ಯಾಜಕಕಾಂಡ 15 : 1 (ERVKN)
ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 15 : 2 (ERVKN)
“ಇಸ್ರೇಲರಿಗೆ ಹೀಗೆ ಹೇಳಿರಿ: ಒಬ್ಬನ ದೇಹದಿಂದ ಸ್ರಾವವಾದಾಗ ಆ ವ್ಯಕ್ತಿ ಅಶುದ್ಧನಾಗಿದ್ದಾನೆ.
ಯಾಜಕಕಾಂಡ 15 : 3 (ERVKN)
ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಅವನು ಅಶುದ್ಧನೇ.
ಯಾಜಕಕಾಂಡ 15 : 4 (ERVKN)
“ಸ್ರಾವವಾಗುತ್ತಿರುವ ವ್ಯಕ್ತಿ ಯಾವ ಹಾಸಿಗೆಯ ಮೇಲೆ ಮಲಗಿದರೂ ಆ ಹಾಸಿಗೆ ಅಶುದ್ಧವಾಗುತ್ತದೆ.
ಯಾಜಕಕಾಂಡ 15 : 5 (ERVKN)
ಯಾವನಾದರೂ ಆ ವ್ಯಕ್ತಿಯ ಹಾಸಿಗೆಯನ್ನು ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 6 (ERVKN)
ಸ್ರಾವವುಳ್ಳವನು ಕುಳಿತುಕೊಳ್ಳುವ ವಸ್ತುವಿನ ಮೇಲೆ ಯಾವನಾದರೂ ಕುಳಿತುಕೊಂಡರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನ ಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 7 (ERVKN)
ಅಲ್ಲದೆ ಸ್ರಾವವುಳ್ಳ ವ್ಯಕ್ತಿಯನ್ನು ಯಾವನಾದರೂ ಮುಟ್ಟಿದರೆ, ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 8 (ERVKN)
“ಸ್ರಾವವುಳ್ಳ ವ್ಯಕ್ತಿ ಶುದ್ಧವ್ಯಕ್ತಿಯ ಮೇಲೆ ಉಗುಳಿದರೆ, ಶುದ್ಧವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಿಂದ ಸ್ನಾನಮಾಡಬೇಕು. ಈ ವ್ಯಕ್ತಿ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 9 (ERVKN)
ಸ್ರಾವವುಳ್ಳ ವ್ಯಕ್ತಿ ಯಾವ ತಡಿಯ ಮೇಲೆ ಕುಳಿತರೂ ಅದು ಅಶುದ್ಧವಾಗುವುದು.
ಯಾಜಕಕಾಂಡ 15 : 10 (ERVKN)
ಅದ್ದರಿಂದ ಯಾವನಾದರೂ ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ಯಾವದೇ ವಸ್ತುಗಳನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಸ್ರಾವವುಳ್ಳ ವ್ಯಕ್ತಿಯ ಕೆಳಗಿರುವ ವಸ್ತುಗಳನ್ನು ತೆಗೆದುಕೊಂಡುಹೋಗುವ ಯಾವನಾದರೂ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 11 (ERVKN)
“ಒಂದು ವೇಳೆ ಸ್ರಾವವುಳ್ಳ ಒಬ್ಬನು ತನ್ನ ಕೈಗಳನ್ನು ನೀರಿನಲ್ಲಿ ತೊಳೆಯದೆ ಇನ್ನೊಬ್ಬ ವ್ಯಕ್ತಿಯನ್ನು ಮುಟ್ಟಿದರೆ, ಆಗ ಆ ಇನ್ನೊಬ್ಬ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 12 (ERVKN)
ಸ್ರಾವವುಳ್ಳ ವ್ಯಕ್ತಿ ಮಣ್ಣಿನ ಮಡಿಕೆಯನ್ನು ಮುಟ್ಟಿದರೆ, ಆ ಮಡಿಕೆಯನ್ನು ಒಡೆದುಹಾಕಬೇಕು. ಸ್ರಾವವುಳ್ಳ ವ್ಯಕ್ತಿ ಮರದ ಬಟ್ಟಲನ್ನು ಮುಟ್ಟಿದರೆ, ಆ ವಸ್ತುವನ್ನು ನೀರಿನಲ್ಲಿ ತೊಳೆಯಬೇಕು.
ಯಾಜಕಕಾಂಡ 15 : 13 (ERVKN)
“ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.
ಯಾಜಕಕಾಂಡ 15 : 14 (ERVKN)
ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.
ಯಾಜಕಕಾಂಡ 15 : 15 (ERVKN)
ಯಾಜಕನು ಈ ಪಕ್ಷಿಗಳಲ್ಲಿ ಒಂದನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದನ್ನು ಸರ್ವಾಂಗಹೋಮವಾಗಿಯೂ ಅರ್ಪಿಸುವನು. ಹೀಗೆ ಯಾಜಕನು ಅವನ ಅಶುದ್ಧವಾದ ಸ್ರಾವಕ್ಕಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
ಯಾಜಕಕಾಂಡ 15 : 16 (ERVKN)
“ಒಬ್ಬನಿಗೆ ವೀರ್ಯಸ್ಖಲನವಾದರೆ, ಅವನು ನೀರಿನಲ್ಲಿ ಸರ್ವಾಂಗ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 17 (ERVKN)
ಯಾವ ಬಟ್ಟೆಯ ಮೇಲಾಗಲಿ ತೊಗಲಿನ ವೇಲಾಗಲಿ ವೀರ್ಯವು ಬಿದ್ದರೆ, ಆ ಬಟ್ಟೆ ಅಥವಾ ತೊಗಲನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲವರೆಗೆ ಅಶುದ್ಧವಾಗಿರುವುದು.
ಯಾಜಕಕಾಂಡ 15 : 18 (ERVKN)
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ, ಆಗ ಅವರಿಬ್ಬರೂ ಸ್ನಾನಮಾಡಬೇಕು. ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
ಯಾಜಕಕಾಂಡ 15 : 19 (ERVKN)
“ಸ್ತ್ರೀಗೆ ಅವಳ ತಿಂಗಳ ಮುಟ್ಟಿನಿಂದ ಸ್ರಾವವಿದ್ದರೆ, ಅವಳು ಏಳು ದಿನಗಳವರೆಗೆ ಅಶುದ್ಧಳಾಗಿರುವಳು. ಯಾವನಾದರೂ ಆಕೆಯನ್ನು ಮುಟ್ಟಿದರೆ, ಆ ವ್ಯಕ್ತಿಯೂ ಸಾಯಂಕಾಲದವರೆಗೆ ಆಶುದ್ಧನಾಗಿರುವನು.
ಯಾಜಕಕಾಂಡ 15 : 20 (ERVKN)
ಅಲ್ಲದೆ, ಸ್ತ್ರೀಯು ತನ್ನ ಮುಟ್ಟಿನ ದಿನಗಳಲ್ಲಿ ಯಾವುದರ ಮೇಲೆ ಮಲಗಿದರೂ ಅದು ಅಶುದ್ಧವಾಗಿರುವುದು ಮತ್ತು ಆ ಸಮಯದಲ್ಲಿ ಆಕೆಯು ಯಾವುದರ ಮೇಲೆ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.
ಯಾಜಕಕಾಂಡ 15 : 21 (ERVKN)
ಯಾವನಾದರೂ ಅವಳ ಹಾಸಿಗೆಯನ್ನು ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 22 (ERVKN)
ಯಾವನಾದರೂ ಅವಳು ಕುಳಿತುಕೊಂಡಿದ್ದ ಯಾವ ವಸ್ತುವನ್ನಾದರೂ ಮುಟ್ಟಿದರೆ, ಆ ವ್ಯಕ್ತಿ ತನ್ನ ಬಟ್ಟೆಗಳನ್ನು ತೊಳೆದುಕೊಂಡು ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 23 (ERVKN)
ಅವನು ಅವಳ ಹಾಸಿಗೆಯನ್ನಾಗಲಿ ಅಥವಾ ಅವಳು ಕುಳಿತ್ತಿದ್ದ ಸ್ಥಳದಲ್ಲಿ ಇದ್ದ ಯಾವದನ್ನಾದರೂ ಮುಟ್ಟಿದರೆ ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 24 (ERVKN)
“ಪುರುಷನು ಸ್ತ್ರೀಯ ಮುಟ್ಟಿನ ಸಮಯದಲ್ಲಿ ಆಕೆಯೊಡನೆ ಲೈಂಗಿಕ ಸಂಪರ್ಕ ಹೊಂದಿದರೆ, ಆಗ ಅವನು ಏಳು ದಿನಗಳವರೆಗೆ ಅಶುದ್ಧನಾಗಿರುವನು. ಅವನು ಮಲಗಿಕೊಳ್ಳುವ ಪ್ರತಿಯೊಂದು ಹಾಸಿಗೆಯು ಅಶುದ್ಧವಾಗುವುದು.
ಯಾಜಕಕಾಂಡ 15 : 25 (ERVKN)
“ಸ್ತ್ರೀಗೆ ತನ್ನ ಮುಟ್ಟಿನ ದಿನಗಳ ಹೊರತಾಗಿ ಅನೇಕ ದಿನಗಳವರೆಗೆ ರಕ್ತಸ್ರಾವವಾದರೆ ಅಥವಾ ಮುಟ್ಟಿನ ದಿನಗಳ ನಂತರ ಅವಳಿಗೆ ಸ್ರಾವವಾದರೆ, ಆಕೆಯು ತನ್ನ ಮುಟ್ಟಿನ ದಿನಗಳಲ್ಲಿ ಅಶುದ್ಧಳಾಗಿರುವಂತೆ, ಅಶುದ್ಧಳಾಗಿರುವಳು. ಅವಳಿಗೆ ಸ್ರಾವವಾಗುವ ದಿನಗಳೆಲ್ಲಾ ಅವಳು ಅಶುದ್ಧಳಾಗಿರುವಳು.
ಯಾಜಕಕಾಂಡ 15 : 26 (ERVKN)
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಮಲಗಿರುವ ಹಾಸಿಗೆಯಂತೆಯೇ ಅಶುದ್ಧವಾಗಿರುವುದು. ಅವಳು ಯಾವುದರ ಮೇಲೆ ಕುಳಿತರೂ ಅದು ತಿಂಗಳ ಮುಟ್ಟಿನ ಕಾಲದಲ್ಲಿ ಅವಳು ಕುಳಿತಿದ್ದ ವಸ್ತುವಿನಂತೆಯೇ ಅಶುದ್ಧವಾಗಿರುವುದು.
ಯಾಜಕಕಾಂಡ 15 : 27 (ERVKN)
ಯಾವನಾದರೂ ಆ ವಸ್ತುಗಳನ್ನು ಮುಟ್ಟಿದರೆ, ಆ ವ್ಯಕ್ತಿ ಅಶುದ್ಧನಾಗಿರುವನು. ಆ ವ್ಯಕ್ತಿಯು ತನ್ನ ಬಟ್ಟೆಗಳನ್ನು ತೊಳೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
ಯಾಜಕಕಾಂಡ 15 : 28 (ERVKN)
ಸ್ತ್ರೀಗೆ ಸ್ರಾವವು ನಿಂತ ನಂತರ, ಅವಳು ಏಳು ದಿನಗಳವರೆಗೆ ಕಾಯಬೇಕು. ಅದರ ನಂತರ ಅವಳು ಶುದ್ಧಳಾಗಿರುವಳು.
ಯಾಜಕಕಾಂಡ 15 : 29 (ERVKN)
ಬಳಿಕ ಎಂಟನೆಯ ದಿನದಲ್ಲಿ ಸ್ತ್ರೀಯು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಳ್ಳಬೇಕು. ಅವಳು ಅವುಗಳನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.
ಯಾಜಕಕಾಂಡ 15 : 30 (ERVKN)
ತರುವಾಯ ಯಾಜಕನು ಒಂದು ಪಕ್ಷಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಇನ್ನೊಂದು ಪಕ್ಷಿಯನ್ನು ಸರ್ವಾಂಗಹೋಮವಾಗಿಯೂ ಅರ್ಪಿಸಬೇಕು. ಹೀಗೆ ಯಾಜಕನು ಅವಳಿಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.
ಯಾಜಕಕಾಂಡ 15 : 31 (ERVKN)
“ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು”
ಯಾಜಕಕಾಂಡ 15 : 32 (ERVKN)
ಸ್ರಾವವುಳ್ಳ ಜನರು ಅನುಸರಿಸಬೇಕಾದ ನಿಯಮಗಳು ಇವುಗಳೇ. ವೀರ್ಯಸ್ಖಲನದಿಂದ ಅಶುದ್ಧರಾದ ಪುರುಷರು ಅನುಸರಿಸಬೇಕಾದ ನಿಯಮಗಳು ಇವುಗಳೇ.
ಯಾಜಕಕಾಂಡ 15 : 33 (ERVKN)
ತಮ್ಮ ತಿಂಗಳ ಮುಟ್ಟಿನಿಂದ ಅಶುದ್ಧರಾಗುವ ಸ್ತ್ರೀಯರು, ಸ್ರಾವವಾಗುವ ಗಂಡಸರು ಮತ್ತು ಸ್ತ್ರೀಯರು ಅನುಸರಿಸಬೇಕಾದ ನಿಯಮಗಳು ಇವುಗಳೇ. ಅಶುದ್ಧಳಾದ ಸ್ತ್ರೀಯೊಡನೆ ಮಲಗುವುದರಿಂದ ಅಶುದ್ಧನಾಗುವ ಯಾವನಾದರೂ ಅನುಸರಿಸಬೇಕಾದ ನಿಯಮಗಳು ಇವುಗಳೇ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33

BG:

Opacity:

Color:


Size:


Font: