ಯೆಹೋಶುವ 7 : 1 (ERVKN)
ಇಸ್ರೇಲರು ಯೆಹೋವನ ಆಜ್ಞೆಗೆ ವಿಧೇಯರಾಗಲಿಲ್ಲ. ಯೆಹೂದ ಕುಲದವನೂ ಕರ್ಮೀಯ ಮಗನೂ ಜಬ್ದೀಯ ಮೊಮ್ಮಗನೂ ಜೆರಹನ ಗೋತ್ರದವನೂ ಆದ ಆಕಾನ ಎಂಬವನು ನಾಶಮಾಡಬೇಕಾದ ವಸ್ತುಗಳಲ್ಲಿ ಕೆಲವನ್ನು ಇಟ್ಟುಕೊಂಡಿದ್ದನು. ಅದಕ್ಕಾಗಿ ಯೆಹೋವನು ಇಸ್ರೇಲಿನವರ ಮೇಲೆ ತುಂಬಾ ಕೋಪಗೊಂಡನು.
ಯೆಹೋಶುವ 7 : 2 (ERVKN)
ಜೆರಿಕೊವನ್ನು ಸ್ವಾಧೀನಪಡಿಸಿಕೊಂಡ ಮೇಲೆ ಯೆಹೋಶುವನು ಕೆಲವು ಜನರನ್ನು ‘ಆಯಿ’ ಎಂಬ ಪಟ್ಟಣಕ್ಕೆ ಕಳುಹಿಸಿದನು. ‘ಆಯಿ’ ಬೇತಾವೆನಿನ ಸಮೀಪಕ್ಕೂ ಬೇತೇಲಿನ ಪೂರ್ವಕ್ಕೂ ಇತ್ತು. ಯೆಹೋಶುವನು ‘“ಆಯಿ’ಗೆ ಹೋಗಿರಿ ಮತ್ತು ಆ ಪ್ರಾಂತ್ಯದ ದುರ್ಬಲತೆಗಳನ್ನು ಕಂಡುಹಿಡಿಯಿರಿ” ಎಂದು ಹೇಳಿದನು. ಆಗ ಅವರು ಆ ಪ್ರದೇಶದಲ್ಲಿ ಗೂಢಚರ್ಯ ಮಾಡುವುದಕ್ಕೆ ಹೋದರು.
ಯೆಹೋಶುವ 7 : 3 (ERVKN)
ತರುವಾಯ ಆ ಜನರು ಯೆಹೋಶುವನಲ್ಲಿಗೆ ಬಂದು, “ಆಯಿ ಒಂದು ದುರ್ಬಲ ಪ್ರದೇಶವಾಗಿದೆ, ಆ ಪ್ರದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ನಮ್ಮ ಎಲ್ಲ ಜನರು ಬೇಕಾಗುವುದಿಲ್ಲ. ಅಲ್ಲಿ ಯುದ್ಧ ಮಾಡಲು ಎರಡು ಅಥವಾ ಮೂರುಸಾವಿರ ಜನರನ್ನು ಕಳುಹಿಸಿದರೆ ಸಾಕು, ಇಡೀ ಸೈನ್ಯವನ್ನು ಉಪಯೋಗಿಸುವ ಅವಶ್ಯಕತೆ ಇಲ್ಲ. ಅಲ್ಲಿ ನಮ್ಮ ವಿರುದ್ಧ ಹೋರಾಡಬಲ್ಲ ಕೆಲವೇ ಜನರು ಇದ್ದಾರೆ” ಎಂದು ಹೇಳಿದರು.
ಯೆಹೋಶುವ 7 : 4 (ERVKN)
[This verse may not be a part of this translation]
ಯೆಹೋಶುವ 7 : 5 (ERVKN)
[This verse may not be a part of this translation]
ಯೆಹೋಶುವ 7 : 6 (ERVKN)
ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.
ಯೆಹೋಶುವ 7 : 7 (ERVKN)
ಯೆಹೋಶುವನು, “ಯೆಹೋವನೇ ನನ್ನ ಒಡೆಯನೇ, ನಮ್ಮ ಜನರನ್ನು ನೀನು ಜೋರ್ಡನ್ ನದಿ ದಾಟಿಸಿ ಕರೆದುಕೊಂಡು ಬಂದೆ. ನಮ್ಮನ್ನು ಇಲ್ಲಿಯವರೆಗೆ ಕರೆದು ತಂದು ಅಮೋರಿಯರಿಂದ ನಾಶವಾಗಲು ನಮ್ಮನ್ನು ಬಿಟ್ಟು ಕೊಡುವುದೇಕೆ? ನಾವು ಇದ್ದುದರಲ್ಲಿ ತೃಪ್ತಿಪಟ್ಟುಕೊಂಡು ಜೋರ್ಡನ್ ನದಿಯ ಆಚೆಯಲ್ಲಿಯೇ ಇರಬೇಕಾಗಿತ್ತು.
ಯೆಹೋಶುವ 7 : 8 (ERVKN)
ಯೆಹೋವನೇ, ‘ಇಸ್ರೇಲರು ವೈರಿಗಳ ಮುಂದೆ ಸೋತು ಹೋಗಿದ್ದಾರಲ್ಲಾ! ಈಗ ನಾನೇನು ಹೇಳಲಿ?
ಯೆಹೋಶುವ 7 : 9 (ERVKN)
ಈ ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.
ಯೆಹೋಶುವ 7 : 10 (ERVKN)
ಯೆಹೋವನು ಯೆಹೋಶುವನಿಗೆ, “ಮೇಲಕ್ಕೆ ಏಳು, ನೀನು ಹೀಗೆ ಬೋರಲು ಬಿದ್ದಿರುವುದೇಕೆ?
ಯೆಹೋಶುವ 7 : 11 (ERVKN)
ಇಸ್ರೇಲರು ಪಾಪಮಾಡಿದ್ದಾರೆ. ನಾನು ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ನಾನು ನಾಶಪಡಿಸಲು ಹೇಳಿದ ವಸ್ತುಗಳಲ್ಲಿ ಕೆಲವನ್ನು ಅವರು ತೆಗೆದುಕೊಂಡಿದ್ದಾರೆ; ಅವರು ನನ್ನಿಂದ ಕದ್ದಿದ್ದಾರೆ; ಸುಳ್ಳು ಹೇಳಿದ್ದಾರೆ. ಅವರು ಆ ವಸ್ತುಗಳನ್ನು ತಮಗಾಗಿ ತೆಗೆದುಕೊಂಡಿದ್ದಾರೆ.
ಯೆಹೋಶುವ 7 : 12 (ERVKN)
ಅದಕ್ಕಾಗಿಯೇ ಇಸ್ರೇಲಿನ ಸೈನ್ಯವು ಯುದ್ಧದಿಂದ ವಿಮುಖವಾಗಿ ಓಡಿಬಂತು. ಅವರು ತಪ್ಪನ್ನು ಮಾಡಿದ್ದರಿಂದಲೇ ಶಾಪಕ್ಕೆ ಗುರಿಯಾಗಿದ್ದಾರೆ. ಆ ಪಾಪವನ್ನು ನಿಮ್ಮಿಂದ ತೆಗೆದುಹಾಕಬೇಕು, ಅಲ್ಲಿಯವರೆಗೆ ನಾನು ನಿಮಗೆ ಸಹಾಯ ಮಾಡುವುದಿಲ್ಲ, ನಾನು ನಿಮ್ಮ ಸಂಗಡ ಬರುವುದೇ ಇಲ್ಲ.
ಯೆಹೋಶುವ 7 : 13 (ERVKN)
“ಈಗ ಹೋಗಿ ಜನರನ್ನು ಶುದ್ಧಗೊಳಿಸು, ನೀನು ಜನರಿಗೆ, ‘ನೀವು ನಿಮ್ಮನ್ನು ಶುದ್ಧಿಗೊಳಿಸಿಕೊಳ್ಳಿರಿ, ನಾಳೆಗಾಗಿ ಸಿದ್ಧರಾಗಿರಿ, ಇಸ್ರೇಲಿನ ದೇವರಾದ ಯೆಹೋವನು ನಾಶಪಡಿಸಬೇಕೆಂದು ಆಜ್ಞಾಪಿಸಿದ ವಸ್ತುಗಳನ್ನು ಕೆಲ ಜನರು ಇಟ್ಟುಕೊಂಡಿದ್ದಾರೆಂದು ಹೇಳುತ್ತಾನೆ. ನೀವು ಆ ವಸ್ತುಗಳನ್ನು ಬಿಸಾಡುವವರೆಗೆ ನಿಮಗೆ ನಿಮ್ಮ ಶತ್ರುಗಳನ್ನು ಸೋಲಿಸಲು ಎಂದಿಗೂ ಸಾಧ್ಯವಿಲ್ಲ.
ಯೆಹೋಶುವ 7 : 14 (ERVKN)
“‘ನಾಳೆ ಬೆಳಿಗ್ಗೆ ನೀವೆಲ್ಲರು ಯೆಹೋವನ ಮುಂದೆ ಬಂದು ನಿಲ್ಲಬೇಕು. ಎಲ್ಲಾ ಕುಲಗಳು ಯೆಹೋವನ ಮುಂದೆ ಬಂದು ನಿಲ್ಲಬೇಕು. ಯೆಹೋವನು ಒಂದು ಕುಲವನ್ನು ಸೂಚಿಸುತ್ತಾನೆ. ಆಗ ಆ ಕುಲ ಮಾತ್ರ ಮುಂದೆ ನಿಲ್ಲಬೇಕು. ಆಗ ಯೆಹೋವನು ಒಂದು ಗೋತ್ರವನ್ನು ಸೂಚಿಸುತ್ತಾನೆ. ಆಗ ಆ ಗೋತ್ರದವರು ಮಾತ್ರ ಯೆಹೋವನ ಮುಂದೆ ನಿಲ್ಲಬೇಕು. ಆಗ ಯೆಹೋವನು ಆ ಗೋತ್ರದ ಪ್ರತಿಯೊಂದು ಕುಟುಂಬವನ್ನು ನೋಡಿ, ಒಂದು ಕುಟುಂಬವನ್ನು ಸೂಚಿಸುತ್ತಾನೆ. ಬಳಿಕ ಯೆಹೋವನು ಆ ಕುಟುಂಬದ ಪ್ರತಿಯೊಬ್ಬ ಮನುಷ್ಯನನ್ನು ನೋಡುತ್ತಾನೆ.
ಯೆಹೋಶುವ 7 : 15 (ERVKN)
ಆಗ ನಾವು ನಾಶಪಡಿಸಬೇಕಾಗಿದ್ದ ವಸ್ತುಗಳನ್ನು ಇಟ್ಟುಕೊಂಡ ಮನುಷ್ಯನು ಸಿಕ್ಕಿಬೀಳುತ್ತಾನೆ. ಬಳಿಕ ಆ ಮನುಷ್ಯನು ಬೆಂಕಿಯಿಂದ ನಾಶವಾಗುವನು. ಅವನ ಎಲ್ಲಾ ಸ್ವತ್ತು ಅವನೊಂದಿಗೆ ನಾಶವಾಗುವುದು. ಆ ಮನುಷ್ಯನು ಯೆಹೋವನ ಆಜ್ಞೆಯನ್ನು ಮೀರಿದ್ದಾನೆ. ಇಸ್ರೇಲರಿಗೆ ಕೇಡನ್ನು ಬರಮಾಡಿದ್ದಾನೆ”‘ ಎಂದನು.
ಯೆಹೋಶುವ 7 : 16 (ERVKN)
ಮಾರನೆಯ ದಿನ, ಬೆಳಿಗ್ಗೆ ಯೆಹೋಶುವನು ಇಸ್ರೇಲಿನ ಎಲ್ಲ ಜನರನ್ನು ಯೆಹೋವನ ಮುಂದೆ ಕರೆದುಕೊಂಡು ಬಂದನು. ಎಲ್ಲ ಕುಲಗಳು ಯೆಹೋವನ ಮುಂದೆ ನಿಂತುಕೊಂಡವು. ಯೆಹೋವನು ಯೆಹೂದ ಕುಲವನ್ನು ಸೂಚಿಸಿದನು.
ಯೆಹೋಶುವ 7 : 17 (ERVKN)
ಆದುದರಿಂದ ಯೆಹೂದ ಕುಲದ ಎಲ್ಲ ಗೋತ್ರಗಳು ಯೆಹೋವನ ಮುಂದೆ ಬಂದು ನಿಂತವು. ಯೆಹೋವನು ಜೆರಹನ ಗೋತ್ರವನ್ನು ಸೂಚಿಸಿದನು. ಆಗ ಜೆರಹನ ಗೋತ್ರದ ಎಲ್ಲ ಕುಟುಂಬಗಳು ಯೆಹೋವನ ಎದುರಿಗೆ ಬಂದು ನಿಂತವು. ಆಗ ಜಬ್ದೀಯ ಕುಟುಂಬವನ್ನು ಸೂಚಿಸಲಾಯಿತು.
ಯೆಹೋಶುವ 7 : 18 (ERVKN)
ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.
ಯೆಹೋಶುವ 7 : 19 (ERVKN)
ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.
ಯೆಹೋಶುವ 7 : 20 (ERVKN)
ಆಗ ಆಕಾನನು, “ಇದು ಸತ್ಯ. ನಾನು ಇಸ್ರೇಲಿನ ದೇವರಾದ ಯೆಹೋವನಿಗೆ ವಿರೋಧವಾಗಿ ಪಾಪಮಾಡಿದ್ದೇನೆ.
ಯೆಹೋಶುವ 7 : 21 (ERVKN)
ನಾವು ಜೆರಿಕೊ ನಗರವನ್ನು ಮತ್ತು ಅದರಲ್ಲಿದ್ದ ಎಲ್ಲ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡು ಕೊಳ್ಳೆ ಹೊಡೆಯುತ್ತಿದ್ದಾಗ, ಬಾಬಿಲೋನಿನ ಒಂದು ಸುಂದರವಾದ ನಿಲುವಂಗಿಯನ್ನೂ ಸುಮಾರು ಐದು ಪೌಂಡಿನಷ್ಟು ಬೆಳ್ಳಿಯನ್ನೂ ಒಂದು ಪೌಂಡಿಗಿಂತಲೂ ಹೆಚ್ಚು ಬಂಗಾರವನ್ನೂ ಕಂಡೆನು. ಈ ವಸ್ತುಗಳನ್ನು ನನಗಾಗಿ ಇಟ್ಟುಕೊಳ್ಳಬೇಕೆಂದು ತುಂಬ ಆಶೆಯಾಯಿತು. ಅದಕ್ಕಾಗಿ ನಾನು ಅವುಗಳನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದಲ್ಲಿ ಹುಗಿದಿಟ್ಟಿದ್ದೇನೆ. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇದೆ” ಎಂದು ಒಪ್ಪಿಕೊಂಡನು.
ಯೆಹೋಶುವ 7 : 22 (ERVKN)
ಆಗ ಯೆಹೋಶುವನು ಕೆಲವರನ್ನು ಗುಡಾರಕ್ಕೆ ಕಳುಹಿಸಿದನು. ಅವರು ಗುಡಾರಕ್ಕೆ ಓಡಿಹೋಗಿ ಹುಗಿದಿಟ್ಟಿದ್ದ ಆ ವಸ್ತುಗಳನ್ನು ಕಂಡರು. ಬೆಳ್ಳಿಯು ನಿಲುವಂಗಿಯ ಕೆಳಗಡೆ ಇತ್ತು.
ಯೆಹೋಶುವ 7 : 23 (ERVKN)
ಜನರು ಆ ವಸ್ತುಗಳನ್ನು ಗುಡಾರದ ಹೊರಗೆ ತೆಗೆದುಕೊಂಡು ಬಂದು ಯೆಹೋಶುವನ ಮತ್ತು ಎಲ್ಲಾ ಇಸ್ರೇಲರ ಬಳಿಗೆ ಬಂದರು. ಅವರು ಯೆಹೋವನ ಮುಂದೆ ಆ ವಸ್ತುಗಳನ್ನೆಲ್ಲಾ ನೆಲದ ಮೇಲೆ ಹಾಕಿದರು.
ಯೆಹೋಶುವ 7 : 24 (ERVKN)
ಆಗ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಸೇರಿ ಜೆರಹನ ಮಗನಾದ ಆಕಾನನನ್ನು, ಬೆಳ್ಳಿಯನ್ನು, ನಿಲುವಂಗಿಯನ್ನು, ಬಂಗಾರವನ್ನು, ಆಕಾನನ ಮಕ್ಕಳನ್ನು, ಅವನ ದನಕರುಗಳನ್ನು, ಕತ್ತೆಗಳನ್ನು, ಅವನ ಕುರಿಗಳನ್ನು, ಅವನ ಗುಡಾರವನ್ನು ಮತ್ತು ಅವನ ಎಲ್ಲ ಸ್ವತ್ತನ್ನು ‘ಆಕೋರ್’ ಕಣಿವೆಗೆ ತೆಗೆದುಕೊಂಡು ಹೋದರು.
ಯೆಹೋಶುವ 7 : 25 (ERVKN)
ಆಗ ಯೆಹೋಶುವನು ಅವನಿಗೆ, “ನೀನು ನಮಗೆ ಕೇಡನ್ನು ಬರಮಾಡಿರುವೆ! ಆದ್ದರಿಂದ ಯೆಹೋವನು ನಿನಗೂ ಕೇಡನ್ನು ಮಾಡಲಿ!” ಎಂದನು. ಆಗ ಜನರೆಲ್ಲರೂ ಕಲ್ಲುಗಳನ್ನು ತೂರಿ ಆಕಾನನನ್ನೂ ಅವನ ಕುಟುಂಬದವರನ್ನೂ ಕೊಂದರು ಮತ್ತು ಅವನ ಎಲ್ಲ ಸ್ವತ್ತನ್ನು ಸುಟ್ಟುಹಾಕಿದರು.
ಯೆಹೋಶುವ 7 : 26 (ERVKN)
ಆಕಾನನನ್ನು ಸುಟ್ಟ ಬಳಿಕ ಅವರು ಅವನ ದೇಹದ ಮೇಲೆ ಕಲ್ಲುಗಳ ಒಂದು ದೊಡ್ಡ ಕುಪ್ಪೆಯನ್ನು ಹಾಕಿದರು. ಆ ಕುಪ್ಪೆಯು ಇಂದಿಗೂ ಅಲ್ಲಿದೆ. ಹೀಗೆ ದೇವರು ಆಕಾನನನ್ನು ಶಿಕ್ಷಿಸಿದನು. ಅದಕ್ಕಾಗಿ ಆ ಕಣಿವೆಗೆ ‘ಆಕೋರ್ ಕಣಿವೆ’ ಎಂಬ ಹೆಸರು ಬಂದಿತು. ಬಳಿಕ ಯೆಹೋವನಿಗೆ ಜನರ ಮೇಲಿದ್ದ ಕೋಪ ಶಮನವಾಯಿತು. ‘ಆಯಿ’ಯ ವಿನಾಶ

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: