ಯಾಜಕಕಾಂಡ 11 : 1 (ERVKN)
ಮಾಂಸವನ್ನು ತಿನ್ನುವುದರ ಬಗ್ಗೆ ನಿಯಮಗಳು ಯೆಹೋವನು ಮೋಶೆ ಆರೋನರಿಗೆ ಹೀಗೆಂದನು:
ಯಾಜಕಕಾಂಡ 11 : 2 (ERVKN)
“ಇಸ್ರೇಲರಿಗೆ ಹೇಳಬೇಕಾದದ್ದೇನೆಂದರೆ, ನೀವು ಈ ಪಶುಗಳನ್ನು ತಿನ್ನಬಹುದು:
ಯಾಜಕಕಾಂಡ 11 : 3 (ERVKN)
ಕಾಲ್ಗೊರಸು ಸೀಳಿರುವ ಮತ್ತು ಮೆಲಕು ಹಾಕುವ ಮಾಂಸವನ್ನು ತಿನ್ನಬಹುದು.
ಯಾಜಕಕಾಂಡ 11 : 4 (ERVKN)
(4-6)“ಕೆಲವು ಪಶುಗಳು ಮೆಲಕು ಹಾಕುತ್ತವೆ, ಆದರೆ ಅವುಗಳ ಕಾಲ್ಗೊರಸು ಸೀಳಿರುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಒಂಟೆಗಳು, ಬೆಟ್ಟದ ಮೊಲಗಳು ಮತ್ತು ಮೊಲಗಳು ಮೆಲಕುಹಾಕುತ್ತವೆ. ಆದರೆ ಅವುಗಳ ಗೊರಸು ಸೀಳಿರುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
ಯಾಜಕಕಾಂಡ 11 : 7 (ERVKN)
ಇನ್ನು ಕೆಲವು ಪಶುಗಳ ಕಾಲ್ಗೊರಸುಗಳು ಸೀಳಿರುತ್ತವೆ. ಆದರೆ ಅವು ಮೆಲಕು ಹಾಕುವುದಿಲ್ಲ; ಅವುಗಳ ಮಾಂಸವನ್ನು ತಿನ್ನಕೂಡದು. ಹಂದಿಗಳ ಗೊರಸುಗಳು ಸೀಳಿರುತ್ತವೆ. ಆದರೆ ಮೆಲಕು ಹಾಕುವುದಿಲ್ಲ. ಆದ್ದರಿಂದ ಅವು ನಿಮಗೆ ಅಶುದ್ಧ.
ಯಾಜಕಕಾಂಡ 11 : 8 (ERVKN)
ಅವುಗಳ ಮಾಂಸವನ್ನು ತಿನ್ನಕೂಡದು. ಅವುಗಳ ಮೃತಶರೀರಗಳನ್ನು ಸಹ ಮುಟ್ಟಬಾರದು. ಅವು ನಿಮಗೆ ಅಶುದ್ಧ!
ಯಾಜಕಕಾಂಡ 11 : 9 (ERVKN)
ಸಮುದ್ರಾಹಾರದ ಬಗ್ಗೆ ನಿಯಮಗಳು “ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುವ ಜಲಪ್ರಾಣಿಗೆ ರೆಕ್ಕೆಯಿದ್ದು ಮೈಯೆಲ್ಲಾ ಪರೆಪರೆಯಿದ್ದರೆ ನೀವು ಅದನ್ನು ತಿನ್ನಬಹುದು.
ಯಾಜಕಕಾಂಡ 11 : 10 (ERVKN)
(10-11)ಆದರೆ ನೀರಿನಲ್ಲಿಯಾಗಲಿ ನದಿಯಲ್ಲಾಗಲಿ ಜೀವಿಸುತ್ತಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ, ನೀವು ಆ ಪ್ರಾಣಿಯನ್ನು ತಿನ್ನಕೂಡದು. ತಿನ್ನುವುದಕ್ಕೆ ಅಯೋಗ್ಯವಾದದ್ದೆಂದು ಯೆಹೋವನು ಹೇಳುವ ಪ್ರಾಣಿಗಳಲ್ಲಿ ಅದು ಒಂದಾಗಿದೆ. ಆ ಪ್ರಾಣಿಯ ಮಾಂಸವನ್ನು ತಿನ್ನಕೂಡದು. ಅದರ ಮೃತಶರೀರವನ್ನೂ ಮುಟ್ಟಕೂಡದು.
ಯಾಜಕಕಾಂಡ 11 : 12 (ERVKN)
ನೀರಿನಲ್ಲಿರುವ ಜಲಪ್ರಾಣಿಗೆ ರೆಕ್ಕೆಗಳು ಮತ್ತು ಪರೆಗಳು ಇಲ್ಲದಿದ್ದರೆ ಅದು ತಿನ್ನುವುದಕ್ಕೆ ಅಯೋಗ್ಯವಾಗಿದೆ.
ಯಾಜಕಕಾಂಡ 11 : 13 (ERVKN)
ತಿನ್ನಬಾರದ ಪಕ್ಷಿಗಳು “ನಿಷಿದ್ಧವಾದ ಈ ಪಕ್ಷಿಗಳ ಮಾಂಸವನ್ನು ನೀವು ತಿನ್ನಬಾರದು: ಗರುಡ, ಬೆಟ್ಟದ ಹದ್ದು, ಕ್ರೌಂಚ,
ಯಾಜಕಕಾಂಡ 11 : 14 (ERVKN)
ಹದ್ದು, ಎಲ್ಲಾ ವಿಧವಾದ ಗಿಡುಗ,
ಯಾಜಕಕಾಂಡ 11 : 16 (ERVKN)
ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ ಎಲ್ಲಾ ವಿಧವಾದ ಡೇಗೆ,
ಯಾಜಕಕಾಂಡ 11 : 17 (ERVKN)
ಗೂಬೆ, ಹೆಗ್ಗೂಬೆ, ಸಮುದ್ರಪಕ್ಷಿ,
ಯಾಜಕಕಾಂಡ 11 : 18 (ERVKN)
ನೀರುಕೋಳಿ, ರಣಹದ್ದು, ನೀರುಕಾಗೆ,
ಯಾಜಕಕಾಂಡ 11 : 19 (ERVKN)
ಕೊಕ್ಕರೆ, ಸಕಲ ವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.
ಯಾಜಕಕಾಂಡ 11 : 20 (ERVKN)
ಕ್ರಿಮಿಕೀಟಗಳನ್ನು ತಿನ್ನುವುದರ ಬಗ್ಗೆ ನಿಯಮಗಳು “ಕ್ರಿಮಿಕೀಟಗಳು ರೆಕ್ಕೆಗಳುಳ್ಳದ್ದಾಗಿ ನಾಲ್ಕು ಕಾಲುಗಳಲ್ಲಿ ಹರಿದಾಡುವುದಾಗಿದ್ದರೆ ಅವು ನಿಮಗೆ ನಿಷಿದ್ಧವಾಗಿವೆ. ಆ ಕ್ರಿಮಿಕೀಟಗಳನ್ನು ತಿನ್ನಕೂಡದು.
ಯಾಜಕಕಾಂಡ 11 : 21 (ERVKN)
ಆದರೆ ಕೀಟಗಳು ನೆಲದ ಮೇಲೆ ಕುಪ್ಪಳಿಸುವುದಕ್ಕೋಸ್ಕರ ಕೀಲುಗಳುಳ್ಳ ಕಾಲುಗಳನ್ನು ಹೊಂದಿದ್ದರೆ ಅವುಗಳನ್ನು ನೀವು ತಿನ್ನಬಹುದು.
ಯಾಜಕಕಾಂಡ 11 : 22 (ERVKN)
ಡತೆಗಳನ್ನು, ರೆಕ್ಕೆಗಳುಳ್ಳ ಎಲ್ಲಾ ವಿಧದ ಮಿಡತೆಗಳನ್ನು, ಎಲ್ಲಾ ವಿಧವಾದ ಚಿಟ್ಟೆಮಿಡತೆಗಳನ್ನು, ಎಲ್ಲಾ ವಿಧವಾದ ಸಣ್ಣ ಮಿಡತೆಗಳನ್ನು ಸಹ ತಿನ್ನಬಹುದು.
ಯಾಜಕಕಾಂಡ 11 : 23 (ERVKN)
“ಆದರೆ ರೆಕ್ಕೆಗಳಿದ್ದು ನಾಲ್ಕು ಕಾಲುಗಳಿರುವ ಬೇರೆ ಎಲ್ಲಾ ಕ್ರಿಮಿಕೀಟಗಳನ್ನು ನೀವು ತಿನ್ನಬಾರದು.
ಯಾಜಕಕಾಂಡ 11 : 24 (ERVKN)
ಆ ಕ್ರಿಮಿಕೀಟಗಳು ನಿಮ್ಮನ್ನು ಅಶುದ್ಧ ಮಾಡುತ್ತವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
ಯಾಜಕಕಾಂಡ 11 : 25 (ERVKN)
ಯಾವನಾದರೂ ಆ ಸತ್ತ ಕ್ರಿಮಿಕೀಟಗಳಲ್ಲಿ ಒಂದನ್ನು ಎತ್ತಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದ ತನಕ ಅಶುದ್ಧನಾಗಿರುವನು.
ಯಾಜಕಕಾಂಡ 11 : 26 (ERVKN)
ಪ್ರಾಣಿಗಳ ಬಗ್ಗೆ ಇನ್ನೂ ಹೆಚ್ಚಿನ ನಿಯಮಗಳು (26-27)“ಕೆಲವು ಪ್ರಾಣಿಗಳಿಗೆ ಸೀಳಿದ ಕಾಲ್ಗೊರಸುಗಳು ಇವೆ. ಆದರೆ ಕಾಲ್ಗೊರಸುಗಳು ಸರಿಯಾಗಿ ಎರಡು ಭಾಗಗಳಾಗಿರುವುದಿಲ್ಲ. ಕೆಲವು ಪ್ರಾಣಿಗಳು ಮೆಲಕು ಹಾಕುವುದಿಲ್ಲ. ಕೆಲವು ಪ್ರಾಣಿಗಳಿಗೆ ಕಾಲ್ಗೊರಸುಗಳು ಇರುವುದಿಲ್ಲ. ಅವು ಅಂಗಾಲುಗಳಿಂದ ನಡೆಯುತ್ತವೆ. ಆ ಎಲ್ಲಾ ಪ್ರಾಣಿಗಳು ನಿಮಗೆ ಅಶುದ್ಧ. ಅವುಗಳ ಸತ್ತದೇಹಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 11 : 28 (ERVKN)
ಯಾವನಾದರೂ ಅವುಗಳ ಹೆಣಗಳನ್ನು ಎತ್ತಿದರೆ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಆ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ.
ಯಾಜಕಕಾಂಡ 11 : 29 (ERVKN)
ಹರಿದಾಡುವ ಪ್ರಾಣಿಗಳ ಬಗ್ಗೆ ನಿಯಮಗಳು “ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧ; ಮುಂಗುಸಿ, ಇಲಿ, ಎಲ್ಲಾ ವಿಧವಾದ ದೊಡ್ಡಹಲ್ಲಿ,
ಯಾಜಕಕಾಂಡ 11 : 30 (ERVKN)
ಹಾವರಾಣಿ, ಮೊಸಳೆ, ಹಲ್ಲಿ, ಬಸವನಹುಳ, ಚಿಟ್ಟಿಲಿ,
ಯಾಜಕಕಾಂಡ 11 : 31 (ERVKN)
ನೆಲದ ಮೇಲೆ ಹರಿದಾಡುವ ಈ ಪ್ರಾಣಿಗಳು ನಿಮಗೆ ಅಶುದ್ಧವಾಗಿವೆ. ಅವುಗಳ ಹೆಣಗಳನ್ನು ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗುವನು.
ಯಾಜಕಕಾಂಡ 11 : 32 (ERVKN)
ಅಶುದ್ಧ ಪ್ರಾಣಿಗಳ ಬಗ್ಗೆ ನಿಯಮಗಳು “ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೂ ಸತ್ತು, ಯಾವುದೇ ವಸ್ತುವಿನ ಮೇಲೆ ಬಿದ್ದರೆ, ಆಗ ಆ ವಸ್ತುವು ಅಶುದ್ಧವಾಗುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಶೋಕಬಟ್ಟೆಯಾಗಲಿ ಅದು ಎಂಥದ್ದಾಗಿದ್ದರೂ ಕೆಲಸಕ್ಕೆ ಉಪಯುಕ್ತವಾಗಿದ್ದರೂ ಅದನ್ನು ನೀರಿನಲ್ಲಿ ಹಾಕಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.
ಯಾಜಕಕಾಂಡ 11 : 33 (ERVKN)
ಅಶುದ್ಧವಾದ ಆ ಪ್ರಾಣಿಗಳಲ್ಲಿ ಯಾವುದಾದರೊಂದು ಸತ್ತು ಮಣ್ಣಿನ ಬೋಗುಣಿಗೆ ಬಿದ್ದರೆ, ಆಗ ಆ ಬೋಗುಣಿಯಲ್ಲಿ ಇರುವುದೆಲ್ಲಾ ಅಶುದ್ಧವಾಗುವುದು. ಆ ಬೋಗುಣಿಯನ್ನು ನೀವು ಒಡೆದುಹಾಕಬೇಕು.
ಯಾಜಕಕಾಂಡ 11 : 34 (ERVKN)
ಅಶುದ್ಧವಾದ ಮಣ್ಣಿನ ಬೋಗುಣಿಯಿಂದ ನೀರು ಯಾವುದೇ ಆಹಾರಕ್ಕೆ ತಾಗಿದರೆ, ಆ ಆಹಾರವು ಅಶುದ್ಧವಾಗುವುದು. ಅಶುದ್ಧವಾದ ಬೋಗುಣಿಯಲ್ಲಿ ಯಾವುದೇ ಪಾನದ್ರವ್ಯವಿದ್ದರೂ ಅದು ಅಶುದ್ಧವಾಗುವುದು.
ಯಾಜಕಕಾಂಡ 11 : 35 (ERVKN)
ಸತ್ತ ಪ್ರಾಣಿಯ ಯಾವುದೇ ಭಾಗ ಯಾವುದೇ ವಸ್ತುವಿನ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗಿದೆ. ಅದು ಮಣ್ಣಿನ ಒಲೆಯಾಗಿದ್ದರೂ ಮಡಿಕೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಆ ವಸ್ತುಗಳು ಇನ್ನೆಂದಿಗೂ ಶುದ್ಧವಾಗಿರುವುದಿಲ್ಲ. ಅವು ನಿಮಗೆ ಯಾವಾಗಲೂ ಅಶುದ್ಧವಾಗಿರುವವು.
ಯಾಜಕಕಾಂಡ 11 : 36 (ERVKN)
“ಒರತೆಯಾಗಲಿ ನೀರನ್ನು ಪಡೆಯುವ ಬಾವಿಯಾಗಲಿ ಶುದ್ಧವಾಗಿರುವುದು. ಆದರೆ ಯಾವನಾದರೂ ಅಶುದ್ಧ ಪ್ರಾಣಿಗಳ ಹೆಣವನ್ನು ಮುಟ್ಟಿದರೆ, ಅವನು ಅಶುದ್ಧನಾಗುವನು.
ಯಾಜಕಕಾಂಡ 11 : 37 (ERVKN)
ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗವು ನೆಡುವುದಕ್ಕೆ ಇಟ್ಟಿರುವ ಬೀಜದ ಮೇಲೆ ಬಿದ್ದರೂ ಆ ಬೀಜ ಶುದ್ಧವಾಗಿಯೇ ಇರುತ್ತದೆ.
ಯಾಜಕಕಾಂಡ 11 : 38 (ERVKN)
ಆದರೆ ನೀರು ಹಾಕಿ ನೆನಸಿದ ಬೀಜಗಳ ಮೇಲೆ ಸತ್ತ ಅಶುದ್ಧ ಪ್ರಾಣಿಗಳ ಯಾವುದೇ ಭಾಗ ಬಿದ್ದರೆ, ಆ ಬೀಜಗಳು ನಿಮಗೆ ಅಶುದ್ಧವಾಗಿವೆ.
ಯಾಜಕಕಾಂಡ 11 : 39 (ERVKN)
“ಅಲ್ಲದೆ ನೀವು ಮಾಂಸಾಹಾರಕ್ಕಾಗಿ ಉಪಯೋಗಿಸುವ ಯಾವುದೇ ಪ್ರಾಣಿ ಸತ್ತರೆ, ಅದನ್ನು ಮುಟ್ಟುವ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 11 : 40 (ERVKN)
ಈ ಪ್ರಾಣಿಯ ಮಾಂಸವನ್ನು ತಿನ್ನುವ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸತ್ತ ಪ್ರಾಣಿಯನ್ನು ಎತ್ತುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 11 : 41 (ERVKN)
“ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೆಲ್ಲ ಯೆಹೋವನು ನಿಮಗೆ ನಿಷಿದ್ಧಗೊಳಿಸಿದ್ದಾನೆ. ನೀವು ಅವುಗಳ ಮಾಂಸವನ್ನು ತಿನ್ನಬಾರದು.
ಯಾಜಕಕಾಂಡ 11 : 42 (ERVKN)
ಹೊಟ್ಟೆಯ ಮೇಲೆ ತೆವಳಿಕೊಂಡು ಹೋಗುವ ಜಂತುವನ್ನು ಅಥವಾ ತನ್ನ ನಾಲ್ಕು ಕಾಲುಗಳಲ್ಲಿ ನಡೆಯುವ ಜಂತುವನ್ನು ಅಥವಾ ಅನೇಕ ಕಾಲುಗಳುಳ್ಳ ಜಂತುಗಳನ್ನು ನೀವು ತಿನ್ನಬಾರದು.
ಯಾಜಕಕಾಂಡ 11 : 43 (ERVKN)
ಆ ಜಂತುಗಳು ನಿಮ್ಮನ್ನು ಹೊಲೆ ಮಾಡದಿರಲಿ. ನೀವು ಅಶುದ್ಧರಾಗಬಾರದು.
ಯಾಜಕಕಾಂಡ 11 : 44 (ERVKN)
ಯಾಕೆಂದರೆ, ನಾನೇ ನಿಮ್ಮ ದೇವರಾದ ಯೆಹೋವನು. ನಾನು ಪರಿಶುದ್ಧನಾಗಿದ್ದೇನೆ, ಆದ್ದರಿಂದ ನೀವೂ ಪರಿಶುದ್ಧರಾಗಿರಬೇಕು. ಹರಿದಾಡುವ ಆ ಜಂತುಗಳಿಂದ ನಿಮ್ಮನ್ನು ಅಶುದ್ಧರನ್ನಾಗಿ ಮಾಡಿಕೊಳ್ಳಬೇಡಿರಿ.
ಯಾಜಕಕಾಂಡ 11 : 45 (ERVKN)
ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಯೆಹೋವನೇ ನಾನು. ನೀವು ನನ್ನ ವಿಶೇಷ ಜನರಾಗಿರಬೇಕೆಂದು ಮತ್ತು ನಾನು ನಿಮ್ಮ ದೇವರಾಗಿರಬೇಕೆಂದು ನಿಮ್ಮನ್ನು ಕರೆದುಕೊಂಡು ಬಂದೆನು. ನಾನು ಪರಿಶುದ್ಧನಾಗಿರುವಂತೆಯೇ ನೀವೂ ಪರಿಶುದ್ಧರಾಗಿರಬೇಕು.”
ಯಾಜಕಕಾಂಡ 11 : 46 (ERVKN)
ಎಲ್ಲಾ ಸಾಕುಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲಿರುವ ಇತರ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ. ಸಮುದ್ರದಲ್ಲಿರುವ ಮತ್ತು ನೆಲದ ಮೇಲೆ ಹರಿದಾಡುವ ಎಲ್ಲಾ ಪ್ರಾಣಿಗಳ ಬಗ್ಗೆ ಇರುವ ನಿಯಮಗಳು ಇವುಗಳೇ.
ಯಾಜಕಕಾಂಡ 11 : 47 (ERVKN)
ಅಶುದ್ಧವಾದ ಮತ್ತು ಶುದ್ಧವಾದ ಪ್ರಾಣಿಗಳ ಕುರಿತು ತಿಳಿದುಕೊಳ್ಳಲು ನಿಮಗೆ ಈ ನಿಯಮಗಳು ಸಹಾಯಕವಾಗಿವೆ. ಜನರು ಯಾವ ಪ್ರಾಣಿಗಳ ಮಾಂಸವನ್ನು ತಿನ್ನಬಹುದು ಮತ್ತು ಯಾವುದನ್ನು ತಿನ್ನಬಾರದೆಂದು ಈ ನಿಯಮಗಳು ತಿಳಿಸುತ್ತವೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47