ನು ಬಿಟ್ಟುಹೊರಟಾಗ ಸೈನ್ಯಸೇರಲು ಯೋಗ್ಯರಾದ ಇಸ್ರೇಲಿನ ಗಂಡಸರಿಗೆ ಸುನ್ನತಿಯಾಗಿತ್ತು. ಅವರು ಮರುಭೂಮಿಯಲ್ಲಿದ್ದಾಗ ಅನೇಕ ಯುದ್ಧವೀರರು ಯೆಹೋವನಿಗೆ ಕಿವಿಗೂಡಲಿಲ್ಲ. ಆದಕಾರಣ, “ಹಾಲೂ ಜೇನೂ ಹರಿಯುವ ವಾಗ್ದತ್ತ ನಾಡನ್ನು” ಆ ಜನರು ಕಾಣುವುದಿಲ್ಲ ಎಂದು ಯೆಹೋವನು ಪ್ರಮಾಣ ಮಾಡಿದನು. ನಮ್ಮ ಪೂರ್ವಿಕರಿಗೆ ಆ ಭೂಮಿಯನ್ನು ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಆ ಜನರು ಯೆಹೋವನ ಮಾತನ್ನು ಕೇಳದೆ ಅವಿಧೇಯರಾದ ಕಾರಣ ಆತನು ಅವರನ್ನು ನಲವತ್ತು ವರ್ಷಗಳ ಕಾಲ ಅಂದರೆ ಆ ಯೋಧರು ಸಾಯುವವರೆಗೆ ಮರುಭೂಮಿಯಲ್ಲಿ ಅಲೆದಾಡುವಂತೆ ಮಾಡಿದನು. ಆ ಎಲ್ಲ ಯುದ್ಧವೀರರು ಸತ್ತುಹೋದರು ಮತ್ತು ಅವರ ಸ್ಥಾನಕ್ಕೆ ಅವರ ಗಂಡುಮಕ್ಕಳು ಬಂದರು. ಆದರೆ ಈಜಿಪ್ಟಿನಿಂದ ಹೊರಟು ಮರುಭೂಮಿಯಲ್ಲಿ ಪ್ರಯಾಣ ಮಾಡುತ್ತಿದ್ದಾಗ ಹುಟ್ಟಿದ ಯಾವ ಗಂಡುಮಕ್ಕಳಿಗೂ ಸುನ್ನತಿ ಆಗಿರಲಿಲ್ಲ. ಅದಕ್ಕಾಗಿ ಯೆಹೋಶುವನು ಅವರಿಗೆ ಸುನ್ನತಿ ಮಾಡಿಸಿದನು.
ಯೆಹೋಶುವ 5 : 5 (ERVKN)
ಯೆಹೋಶುವ 5 : 6 (ERVKN)
ಯೆಹೋಶುವ 5 : 7 (ERVKN)
ಯೆಹೋಶುವ 5 : 8 (ERVKN)
ಯೆಹೋಶುವನು ಅವರೆಲ್ಲರಿಗೂ ಸುನ್ನತಿ ಮಾಡಿಸಿದನು. ಅವರೆಲ್ಲರ ಗಾಯಗಳು ವಾಸಿಯಾಗುವವರೆಗೆ ಅವರು ಅಲ್ಲಿಯೇ ತಮ್ಮತಮ್ಮ ಸ್ಥಳದ ಪಾಳೆಯದಲ್ಲಿ ಇದ್ದರು.
ಯೆಹೋಶುವ 5 : 9 (ERVKN)
ಕಾನಾನಿನಲ್ಲಿ ಮೊದಲನೆಯ ಪಸ್ಕಹಬ್ಬ ಆಗ ಯೆಹೋವನು ಯೆಹೋಶುವನಿಗೆ, “ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಅವಮಾನಕ್ಕೆ ಗುರಿಯಾಗಿದ್ದಿರಿ. ಆದರೆ ಇಂದು ಆ ನಾಚಿಕೆಯನ್ನು ತೆಗೆದು ಹಾಕಿದ್ದೇನೆ” ಎಂದನು. ಆದ್ದರಿಂದ ಯೆಹೋಶುವನು ಆ ಸ್ಥಳಕ್ಕೆ “ಗಿಲ್ಗಾಲ್” ಎಂದು ಹೆಸರಿಟ್ಟನು. ಈಗಲೂ ಆ ಸ್ಥಳಕ್ಕೆ “ಗಿಲ್ಗಾಲ್” ಎಂಬ ಹೆಸರಿದೆ.
ಯೆಹೋಶುವ 5 : 10 (ERVKN)
ಇಸ್ರೇಲರು ಇನ್ನೂ ಗಿಲ್ಗಾಲಿನಲ್ಲಿಯೇ ಇಳಿದುಕೊಂಡಿದ್ದಾಗ ಜೆರಿಕೊವಿನ ಮೈದಾನಗಳಲ್ಲಿ ಅವರು ಆ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಪಸ್ಕಹಬ್ಬವನ್ನು ಆಚರಿಸಿದರು.
ಯೆಹೋಶುವ 5 : 11 (ERVKN)
ಪಸ್ಕಹಬ್ಬದ ಮರುದಿನ ಮುಂಜಾನೆಯಲ್ಲಿ ಅವರು ಆ ಭೂಮಿಯಲ್ಲಿ ಬೆಳೆದ ಆಹಾರವನ್ನು ಊಟಮಾಡಿದರು; ಅವರು ಹುಳಿ ರಹಿತವಾದ ರೊಟ್ಟಿಯನ್ನು ಮತ್ತು ಹುರಿದ ಕಾಳುಗಳನ್ನು ಊಟ ಮಾಡಿದರು.
ಯೆಹೋಶುವ 5 : 12 (ERVKN)
ಮೂರನೆಯ ದಿನ ಮುಂಜಾನೆ ಪರಲೋಕದಿಂದ ಬರುತ್ತಿದ್ದ ವಿಶಿಷ್ಟ ಆಹಾರವಾದ ಮನ್ನವು ನಿಂತುಹೋಯಿತು. ಜನರು ಕಾನಾನ್ ಪ್ರದೇಶದಲ್ಲಿ ಬೆಳೆದ ಆಹಾರವನ್ನು ತಿಂದ ದಿನದಿಂದ ಹೀಗಾಯಿತು. ಅಂದಿನಿಂದ ಇಸ್ರೇಲರು ಪರಲೋಕದ ವಿಶಿಷ್ಟವಾದ ಆಹಾರವನ್ನು ಪಡೆಯಲಿಲ್ಲ.
ಯೆಹೋಶುವ 5 : 13 (ERVKN)
ಯೆಹೋವನ ಸೇನಾಧಿಪತಿ ಯೆಹೋಶುವನು ಜೆರಿಕೊವಿನ ಸಮೀಪದಲ್ಲಿದ್ದಾಗ ಕಣ್ಣೆತ್ತಿ ನೋಡಲು ಒಬ್ಬ ಮನುಷ್ಯನು ಅವನ ಎದುರಿಗೆ ನಿಂತಿರುವುದನ್ನು ಕಂಡನು. ಆ ಮನುಷ್ಯನ ಕೈಯಲ್ಲಿ ಒಂದು ಖಡ್ಗವಿತ್ತು. ಯೆಹೋಶುವನು ಆ ಮನುಷ್ಯನ ಹತ್ತಿರಹೋಗಿ, “ನೀನು ನಮ್ಮ ಜನರ ಸ್ನೇಹಿತನೋ ಅಥವಾ ನೀನು ನಮ್ಮ ಶತ್ರುಗಳಲ್ಲಿ ಒಬ್ಬನೋ?” ಎಂದು ಕೇಳಿದನು.
ಯೆಹೋಶುವ 5 : 14 (ERVKN)
ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.
ಯೆಹೋಶುವ 5 : 15 (ERVKN)
ಯೆಹೋವನ ಸೇನಾಧಿಪತಿಯು, “ನಿನ್ನ ಪಾದರಕ್ಷೆಗಳನ್ನು ಬಿಚ್ಚಿಬಿಡು. ಈಗ ನೀನು ನಿಂತುಕೊಂಡಿರುವ ಸ್ಥಳವು ಪವಿತ್ರವಾದದ್ದು” ಎಂದು ಹೇಳಿದನು. ಯೆಹೋಶುವನು ಅವನು ಹೇಳಿದಂತೆಯೇ ಮಾಡಿದನು.

1 2 3 4 5 6 7 8 9 10 11 12 13 14 15