ಯಾಜಕಕಾಂಡ 22 : 1 (ERVKN)
ದೇವರಾದ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 22 : 2 (ERVKN)
“ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳು: ಇಸ್ರೇಲರು ನನಗೆ ಕಾಣಿಕೆಗಳನ್ನು ಸಮರ್ಪಿಸುವರು. ಅವು ಪರಿಶುದ್ಧವಾದವುಗಳು. ಅವು ನನ್ನವು, ಆದ್ದರಿಂದ ಯಾಜಕರಾದ ನೀವು ಅವುಗಳನ್ನು ತೆಗೆದುಕೊಳ್ಳಬಾರದು. ನೀವು ಆ ಪರಿಶುದ್ಧ ವಸ್ತುಗಳನ್ನು ಉಪಯೋಗಿಸಿದರೆ, ನನ್ನ ಪರಿಶುದ್ಧ ಹೆಸರಿಗೆ ಅವಮಾನವಾಗುವುದು. ನಾನೇ ಯೆಹೋವನು!
ಯಾಜಕಕಾಂಡ 22 : 3 (ERVKN)
ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!
ಯಾಜಕಕಾಂಡ 22 : 4 (ERVKN)
“ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,
ಯಾಜಕಕಾಂಡ 22 : 5 (ERVKN)
ಯಾವುದೇ ಅಶುದ್ಧವಾದ ಹರಿದಾಡುವ ಜಂತುಗಳನ್ನು ಮುಟ್ಟಿದರೆ, ಅಶುದ್ಧನಾದ ವ್ಯಕ್ತಿಯನ್ನು ಮುಟ್ಟಿದರೆ ಅಶುದ್ಧನಾಗುವನು. ಯಾವುದು ಅವನನ್ನು ಅಶುದ್ಧಪಡಿಸಿತು ಎಂಬುದು ಪ್ರಾಮುಖ್ಯವಲ್ಲ.
ಯಾಜಕಕಾಂಡ 22 : 6 (ERVKN)
ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.* ಪವಿತ್ರ … ತಿನ್ನಬಾರದು ಅಥವಾ “ಅವನು ತನ್ನನ್ನು ನೀರಿನಿಂದ ತೊಳೆದುಕೊಂಡ ನಂತರ ಪವಿತ್ರ ಆಹಾರವನ್ನು ತಿನ್ನಬಹುದು.”
ಯಾಜಕಕಾಂಡ 22 : 7 (ERVKN)
ಸೂರ್ಯನು ಮುಳುಗಿದ ನಂತರವೇ ಅವನು ಶುದ್ಧನಾಗುವನು. ಬಳಿಕ ಅವನು ನೈವೇದ್ಯ ಪದಾರ್ಥವನ್ನು ತಿನ್ನಬಹುದು. ಯಾಕೆಂದರೆ ಆ ಪದಾರ್ಥವು ಅವನ ಪಾಲಾಗುತ್ತದೆ.
ಯಾಜಕಕಾಂಡ 22 : 8 (ERVKN)
“ಯಾಜಕನು ಸತ್ತ ಪ್ರಾಣಿಯನ್ನಾಗಲಿ ಕ್ರೂರ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನಾಗಲಿ ತಿನ್ನಬಾರದು. ಅವನು ಅದನ್ನು ತಿಂದರೆ ಅಶುದ್ಧನಾಗುವನು. ನಾನೇ ಯೆಹೋವನು!
ಯಾಜಕಕಾಂಡ 22 : 9 (ERVKN)
“ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.
ಯಾಜಕಕಾಂಡ 22 : 10 (ERVKN)
ಯಾಜಕರ ಕುಟುಂಬದ ಜನರು ಮಾತ್ರವೇ ನೈವೇದ್ಯ ಪದಾರ್ಥಗಳನ್ನು ತಿನ್ನಬಹುದು. ಯಾಜಕನೊಂದಿಗೆ ಇಳಿದುಕೊಂಡವನಾಗಲಿ ಕೂಲಿಯಾಳಾಗಲಿ ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು.
ಯಾಜಕಕಾಂಡ 22 : 11 (ERVKN)
ಆದರೆ ಯಾಜಕನು ತನ್ನ ಸ್ವಂತ ಹಣದಿಂದ ಒಬ್ಬನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ, ಆ ಗುಲಾಮನು ನೈವೇದ್ಯ ಪದಾರ್ಥಗಳಲ್ಲಿ ಕೆಲವನ್ನು ತಿನ್ನಬಹುದು. ಯಾಜಕನ ಮನೆಯಲ್ಲಿ ಹುಟ್ಟಿದ ಗುಲಾಮರು ಸಹ ಯಾಜಕನ ಆಹಾರದಲ್ಲಿ ಕೆಲವನ್ನು ತಿನ್ನಬಹುದು.
ಯಾಜಕಕಾಂಡ 22 : 12 (ERVKN)
ಯಾಜಕನ ಮಗಳು ಯಾಜಕನಲ್ಲದವನನ್ನು ಮದುವೆಯಾದರೆ ಅವಳು ನೈವೇದ್ಯ ಸಮರ್ಪಣೆಗಳಲ್ಲಿ ಯಾವುದನ್ನೂ ತಿನ್ನಬಾರದು.
ಯಾಜಕಕಾಂಡ 22 : 13 (ERVKN)
ಯಾಜಕನ ಮಗಳು ವಿಧವೆಯಾಗಿದ್ದರೆ ಅಥವಾ ಗಂಡ ಬಿಟ್ಟವಳಾಗಿದ್ದರೆ ಅಲ್ಲದೆ ಅವಳಿಗೆ ಆಧಾರ ನೀಡುವಂಥ ಮಕ್ಕಳೂ ಇಲ್ಲದಿದ್ದರೆ ಮತ್ತು ಅವಳು ತನ್ನ ತಂದೆಯ ಮನೆಗೆ ಹಿಂತಿರುಗಿ ಹೋದರೆ, ಆಗ ಅವಳು ತಂದೆಯ ಆಹಾರದಲ್ಲಿ ಸ್ವಲ್ಪ ತಿನ್ನಬಹುದು. ಆದರೆ ಯಾಜಕನ ಕುಟುಂಬದವರು ಮಾತ್ರವೇ ಈ ಆಹಾರವನ್ನು ತಿನ್ನಬಹುದು.
ಯಾಜಕಕಾಂಡ 22 : 14 (ERVKN)
“ಒಬ್ಬನು ತಿಳಿಯದೆ ನೈವೇದ್ಯ ಪದಾರ್ಥವನ್ನು ತಿಂದರೆ ಅವನು ಆ ಪದಾರ್ಥವನ್ನೂ ಪದಾರ್ಥದ ಬೆಲೆಯ ಐದನೆಯ ಒಂದಂಶವನ್ನೂ ಅದಕ್ಕೆ ಸೇರಿಸಿ ಯಾಜಕನಿಗೆ ಕೊಡಬೇಕು.
ಯಾಜಕಕಾಂಡ 22 : 15 (ERVKN)
“ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು.
ಯಾಜಕಕಾಂಡ 22 : 16 (ERVKN)
ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.”
ಯಾಜಕಕಾಂಡ 22 : 17 (ERVKN)
ಯೆಹೋವನು ಮೋಶೆಗೆ ಹೀಗೆಂದನು:
ಯಾಜಕಕಾಂಡ 22 : 18 (ERVKN)
“ಆರೋನನಿಗೆ, ಅವನ ಪುತ್ರರಿಗೆ ಮತ್ತು ಇಸ್ರೇಲರೆಲ್ಲರಿಗೆ ಹೀಗೆ ಹೇಳು: ಒಂದುವೇಳೆ ಇಸ್ರೇಲನಾಗಲಿ ಅಥವಾ ಪರದೇಶಸ್ಥನಾಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವಾಂಗಹೋಮ ಮಾಡುವಾಗ,
ಯಾಜಕಕಾಂಡ 22 : 19 (ERVKN)
(19-20)ಅದು ಸ್ವೀಕೃತವಾಗುವಂತೆ ಪೂರ್ಣಾಂಗವಾದ ಹೋರಿಯನ್ನಾಗಲಿ ಟಗರನ್ನಾಗಲಿ ಹೋತವನ್ನಾಗಲಿ ಅರ್ಪಿಸಬೇಕು. ಅಂಗದೋಷವುಳ್ಳ ಯಾವುದನ್ನೂ ನೀವು ಸಮರ್ಪಿಸಬಾರದು. ಅಂಗದೋಷವುಳ್ಳವುಗಳನ್ನು ನಾನು ಸ್ವೀಕರಿಸುವುದಿಲ್ಲ.
ಯಾಜಕಕಾಂಡ 22 : 20 (ERVKN)
ಯಾಜಕಕಾಂಡ 22 : 21 (ERVKN)
“ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು.
ಯಾಜಕಕಾಂಡ 22 : 22 (ERVKN)
ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.
ಯಾಜಕಕಾಂಡ 22 : 23 (ERVKN)
“ಕಾಲು ಉದ್ದವಾಗಿರುವ ಅಥವಾ ಮೊಂಡಾಗಿರುವ ಹೋರಿಯನ್ನಾಗಲಿ ಕುರಿಯನ್ನಾಗಲಿ ಒಬ್ಬನು ಯೆಹೋವನಿಗೆ ಕಾಣಿಕೆಯಾಗಿ ಕೊಡಲು ಬಯಸಿದರೆ, ಆಗ ಅದು ಸ್ವೀಕೃತವಾಗುವುದು. ಆದರೆ, ಅವನು ಮಾಡಿದ ವಿಶೇಷ ಹರಕೆಯಾಗಿ ಅದು ಸ್ವೀಕೃತವಾಗುವುದಿಲ್ಲ. ಅದು ಸ್ವಇಚ್ಛೆಯಿಂದ ಅರ್ಪಿಸಿದ ಕಾಣಿಕೆಯಾಗಿ ಸ್ವೀಕರಿಸಲ್ಪಡುವುದು.
ಯಾಜಕಕಾಂಡ 22 : 24 (ERVKN)
“ಗಾಯಗೊಂಡ, ಜಜ್ಜಿದ ಅಥವಾ ಒಡೆದ ಬೀಜವುಳ್ಳ ಪಶುವನ್ನು ಯೆಹೋವನಿಗೆ ಅರ್ಪಿಸಬಾರದು. ಇದನ್ನು ನಿಮ್ಮ ಸ್ವಂತ ನಾಡಿನಲ್ಲಿ ಮಾಡಬಾರದು.
ಯಾಜಕಕಾಂಡ 22 : 25 (ERVKN)
“ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”
ಯಾಜಕಕಾಂಡ 22 : 26 (ERVKN)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:
ಯಾಜಕಕಾಂಡ 22 : 27 (ERVKN)
“ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ.
ಯಾಜಕಕಾಂಡ 22 : 28 (ERVKN)
ಆದರೆ ನೀವು ಆ ಪಶುವನ್ನೂ ಅದರ ತಾಯಿಯನ್ನೂ ಒಂದೇ ದಿನದಲ್ಲಿ ವಧಿಸಬಾರದು. ಇದೇ ನಿಯಮ ದನಗಳಿಗೂ ಕುರಿಗಳಿಗೂ ಅನ್ವಯಿಸುತ್ತದೆ.
ಯಾಜಕಕಾಂಡ 22 : 29 (ERVKN)
“ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.
ಯಾಜಕಕಾಂಡ 22 : 30 (ERVKN)
ನೀವು ಇಡೀ ಪಶುವನ್ನು ಅದೇ ದಿನದಲ್ಲಿ ತಿನ್ನಬೇಕು. ಮರುದಿನ ಮುಂಜಾನೆಯವರೆಗೆ ಮಾಂಸದಲ್ಲಿ ಸ್ವಲ್ಪವನ್ನೂ ಉಳಿಸಬಾರದು. ನಾನೇ ಯೆಹೋವನು!
ಯಾಜಕಕಾಂಡ 22 : 31 (ERVKN)
“ನನ್ನ ಆಜ್ಞೆಗಳನ್ನು ಜ್ಞಾಪಕ ಮಾಡಿಕೊಂಡು ಅವುಗಳಿಗೆ ವಿಧೇಯರಾಗಿರಿ. ನಾನೇ ಯೆಹೋವನು!
ಯಾಜಕಕಾಂಡ 22 : 32 (ERVKN)
ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.
ಯಾಜಕಕಾಂಡ 22 : 33 (ERVKN)
ನಿಮ್ಮ ದೇವರಾಗಿರುವುದಕ್ಕಾಗಿ ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆನು. ನಾನೇ ಯೆಹೋವನು!”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33