ನ್ಯಾಯಸ್ಥಾಪಕರು 5 : 1 (ERVKN)
ದೆಬೋರಳ ಜಯಗೀತೆ ಇಸ್ರೇಲರು ಸೀಸೆರನನ್ನು ಸೋಲಿಸಿದ ದಿನ ದೆಬೋರಳು ಮತ್ತು ಅಬೀನೋವಮನ ಮಗನಾದ ಬಾರಾಕನು ಈ ಗೀತೆಯನ್ನು ಹಾಡಿದರು:
ನ್ಯಾಯಸ್ಥಾಪಕರು 5 : 2 (ERVKN)
“ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ;
ಯೆಹೋವನಿಗೆ ಸ್ತೋತ್ರವಾಗಲಿ!
ನ್ಯಾಯಸ್ಥಾಪಕರು 5 : 3 (ERVKN)
“ಅರಸರೇ ಕೇಳಿರಿ, ಆಳುವವರೇ ಗಮನಿಸಿರಿ!
ನಾನು ಹಾಡುವೆನು. ನಾನು ಯೆಹೋವನನ್ನು ಕೀರ್ತಿಸುವೆನು.
ಇಸ್ರೇಲಿನ ದೇವರಾದ ಯೆಹೋವನಿಗೆ ನಾನು ಗಾನ ಮಾಡುವೆನು.
ನ್ಯಾಯಸ್ಥಾಪಕರು 5 : 4 (ERVKN)
“ಯೆಹೋವನೇ, ನೀನು ಹಿಂದೆ ಸೆಯೀರಿನ ಪ್ರದೇಶದಿಂದ ಬಂದೆ. ನೀನು ಎದೋಮ್ಯರ ಪ್ರದೇಶದಿಂದ ನಡೆದುಕೊಂಡು ಹೋದೆ.
ನೀನು ನಡೆಯುವಾಗ ಭೂಮಿ ನಡುಗಿತು; ಆಕಾಶ ಹನಿಗರೆಯಿತು. ಮೇಘಮಂಡಲವು ಮಳೆಗರೆಯಿತು.
ನ್ಯಾಯಸ್ಥಾಪಕರು 5 : 5 (ERVKN)
ಸೀನಾಯಿ ಬೆಟ್ಟದ ದೇವರಾದ ಯೆಹೋವನ ಎದುರಿಗೆ, ಇಸ್ರೇಲರ ದೇವರಾದ ಯೆಹೋವನ ಎದುರಿಗೆ, ಪರ್ವತಗಳು ನಡುಗಿದವು.
ನ್ಯಾಯಸ್ಥಾಪಕರು 5 : 6 (ERVKN)
“ಅನಾತನ ಮಗನಾದ ಶಮ್ಗರನ ಕಾಲದಲ್ಲಿಯೂ ಯಾಯೇಲಳ ದಿನಗಳಲ್ಲಿಯೂ ಮುಖ್ಯಮಾರ್ಗಗಳು ಬರಿದಾಗಿದ್ದವು. ವ್ಯಾಪಾರಿಗಳು *ವ್ಯಾಪಾರಿಗಳು ವ್ಯಾಪಾರಿಗಳ ಗುಂಪು. ಸಾಮಾನ್ಯವಾಗಿ ವ್ಯಾಪಾರಿ ಗಳು ತಮ್ಮ ಕತ್ತೆಗಳ ಅಥವಾ ಒಂಟೆಗಳ ಮೇಲೆ ಸರಕುಗಳನ್ನು ಹೇರಿ ಕೊಂಡು ಒಂದು ಗುಂಪಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಮತ್ತು ಪ್ರಯಾಣಿಕರು ಸೀಳುದಾರಿಯಿಂದ ಹೋಗುತ್ತಿದ್ದರು.
ನ್ಯಾಯಸ್ಥಾಪಕರು 5 : 7 (ERVKN)
“ದೆಬೋರಳೇ, ನೀನು ಬರುವವರೆಗೆ, ನೀನು ಇಸ್ರೇಲರಿಗೆ ತಾಯಿಯಾಗಿ ಬರುವವರೆಗೆ, ಶೂರರೇ ಇರಲಿಲ್ಲ. ಇಸ್ರೇಲಿನಲ್ಲಿ ವೀರರೇ ಇರಲಿಲ್ಲ.
ನ್ಯಾಯಸ್ಥಾಪಕರು 5 : 8 (ERVKN)
ಅವರು ಹೊಸ ದೇವರುಗಳನ್ನು ಆರಿಸಿಕೊಂಡರು; ಅದಕ್ಕಾಗಿ ಅವರು ತಮ್ಮ ಪಟ್ಟಣ ದ್ವಾರಗಳಲ್ಲಿ ಯುದ್ಧ ಮಾಡಬೇಕಾಯಿತು.
ಇಸ್ರೇಲರ ನಲವತ್ತು ಸಾವಿರ ಸೈನಿಕರಲ್ಲಿ ಒಬ್ಬನಿಗೂ ಗುರಾಣಿ ಬರ್ಜಿಗಳಿರಲಿಲ್ಲ.
ನ್ಯಾಯಸ್ಥಾಪಕರು 5 : 9 (ERVKN)
“ನನ್ನ ಹೃದಯವು ಇಸ್ರೇಲಿನ ಸೇನಾಧಿಪತಿಗಳ ಸಂಗಡವಿದೆ. ಈ ಸೇನಾಧಿಪತಿಗಳು ಇಸ್ರೇಲಿಗಾಗಿ ಯುದ್ಧಮಾಡಲು ಸ್ವಇಚ್ಛೆಯಿಂದ ಬಂದರು.
ಯೆಹೋವನಿಗೆ ಸ್ತೋತ್ರವಾಗಲಿ.
ನ್ಯಾಯಸ್ಥಾಪಕರು 5 : 10 (ERVKN)
“ಬಿಳಿಯ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಯ ಮೇಲೆ ಕುಳಿತುಕೊಳ್ಳುವವರೇ, ಮಾರ್ಗಗಳ ಮೇಲೆ ಹೋಗುವ ಪ್ರಯಾಣಿಕರೇ, ಗಮನಿಸಿರಿ!
ನ್ಯಾಯಸ್ಥಾಪಕರು 5 : 11 (ERVKN)
ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ;
ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ.
ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
ನ್ಯಾಯಸ್ಥಾಪಕರು 5 : 12 (ERVKN)
“ಏಳು, ಏಳು ದೆಬೋರಳೇ! ಏಳು, ಎದ್ದೇಳು, ಒಂದು ಗೀತೆಯನ್ನು ಹಾಡು!
ಬಾರಾಕನೇ, ಏಳು! ಅಬೀನೋವಮನ ಮಗನೇ, ಹೋಗು; ನಿನ್ನ ಶತ್ರುಗಳನ್ನು ಸೆರೆ ಹಿಡಿದುಕೊ!
ನ್ಯಾಯಸ್ಥಾಪಕರು 5 : 13 (ERVKN)
“ಆಗ ಬದುಕಿಕೊಂಡಿದ್ದವರು ನಾಯಕರ ಬಳಿಗೆ ಹೋದರು. ಯೆಹೋವನ ಜನರೇ, ನನ್ನೊಂದಿಗೂ ಸೈನಿಕರೊಂದಿಗೂ ಬನ್ನಿರಿ.
ನ್ಯಾಯಸ್ಥಾಪಕರು 5 : 14 (ERVKN)
“ಅಮಾಲೇಕ್ ಪರ್ವತ ಪ್ರದೇಶದಲ್ಲಿ ವಾಸಮಾಡುತ್ತಿದ್ದ ಎಫ್ರಾಯೀಮ್ಯರು ಬಂದರು; ನಿನ್ನನ್ನೂ ನಿನ್ನ ಜನರನ್ನೂ ಅನುಸರಿಸುತ್ತಿದ್ದ ಬೆನ್ಯಾಮೀನ್ಯರೂ ಬಂದರು;
ಮಾಕೀರನ ಕುಲದಿಂದ ನಾಯಕರು ಬಂದರು; ಜೆಬುಲೂನ್ ಕುಲದಿಂದ ನಾಯಕರು ಕಂಚಿನ ದೊಣ್ಣೆಗಳೊಡನೆ ಬಂದರು.
ನ್ಯಾಯಸ್ಥಾಪಕರು 5 : 15 (ERVKN)
ಇಸ್ಸಾಕಾರ್ ಕುಲದ ನಾಯಕರು ದೆಬೋರಳ ಜೊತೆಯಲ್ಲಿದ್ದರು. ಇಸ್ಸಾಕಾರ್ ಕುಲದವರು ಬಾರಾಕನಿಗೆ ನಂಬಿಗಸ್ತರಾಗಿದ್ದರು. ಅವರು ಕಾಲು ನಡಿಗೆಯಿಂದ ಕಣಿವೆಗೆ ಬಂದರು. “ರೂಬೇನ್ಯರೇ, ನಿಮ್ಮ ಸೈನ್ಯದಲ್ಲಿ ತುಂಬ ಶೂರರಿದ್ದಾರೆ.
ನ್ಯಾಯಸ್ಥಾಪಕರು 5 : 16 (ERVKN)
ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ?
ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.
ನ್ಯಾಯಸ್ಥಾಪಕರು 5 : 17 (ERVKN)
ಗಿಲ್ಯಾದಿನ ಜನರು ಜೋರ್ಡನ್ ನದಿಯ ಆಚೆಯ ದಡದಲ್ಲಿದ್ದ ತಮ್ಮ ಶಿಬಿರಗಳಲ್ಲಿ ಇದ್ದುಬಿಟ್ಟರು. †ರೂಬೇನ್ಯರ … ಇದ್ದುಬಿಟ್ಟರು ಈ ಗೀತೆ ರೂಬೇನ್ಯರನ್ನು ತಮಾಷೆ ಮಾಡುತ್ತದೆ. ದಾನ್ ಕುಲದವರೇ, ನೀವೇಕೆ ನಿಮ್ಮ ಹಡಗುಗಳಲ್ಲಿಯೇ ಉಳಿದುಬಿಟ್ಟಿರಿ?
ಆಶೇರ್ ಕುಲದವರು ಸಮುದ್ರತೀರದಲ್ಲಿರುವ ತಮ್ಮ ಸುರಕ್ಷಿತವಾದ ಬಂದರುಗಳಲ್ಲಿ ಉಳಿದುಕೊಂಡರು.
ನ್ಯಾಯಸ್ಥಾಪಕರು 5 : 18 (ERVKN)
“ಆದರೆ ಜೆಬುಲೂನ್ಯರೂ ನಫ್ತಾಲ್ಯರೂ ಆ ಬೆಟ್ಟಗಳ ಮೇಲೆ ತಮ್ಮ ಜೀವವನ್ನೇ ಮುಡಿಪಾಗಿಟ್ಟು ಯುದ್ಧ ಮಾಡಿದರು.
ನ್ಯಾಯಸ್ಥಾಪಕರು 5 : 19 (ERVKN)
ಕಾನಾನ್ಯ ಅರಸರು ಬಂದು ಯುದ್ಧಮಾಡಿದರು; ಅವರು ಮೆಗಿದ್ದೋ ಪ್ರವಾಹಗಳ ಬಳಿಯಲ್ಲಿರುವ ತಾನಾಕದಲ್ಲಿ ಹೋರಾಡಿದರು. ಆದರೆ ಅವರು ಯಾವ ಸಂಪತ್ತನ್ನು ತೆಗೆದುಕೊಂಡು ಹೋಗಲಿಲ್ಲ!
ನ್ಯಾಯಸ್ಥಾಪಕರು 5 : 20 (ERVKN)
ಪರಲೋಕದಿಂದ ನಕ್ಷತ್ರಗಳು ಯುದ್ಧ ಮಾಡಿದವು. ನಕ್ಷತ್ರಗಳು ಆಕಾಶಪಥದಿಂದ ಸೀಸೆರನೊಡನೆ ಯುದ್ಧ ಮಾಡಿದವು.
ನ್ಯಾಯಸ್ಥಾಪಕರು 5 : 21 (ERVKN)
ಪೂರ್ವಕಾಲದಿಂದ ಪ್ರಸಿದ್ಧವಾದ ಕೀಷೋನ್ ನದಿಯು ಸೀಸೆರನ ಜನರನ್ನು ಕೊಚ್ಚಿಕೊಂಡು ಹೋಯಿತು.
ನನ್ನ ಆತ್ಮವೇ, ಧೈರ್ಯದಿಂದ ಮುನ್ನುಗ್ಗು!
ನ್ಯಾಯಸ್ಥಾಪಕರು 5 : 22 (ERVKN)
ಸೀಸೆರನ ಬಲಿಷ್ಠವಾದ ಕುದುರೆಗಳು ಭರದಿಂದ ಓಡಿದವು. ಆ ಕುದುರೆಗಳ ಕಾಲುಗಳು ನೆಲಕ್ಕೆ ಅಪ್ಪಳಿಸಿದವು.
ನ್ಯಾಯಸ್ಥಾಪಕರು 5 : 23 (ERVKN)
“ಮೇರೋಜ್ ಊರಿಗೆ ಶಾಪಹಾಕಿರಿ; ಅಲ್ಲಿಯ ಜನರಿಗೆ ಶಾಪಹಾಕಿರಿ;
ಏಕೆಂದರೆ ಅವರು ಯೆಹೋವನ ಸಹಾಯಕ್ಕೆ ತಮ್ಮ ಸೈನ್ಯದೊಂದಿಗೆ ಬರಲಿಲ್ಲ” ಎಂದನು ಯೆಹೋವನ ದೂತನು.
ನ್ಯಾಯಸ್ಥಾಪಕರು 5 : 24 (ERVKN)
ಕೇನ್ಯನಾದ ಹೆಬೆರನ ಹೆಂಡತಿ ಯಾಯೇಲಳಿಗೆ ಎಲ್ಲ ಹೆಂಗಸರಿಗಿಂತಲೂ ಹೆಚ್ಚಿಗೆ ದೇವರ ಆಶೀರ್ವಾದವಾಗುವುದು.
ನ್ಯಾಯಸ್ಥಾಪಕರು 5 : 25 (ERVKN)
ಸೀಸೆರನು ನೀರು ಕೇಳಿದನು; ಯಾಯೇಲಳು ಅವನಿಗೆ ಹಾಲು ಕೊಟ್ಟಳು.
ಅರಸನಿಗೆ ಯೋಗ್ಯವಾದ ಬಟ್ಟಲಲ್ಲಿ ಅವಳು ಅವನಿಗೆ ಕೆನೆಯನ್ನು ತಂದಳು.
ನ್ಯಾಯಸ್ಥಾಪಕರು 5 : 26 (ERVKN)
ನಂತರ ಯಾಯೇಲಳು ಕೈಚಾಚಿ ಗುಡಾರದ ಗೂಟವನ್ನು ತೆಗೆದುಕೊಂಡಳು. ಅವಳು ಬಲಗೈಯನ್ನು ಚಾಚಿ ದೊಡ್ಡ ಕೊಡತಿಯನ್ನು ತೆಗೆದುಕೊಂಡಳು,
ಆ ಕೊಡತಿಯಿಂದ ಸೀಸೆರನ ತಲೆಯನ್ನು ಬಿರುಸಾಗಿ ಒಡೆದುಬಿಟ್ಟಳು; ಅವನ ಕಣತಲೆಗೆ ತಿವಿದು ಬಡಿದಳು.
ನ್ಯಾಯಸ್ಥಾಪಕರು 5 : 27 (ERVKN)
ಅವನು ಯಾಯೇಲಳ ಪಾದಗಳ ಬಳಿಯಲ್ಲಿ ಬಗ್ಗಿಕೊಂಡು ಉರುಳಿಬಿದ್ದನು;
ಅವನು ಅವಳ ಪಾದಗಳ ಬಳಿಯಲ್ಲಿ ಕುಸಿದುಬಿದ್ದನು. ಸೀಸೆರನು ಕುಸಿದುಬಿದ್ದಲ್ಲಿಯೇ ಸತ್ತನು.
ನ್ಯಾಯಸ್ಥಾಪಕರು 5 : 28 (ERVKN)
“ಸೀಸೆರನ ತಾಯಿ ಕಿಟಿಕಿಯ ಮೂಲಕ ನೋಡಿದಳು; ಆಕೆಯು ತೆರೆಯ ಮೂಲಕ ನೋಡಿ ಕೂಗಿದಳು.
‘ಸೀಸೆರನ ರಥಾಗಮನಕ್ಕೆ ಇಷ್ಟು ತಡವೇಕೆ? ಅವನ ರಥದ ಕುದುರೆಗಳ ಧ್ವನಿ ಬರಲು ಇಷ್ಟು ತಡವೇಕೆ?’ ಅಂದಳು.
ನ್ಯಾಯಸ್ಥಾಪಕರು 5 : 29 (ERVKN)
“ಅವಳ ಸೇವಕಿಯರಲ್ಲಿ ಅತಿಬುದ್ಧಿವಂತಳು ಹೀಗೆ ಉತ್ತರಿಸಿದಳು. ಹೌದು, ಸೇವಕಿಯು ಉತ್ತರಿಸಿದಳು,
ನ್ಯಾಯಸ್ಥಾಪಕರು 5 : 30 (ERVKN)
‘ಖಂಡಿತವಾಗಿ ಅವರು ಗೆದ್ದಿದ್ದಾರೆ, ತಾವು ಸೋಲಿಸಿದ ಜನರಿಂದ ವಸ್ತುಗಳನ್ನು ಪಡೆಯುತ್ತಿದ್ದಾರೆ!
ಆ ವಸ್ತುಗಳನ್ನು ತಮ್ಮಲ್ಲಿಯೇ ಹಂಚಿಕೊಳ್ಳುತ್ತಿದ್ದಾರೆ! ಪ್ರತಿಯೊಬ್ಬ ಸೈನಿಕನು ಒಬ್ಬಿಬ್ಬರು ಹುಡುಗಿಯರನ್ನು ತೆಗೆದುಕೊಳ್ಳುತ್ತಿರಬೇಕು.
ಸೀಸೆರನು ವರ್ಣರಂಜಿತ ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು. ಹೌದು! ವಿಜಯಿ ಸೀಸೆರನು ಧರಿಸಲು ಬಣ್ಣಬಣ್ಣದ ಒಂದು ಬಟ್ಟೆಯನ್ನು ತೆಗೆದುಕೊಳ್ಳುತ್ತಿರಬಹುದು; ಅಥವಾ ಎರಡು ಬಟ್ಟೆಗಳನ್ನು ತೆಗೆದುಕೊಳ್ಳುತ್ತಿರಬಹುದು.’
ನ್ಯಾಯಸ್ಥಾಪಕರು 5 : 31 (ERVKN)
“ಯೆಹೋವನೇ, ನಿನ್ನ ವೈರಿಗಳೆಲ್ಲಾ ಹೀಗೇ ಸಾಯಲಿ; ಆದರೆ ನಿನ್ನನ್ನು ಪ್ರೀತಿಸುವವರೆಲ್ಲರೂ ಬಲವಾಗಿದ್ದು ಉದಯಿಸುವ ಸೂರ್ಯನಂತೆ ಬೆಳಗಲಿ!” ನಲವತ್ತು ವರ್ಷಗಳವರೆಗೆ ದೇಶದಲ್ಲಿ ಶಾಂತಿ ನೆಲೆಸಿತ್ತು.
❮
❯