ಪ್ರಲಾಪಗಳು 4 : 1 (ERVKN)
{ಜೆರುಸಲೇಮಿನ ಮೇಲೆ ಭಯಂಕರ ಆಕ್ರಮಣ} [PS] ನೋಡು, ಬಂಗಾರವು ಹೇಗೆ ಕಪ್ಪಾಗಿದೆ. [QBR2] ನೋಡು, ಶುದ್ಧಬಂಗಾರವು ಹೇಗೆ ಬದಲಾಗಿದೆ. [QBR] ಅಮೂಲ್ಯವಾದ ಕಲ್ಲುಗಳು ಎಲ್ಲೆಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. [QBR2] ಅವು ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. [QBR]
ಪ್ರಲಾಪಗಳು 4 : 2 (ERVKN)
ಚೀಯೋನಿನ ಜನರು ಬಂಗಾರದಂತೆ ಅಮೂಲ್ಯವಾಗಿದ್ದರು. [QBR2] ಆದರೆ ಈಗ ವೈರಿಗಳು ಅವರನ್ನು ಕುಂಬಾರನಿಂದ ಮಾಡಲ್ಪಟ್ಟಿರುವ ಜೇಡಿಮಣ್ಣಿನ ಹಳೆಯ ಮಡಕೆಗಳೋ ಎಂಬಂತೆ ಪರಿಗಣಿಸಿದ್ದಾರೆ. [QBR]
ಪ್ರಲಾಪಗಳು 4 : 3 (ERVKN)
ಕಾಡುನಾಯಿಯು ಸಹ ತನ್ನ ಮರಿಗಳಿಗೆ ಹಾಲನ್ನು ಕುಡಿಸುತ್ತದೆ. [QBR2] ನರಿಯು ಸಹ ತನ್ನ ಮರಿಗಳಿಗೆ ಮೊಲೆಗಳಿಂದ ಹಾಲನ್ನು ಕೊಡುತ್ತದೆ. [QBR] ಆದರೆ ನನ್ನ ಜನರಾದರೋ, [QBR2] ಮರುಭೂಮಿಯಲ್ಲಿ ಜೀವಿಸುವ ಉಷ್ಟ್ರಪಕ್ಷಿಯಂತೆ ಕ್ರೂರಿಗಳಾಗಿದ್ದಾರೆ. [QBR]
ಪ್ರಲಾಪಗಳು 4 : 4 (ERVKN)
ಎಳೆಕೂಸಿನ ನಾಲಿಗೆಯು [QBR2] ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. [QBR] ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ [QBR2] ಅವರಿಗೆ ಯಾರೂ ಏನೂ ಕೊಡುವುದಿಲ್ಲ. [QBR]
ಪ್ರಲಾಪಗಳು 4 : 5 (ERVKN)
ಒಂದು ಕಾಲದಲ್ಲಿ ಮೃಷ್ಟಾನ್ನವನ್ನು ತಿಂದ ಜನರು [QBR2] ಈಗ ಬೀದಿಗಳಲ್ಲಿ ಸಾಯುತ್ತಿದ್ದಾರೆ. [QBR] ಸುಂದರವಾದ ಕೆಂಪು ಉಡುಪುಗಳನ್ನು ಧರಿಸಿಕೊಂಡು ಬೆಳೆದ ಜನರು [QBR2] ಈಗ ಕಸದ ಗುಂಡಿಗಳಿಂದ ಆಹಾರವನ್ನು ಎತ್ತಿಕೊಳ್ಳುತ್ತಿದ್ದಾರೆ. [QBR]
ಪ್ರಲಾಪಗಳು 4 : 6 (ERVKN)
ನನ್ನ ಜನರ ಪಾಪವು ಬಹಳವಾಗಿತ್ತು. [QBR2] ಅವರ ಪಾಪವು ಸೊದೋಮ್ ಪಟ್ಟಣದ ಪಾಪಕ್ಕಿಂತಲೂ ಹೆಚ್ಚಾಗಿತ್ತು. [QBR] ಸೊದೋಮ್ ಇದ್ದಕ್ಕಿದ್ದಂತೆ ನಾಶವಾಯಿತು. [QBR2] ಅದು ನಾಶವಾದದ್ದು ಯಾವ ಮಾನವನಿಂದಲೂ ಅಲ್ಲ. [QBR]
ಪ್ರಲಾಪಗಳು 4 : 7 (ERVKN)
ಯೆಹೂದದ ಕೆಲವು ಜನರು [QBR2] ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. [QBR] ಅವರು ಬಹಳ ಶುದ್ಧರಾಗಿದ್ದರು. [QBR2] ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. [QBR] ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. [QBR2] ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು. [QBR]
ಪ್ರಲಾಪಗಳು 4 : 8 (ERVKN)
ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. [QBR2] ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. [QBR] ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. [QBR2] ಅವರ ಚರ್ಮವು ಮರದಂತಾಗಿದೆ. [QBR]
ಪ್ರಲಾಪಗಳು 4 : 9 (ERVKN)
ಬರಗಾಲದ ನಿಮಿತ್ತ ಸತ್ತವರಿಗಿಂತಲೂ [QBR2] ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. [QBR] ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. [QBR2] ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತು ಹೋದರು. [QBR]
ಪ್ರಲಾಪಗಳು 4 : 10 (ERVKN)
ಆ ಸಮಯದಲ್ಲಿ, ಕನಿಕರವುಳ್ಳ ಸ್ತ್ರೀಯರು [QBR2] ಸಹ ತಮ್ಮ ಮಕ್ಕಳನ್ನೇ ಬೇಯಿಸಿ ತಿಂದುಬಿಟ್ಟರು. [QBR] ಆ ಮಕ್ಕಳು ಅವರ ತಾಯಂದಿರಿಗೇ ಆಹಾರವಾದರು. [QBR2] ನನ್ನ ಜನರು ನಾಶಗೊಂಡಾಗ ಇದು ಸಂಭವಿಸಿತು. [QBR]
ಪ್ರಲಾಪಗಳು 4 : 11 (ERVKN)
ಯೆಹೋವನು ತನ್ನ ಕೋಪವನ್ನೆಲ್ಲ ಉಪಯೋಗಿಸಿದನು; [QBR2] ತನ್ನ ಕೋಪವನ್ನೆಲ್ಲಾ ಸುರಿದುಬಿಟ್ಟನು. [QBR] ಆತನು ಚೀಯೋನಿನಲ್ಲಿ ಬೆಂಕಿ ಹೊತ್ತಿಸಿದನು. [QBR2] ಆ ಬೆಂಕಿಯು ಚೀಯೋನಿನ ಅಡಿಪಾಯಗಳವರೆಗೂ ದಹಿಸಿಬಿಟ್ಟಿತು. [QBR]
ಪ್ರಲಾಪಗಳು 4 : 12 (ERVKN)
ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ [QBR2] ಭೂಲೋಕದ ರಾಜರಿಗೆ ಆಗಲಿಲ್ಲ. [QBR] ನಡೆದಿದ್ದ ಸಂಗತಿಯನ್ನು ನಂಬುವುದಕ್ಕೂ [QBR2] ಲೋಕದ ಜನರಿಗೆ ಆಗಲಿಲ್ಲ. [QBR] ಜೆರುಸಲೇಮ್ ಪಟ್ಟಣದ ಬಾಗಿಲುಗಳ ಮೂಲಕ ವೈರಿಗಳು [QBR2] ಬಂದರೆಂಬುದನ್ನು ಅವರಿಗೆ ನಂಬಲೂ ಆಗಲಿಲ್ಲ. [QBR]
ಪ್ರಲಾಪಗಳು 4 : 13 (ERVKN)
ಜೆರುಸಲೇಮಿನ ಪ್ರವಾದಿಗಳು ಪಾಪ ಮಾಡಿದ್ದರಿಂದಲೇ [QBR2] ಇದು ಸಂಭವಿಸಿತು. [QBR] ಜೆರುಸಲೇಮಿನ ಯಾಜಕರು ದುಷ್ಕೃತ್ಯಗಳನ್ನು ಮಾಡಿದ್ದದರಿಂದಲೇ [QBR2] ಇದು ಸಂಭವಿಸಿತು. [QBR] ಆ ಜನರು ಜೆರುಸಲೇಮ್ ಪಟ್ಟಣದಲ್ಲಿ [QBR2] ಒಳ್ಳೆಯ ಜನರ ರಕ್ತವನ್ನು ಸುರಿಸಿದ್ದರು. [QBR]
ಪ್ರಲಾಪಗಳು 4 : 14 (ERVKN)
ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು [QBR2] ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. [QBR] ಅವರು ರಕ್ತದಿಂದ ಹೊಲಸಾಗಿದ್ದರು. [QBR2] ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ. [QBR]
ಪ್ರಲಾಪಗಳು 4 : 15 (ERVKN)
“ತೊಲಗಿಹೋಗಿ! ತೊಲಗಿಹೋಗಿ! [QBR2] ನಮ್ಮನ್ನು ಮುಟ್ಟಬೇಡಿ” ಎಂದು ಜನರು ಕೂಗಿಕೊಂಡರು. [QBR] ಆ ಜನರು ಅಲೆದಾಡುತ್ತಿದ್ದರು. ಅವರಿಗೆ ಸ್ಥಳವಿರಲಿಲ್ಲ. [QBR] ಬೇರೆ ಜನಾಂಗಗಳ ಜನರು, [QBR2] “ಅವರು ನಮ್ಮೊಂದಿಗೆ ವಾಸಿಸುವುದು ನಮಗೆ ಬೇಕಿಲ್ಲ” ಎಂದು ಹೇಳಿದರು. [QBR]
ಪ್ರಲಾಪಗಳು 4 : 16 (ERVKN)
ಯೆಹೋವನು ತಾನೇ ಆ ಜನರನ್ನು ನಾಶಮಾಡಿದನು. [QBR2] ಅವರ ಪರಿಪಾಲನೆ ಮಾಡುವುದನ್ನು ನಿಲ್ಲಿಸಿದನು. [QBR] ಆತನು ಯಾಜಕರನ್ನು ಗೌರವಿಸಲಿಲ್ಲ. [QBR2] ಆತನು ಯೆಹೂದದ ಹಿರಿಯರೊಂದಿಗೆ ಕರುಣೆಯಿಂದಿರಲಿಲ್ಲ. [QBR]
ಪ್ರಲಾಪಗಳು 4 : 17 (ERVKN)
ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. [QBR2] ಆದರೆ ಯಾವ ಸಹಾಯವೂ ಬರಲಿಲ್ಲ. [QBR] ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, [QBR2] ಆದರೆ ಯಾವ ಜನಾಂಗವೂ ಬರಲಿಲ್ಲ. [QBR]
ಪ್ರಲಾಪಗಳು 4 : 18 (ERVKN)
ನಮ್ಮ ವೈರಿಗಳು ನಮ್ಮನ್ನು ಸತತವಾಗಿ ಬೇಟೆಯಾಡುತ್ತಿದ್ದುದರಿಂದ [QBR2] ನಾವು ಬೀದಿಗಳಿಗೆ ಹೋಗಲೂ ಸಾಧ್ಯವಾಗಲಿಲ್ಲ. [QBR] ನಮ್ಮ ಅಂತ್ಯವು ಸಮೀಪಿಸಿತು. [QBR2] ನಮ್ಮ ಕಾಲವು ಮುಗಿಯಿತು. ನಮ್ಮ ಕೊನೆಯು ಬಂದಿತು! [QBR]
ಪ್ರಲಾಪಗಳು 4 : 19 (ERVKN)
ನಮ್ಮನ್ನು ಅಟ್ಟಿಸಿಕೊಂಡು ಬಂದ ಜನರು [QBR2] ಆಕಾಶದಲ್ಲಿ ಹಾರುವ ಹದ್ದುಗಳಿಗಿಂತಲೂ ವೇಗಶಾಲಿಗಳಾಗಿದ್ದರು. [QBR] ಅವರು ನಮ್ಮನ್ನು ಬೆಟ್ಟಗಳಿಗೆ ಅಟ್ಟಿಸಿಕೊಂಡು ಬಂದರು. [QBR2] ನಮ್ಮನ್ನು ಹಿಡಿಯುವುದಕ್ಕಾಗಿ ಮರುಭೂಮಿಯಲ್ಲಿ ಅವಿತುಕೊಂಡರು. [QBR]
ಪ್ರಲಾಪಗಳು 4 : 20 (ERVKN)
ನಮಗೆ ರಾಜನು ಬಹಳ ಮುಖ್ಯವಾಗಿದ್ದನು. [QBR] ಅವನು ನಮಗೆ ಉಸಿರಿನಷ್ಟೇ ಅಮೂಲ್ಯವಾಗಿದ್ದನು. [QBR2] ಆದರೆ ಅವರು ರಾಜನನ್ನೇ ಸೆರೆಹಿಡಿದರು. [QBR] ಯೆಹೋವನೇ, ಆ ರಾಜನನ್ನು ಆರಿಸಿಕೊಂಡಿದ್ದನು. “ನಾವು ಅವನ ನೆರಳಿನಲ್ಲಿ ಬದುಕುತ್ತೇವೆ. [QBR2] ಅವನು ನಮ್ಮನ್ನು ಜನಾಂಗಗಳವರಿಂದ ಸಂರಕ್ಷಿಸುವನು” [QBR2] ಎಂದು ನಾವು ರಾಜನ ಬಗ್ಗೆ ಹೇಳಿಕೊಂಡಿದ್ದೆವು. [QBR]
ಪ್ರಲಾಪಗಳು 4 : 21 (ERVKN)
ಎದೋಮಿನ ಜನರೇ, ಸಂತೋಷವಾಗಿರಿ. [QBR2] ಊಚ್ ದೇಶದಲ್ಲಿ ವಾಸವಾಗಿರುವ ಜನರೇ, ಸಂತೋಷವಾಗಿರಿ. [QBR] ಆದರೆ ಜ್ಞಾಪಕದಲ್ಲಿಟ್ಟುಕೊಂಡಿರಿ, ಯೆಹೋವನ ಕೋಪದ ಪಾತ್ರೆಯು ನಿಮ್ಮ ಬಳಿಗೂ ಬರುವುದು. [QBR] ನೀವು ಆ ಪಾತ್ರೆಯಿಂದ ಕುಡಿಯುವಾಗ [QBR2] ಮತ್ತೇರಿದವರಾಗಿ ನಿಮ್ಮನ್ನು ನೀವೇ ಬೆತ್ತಲು ಮಾಡಿಕೊಳ್ಳುವಿರಿ. [QBR]
ಪ್ರಲಾಪಗಳು 4 : 22 (ERVKN)
ಚೀಯೋನೇ, ನಿನಗಾಗಬೇಕಿದ್ದ ದಂಡನೆಯು ಸಂಪೂರ್ಣವಾಯಿತು. [QBR2] ಮತ್ತೆ ನೀನು ಸೆರೆವಾಸಕ್ಕೆ ಹೋಗುವುದಿಲ್ಲ. [QBR] ಆದರೆ ಎದೋಮಿನ ಜನರೇ, ನಿಮ್ಮ ಪಾಪಗಳಿಗಾಗಿ ಯೆಹೋವನು ನಿಮ್ಮನ್ನು ದಂಡಿಸುವನು. [QBR2] ಆತನು ನಿಮ್ಮ ಪಾಪಗಳನ್ನು ಬಹಿರಂಗಪಡಿಸುವನು. [PE]

1 2 3 4 5 6 7 8 9 10 11 12 13 14 15 16 17 18 19 20 21 22

BG:

Opacity:

Color:


Size:


Font: