ನ್ಯಾಯಸ್ಥಾಪಕರು 3 : 1 (ERVKN)
(1-2) ಇಸ್ರೇಲರ ಪ್ರದೇಶವನ್ನು ಬಿಟ್ಟುಹೋಗುವಂತೆ ಯೆಹೋವನು ಉಳಿದೆಲ್ಲ ಜನಾಂಗದವರನ್ನು ಒತ್ತಾಯಪಡಿಸಲಿಲ್ಲ. ಯೆಹೋವನು ಇಸ್ರೇಲರನ್ನು ಪರೀಕ್ಷಿಸಬೇಕೆಂದಿದ್ದನು. ಈಗ ಬದುಕಿದ್ದ ಇಸ್ರೇಲರಲ್ಲಿ ಯಾರೂ ಕಾನಾನ್ಯರ ಭೂಮಿಯನ್ನು ತೆಗೆದುಕೊಳ್ಳುವುದಕ್ಕಾಗಿ ಯುದ್ಧ ಮಾಡಿರಲಿಲ್ಲ. ಅದಕ್ಕಾಗಿ ಯೆಹೋವನು ಆ ಬೇರೆ ಜನಾಂಗದವರನ್ನು ಅವರ ದೇಶದಲ್ಲಿ ವಾಸಿಸಲು ಬಿಟ್ಟನು. (ಆ ಯುದ್ಧಗಳಲ್ಲಿ ಭಾಗವಹಿಸದ ಈ ಇಸ್ರೇಲರಿಗೆ ಯುದ್ಧ ಮಾಡುವುದನ್ನು ಕಲಿತುಕೊಳ್ಳಲು ಒಂದು ಅವಕಾಶ ದೊರೆಯುವಂತೆ ಯೆಹೋವನು ಹೀಗೆ ಮಾಡಿದ್ದನು.) ಯೆಹೋವನು ಆ ಭೂಮಿಯಲ್ಲಿ ವಾಸಿಸಲು ಬಿಟ್ಟ ಜನಾಂಗಗಳ ಹೆಸರುಗಳು ಇಂತಿವೆ:
ನ್ಯಾಯಸ್ಥಾಪಕರು 3 : 2 (ERVKN)
ನ್ಯಾಯಸ್ಥಾಪಕರು 3 : 3 (ERVKN)
ಐದು ಮಂದಿ ಫಿಲಿಷ್ಟಿಯ ಪ್ರಭುಗಳು, ಎಲ್ಲಾ ಕಾನಾನ್ಯರು, ಚೀದೋನ್ಯರು, ಲೆಬನೋನ್ ಪರ್ವತಾವಳಿಯಲ್ಲಿ ಬಾಳ್‌ಹೆರ್ಮೊನ್ ಬೆಟ್ಟದಿಂದ ಲೆಬೂಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.
ನ್ಯಾಯಸ್ಥಾಪಕರು 3 : 4 (ERVKN)
ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.
ನ್ಯಾಯಸ್ಥಾಪಕರು 3 : 5 (ERVKN)
ಇಸ್ರೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಜನಾಂಗಗಳೊಡನೆ ವಾಸಮಾಡತೊಡಗಿದರು.
ನ್ಯಾಯಸ್ಥಾಪಕರು 3 : 6 (ERVKN)
ಇಸ್ರೇಲರು ಅವರ ಕನ್ಯೆಯರನ್ನು ಮದುವೆಯಾಗ ತೊಡಗಿದರು ಮತ್ತು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಮದುವೆ ಮಾಡಿಕೊಟ್ಟರು ಮತ್ತು ಅವರ ದೇವರುಗಳನ್ನು ಪೂಜಿಸಲು ಪ್ರಾರಂಭಿಸಿದರು.
ನ್ಯಾಯಸ್ಥಾಪಕರು 3 : 7 (ERVKN)
ಒತ್ನೀಯೇಲ್ ಪ್ರಥಮ ನ್ಯಾಯಾಧೀಶ ಇಸ್ರೇಲರ ದುಷ್ಕೃತ್ಯಗಳನ್ನು ಯೆಹೋವನು ನೋಡಿದನು. ಇಸ್ರೇಲರು ತಮ್ಮ ದೇವರಾದ ಯೆಹೋವನನ್ನು ಮರೆತು ಬಾಳ್ ಮತ್ತು ಆಶೇರ್ ಎಂಬ ಸುಳ್ಳುದೇವರುಗಳ ಸೇವೆ ಮಾಡುತ್ತಿದ್ದರು.
ನ್ಯಾಯಸ್ಥಾಪಕರು 3 : 8 (ERVKN)
ಇಸ್ರೇಲರ ಮೇಲೆ ಯೆಹೋವನು ಕೋಪಿಸಿಕೊಂಡಿದ್ದನು. ಹರೇಮ್‌ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬವನು ಅವರನ್ನು ಸೋಲಿಸುವುದಕ್ಕೂ ಆಳುವುದಕ್ಕೂ ಯೆಹೋವನು ಆಸ್ಪದ ಕೊಟ್ಟನು. ಇಸ್ರೇಲಿನ ಜನರು ಎಂಟು ವರ್ಷ ಆ ಅರಸನ ಅಧೀನದಲ್ಲಿದ್ದರು.
ನ್ಯಾಯಸ್ಥಾಪಕರು 3 : 9 (ERVKN)
ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಟ್ಟರು. ಅವರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಒತ್ನೀಯೇಲ. ಅವನು ಕೆನಜ ಎಂಬವನ ಮಗನು. ಕೆನಜನು ಕಾಲೇಬನ ತಮ್ಮ. ಒತ್ನೀಯೇಲನು ಇಸ್ರೇಲರನ್ನು ರಕ್ಷಿಸಿದನು.
ನ್ಯಾಯಸ್ಥಾಪಕರು 3 : 10 (ERVKN)
ಒತ್ನೀಯೇಲನ ಮೇಲೆ ಯೆಹೋವನ ಆತ್ಮ ಬಂದಿತು; ಆದ್ದರಿಂದ ಅವನು ಇಸ್ರೇಲರ ನ್ಯಾಯಾಧೀಶನಾದನು. ಒತ್ನೀಯೇಲನು ಇಸ್ರೇಲರನ್ನು ಯುದ್ಧಕ್ಕೆ ಕರೆದೊಯ್ದನು. ಅರಾಮಿನ ಅರಸನಾದ ಕೂಷನ್ ರಿಷಾತಯಿಮ್‌ನನ್ನು ಸೋಲಿಸಲು ಯೆಹೋವನು ಒತ್ನೀಯೇಲನಿಗೆ ಸಹಾಯ ಮಾಡಿದನು.
ನ್ಯಾಯಸ್ಥಾಪಕರು 3 : 11 (ERVKN)
ಆದ್ದರಿಂದ ನಲವತ್ತು ವರ್ಷಗಳ ಕಾಲದವರೆಗೆ ಅಂದರೆ ಕೆನಜನ ಮಗನಾದ ಒತ್ನೀಯೇಲನ ಮರಣದವರೆಗೆ ಆ ಪ್ರದೇಶದಲ್ಲಿ ಶಾಂತಿ ನೆಲೆಸಿತ್ತು.
ನ್ಯಾಯಸ್ಥಾಪಕರು 3 : 12 (ERVKN)
ನ್ಯಾಯಾಧೀಶ ಏಹೂದ ಇಸ್ರೇಲರು ಪುನಃ ದುಷ್ಕೃತ್ಯಗಳನ್ನು ಮಾಡುವುದನ್ನು ಯೆಹೋವನು ನೋಡಿದನು. ಆದ್ದರಿಂದ ಆತನು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಇಸ್ರೇಲರನ್ನು ಸೋಲಿಸುವ ಶಕ್ತಿಯನ್ನು ಕೊಟ್ಟನು.
ನ್ಯಾಯಸ್ಥಾಪಕರು 3 : 13 (ERVKN)
ಇವನು ಅಮ್ಮೋನಿಯರಿಂದ ಮತ್ತು ಅಮಾಲೇಕ್ಯರಿಂದ ಸಹಾಯವನ್ನು ಪಡೆದನು. ಅವರು ಅವನೊಂದಿಗೆ ಸೇರಿಕೊಂಡು ಇಸ್ರೇಲರ ಮೇಲೆ ಧಾಳಿಮಾಡಿದರು. ಎಗ್ಲೋನ್ ಮತ್ತು ಅವನ ಸೈನಿಕರು ಇಸ್ರೇಲರನ್ನು ಸೋಲಿಸಿ ಅವರನ್ನು ಜೆರಿಕೊ ಎಂಬುವ ಖರ್ಜೂರ ನಗರದಿಂದ ಹೊರದೂಡಿದರು.
ನ್ಯಾಯಸ್ಥಾಪಕರು 3 : 14 (ERVKN)
ಮೋವಾಬ್ಯರ ಅರಸನಾದ ಎಗ್ಲೋನನು ಇಸ್ರೇಲರ ಮೇಲೆ ಹದಿನೆಂಟು ವರ್ಷ ಆಳ್ವಿಕೆ ಮಾಡಿದನು.
ನ್ಯಾಯಸ್ಥಾಪಕರು 3 : 15 (ERVKN)
ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಆ ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪಕಾಣಿಕೆಯನ್ನು ಕೊಡಲು ಏಹೂದನನ್ನು ಕಳುಹಿಸಿದರು.
ನ್ಯಾಯಸ್ಥಾಪಕರು 3 : 16 (ERVKN)
ಏಹೂದನು ತನಗೊಂದು ಖಡ್ಗವನ್ನು ಮಾಡಿಕೊಂಡನು. ಆ ಖಡ್ಗವು ಇಬ್ಬಾಯಿ ಖಡ್ಗವಾಗಿದ್ದು ಹದಿನೆಂಟು ಅಂಗುಲ ಉದ್ದವಾಗಿತ್ತು. ಅದನ್ನು ಅವನು ತನ್ನ ಬಲತೊಡೆಗೆ ಕಟ್ಟಿಕೊಂಡು ತನ್ನ ಬಟ್ಟೆಗಳಿಂದ ಮುಚ್ಚಿಕೊಂಡನು.
ನ್ಯಾಯಸ್ಥಾಪಕರು 3 : 17 (ERVKN)
ಏಹೂದನು ಮೋವಾಬ್ಯರ ಅರಸನಾದ ಎಗ್ಲೋನನ ಹತ್ತಿರ ಬಂದು ಅವನಿಗೆ ಕಪ್ಪದ ಹಣವನ್ನು ಕೊಟ್ಟನು. ಎಗ್ಲೋನನು ಬಹಳ ದಪ್ಪ ಮನುಷ್ಯನಾಗಿದ್ದನು.
ನ್ಯಾಯಸ್ಥಾಪಕರು 3 : 18 (ERVKN)
ಏಹೂದನು ಎಗ್ಲೋನನಿಗೆ ಹಣವನ್ನು ಕೊಟ್ಟ ತರುವಾಯ ಅದನ್ನು ಹೊತ್ತುಕೊಂಡು ಬಂದ ಜನರನ್ನು ಮನೆಗೆ ಕಳುಹಿಸಿಬಿಟ್ಟನು.
ನ್ಯಾಯಸ್ಥಾಪಕರು 3 : 19 (ERVKN)
ಏಹೂದನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂತಿರುಗಿ ಎಗ್ಲೋನನ ಬಳಿಗೆ ಬಂದು, “ಅರಸನೇ, ನಿನಗೆ ತಿಳಿಸಬೇಕಾದ ಒಂದು ರಹಸ್ಯ ಸಂದೇಶವಿದೆ” ಎಂದು ಹೇಳಿದನು. ಅರಸನು, “ಸುಮ್ಮನಿರು” ಎಂದು ಹೇಳಿ ತನ್ನ ಸೇವಕರೆಲ್ಲರನ್ನು ಕೋಣೆಯಿಂದ ಆಚೆ ಕಳುಹಿಸಿದನು.
ನ್ಯಾಯಸ್ಥಾಪಕರು 3 : 20 (ERVKN)
ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು. ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು.
ನ್ಯಾಯಸ್ಥಾಪಕರು 3 : 21 (ERVKN)
ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತಾಗ ಏಹೂದನು ತನ್ನ ಎಡಗೈಯನ್ನು ಚಾಚಿ ತನ್ನ ಬಲ ತೊಡೆಗೆ ಕಟ್ಟಿದ್ದ ಕತ್ತಿಯನ್ನು ಹೊರತೆಗೆದನು. ಏಹೂದನು ಆ ಖಡ್ಗವನ್ನು ಅರಸನ ಹೊಟ್ಟೆಗೆ ತಿವಿದನು.
ನ್ಯಾಯಸ್ಥಾಪಕರು 3 : 22 (ERVKN)
ಏಹೂದನು ಕತ್ತಿಯನ್ನು ಜೋರಾಗಿ ಒತ್ತಿದ್ದರಿಂದ ಅದು ಹಿಡಿಯ ಸಹಿತ ಮುಳುಗಿ ಹೋಯಿತು. ಅರಸನ ಕೊಬ್ಬಿದ ದೇಹದಲ್ಲಿ ಕತ್ತಿಯು ಸಂಪೂರ್ಣವಾಗಿ ಮುಚ್ಚಿಕೊಂಡಿತು. ಆದ್ದರಿಂದ ಏಹೂದನು ಎಗ್ಲೋನನ ಹೊಟ್ಟೆಯಲ್ಲಿಯೇ ಖಡ್ಗವನ್ನು ಬಿಟ್ಟನು. ಮಲವು ಹೊರಗೆ ಬಂದಿತು.
ನ್ಯಾಯಸ್ಥಾಪಕರು 3 : 23 (ERVKN)
ಏಹೂದನು ಕೋಣೆಯ ಹೊರಗೆ ಹೋಗಿ ಬಾಗಿಲು ಹಾಕಿಕೊಂಡು ಬೀಗಹಾಕಿದನು.
ನ್ಯಾಯಸ್ಥಾಪಕರು 3 : 24 (ERVKN)
ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.
ನ್ಯಾಯಸ್ಥಾಪಕರು 3 : 25 (ERVKN)
ಹೀಗಾಗಿ ಸೇವಕರು ಬಹಳ ಹೊತ್ತಿನವರೆಗೆ ಅರಸನಿಗಾಗಿ ಕಾಯುತ್ತಾ ಚಿಂತೆಗೊಳಗಾದರು. ಅವರು ಬೀಗದ ಕೈಯನ್ನು ತಂದು ಬಾಗಿಲುಗಳನ್ನು ತೆರೆದರು. ಸೇವಕರು ಒಳಗೆ ಹೋದಾಗ ತಮ್ಮ ಅರಸನು ನೆಲದ ಮೇಲೆ ಸತ್ತು ಬಿದ್ದಿರುವುದನ್ನು ಕಂಡರು.
ನ್ಯಾಯಸ್ಥಾಪಕರು 3 : 26 (ERVKN)
ಸೇವಕರು ಅರಸನಿಗಾಗಿ ಕಾಯುತ್ತಾ ನಿಂತಿರುವಾಗ ತಪ್ಪಿಸಿಕೊಂಡು ಹೋಗುವುದಕ್ಕೆ ಏಹೂದನಿಗೆ ಅವಕಾಶ ಸಿಕ್ಕಿತು. ಏಹೂದನು ವಿಗ್ರಹಗಳ ಪಕ್ಕದಿಂದ ಹಾದು ಹೊಳೆ ದಾಟಿ
ನ್ಯಾಯಸ್ಥಾಪಕರು 3 : 27 (ERVKN)
ಸೆಯೀರಾ ಎಂಬ ಸ್ಥಳಕ್ಕೆ ಬಂದನು. ಅಲ್ಲಿ ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿ ಅವನು ತುತ್ತೂರಿಯನ್ನು ಊದಿದನು. ಇಸ್ರೇಲರು ತುತ್ತೂರಿಯ ಧ್ವನಿಯನ್ನು ಕೇಳಿ ಬೆಟ್ಟದಿಂದ ಇಳಿದು ಏಹೂದನನ್ನು ಹಿಂಬಾಲಿಸಿ ಹೋದರು.
ನ್ಯಾಯಸ್ಥಾಪಕರು 3 : 28 (ERVKN)
ಏಹೂದನು ಇಸ್ರೇಲರಿಗೆ, “ನನ್ನನ್ನು ಹಿಂಬಾಲಿಸಿರಿ, ನಮ್ಮ ಶತ್ರುಗಳಾದ ಮೋವಾಬ್ಯರನ್ನು ಸೋಲಿಸಲು ಯೆಹೋವನು ನಮಗೆ ಸಹಾಯ ಮಾಡಿದ್ದಾನೆ” ಎಂದನು. ಇಸ್ರೇಲರು ಏಹೂದನನ್ನು ಹಿಂಬಾಲಿಸಿದರು. ಅವರು ಜೋರ್ಡನ್ ನದಿಯ ಹಾಯಗಡಗಳನ್ನೆಲ್ಲಾ ವಶಪಡಿಸಿಕೊಂಡರು. ಆ ಸ್ಥಳಗಳು ಮೋವಾಬಿಗೆ ಹೋಗುವ ದಾರಿಯಲ್ಲಿದ್ದವು. ಜೋರ್ಡನ್ ನದಿಯನ್ನು ದಾಟಿಹೋಗಲು ಇಸ್ರೇಲರು ಯಾರಿಗೂ ಅವಕಾಶ ಕೊಡಲಿಲ್ಲ.
ನ್ಯಾಯಸ್ಥಾಪಕರು 3 : 29 (ERVKN)
ಇಸ್ರೇಲರು ದೃಢಕಾಯರೂ ಧೈರ್ಯಶಾಲಿಗಳೂ ಆಗಿದ್ದ ಹತ್ತು ಸಾವಿರ ಮಂದಿ ಮೋವಾಬ್ಯರನ್ನು ಕೊಂದುಹಾಕಿದರು. ಒಬ್ಬ ಮೋವಾಬ್ಯನೂ ತಪ್ಪಿಸಿಕೊಳ್ಳಲಿಲ್ಲ.
ನ್ಯಾಯಸ್ಥಾಪಕರು 3 : 30 (ERVKN)
ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.
ನ್ಯಾಯಸ್ಥಾಪಕರು 3 : 31 (ERVKN)
ನ್ಯಾಯಾಧೀಶನಾದ ಶಮ್ಗರ ಏಹೂದನು ಇಸ್ರೇಲರನ್ನು ರಕ್ಷಿಸಿದ ತರುವಾಯ, ಇನ್ನೊಬ್ಬ ವ್ಯಕ್ತಿಯು ಇಸ್ರೇಲರನ್ನು ರಕ್ಷಿಸಿದನು. ಅವನು ಅನಾತನ *ಅನಾತ ಇದು ಕಾನಾನ್ಯರ ಯುದ್ಧದೇವತೆಯ ಹೆಸರು. ಇಲ್ಲಿ ಅದು ಶಮ್ಗರನ ತಂದೆಯ ಹೆಸರು ಎಂದು ಇದ್ದರೂ ತಾಯಿಯ ಹೆಸರೂ ಆಗಿರುವ ಸಂಭವವಿದೆ. ಮಗನಾದ ಶಮ್ಗರ. ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದನು.
❮
❯